ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ 2022ರ ಮಾರ್ಚ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 170,395 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021ರ ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು 167,014 ವಾಹನಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಇಂಡೋ-ಜಪಾನೀಸ್ ಕಾರು ತಯಾರಕರು ವರ್ಷದಿಂದ ವರ್ಷಕ್ಕೆ ಕೇವಲ 2 ಪ್ರತಿಶತದಷ್ಟು ಬೆಳವಣಿಗೆಯನ್ನು ಕಂಡಿದ್ದಾರೆ. ಇನ್ನು 2022ರ ಫೆಬ್ರವರಿ ತಿಂಗಳಿನಲ್ಲಿ 164,056 ಯುನಿಟ್‌ಗಳನ್ನು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾರುತಿ ಸುಜುಕಿ ತಿಂಗಳಿನಿಂದ ತಿಂಗಳಿಗೆ ಶೇಕಡಾ 3.8 ರಷ್ಟು ಬೆಳವಣಿಗೆಯನ್ನು ಕಂಡಿದೆ

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021-22 ರ ಸಂಪೂರ್ಣ ಹಣಕಾಸು ವರ್ಷಕ್ಕೆ ಕಂಪನಿಯ ಸಂಚಿತ ಮಾರಾಟವು 16,52,653 ಯುನಿಟ್‌ಗಳಷ್ಟಿದೆ, ಇದು 2020-21ರ ಆರ್ಥಿಕ ವರ್ಷಗಿಂತ ಆರೋಗ್ಯಕರ 13.4 ಶೇಕಡಾ ಬೆಳವಣಿಗೆಯಾಗಿದೆ, ಈ ಸಮಯದಲ್ಲಿ ಕಂಪನಿಯು 14,57,861 ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021-22ರ ಆರ್ಧಿಕ ವರ್ಷದಲ್ಲಿ ಎಲೆಕ್ಟ್ರಾನಿಕ್ ಯುನಿಟ್ ಗಳ ಕೊರತೆಯು ವಾಹನ ಉತ್ಪಾದನೆಯ ಮೇಲೆ ಸ್ವಲ್ಪ ಪರಿಣಾಮ ಬೀರಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಹೇಳಿದೆ. ಕಂಪನಿಯು ಪರಿಣಾಮವನ್ನು ಕಡಿಮೆ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿತು.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಎಲೆಕ್ಟ್ರಾನಿಕ್ ಬಿಡಿಭಾಗಗಳ ಪೂರೈಕೆಯ ಪರಿಸ್ಥಿತಿಯು ಅನಿರೀಕ್ಷಿತವಾಗಿ ಮುಂದುವರಿಯುತ್ತಿರುವುದರಿಂದ, ಫೈನಾನ್ಸ್ 2022-23 ರಲ್ಲಿ ಉತ್ಪಾದನೆಯ ಪರಿಮಾಣದ ಮೇಲೆ ಸ್ವಲ್ಪ ಪರಿಣಾಮ ಬೀರಬಹುದು. 2022ರ ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಇಂಡಿಯಾದ ಒಟ್ಟು ದೇಶೀಯ ಮಾರಾಟವು 133,861 ಯುನಿಟ್‌ಗಳಷ್ಟಿತ್ತು, 2021 ರಲ್ಲಿ ಅದೇ ತಿಂಗಳಲ್ಲಿ ಮಾರಾಟವಾದ 146,203 ವಾಹನಗಳಿಗೆ ಹೋಲಿಸಿದರೆ ಶೇಕಡಾ 8 ರಷ್ಟು ಕುಸಿತವಾಗಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಕಳೆದ ತಿಂಗಳು ಮಾರುತಿ ಸುಜುಕಿಯು ತನ್ನ ಅತ್ಯಧಿಕ ಮಾಸಿಕ ರಫ್ತುಗಳನ್ನು ಕಂಡಿತು, ಅದು 26,496 ಯುನಿಟ್‌ಗಳಷ್ಟಿತ್ತು. 2021ರ ಮಾರ್ಚ್ ತಿಂಗಳಿನಲ್ಲಿ 11,597 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ 128 ರಷ್ಟು ಬೃಹತ್ ಬೆಳವಣಿಗೆಯಾಗಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ 2021-22 ರ ಆರ್ಥಿಕ ವರ್ಷದಲ್ಲಿ ದಾಖಲೆಯ 2,38,376 ಯುನಿಟ್‌ಗಳನ್ನು ರಫ್ತು ಮಾಡಿದೆ. ಕಳೆದ ತಿಂಗಳು, ಆಲ್ಟೊ, ಎಸ್-ಪ್ರೆಸ್ಸೊ, ವ್ಯಾಗನ್ ಆರ್, ಸ್ವಿಫ್ಟ್, ಸೆಲೆರಿಯೊ, ಇಗ್ನಿಸ್, ಬಲೆನೊ ಮತ್ತು ಡಿಜೈರ್ ಅನ್ನು ಒಳಗೊಂಡಿರುವ ಕಂಪನಿಯ ಮಿನಿ ಮತ್ತು ಸಬ್‌ಕಾಂಪ್ಯಾಕ್ಟ್ ವಿಭಾಗದಿಂದ ಮಾರಾಟವು ಒಟ್ಟಾರೆಯಾಗಿ 97,805 ಯುನಿಟ್‌ಗಳನ್ನು ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021ರ ಮಾರ್ಚ್ ತಿಂಗಳಿನಲ್ಲಿ 106,854 ಯುನಿಟ್‌ಗಳಿಗೆ ಹೋಲಿಸಿದರೆ, ಅದು ಸುಮಾರು 8.4 ಶೇಕಡಾ ಇಳಿಕೆಯಾಗಿದೆ. 2022ರ ಮಾರ್ಚ್ ತಿಂಗಳಿನಲ್ಲಿ ಮಾರುತಿಯು ಸಿಯಾಜ್ ಕಾಂಪ್ಯಾಕ್ಟ್ ಸೆಡಾನ್‌ನ 1,834 ಯುನಿಟ್‌ಗಳನ್ನು ಮಾರಾಟ ಮಾಡಿತು, ಮಾರಾಟವಾದ 1,628 ಯುನಿಟ್‌ಗಳ ವಿರುದ್ಧ ಸುಮಾರು 13 ಶೇಕಡಾ ಬೆಳವಣಿಗೆಯನ್ನು ಕಂಡಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇನ್ನು ಕಳೆದ ತಿಂಗಳು ವಿಟಾರಾ ಬ್ರೆಝಾ, ಎರ್ಟಿಗಾ, ಎಕ್ಸ್‌ಎಲ್ 6 ಮತ್ತು ಎಸ್ ಅನ್ನು ಒಳಗೊಂಡಿರುವ ಯುಟಿಲಿಟಿ ವೆಹಿಕಲ್ ವಿಭಾಗದಿಂದ ಮಾರಾಟವಾದ 26,174 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 4.4 ರಷ್ತು ಇಳಿಕೆಯಾಗಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2022ರ ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿಯು ಇಕೋ ವ್ಯಾನ್‌ನ 9,221 ಯುನಿಟ್‌ಗಳನ್ನು ಮಾರಾಟ ಮಾಡಿತು, 2021 ರಲ್ಲಿ ಅದೇ ತಿಂಗಳಲ್ಲಿ ಮಾರಾಟವಾದ 11,547 ವ್ಯಾನ್‌ಗಳಿಗೆ ಹೋಲಿಸಿದರೆ ಶೇಕಡಾ 20 ಕ್ಕಿಂತ ಹೆಚ್ಚು ಇಳಿಕೆಯಾಗಿದೆ. ಕಳೆದ ತಿಂಗಳು, ಇತರ OEM ಗಳಿಗೆ ಮಾರಾಟವಾಗಿತ್ತು,

