Just In
- 4 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 4 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 6 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 7 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- News
ಒಂದು ಲೀ ಪೆಟ್ರೋಲ್ ಇದ್ದಿದ್ದರೆ ಶಿಶು ಪ್ರಾಣ ಉಳಿಯುತ್ತಿತ್ತಾ? ಲಂಕಾದಲ್ಲೊಂದು ದುರಂತ
- Sports
GT vs RR: ಅಂತಿಮ ಓವರ್ನಲ್ಲಿ ಅತಿ ಹೆಚ್ಚು ಬಾರಿ ರನ್ ಚೇಸ್ ಮಾಡಿದ ಗುಜರಾತ್ ಟೈಟನ್ಸ್ ದಾಖಲೆ
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಸೆಲೆರಿಯೊ ಕಾರು ಮಾರಾಟದಲ್ಲಿ ಶೇ.36 ರಷ್ಟು ಹೆಚ್ಚಳ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ (Maruti Suzuki) ಕಂಪನಿಯು ಭಾರತದಲ್ಲಿ ತನ್ನ ಹೊಸ ಸೆಲೆರಿಯೊ (Celerio) ಹ್ಯಾಚ್‌ಬ್ಯಾಕ್ ಕಾರ್ ಅನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಈ ಮಾರುತಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಕಳೆದ ತಿಂಗಳು, ಮಾರುತಿ ಸುಜುಕಿ ಭಾರತದಲ್ಲಿ ಒಟ್ಟು 6,442 ಯೂನಿಟ್ ಸೆಲೆರಿಯೊವನ್ನು ಮಾರಾಟ ಮಾಡಿದೆ, ಇದು ವರ್ಷದಿಂದ ವರ್ಷಕ್ಕೆ ಆಧಾರದ ಮೇಲೆ 36.48 ಪ್ರತಿಶತದಷ್ಟು ಬಲವಾದ ಮಾರಾಟದ ಬೆಳವಣಿಗೆಯಾಗಿದೆ. 2021ರ ಮಾರ್ಚ್ ತಿಂಗಳಿನಲ್ಲಿ ಇಂಡೋ-ಜಪಾನೀಸ್ ಕಾರು ತಯಾರಕರು ದೇಶೀಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್‌ನ 4,720 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮಾದರಿಯು ಕಳೆದ ವರ್ಷ ನವೆಂಬರ್‌ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಬಂದಿತು ಮತ್ತು ಹಿಂದಿನ ಜನರೇಷನ್ ಆವೃತ್ತಿಗೆ ಹೋಲಿಸಿದರೆ ಒಟ್ಟಾರೆ ಉತ್ತಮ ಮಾರಾಟ ಕಾರ್ಯಕ್ಷಮತೆಯನ್ನು ಹೊಂದಿದೆ.

ಈ ಹೊಸ ಮಾರುತಿ ಸೆಲೆರಿಯೊ ಸ್ಲೀಕರ್ ವಿನ್ಯಾಸ, ಹೆಚ್ಚು ಪರಿಣಾಮಕಾರಿ ಎಂಜಿನ್ ಆಯ್ಕೆಗಳು, ಉತ್ತಮ ಕ್ಯಾಬಿನ್ ಸ್ಥಳ ಮತ್ತು ಅದರ ಹಿಂದಿನದಕ್ಕಿಂತ ಕೆಲವು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿದೆ, ಇದು ಅದರ ಹೆಚ್ಚಿದ ಜನಪ್ರಿಯತೆಗೆ ದೊಡ್ಡ ಕಾರಣಗಳಾಗಿವೆ.

ಮಾರುತಿ ಸೆಲೆರಿಯೊ ಕಾರಿನಲ್ಲಿ 1.0 ಲೀಟರ್ ಕೆ 10ಸಿ ಸರಣಿಯ 3 ಸಿಲಿಂಡರ್ ಡ್ಯೂಯಲ್ ಜೆಟ್ ಪೆಟ್ರೋಲ್ ಎಂಜಿನ್ ಅಳವಡಿಸಿದೆ. ಈ ಎಂಜಿನ್ 66 ಬಿಹೆಚ್‌ಪಿ ಪವರ್ ಹಾಗೂ 89 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹೊಸ ಸೆಲೆರಿಯೊ ಐದು ಸ್ಪೀಡ್ ಮ್ಯಾನುಯಲ್ ಗೇರ್‌ಬಾಕ್ಸ್‌ನೊಂದಿಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನ ಆಯ್ಕೆಯನ್ನು ಸಹ ಪಡೆಯುತ್ತದೆ.

