ಏಪ್ರಿಲ್ ತಿಂಗಳಿನಲ್ಲಿ 1.21 ಲಕ್ಷಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ 2022ರ ಏಪ್ರಿಲ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 121,995 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ 1,35,879 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಪ್ರಯಾಣಿಕ ವಾಹನ ವ್ಯಾಪಾರದಲ್ಲಿ ಶೇಕಡಾ 10.21 ರಷ್ಟು ಕುಸಿತವನ್ನು ದಾಖಲಿಸಿದೆ, ಇನ್ನು ಮಾಸಿಕ (MoM) ಆಧಾರದ ಮೇಲೆ 1.5 ಶೇಕಡಾ ಕನಿಷ್ಠ ಬೆಳವಣಿಗೆಯನ್ನು ದಾಖಲಿಸಿದೆ. ಉತ್ಪಾದನೆಯು ಪೂರೈಕೆ ಸರಪಳಿಯನ್ನು ಅಡ್ಡಿಪಡಿಸಿದ ಸೆಮಿಕಂಡಕ್ಟರ್ ಕೊರತೆಯ ಪ್ರಭಾವಕ್ಕೆ ಸಾಕ್ಷಿಯಾಗುತ್ತಲೇ ಇದೆ.

ಎಲೆಕ್ಟ್ರಾನಿಕ್ ಯುನಿಟ್ ಗಳ ಕೊರತೆಯು ವಾಹನಗಳ ಉತ್ಪಾದನೆಯ ಮೇಲೆ ಸಣ್ಣ ಪರಿಣಾಮ ಬೀರಿತು, ಆದರೆ ಪರಿಣಾಮವನ್ನು ಕಡಿಮೆ ಮಾಡಲು ಕಂಪನಿಯು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಂಡಿತು ಎಂದು ಕಂಪನಿ ಹೇಳಿದರು.

ಮಾರುತಿ ಆಲ್ಟೋ ಮತ್ತು ಎಸ್-ಪ್ರೆಸ್ಸೊದಂತಹ ಎಂಟ್ರಿ-ಲೆವೆಲ್ ಮಾದರಿಗಳ ಮಾರಾಟವು 31.56 ಪ್ರತಿಶತದಷ್ಟು ಕಡಿಮೆಯಾಗಿದೆ ಮತ್ತು 17,137 ಯುನಿಟ್‌ಗಳನ್ನು ಮಾರಾಟ ಮಾಡಿತು, ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ ಮಾರಾಟವಾದ 25,041 ಯುನಿಟ್‌ಗಳಿಗೆ ಹೋಲಿಸಿದರೆ. ಸ್ವಿಫ್ಟ್, ಡಿಸೈರ್, ಬಲೆನೊ, ಸೆಲೆರಿಯೊ, ಇಗ್ನಿಸ್, ವ್ಯಾಗನ್ಆರ್ ಮತ್ತು ಟೂರಸ್ ನಂತಹ ಕಾಂಪ್ಯಾಕ್ಟ್ ಕಾರುಗಳು ಶೇಕಡಾ 18.16 ರಷ್ಟು ಕುಸಿತವನ್ನು ಕಂಡಿವೆ,

ಇದು ಒಂದು ವರ್ಷದ ಹಿಂದೆ ಮಾರಾಟವಾದ 72,318 ಯುನಿಟ್‌ಗಳಿಗೆ ಹೋಲಿಸಿದರೆ 59,184 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಸಿಯಾಜ್ ಕಾಂಪ್ಯಾಕ್ಟ್ ಸೆಡಾನ್ ಕೂಡ ಕಳೆದ ವರ್ಷ ಏಪ್ರಿಲ್‌ನಲ್ಲಿ 1,567 ಯುನಿಟ್‌ಗಳಿಗೆ ಹೋಲಿಸಿದರೆ ಕೇವಲ 579 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಶೇಕಡಾ 63.05 ರಷ್ಟು ಕುಸಿತವನ್ನು ಕಂಡಿದೆ.

ಎಸ್‍ಯುವಿಗಳ ಮಾರಾಟವು 33.18 ಶೇಕಡಾ ಎರಡಂಕಿಯ ಬೆಳವಣಿಗೆಯನ್ನು ದಾಖಲಿಸುವ ಮೂಲಕ 33,941 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ ಮಾರಾಟವಾದ 25,484 ಯುನಿಟ್‌ಗಳಿಗೆ ಹೋಲಿಸಿದರೆ ಧನಾತ್ಮಕವಾಗಿ ಉಳಿದಿದೆ.

ಒಂದು ವರ್ಷದ ಹಿಂದೆ ಮಾರಾಟವಾದ 11,469 ಯುನಿಟ್‌ಗಳಿಗೆ ಹೋಲಿಸಿದರೆ ವ್ಯಾನ್‌ಗಳ ಮಾರಾಟವು 11,154 ಯುನಿಟ್‌ಗಳಲ್ಲಿ ಸ್ಥಿರವಾಗಿದೆ. ಇನ್ನು ಕಂಪನಿಯು ಕಳೆದ ತಿಂಗಳು ಸೂಪರ್ ಕ್ಯಾರಿ ಲೈಟ್ ಕಮರ್ಷಿಯಲ್ ವೆಹಿಕಲ್ (LCV) ಯ 4,266 ಯುನಿಟ್‌ಗಳನ್ನು ಮಾರಾಟ ಮಾಡಿದ್ದು, ಒಂದು ವರ್ಷದ ಹಿಂದೆ 1,272 ಯುನಿಟ್‌ಗಳಿಗೆ ಹೋಲಿಸಿದರೆ, 235.37 ಶೇಕಡಾ ಬೆಳವಣಿಗೆಯನ್ನು ದಾಖಲಿಸಿದೆ.

