Just In
- 42 min ago
ಇವಿಗಳ ಅಬ್ಬರ... 2023 ಜನವರಿಯಲ್ಲಿ ಅತಿ ಹೆಚ್ಚು ಮಾರಾಟ ಕಂಡ ಎಲೆಕ್ಟ್ರಿಕ್ ಸ್ಕೂಟರ್ಗಳಿವು!
- 1 hr ago
ಕಡಿಮೆ ಬೆಲೆಯ ಟಾಟಾ ಎಲೆಕ್ಟ್ರಿಕ್ ಕಾರಿನ ವಿತರಣೆ ಪ್ರಾರಂಭ: 2,000 ಕಾರುಗಳ ಹಸ್ತಾಂತರ
- 2 hrs ago
ಮಾರುತಿ, ಟಾಟಾ ಕಾರುಗಳ ಪ್ರಾಬಲ್ಯದ ನಡುವೆ ದಾಖಲೆ ಮಟ್ಟದ ಮಾರಾಟವಾದ ಹ್ಯುಂಡೈ ಕ್ರೆಟಾ
- 3 hrs ago
13 ಉದ್ಯೋಗಿಗಳಿಗೆ ಹೊಸ ಟೊಯೋಟಾ ಗ್ಲಾನ್ಜಾ ಕಾರುಗಳನ್ನು ಉಡುಗೊರೆಯಾಗಿ ನೀಡಿದ ಕಂಪನಿ
Don't Miss!
- News
ಡಿಕೆಶಿ ಯಾರ ಯಾರ ಸಿಡಿ ಮಾಡ್ತಿದ್ದಾರೋ .? ಇನ್ನು ಯಾವ ಸಿಡಿ,ಸಿನಿಮಾ,ಟ್ರೈಲರ್ ಇದೆ ಅವರನೇ ಕೇಳ್ಬೇಕು: ಅಶ್ವತ್ಥ ನಾರಾಯಣ್
- Movies
ಜನ್ನತ್ ಟು ಮನ್ನತ್: ಬಾಲಿವುಡ್ ಬಾದ್ ಶಾ ಶಾರುಖ್ ಬಳಿಯಿರುವ 6 ಐಷಾರಾಮಿ ಮನೆಗಳಿವು!
- Finance
Infographics: ಬಜೆಟ್ 2023ನಲ್ಲಿ ಕೇಂದ್ರದ ಯೋಜನೆಗಳಿಗೆ ಸಿಕ್ಕ ಅನುದಾನ ಎಷ್ಟು? ವಿವಿರ ಇಲ್ಲಿದೆ
- Sports
Border-Gavaskar Trophy: ಭಾರತ ವಿರುದ್ಧ ಮೊದಲ ಪಂದ್ಯದಲ್ಲಿ ಈ ವೇಗಿ ಬೌಲಿಂಗ್ ಮಾಡಲ್ಲ; ಪ್ಯಾಟ್ ಕಮ್ಮಿನ್ಸ್
- Lifestyle
ಗಂಡ-ಹೆಂಡತಿ ಜಗಳವಾಡಿದರೆ ಈ ಪ್ರಯೋಜನಗಳೂ ಇವೆ!
- Technology
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ಬಹುನಿರೀಕ್ಷಿತ 5-ಡೋರ್ ಮಾರುತಿ ಜಿಮ್ನಿ ಎಸ್‍ಯುವಿ ರೋಡ್ ಟೆಸ್ಟ್ ಪ್ರಾರಂಭ
ಅಂತರರಾಷ್ಟ್ರೀಯ ಮಾರುಕಟ್ಟೆಗಲ್ಲಿ ಸುಜುಕಿ ಜಿಮ್ನಿ(Suzuki Jimny) ಮಿನಿ-ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಆಫ್-ರೋಡರ್ ಮಿನಿ-ಎಸ್‍ಯುವಿಯು 2018ರಲ್ಲಿ ಬಿಡುಗಡೆಗೊಳಿಸಿದ್ದರು.