ಈ ಮಾರುತಿ ಸೆಲೆರಿಯೊ ಕಾರು ಸಿಎನ್‌ಜಿ ಆಯ್ಕೆಯಲ್ಲಿಯು ಸಹ ಲಭ್ಯವಿದೆ. ಇದು 56.7 ಬಿಹೆಚ್‍ಪಿ ಪವರ್ ಮತ್ತು 82.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಮ್ಯಾನ್ಯುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಮಾತ್ರ ಬರುತ್ತದೆ.

ಹೊಸ ಸೆಲೆರಿಯೊ ಸಹ ಸ್ವಿಫ್ಟ್ ಹಾಗೂ ಬಲೆನೊ ಕಾರುಗಳಂತೆ ಸುಜುಕಿಯ ಹಾರ್ಟೆಕ್ಟ್ ಪ್ಲಾಟ್‌ಫಾರಂ ಅನ್ನು ಆಧರಿಸಿದೆ. ಹೊಸ ಮಾದರಿಯು ಹಳೆಯ ಮಾದರಿಗಿಂತ ಹೆಚ್ಚು ಉದ್ದ ಹಾಗೂ ಅಗಲವಾಗಿದೆ. ಇದರ ವ್ಹೀಲ್‌ಬೇಸ್ ಸಹ ಮೊದಲಿಗಿಂತ ಉದ್ದವಾಗಿದ್ದು, ಕಾರಿನೊಳಗೆ ಮೊದಲಿಗಿಂತ ಹೆಚ್ಚು ಸ್ಪೇಸ್ ಹೊಂದಿದೆ.

ಸೆಲೆರಿಯೊ ಕಾರು ಒಟ್ಟು ಏಳು ವೆರಿಯೆಂಟ್‌ಗಳೊಂದಿಗೆ ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಸಿಂಗಲ್ ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ, ಆಕರ್ಷಕವಾದ ಗ್ರಿಲ್, ರಿಫ್ರೆಶ್ ಫ್ರಂಟ್ ಫಾಸಿಯಾದೊಂದಿಗೆ ಪರಿಷ್ಕೃತ ಬಂಪರ್, ವೃತ್ತಾಕಾರವಾದ ಹೆಡ್‌ಲ್ಯಾಂಪ್‌ಗಳು, ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದುವ ಸಿಗ್ನೇಚರ್ ಲೋಗೋ ಹೊಂದಿದೆ.

ಈ ಹೊಸ ಸೆಲೆರಿಯೊ ಕಾರಿನ ಲೋ ಟ್ರಿಮ್‌ಗಳು ಸಾಧಾರಣ ಅಲಾಯ್ ವ್ಹೀಲ್ ಗಳನ್ನು ಪಡೆದುಕೊಂಡಿದ್ದು, ಉನ್ನತ ರೂಪಾಂತರಗಳು ಬ್ಲ್ಯಾಕ್ ಬಣ್ಣದ 15-ಇಂಚಿನ ಅಲಾಯ್ ವ್ಹೀಲ್ ಜೋಡಣೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಒಳಗೊಂಡ ಇಂಟಿರಿಯರ್ ಅನ್ನು ಹೊಂದಿದೆ.

ಈ ಕಾರಿನ ಇಂಟಿರಿಯರ್ ನಲ್ಲಿ ಹೊಸ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಕಾಲ್ ಹಾಗೂ ಮ್ಯೂಸಿಕ್ ಅಸಿಸ್ಟ್ ಹೊಂದಿರುವ ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಸಿಂಗಲ್ ಪಾಡ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸರ್ಕ್ಯುಲರ್ ಡಿಜಿಟಲ್ ಸ್ಕ್ರೀನ್ ಅನ್ನು ಒಳಗೊಂಡಿದೆ.

ಈ ಕಾರಿನ ಹೆಡ್‌ಲೈಟ್ ವಿನ್ಯಾಸವನ್ನು ಅಪ್ ಡೇಟ್ ಮಾಡಲಾಗಿದೆ. ಇದರ ಜೊತೆಗೆ ಈ ಕಾರು ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ ಸಂಪರ್ಕ ಹೊಂದಿರುವ ಸ್ಮಾರ್ಟ್‌ಪ್ಲೇ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನಂತಹ ಹಲವಾರು ಹೊಸ ಹಾಗೂ ಅಪ್ ಡೇಟ್ ಮಾಡಲಾದ ಫೀಚರ್ ಗಳನ್ನು ಕೂಡ ಪಡೆದುಕೊಂಡಿದೆ. ಇದರ ಹೊರತಾಗಿ ಈ ಸೆಲೆರಿಯೊದಲ್ಲಿ ಐಡಲ್ ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಜೊತೆಗೆ ಪುಶ್ ಸ್ಟಾರ್ಟ್/ಸ್ಟಾಪ್ ಬಟನ್ ಫೀಚರ್ ಸಹ ನೀಡಲಾಗಿದೆ.

