YouTube

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯ 7.5 ಲಕ್ಷ ಯೂನಿಟ್‌ಗಳು ಮಾರಾಟವಾಗಿ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಈ ಮಾರುತಿ ಸುಜುಕಿ ಎರ್ಟಿಗಾ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಪಿವಿ ಮಾದರಿಗಳಲ್ಲಿ ಒಂದಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯು 2012ರ ಏಪ್ರಿಲ್ ತಿಂಗಳಿನಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿತ್ತು. 2012 ರಲ್ಲಿ ಮೊದಲ ತಲೆಮಾರಿನ ಮಾರಾಟಕ್ಕೆ ಬಂದಾಗಿನಿಂದ 10 ವರ್ಷಗಳಲ್ಲಿ 7.5 ಲಕ್ಷ ಯೂನಿಟ್‌ಗಳ ಮಾರಾಟದ ಮೈಲಿಗಲ್ಲನ್ನು ಸಾಧಿಸಿದೆ. ಅಕ್ಟೋಬರ್ ಅಂತ್ಯದವರೆಗೆ, ಎರ್ಟಿಗಾ ಒಟ್ಟು 6,99,215 ಯುನಿಟ್‌ಗಳನ್ನು ಮಾರಾಟವಾಗಿತ್ತು. 7,00,000-ಯೂನಿಟ್ ಮಾರ್ಕ್‌ನಿಂದ ಕೇವಲ 785 ಕಡಿಮೆಯಾಗಿತ್ತು. ಇದು ನವೆಂಬರ್‌ನ ಮೊದಲ ಕೆಲವು ದಿನಗಳಲ್ಲಿ ದಾಟಿದೆ. ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ 8,146 ಯುನಿಟ್‌ಗಳ ಸರಾಸರಿ ಮಾಸಿಕ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿ ಈ ಮಾದರಿಯು ಮುಂದಿನ ಫೈನಾನ್ಸ್ ಆಫ್ ಇಯರ್'ಗೆ 1,00,000-ಯೂನಿಟ್ ಮಾರಾಟದ ಮಾರ್ಕ್ ಅನ್ನು ಸಾಧಿಸುವ ಸಾಧ್ಯತೆಯಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಡೀಸೆಲ್ ಎಂಜಿನ್ ಹೊಂದಿರುವ ಎರ್ಟಿಗಾ 2020ರ ಏಪ್ರಿಲ್ ತಿಂಗಳಿನಲ್ಲಿ ಸ್ಥಗಿತಗೊಂಡಿತ್ತು. ಇದರ ಒಟ್ಟು ಮಾರಾಟದ 49.22 ಪ್ರತಿಶತವನ್ನು ಹೊಂದಿದೆ.ಪ್ರಸ್ತುತ ಸಿಎನ್‌ಜಿ ರೂಪಾಂತರವನ್ನು ಪಡೆಯುವ ವಿಭಾಗದಲ್ಲಿ ಇದು ಏಕೈಕ ಎಂಪಿವಿ ಆಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಸಿಎನ್‌ಜಿ ಎರ್ಟಿಗಾಗೆ ಇದು ಆರಂಭಿಕ ದಿನವಾಗಿದ್ದರೂ, ಪರಿಸರ ಸ್ನೇಹಿ ರೂಪಾಂತರವು ತನ್ನ ಅಸ್ತಿತ್ವವನ್ನು ಅನುಭವಿಸುತ್ತಿರುವಂತೆ ತೋರುತ್ತಿದೆ. ಎರ್ಟಿಗಾ ಎಂಪಿವಿಯು ಅರೆನಾ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಎರ್ಟಿಗಾ ನಂ.1 ಸ್ಥಾನದಲ್ಲಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಇತ್ತೀಚೆಗೆ ಎಂಪಿವಿಗಳ ವಿಭಾಗದಲ್ಲಿ ಪೈಪೋಟಿ ಹೆಚ್ಚಾಗುತ್ತಿದೆ. ಇದರಿಂದ ಮಾರುತಿ ಸುಜುಕಿ ಎರ್ಟಿಗಾದಲ್ಲಿ ಹಲವು ನವೀಕರಣಗಳನ್ನು ನಡೆಸುತ್ತಾ ಬಂದಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಎರ್ಟಿಗಾ ಎಂಪಿವಿಯಲ್ಲಿ ಗಮನಾರ್ಹವಾದ ನವೀಕರಣ ನಡಿಸಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತವ ಸಾಮರ್ಥ್ಯವನ್ನು ಹೊಂದಿದೆ,