ಭಾರತದಲ್ಲಿ ಜಿಮ್ನಿ ಎಸ್‌ಯುವಿ ಬಿಡುಗಡೆಗೆ ಸಂಬಂಧಿಸಿದಂತೆ ಮಾರುತಿ ಸುಜುಕಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ. ಇಂಡೋ-ಜಪಾನೀಸ್ ವಾಹನ ತಯಾರಕರಾದ ಮಾರುತಿ ಸುಜುಕಿ ಬೆಲೆ, ಎಸ್‍ಯುವಿಯ ನಿರ್ದಿಷ್ಟತೆ ಮತ್ತು ಬಿಡುಗಡೆ ದಿನಾಂಕದಂತಹ ನಿರ್ಣಾಯಕ ಅಂಶಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಸುಜುಕಿ ಜಿಮ್ನಿ ಕಾಂಪ್ಯಾಕ್ಟ್ ಎಸ್‍ಯುವಿ ಆಗಿದ್ದರೂ (ಭಾರತೀಯ ಗ್ರಾಹಕರಲ್ಲಿ ನೆಚ್ಚಿನ ವಿಭಾಗ), ಸುಜುಕಿ ಜಿಮ್ನಿ ಆಫ್-ರೋಡ್ ಎಸ್‍ಯುವಿಯಾಗಿದ್ದು, ಇದು ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಇತರ ಕಾಂಪ್ಯಾಕ್ಟ್ ಎಸ್‍ಯುವಿಗಳಿಗಿಂತ ಸ್ವಲ್ಪ ಕಡಿಮೆ ಪ್ರಾಯೋಗಿಕ ಮತ್ತು ಹೆಚ್ಚು ಉದ್ದೇಶಿತವಾಗಿದೆ.

5-ಡೊರಿನ ಮಾರುತಿ ಜಿಮ್ನಿ ಎಸ್‍ಯುವಿಯು 2023ರ ಜನವರಿ ತಿಂಗಳಿನಲ್ಲಿ ನಡೆಯುವ ಆಟೋ ಎಕ್ಸ್‌ಪೋದಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಬಹುದು. ಮಾರುತಿ ಸುಜುಕಿ ಕಂಪನಿಯು ಜಿಮ್ನಿಯ ಅಧಿಕೃತ ಅನಾವರಣಕ್ಕೆ ಮುಂಚಿತವಾಗಿ, ಕಂಪನಿಯು ದೇಶದಲ್ಲಿ ವಾಹನವನ್ನು ಪರೀಕ್ಷಿಸಲು ಪ್ರಾರಂಭಿಸಿದೆ.

5-ಡೋರಿನ ಮಾರುತಿ ಜಿಮ್ನಿ ಅದರ 3-ಡೋರಿನ ಆವೃತ್ತಿಗಿಂತ 300 ಎಂಎಂ ಉದ್ದವಾಗಿರುತ್ತದೆ. ಇದರ ವ್ಹೀಲ್‌ಬೇಸ್ ಕೂಡ 300 ಎಂಎಂ ವಿಸ್ತರಿಸಲಿದೆ. ಆಫ್-ರೋಡ್ ಎಸ್‍ಯುವಿ 3850 ಎಂಎಂ ಉದ್ದ, 1645 ಎಂಎಂ ಅಗಲ ಮತ್ತು 1730 ಎಂಎಂ ಎತ್ತರವನ್ನು 2550mm ವ್ಹೀಲ್‌ಬೇಸ್‌ನೊಂದಿಗೆ ಹೊಂದಿದೆ.

ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯು ತನ್ನ ಗುರುಗ್ರಾಮ್ ಸ್ಥಾವರದಲ್ಲಿ ಮೂರು-ಡೋರಿನ ಜಿಮ್ನಿ ಎಸ್‍ಯುವಿಯನ್ನು ತಯಾರಿಸುತ್ತದೆ ಮತ್ತು ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡುತ್ತಿದೆ. ಈ ಸುಜುಕಿ ಜಿಮ್ನಿ ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಈ ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಈ ಎಂಜಿನ್ 6,000 ಆರ್‌ಪಿಎಂನಲ್ಲಿ 101 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 130 ಎನ್‌ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳು ಕಡಿಮೆಯಾಗಿದೆ.