ಸುಜುಕಿ ಸೆಲೆರಿಯೊದಲ್ಲಿ ಡೋರ್ ರಿಕ್ವೆಸ್ಟ್ ಸ್ವಿಚ್ ಕೂಡ ನೀಡಲಾಗಿದೆ. ಹೊಸ ಮಾರುತಿ ಸೆಲೆರಿಯೊದಲ್ಲಿ ಬೂಟ್ ಸ್ಪೇಸ್ ಅನ್ನು ಈಗ 313 ಲೀಟರ್‌ಗಳಿಗೆ ಹೆಚ್ಚಿಸಿದೆ. ಕಂಪನಿಯು ಹೊಸ ಸೆಲೆರಿಯೊ ಕಾರಿನಲ್ಲಿ ಸುರಕ್ಷತಾ ಫೀಚರ್ ಗಳಿಗೆ ಹೆಚ್ಚು ಆದ್ಯತೆ ನೀಡಿದೆ. ಹೊಸ ಸೆಲೆರಿಯೊ ಕಾರಿನಲ್ಲಿ ಡ್ರೈವರ್ ಹಾಗೂ ಫ್ರಂಟ್ ಸೀಟ್ ಪ್ಯಾಸೆಂಜರ್ ಏರ್‌ಬ್ಯಾಗ್, ಸೀಟ್ ಬೆಲ್ಟ್ ರಿಮೈಂಡರ್, ಎಬಿಎಸ್-ಇಬಿಡಿ, ಇಂಜಿನ್ ಇಮೊಬಿಲೈಜರ್, ಹಿಂಭಾಗದ ಬಾಗಿಲುಗಳಲ್ಲಿ ಚೈಲ್ಡ್ ಪ್ರೂಫ್ ಲಾಕ್, ಸ್ಪೀಡ್ ಅಲರ್ಟ್ ಸಿಸ್ಟಂ, ಹಿಲ್ ಹೋಲ್ಡ್ ಅಸಿಸ್ಟ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವಾರು ಸುರಕ್ಷತಾ ಫೀಚರ್ ಗಳನ್ನು ನೀಡಲಾಗಿದೆ.

ಮಾರುತಿ ಸೆಲೆರಿಯೊ ಕಾರು 3,695 ಎಂಎಂ ಉದ್ದ, 1,655 ಎಂಎಂ ಅಗಲ, 1,555 ಎಂಎಂ ಎತ್ತರ ಮತ್ತು 2,435 ಎಂಎಂ ವ್ಹೀಲ್ ಬೆಸ್ ಹೊಂದಿದ್ದು, ಹಳೆಯ ಮಾದರಿಗಿಂತ ಹೊಸ ಕಾರು 55 ಎಂಎಂ ಅಗಲ ಮತ್ತು 10 ಎಂಎಂ ವ್ಹೀಲ್ ಬೆಸ್ ಮತ್ತು 5 ಎಂಎಂ ಹೆಚ್ಚುವರಿ ಎತ್ತರದೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಕಳೆದ ತಿಂಗಳು ಮಾರುತಿ ಸುಜುಕಿ ಕಂಪನಿಯು 170,395 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2021ರ ಮಾರ್ಚ್ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು 167,014 ವಾಹನಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಕೇವಲ 2 ಪ್ರತಿಶತದಷ್ಟು ಬೆಳವಣಿಗೆಯನ್ನು ಕಂಡಿದ್ದಾರೆ. ಇನ್ನು 2022ರ ಫೆಬ್ರವರಿ ತಿಂಗಳಿನಲ್ಲಿ 164,056 ಯುನಿಟ್‌ಗಳನ್ನು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಮಾರುತಿ ಸುಜುಕಿ ತಿಂಗಳಿನಿಂದ ತಿಂಗಳಿಗೆ ಶೇಕಡಾ 3.8 ರಷ್ಟು ಬೆಳವಣಿಗೆಯನ್ನು ಕಂಡಿದೆ.