ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಳೆದ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 1,48,380 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಕಳೆದ ವರ್ಷ ಇದೇ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು 63,111 ಯುನಿಟ್‌ಗಳನ್ನು ಮಾರಾಟಗೊಳಿಸಿತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.135.10 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ವಿತರಣೆಯನ್ನು ಇತ್ತೀಚೆಗೆ ಪ್ರಾರಂಭಿಸಿದೆ. ಕಳೆದ ತಿಂಗಳಿನಲ್ಲಿ ಗ್ರ್ಯಾಂಡ್ ವಿಟಾರಾ ಮಾದರಿಯ 4,770 ಯುನಿಟ್‌ಗಳು ಮಾರಾಟವಾಗಿವೆ. ಈ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಬುಕ್ಕಿಂಗ್‌ಗಳು 57,000 ಯುನಿಟ್‌ಗಳ ಮೈಲಿಗಲ್ಲನ್ನು ದಾಟಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಖರೀದಿಗಾಗಿ ಗ್ರಾಹಕರು ರೂ.11,000 ಮೊತ್ತವನ್ನು ಪಾವತಿಸಿ ಬುಕ್ ಮಾಡಬಹುದು.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10.45 ಲಕ್ಷವಾಗಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಸುಜುಕಿ ತನ್ನ ಗ್ಲೋಬಲ್-ಸಿ ಪ್ಲಾಟ್‌ಫಾರ್ಮ್ ಅನ್ನು ಬಳಸಿಕೊಂಡು ಅಭಿವೃದ್ಧಿಪಡಿಸಿದೆ ಮತ್ತು ವಿನ್ಯಾಸಗೊಳಿಸಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ನೆಕ್ಸಾ ಔಟ್‌ಲೆಟ್‌ಗಳ ಮೂಲಕ ಮಾತ್ರ ಮಾರಾಟ ಮಾಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯನ್ನು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ. ಇ ಎಸ್‍ಯುವಿ ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳಲ್ಲಿ ಸಹ ನೀಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ, ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂನೊಂದಿಗೆ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ನೊಂದಿಗೆ ಜೋಡಿಸಲಾಗಿದೆ. ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಮಾರುತಿ ಸುಜುಕಿ ಕಂಪನಿ ಹೇಳಿಕೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಈ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿ ಮಾದರಿಯು ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್‌ಗೆ ಹೋಲುವಂತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಎಸ್‍ಯುವಿ ಮಾದರಿಯ ಸೈಡ್ ಬಾಡಿ ಪ್ಯಾನೆಲ್‌ಗಳು, ಟೈಲ್‌ಗೇಟ್ ಮತ್ತು ಇಂಟಿಗ್ರೇಟೆಡ್ ಟೈಲ್ ಲ್ಯಾಂಪ್‌ಗಳೊಂದಿಗೆ ಹಿಂಭಾಗದ ಬಂಪರ್ ಕೂಡ ಹೈರೈಡರ್‌ಗೆ ಹೋಲುತ್ತವೆ. ಈ ಎಸ್‍ಯುವಿಯ ಸಿ-ಪಿಲ್ಲರ್‌ನಲ್ಲಿ ಕ್ರೋಮ್ ಅಪ್ಲಿಕ್, ಅಲಾಯ್ ವ್ಹೀಲ್ ನೊಂದಿಗೆ ವಿಭಿನ್ನ ವಿನ್ಯಾಸ ಮತ್ತು ಟೈಲ್‌ಗೇಟ್‌ನಲ್ಲಿ ಪೂರ್ಣ-ಅಗಲದ ಎಲ್ಇಡಿ ಲೈಟ್ ಬಾರ್ ಕೂಡ ವಿಶಿಷ್ಟವಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಒಳಭಾಗವು ಗ್ರ್ಯಾಂಡ್ ವಿಟಾರಾ ಹೈರೈಡರ್‌ನಂತೆಯೇ ಕಾಣುತ್ತದೆ ಮತ್ತು ಬಣ್ಣದ ಯೋಜನೆಗಳು ಮಾತ್ರ ಪ್ರಮುಖ ವ್ಯತ್ಯಾಸವಾಗಿದೆ. ಎರಡೂ ಒಂದೇ ಸ್ಟೀಯರಿಂಗ್ ವೀಲ್ ಅನ್ನು ಪಡೆಯುತ್ತವೆ, ಹೊಸ ಮಾರುತಿ ಸುಜುಕಿ ಮಾದರಿಗಳಲ್ಲಿ ಕಂಡುಬರುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲ್ಲಾ ಸ್ವಿಚ್‌ಗಿಯರ್‌ಗಳು ಎರಡೂ ಎಸ್‍ಯುವಿಗಳಲ್ಲಿ ಒಂದೇ ಆಗಿರುತ್ತವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾದ ಟಾಪ್-ಸ್ಪೆಕ್ ರೂಪಾಂತರಗಳು ಪನೋರಮಿಕ್ ಸನ್‌ರೂಫ್, 360-ಡಿಗ್ರಿ ಕ್ಯಾಮೆರಾ, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಕನೆಕ್ಟ್ ಕಾರ್ ಟೆಕ್, ಇಎಸ್‌ಪಿ, ಹಿಲ್-ಹೋಲ್ಡ್ ಅಸಿಸ್ಟ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಮತ್ತು ಆರು ಏರ್‌ಬ್ಯಾಗ್‌ಗಳನ್ನು ಪಡೆಯುತ್ತವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ದಾಖಲೆ ಮಟ್ಟದ ಮಾರಾಟ ಕಂಡ ಮಾರುತಿ ಗ್ರ್ಯಾಂಡ್ ವಿಟಾರಾ

ಈ ಹೊಸ ಗ್ರ್ಯಾಂಡ್ ವಿಟಾರಾದ ಎಸ್‍ಯುವಿಯಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 360-ಡಿಗ್ರಿ ಕ್ಯಾಮೆರಾ, HUD, Apple CarPlay ಮತ್ತು Android Auto ಜೊತೆಗೆ ಒಂಬತ್ತು-ಇಂಚಿನ SmartPlay Pro+ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಪ್ಯಾಡಲ್ ಶಿಫ್ಟರ್‌ಗಳು, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ಸ್, ಮತ್ತು ಡ್ರೈವ್ ಮೋಡ್ ಗಳನ್ನು ಒಳಗೊಂಡಿದೆ. ಈ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, October 4, 2022, 16:44 [IST]
English summary
Maruti suzuki sold 4770 unit of grand vitara in september 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+