ಈ ಜಿಮ್ನಿ ಮಾದರಿಯು ಈ ಎಂಜಿನ್‌ನ ಟರ್ಬೋಚಾರ್ಜ್ಡ್ ಆವೃತ್ತಿಯನ್ನು ಪಡೆಯಬಹುದು; ಆದೆರೆ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಜಿಮ್ನಿ ಆಫ್-ರೋಡ್ ಎಸ್‍ಯುವಿಯಲ್ಲಿ 15 ಇಂಚಿನ ವ್ಹೀಲ್ ಅನ್ನು ಹೊಂದಿರುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿ 3-ಡೋರಿನ ಅಥವಾ 5-ಡೋರ್ ಜಿಮ್ನಿಯನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಒಂದು ವೇಳೆ ಭಾರತದಲ್ಲಿ ಜಿಮ್ನಿಯನ್ನು ಬಿಡುಗಡೆಗೊಳಿಸಿದರೆ, 5-ಡೋರ್ ಜಿಮ್ನಿ ಬಿಡುಗಡೆಯಾಗಬಹುದು. ಇದು ಐದು ಡೋರುಗಳ ಜಿಮ್ನಿ ಇನ್ನು ನಾಲ್ಕು ಮೀಟರ್ ಉದ್ದದ ಮಾದರಿಯಾಗಿದೆ. ಭಾರತದಲ್ಲಿ ಇದು ತೆರಿಗೆ ಪ್ರಯೋಜನಗಳನ್ನು ಪಡೆಯುತ್ತದೆ. 2,550 ಎಂಎಂ ವ್ಹೀಲ್ ಬೇಸ್ ಉದ್ದವು ಕಾಂಪ್ಯಾಕ್ಟ್ ಎಸ್‌ಯುವಿಗಳಿಗಿಂತ ಹೆಚ್ಚಿನದಾಗಿರುತ್ತದೆ. ಈ ಆಫ್-ರೋಡ್ ಎಸ್‍ಯುವಿಯು ಸುಮಾರು 2,500 ಎಂಎಂ ವ್ಹೀಲ್‌ಬೇಸ್ ಹೊಂದಿದೆ ಆದರೆ ಮಧ್ಯಮ ಗಾತ್ರದ ಎಸ್‍ಯುವಿಗಿಂತ ಚಿಕ್ಕದಾಗಿದೆ. ಇದರಿಂದ 5-ಡೋರ್ ಜಿಮ್ನಿ ಮಾದರಿಯು ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‍ಯುವಿಯ ನಡುವಿನ ವಿಭಾಗದಲ್ಲಿ ಇರಿಸಬಹುದು.

ಒಟ್ಟಾರೆ ಜಿಮ್ನಿ ಆಫ್-ರೋಡ್ ಎಸ್‍ಯುವಿಯು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ, ಅಗ್ರೇಸಿವ್ ಲುಕ್ ನೊಂದಿಗೆ ಸಾಟಿಯಿಲ್ಲದ ಆಫ್-ರೋಡ್ ಸಾಮರ್ಥ್ಯವನ್ನು ಕೂಡ ಹೊಂದಿರುತ್ತದೆ. ಈ ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ. ಸುಜುಕಿ ಕಂಪನಿಯ ಜಪಾನ್ ನಲ್ಲಿರುವ ಕೊಸೈನ ಘಟಕದಲ್ಲಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣಕ್ಕೆ ಏರಿಸಿದೆ.ಆದರೂ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಐಕಾನಿಕ್ ಆಪ್-ರೋಡರ್ ಜಿಮ್ನಿ ಬೇಡಿಕೆಯು ಅಷ್ಟರ ಪ್ರಮಾಣಕ್ಕೆ ಇದೆ.

ಇದರಿಂದ ಭಾರತದಲ್ಲಿ ಮಾರುತಿ ಸುಜುಕಿಯ ಗುರುಗಾಂವ್‌ನಲ್ಲಿರುವ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿದ್ದಾರೆ. ಇನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿರುವುದರಿಂದ ಮೂರು ಡೋರಿನ ಸುಜುಕಿ ಜಿಮ್ನಿ ಮಾದರಿಯನ್ನು ಭಾರತದಿಂದ ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. ಜಿಮ್ನಿಯನ್ನು ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು.

ಮೆಕ್ಸಿಕೊದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಗಿತ್ತು. ಇದೇ ರೀತಿ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಹುಬೇಡಿಕೆಯ ಮಾದರಿಯಾಗಿದೆ. ಈ ಜಿಮ್ನಿ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಭಾರತದಲ್ಲಿ ಆಫ್-ರೋಡ್ ವಾಹನ ಎಂದು ಹೇಳಿದಾಗ ಮೊದಲು ಯೋಚನೆಗೆ ಬರುವುದು ಮಹೀಂದ್ರಾ ಥಾರ್ ಎಂದು ಹೇಳಬಹುದು. ಆದರೆ ಅದೇ ರೀತಿ ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಒಂದು ವೇಳೆ ಬಿಡುಗಡೆಗೊಂಡರೆ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿಯಾಗಲಿದೆ. ಇನ್ನು ಈ ಬಹುನಿರೀಕ್ಷಿತ ಸುಜುಕಿ 5-ಡೋರ್ ಜಿಮ್ನಿ ಮಿನಿ ಎಸ್‍ಯುವಿಯು 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿಯ ಉತ್ತರಾಧಿಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.