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021ರ ಮಾರ್ಚ್ ತಿಂಗಳಿನಲ್ಲಿ 5,899 ಯುನಿಟ್‌ಗಳಿಗೆ ಹೋಲಿಸಿದರೆ ಸುಮಾರು 6 ಪ್ರತಿಶತದಷ್ಟು ಬೆಳವಣಿಗೆಯಾಗಿದೆ. ಇದು ಮುಖ್ಯವಾಗಿ ಟೊಯೊಟಾ ಇತ್ತೀಚೆಗೆ ಭಾರತದಲ್ಲಿ ಹೊಸ ಗ್ಲ್ಯಾನ್ಜಾವನ್ನು ಬಿಡುಗಡೆ ಮಾಡಿದ್ದು, ಇದು ಬಲೆನೊವನ್ನು ಮರುಬ್ಯಾಡ್ಜ್ ಮಾಡಿತು. ಮಾರುತಿ ಸುಜುಕಿಯ ಸೂಪರ್ ಕ್ಯಾರಿ ಲಘು ವಾಣಿಜ್ಯ ವಾಹನದ ಮಾರಾಟವು 3,797 ಯುನಿಟ್‌ಗಳನ್ನು ತಲುಪಿದೆ, ಫೆಬ್ರವರಿ 2021 ರಲ್ಲಿ ಮಾರಾಟವಾದ 3,315 ಯುನಿಟ್‌ಗಳಿಗೆ ಹೋಲಿಸಿದರೆ ಶೇಕಡಾ 14 ಕ್ಕಿಂತ ಹೆಚ್ಚಿನ ಬೆಳವಣಿಗೆಯಾಗಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ತನ್ನ ಸರಣಿಯಲ್ಲಿ ಹಲವು ವೈವಿಧ್ಯಮಯ ಮಾದರಿಗಳನ್ನು ಹೊಂದಿದೆ. ಮಾರುತಿ ಸುಜುಕಿ ಕಂಪನಿಯ ಹಲವು ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಲಿವೆ. ಇದರಲ್ಲಿ ಫೇಸ್‌ಲಿಫ್ಟ್‌ಗಳು, ಹೊಸ ತಲೆಮಾರಿನ ಆವೃತ್ತಿಗಳು ಮತ್ತು ಹೊಸ ಕಾರುಗಳನ್ನು ಒಳಗೊಂಡಿದೆ.

ಮಾರ್ಚ್ ತಿಂಗಳಿನಲ್ಲಿ 1.70 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಹೊಸ ಬಲೆನೊ, ಹೊಸ ಬ್ರೆಝಾ, ನವೀಕರಿಸಿದ ವ್ಯಾಗನ್‌ಆರ್ ಮತ್ತು ಎರ್ಟಿಗಾ ಮತ್ತು ಎಲ್ಲಾ ಹೊಸ ಮಧ್ಯಮ ಗಾತ್ರದ ಎಸ್‌ಯುವಿ ಸೇರಿದಂತೆ ವ್ಯಾಪಕ ಶ್ರೇಣಿಯ ಹೊಸ ಮಾದರಿಗಳನ್ನು ಸಿದ್ಧಪಡಿಸುತ್ತಿದೆ. ಇದರ ಮೂಲಕ ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ.

Article Published On: Friday, April 1, 2022, 17:29 [IST]
English summary
Maruti suzuki revealed sales report in march 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+