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಇದರೊಂದಿಗೆ ಮಾರುತಿ ಎರ್ಟಿಗಾ ಎಂಪಿವಿಯೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಹೊಂದಿದೆ,

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಈ ಮಾರುತಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಹೊಂದಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಭಾರತದಲ್ಲಿ ಮಾರುತಿ ಸುಜುಕಿಯ ಮುಖ್ಯ ಪ್ರತಿಸ್ಪರ್ಧಿ ಹ್ಯುಂಡೈ ಕಂಪನಿಯು ಕ್ರೆಟಾವನ್ನು ಆಧರಿಸಿ ಅಲ್ಕಾಜರ್ 7-ಸೀಟರ್ ಮಾದರಿಯನ್ನು ಬಿಡುಗಡೆಗೊಳಿಸುವುದರಿಂದ ಪೈಪೋಟಿ ಹೆಚ್ಚಾಗುತ್ತದೆ. ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಹಲವು 7-ಸೀಟರ್ ಮಾದರಿಗಳ ಆಯ್ಕೆಗಳಿವೆ. ಅಲ್ಲದೇ 7-ಸೀಟರ್ ಮಾದರಿಗಳ ಬೇಡಿಕೆ ನಡುವೆ ಪೈಪೋಟಿ ಹೆಚ್ಚಾಗಿದೆ. ಇದರಿಂದ ಮಾರುತಿ ಸುಜುಕಿಯು ಮುಂದಿನ ವರ್ಷ ಬಿಡುಗಡೆ ಮಾಡಲು ನವೀಕರಿಸಿದ ಎರ್ಟಿಗಾವನ್ನು ಸಿದ್ಧಪಡಿಸುತ್ತಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಇನ್ನು ಮಾರುತಿ ಸುಜುಕಿ ಕಂಪನಿಯು ಹೊಸ ಎರ್ಟಿಗಾ ಎಂಪಿವಿ ಮಾದರಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದೆ. ಕಂಪನಿಯು ಹೊಸ ಕಾರು ಬಿಡುಗಡೆಗೂ ಮುನ್ನ ರೂ.11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ, ದೇಶಿಯ ಮಾರುಕಟ್ಟೆಯಲ್ಲಿ ಮಧ್ಯಮ ಕ್ರಮಾಂಕದ ಎಂಪಿವಿ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಎರ್ಟಿಗಾ ಮಾದರಿಯು 2022ರ ಮಾದರಿಯೊಂದಿಗೆ ಮತ್ತಷ್ಟು ಹೊಸ ಫೀಚರ್ಸ್ ಪಡೆದುಕೊಳ್ಳಲಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಇದೇ ತಿಂಗಳು 15ರಂದು ಮಾರುಕಟ್ಟೆಯಲ್ಲಿ ಬಿದುಗಡೆಯಾಗಲಿದೆ,

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

2022ರ ಮಾರುತಿ ಸುಜುಕಿ ಎರ್ಟಿಗಾ ಮಾದರಿಯಲ್ಲಿ ಕಂಪನಿಯು ಹೊರ ಭಾಗದಲ್ಲಿ ಮತ್ತು ಒಳಭಾಗದ ಕೆಲವು ಬದಲಾವಣೆಗಳನ್ನು ಪಡೆಯಲಿದೆ, ಈ ಹೊಸ ಕಾರಿನ ಒಳಭಾದಲ್ಲಿ ಈ ಬಾರಿ ಹೊಸ 7 ಇಂಚಿನ ಹೊಸ ಸ್ಮಾರ್ಟ್‌ಪ್ಲೇ ಪ್ರೊ ಟಚ್‌ಸ್ಕ್ರೀನ್ ಅನ್ನು ಹೊಂದಿರಲಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಮಾರುತಿ ಎರ್ಟಿಗಾ ಎಂಪಿವಿ

ಇನ್ನು ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 170,395 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2021ರ ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು 167,014 ವಾಹನಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಕೇವಲ 2 ಪ್ರತಿಶತದಷ್ಟು ಬೆಳವಣಿಗೆಯನ್ನು ಕಂಡಿದ್ದಾರೆ. ನವೀಕರಿಸಿದ ಹೊಸ ಮಾರುತಿ ಸುಜುಕಿ ಎರ್ಟಿಗಾ ಬಿಡುಗಡೆಯಾದ ಬಳಿಕ ಮಾರಾಟದಲಿ ಹೆಚ್ಚಿನ ಕೊಡುಗೆಯನ್ನು ನೀಡಬಹುದು.

Most Read Articles

Kannada
English summary
Maruti suzuki ertiga compact mpv 7 5 lakh units sales milestone details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X