ಗ್ಲಾಂಝಾ ಮತ್ತು ಅರ್ಬನ್ ಕ್ರೂಸರ್‌ನ 5,987 ಯುನಿಟ್‌ಗಳನ್ನು ಟೊಯೊಟಾಗೆ ಮಾರಾಟ ಮಾಡಿತು, ಒಂದು ವರ್ಷದ ಹಿಂದೆ ಮಾರಾಟವಾದ 5,303 ಯುನಿಟ್‌ಗಳಿಗೆ ಹೋಲಿಸಿದರೆ 12.89 ಶೇಕಡಾ ಮಾರಾಟದ ಬೆಳವಣಿಗೆಯನ್ನು ದಾಖಲಿಸಿದೆ. ಅದರ ರಫ್ತು ಕೂಡ 6.8 ರಷ್ಟು ಏರಿಕೆಯಾಗಿದ್ದು, ಒಂದು ವರ್ಷದ ಹಿಂದೆ ಮಾರಾಟವಾದ 17,237 ಯುನಿಟ್‌ಗಳಿಗೆ ಹೋಲಿಸಿದರೆ 18,413 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಒಟ್ಟಾರೆ (PV + LCV + OEM + ರಫ್ತು ಸೇರಿದಂತೆ), ಮಾರುತಿ ಸುಜುಕಿಯು ಕಳೆದ ವರ್ಷ ಇದೇ ತಿಂಗಳಿನಲ್ಲಿ ಮಾರಾಟವಾದ 1,59,691 ಯುನಿಟ್‌ಗಳಿಗೆ ಹೋಲಿಸಿದರೆ 1,50,661 ಯುನಿಟ್‌ಗಳನ್ನು ಮಾರಾಟ ಮಾಡುವ ಮೂಲಕ ಶೇಕಡಾ 5.65 ರಷ್ಟು ಮಾರಾಟ ಕುಸಿತವನ್ನು ದಾಖಲಿಸಿದೆ.

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯು ತನ್ನ ಸರಣಿಯಲ್ಲಿ ಹಲವು ವೈವಿಧ್ಯಮಯ ಮಾದರಿಗಳನ್ನು ಹೊಂದಿದೆ. ಮಾರುತಿ ಸುಜುಕಿ ಕಂಪನಿಯ ಹಲವು ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಲಿವೆ. ಇದರಲ್ಲಿ ಫೇಸ್‌ಲಿಫ್ಟ್‌ಗಳು, ಹೊಸ ತಲೆಮಾರಿನ ಆವೃತ್ತಿಗಳು ಮತ್ತು ಹೊಸ ಕಾರುಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಕಂಪನಿಯು ಹೊಸ ಬಲೆನೊ, ಹೊಸ ಬ್ರೆಝಾ, ನವೀಕರಿಸಿದ ವ್ಯಾಗನ್‌ಆರ್ ಮತ್ತು ಎರ್ಟಿಗಾ ಮತ್ತು ಎಲ್ಲಾ ಹೊಸ ಮಧ್ಯಮ ಗಾತ್ರದ ಎಸ್‌ಯುವಿ ಸೇರಿದಂತೆ ವ್ಯಾಪಕ ಶ್ರೇಣಿಯ ಹೊಸ ಮಾದರಿಗಳನ್ನು ಸಿದ್ಧಪಡಿಸುತ್ತಿದೆ. ಇನ್ನು ಹೊಸ ಮಾರುತಿ ಸುಜುಕಿ ಬ್ರೆಝಾ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಆದರೆ ಇದರ ಅಧಿಕೃತ ಬಿಡುಗಡೆಯ ದಿನಾಂಕ ಮತ್ತು ವಿವರಗಳನ್ನು ಇನ್ನೂ ಬಹಿರಂಗಪಡಿಸಬೇಕಾಗಿದೆ. ಹೊಸ ಮಾರುತಿ ಬ್ರೆಝಾ ಎಸ್‍ಯುವಿ ಕಾಸ್ಮೆಟಿಕ್ ನಲ್ಲಿ ಬದಲಾವಣೆಗಳನ್ನು ಪಡೆಯಲಿದೆ, ಅಲ್ಲದೇ 2022ರ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೆವೆ ಈ ಹೊಸ ಎಸ್‍ಯುವಿ ಮಾರುತಿ ಬ್ರೆಝಾ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿದೆ.

ಇನ್ನು ಈ ಹೊಸ ಮಾರುತಿ ಆಲ್ಟೋ ಎಲ್ಲಾ-ಹೊಸ ವಿನ್ಯಾಸ ಮತ್ತು ಯಾಂತ್ರಿಕ ಬದಲಾವಣೆಗಳೊಂದಿಗೆ ನವೀಕರಿಸಿದ ಒಳಾಂಗಣದೊಂದಿಗೆ ಬರಲಿದೆ.ನ್ಯೂ ಜನರೇಷನ್ ಆಲ್ಟೋ ಹ್ಯಾಚ್‌ಬ್ಯಾಕ್ ಹಗುರವಾದ ಹಾರ್ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಅದು ಎಸ್-ಪ್ರೆಸ್ಸೊ, ಹೊಸ ಸೆಲೆರಿಯೊ ಮತ್ತು ವ್ಯಾಗನ್‌ಆರ್ ಅನ್ನು ಆಧಾರವಾಗಿಸಲಿದೆ. ಇನ್ನು ಮೂಲಕ ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ.


Click it and Unblock the Notifications