Just In
- 46 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 15 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Movies ಪಶ್ಚಾತಾಪದ ಅಗ್ನಿಕುಂಡದಲ್ಲಿ ಪರಿಣಿತಿ ಚೋಪ್ರಾ ; ನನ್ನೆಲ್ಲ ಸೋಲುಗಳಿಗೆ ಆ ವ್ಯಕ್ತಿಗಳೇ ಕಾರಣ ಎಂದ ನಟಿ..!
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಗೆ ಭಾರೀ ಬೇಡಿಕೆ: 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್
ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ಗ್ರ್ಯಾಂಡ್ ವಿಟಾರಾ ಎಸ್ಯುವಿಯು ಮಾರಾಟದಲ್ಲಿ ಕಂಪನಿಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ತಿಂಗಳಿನಲ್ಲಿ ಗ್ರ್ಯಾಂಡ್ ವಿಟಾರಾ ಎಸ್ಯುವಿ ಮಾದರಿಯ 8,052 ಯುನಿಟ್ಗಳನ್ನು ಮಾರಾಟ ಮಾಡಿದೆ. ಇನ್ನು ಗ್ರ್ಯಾಂಡ್ ವಿಟಾರಾ ಎಸ್ಯುವಿಯ ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿತು. ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯು 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಪಡೆದುಕೊಂಡಿದೆ.
ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯ ಖರೀದಿಸಲು ಬಯಸುವ ಗ್ರಾಹಕರು ರೂ.11,000 ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು. ಈ ಗ್ರ್ಯಾಂಡ್ ವಿಟಾರಾ ಎಸ್ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ.
ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯನ್ನು ನೆಕ್ಸಾ ಔಟ್ಲೆಟ್ಗಳ ಮೂಲಕ ಮಾತ್ರ ಮಾರಾಟ ಮಾಡಲಾಗುತ್ತಿದೆ.
ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯನ್ನು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ. ಈ ಹೊಸ ಎಸ್ಯುವಿ ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಲ್ಲಿ ಸಹ ಲಭ್ಯವಿದೆ.
ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡು ಪವರ್ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ.
ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ಜೋಡಿಸಲಾಗಿದೆ. ಇನ್ನು ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ.
ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್ಟ್ರೇನ್ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ.
ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ಬೇಸ್ ಹೊಂದಿದೆ. ಈ 5-ಸೀಟರ್ ಎಸ್ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿದೆ.
ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್ಯುವಿ ಮಾದರಿಯು ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್ ಮಾದರಿಗೆ ಹೋಲುತ್ತಿದೆ.
ಈ ಹೊಸ ಮಾರುತಿ ಎಸ್ಯುವಿ ಮಾದರಿಯ ಸೈಡ್ ಬಾಡಿ ಪ್ಯಾನೆಲ್ಗಳು, ಟೈಲ್ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್ಗೆ ಹೋಲುತ್ತವೆ. ಈ ಎಸ್ಯುವಿಯ ಸಿ-ಪಿಲ್ಲರ್ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್ಗೇಟ್ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಕೂಡ ವಿಶಿಷ್ಟವಾಗಿದೆ.
ಈ ಹೊಸ ಮಾರುತಿ ಎಸ್ಯುವಿ ಮಾದರಿಯ ಸೈಡ್ ಬಾಡಿ ಪ್ಯಾನೆಲ್ಗಳು, ಟೈಲ್ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್ಗೆ ಹೋಲುತ್ತವೆ. ಈ ಎಸ್ಯುವಿಯ ಸಿ-ಪಿಲ್ಲರ್ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್ಗೇಟ್ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಕೂಡ ವಿಶಿಷ್ಟವಾಗಿದೆ.
ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯ ಒಳಭಾಗವು ಗ್ರ್ಯಾಂಡ್ ವಿಟಾರಾ ಹೈರೈಡರ್ನಂತೆಯೇ ಕಾಣುತ್ತದೆ ಮತ್ತು ಬಣ್ಣದ ಯೋಜನೆಗಳು ಮಾತ್ರ ಪ್ರಮುಖ ವ್ಯತ್ಯಾಸವಾಗಿದೆ. ಎರಡೂ ಒಂದೇ ಸ್ಟೀಯರಿಂಗ್ ವೀಲ್ ಅನ್ನು ಪಡೆಯುತ್ತವೆ, ಹೊಸ ಮಾರುತಿ ಸುಜುಕಿ ಮಾದರಿಗಳಲ್ಲಿ ಕಂಡುಬರುತ್ತದೆ. ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲ್ಲಾ ಸ್ವಿಚ್ಗಿಯರ್ಗಳು ಎರಡೂ ಎಸ್ಯುವಿಗಳಲ್ಲಿ ಒಂದೇ ಆಗಿದೆ,
ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯ ಟಾಪ್-ಸ್ಪೆಕ್ ರೂಪಾಂತರಗಳು ಪನೋರಮಿಕ್ ಸನ್ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಕನೆಕ್ಟ್ ಕಾರ್ ಟೆಕ್, ಇಎಸ್ಪಿ, ಹಿಲ್-ಹೋಲ್ಡ್ ಅಸಿಸ್ಟ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಆರು ಏರ್ಬ್ಯಾಗ್ಗಳನ್ನು ಹೊಂದಿವೆ.
ಈ ಹೊಸ ಗ್ರ್ಯಾಂಡ್ ವಿಟಾರಾದ ಎಸ್ಯುವಿಯಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 360-ಡಿಗ್ರಿ ಕ್ಯಾಮೆರಾ, HUD, Apple CarPlay ಮತ್ತು Android Auto ಜೊತೆಗೆ ಒಂಬತ್ತು-ಇಂಚಿನ SmartPlay Pro+ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್ಗಳು, ಪ್ಯಾಡಲ್ ಶಿಫ್ಟರ್ಗಳು, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ಸ್, ಮತ್ತು ಡ್ರೈವ್ ಮೋಡ್ ಗಳನ್ನು ಹೊಂದಿದೆ.
ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ. ಒಟ್ಟಾರೆಯಾಗಿ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿದೆ.