2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಮಾರುತಿ ಸುಜುಕಿ ಬಲೆನೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. 2021ರಲ್ಲಿ ಇದು ತನ್ನ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಮತ್ತು ಒಟ್ಟಾರೆ ನಮ್ಮ ದೇಶದಲ್ಲಿ ಮೂರನೇ ಅತಿ ಹೆಚ್ಚು ಮಾರಾಟವಾದ ಕಾರ್ ಆಗಿದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಳೆದ ವರ್ಷ ಬಲೆನೊದ ಒಟ್ಟು 1,72,237 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ, ಇದು ಅತ್ಯಂತ ಪ್ರಭಾವಶಾಲಿ ಮಾರಾಟ ಸಂಖ್ಯೆಯಾಗಿದೆ. ಇದರ ಒಂದು ವರ್ಷದ ಹಿಂದಿನ ಮಾರಾಟದ ಅಂಕಿ ಅಂಶಕ್ಕೆ ಹೋಲಿಸಿದರೆ, 2020 ರಲ್ಲಿ ಬಲೆನೊದ 1,53,986 ಯುನಿಟ್‌ಗಳು ಮಾರಾಟವಾಗಿತ್ತು. ಮಾರುತಿ ಬಲೆನೊ ವರ್ಷದಿಂದ ವರ್ಷಕ್ಕೆ (YoY) ಆಧಾರದ ಮೇಲೆ ಶೇಕಡಾ 11.85 ರಷ್ಟು ಮಾರಾಟದ ಬೆಳವಣಿಗೆಯನ್ನು ಕಂಡಿದೆ. ಹ್ಯಾಚ್‌ಬ್ಯಾಕ್‌ನ ಮಾರುಕಟ್ಟೆ ಪಾಲು ಬಹುತೇಕ ಸ್ಥಿರವಾಗಿದೆ, ಸುಮಾರು ಶೇ.6 ರಷ್ಟು ಇದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಬಲೆನೊ ಹ್ಯಾಚ್‌ಬ್ಯಾಕ್‌ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಕಂಪನಿಯು 2015ರಲ್ಲಿ ಮೊದಲ ಬಾರಿಗೆ ಬಲೆನೊ ಕಾರನ್ನು ಬಿಡುಗಡೆಗೊಳಿಸಿತ್ತು. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಈ ಮಾರುತಿ ಬಲೆನೊ ಕಾರಿನಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 82 ಬಿಎಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಈ ಜನಪ್ರಿಯ ಬಲೆನೊ ಕಾರು ಮಾರಾಟದಲ್ಲಿ 1 ಮಿಲಿಯನ್ ಅಥವಾ 10 ಲಕ್ಷ ಯುನಿಟ್‌ಗಳನ್ನು ದಾಟಿ ಕಳೆದ ವರ್ಷದ ಕೊನೆಯಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿತು. ಮಾರುತಿ ಸುಜುಕಿಯು 2020ರ ಮೇ ಮತ್ತು 2021ರ ಅಕ್ಟೋಬರ್ ತಿಂಗಳುಗಳ ನಡುವೆ 2.5 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಿದೆ. ಮಾರುತಿ ಸುಜುಕಿ 2015 ರಲ್ಲಿ ಬಿಡುಗಡೆಯಾದಗಿನಿಂದ ತಯಾರಕರು ಈ ಹ್ಯಾಚ್‌ಬ್ಯಾಕ್‌ನಲ್ಲಿ ಸಣ್ಣ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುತ್ತಾ ಬಂದಿದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಬಿಎಸ್ 6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಣಗೊಂಡ ಮೊದಲ ಹ್ಯಾಚ್‌ಬ್ಯಾಕ್ ಈ ಬಲೆನೊ ಮಾದರಿಯಾಗಿದೆ. ಈ ಸಂದರ್ಭದಲ್ಲಿ ಬಲೆನೊ ಕಾರಿನಲ್ಲಿ ಕೆಲವು ಕಾಸ್ಮೆಟಿಕ್ ಬದಲಾವೆಣೆಗಳನ್ನು ಮಾಡಲಾಗಿತ್ತು. ಮೊದಲು ಮಾರುತಿ ಬಲೆನೊ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿತ್ತು. ಆದರೆ ಬಿಎಸ್ 6 ಮಾಲಿನ್ಯ ನಿಯಮ ಜಾರಿಯಾಗುವ ವೇಳೆ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಮಾರುತಿ ಸುಜುಕಿ ಕಂಪನಿಯು ಎಲ್ಲಾ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಈ ಮಾರುತಿ ಬಲೆನೊ ಕಾರು ಸಾಕಷ್ಟು ಪ್ರಮಾಣದ ಆಂತರಿಕ ಜಾಗವನ್ನು ನೀಡುತ್ತದೆ. ಇದು ಪ್ರಸ್ತುತ ಮಾರುತಿ ಸುಜುಕಿ ತಯಾರಿಸುವ ಅತಿದೊಡ್ಡ ಹ್ಯಾಚ್‌ಬ್ಯಾಕ್ ಆಗಿದೆ. ಇದು 2,520 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ, ಇದು ಪ್ರಯಾಣಿಕರಿಗೆ ಉತ್ತಮ ಪ್ರಮಾಣದ ಕ್ಯಾಬಿನ್ ಜಾಗವನ್ನು ಕೂಡ ಹೊಂದಿದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಇದೀಗ ಮಾರುತಿ ಸುಜುಕಿ ಕಂಪನಿಯು ಈ ಬಲೆನೊ ಕಾರನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮಾರುತಿ ಬಲೆನೊ ಕಾರನ್ನು ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆಗಳಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಗುಜರಾತ್ ಮೂಲದ ಸ್ಥಾವರದಲ್ಲಿ ಹೊಸ 2022ರ ಮಾರುತಿ ಬಲೆನೊ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ,

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಈ ಹ್ಯಾಚ್‌ಬ್ಯಾಕ್‌ನ ಮೊದಲ ಯುನಿಟ್ ಅನ್ನು ಇದೇ ತಿಂಗಳ 24 ರಂದು ಹೊರತರಲಾಯಿತು. ಇದರ ಚಿತ್ರಗಳು ಈಗಾಗಲೇ ಇಂಟರ್ನೆಟ್‌ನಲ್ಲಿ ಸೋರಿಕೆಯಾಗಿವೆ.. ಮಾರುತಿಯ ನೆಕ್ಸಾ ಡೀಲರ್‌ಶಿಪ್ ಶ್ರೇಣಿಯ ಮೂಲಕ ಮಾರಾಟ ಮಾಡಲು, ಹೊಸ ಬಲೆನೊ ಗಮನಾರ್ಹವಾಗಿ ಪರಿಷ್ಕೃತ ಮುಂಭಾಗದ ವಿನ್ಯಾಸದೊಂದಿಗೆ ಬರುತ್ತದೆ. ಹ್ಯಾಚ್‌ಬ್ಯಾಕ್‌ನ ಬಾಡಿ ಪ್ಯಾನೆಲ್‌ಗಳನ್ನು ಮರು-ವಿನ್ಯಾಸಗೊಳಿಸಲಾಗಿದೆ ಮತ್ತು ಹೊಸ ಮಾದರಿಯು ಪ್ರಸ್ತುತ ಕಾರ್‌ಗಿಂತ ಅಗಲವಾಗಿ ಮತ್ತು ದಪ್ಪವಾಗಿ ಕಾಣುತ್ತದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಈ 2022ರ ಮಾರುತಿ ಬಲೆನೊ ಹೊಸ ದೊಡ್ಡ ಗ್ರಿಲ್ ಅನ್ನು ಪಡೆಯುತ್ತದೆ, ಎಲ್-ಆಕಾರದ ಸುತ್ತುವ ಹೆಡ್‌ಲ್ಯಾಂಪ್‌ಗಳಿಂದ ಸುತ್ತುವರೆದಿದೆ. ಹೆಡ್‌ಲ್ಯಾಂಪ್ ಯುನಿಟ್ ಡಿಆರ್‌ಎಲ್‌ಗಳು (ಡೇಟೈಮ್ ರನ್ನಿಂಗ್ ಲೈಟ್‌ಗಳು) ಮತ್ತು ಪ್ರೊಜೆಕ್ಟರ್ ಸೆಟಪ್ ಅನ್ನು ಹೊಂದಿರುತ್ತದೆ. ಬಾನೆಟ್ ವಿನ್ಯಾಸವನ್ನು ಸಹ ಬದಲಾಯಿಸಲಾಗಿದೆ. ಹೊಸ ಬಲೆನೊ ಸೈಡ್ ಪ್ರೊಫೈಲ್ ಹೊರಹೋಗುವ ಮಾದರಿಗೆ ಹೋಲುತ್ತದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಆದರೆ ಮಾರುತಿ ಸುಜುಕಿ ಎಂಜಿನಿಯರ್‌ಗಳು ಹೊಸ ಮುಂಭಾಗದ ಫಾಸಿಕ ಮತ್ತು ಟೈಲ್-ಲೈಟ್‌ಗಳಿಗಾಗಿ ಮುಂಭಾಗ ಮತ್ತು ಹಿಂಭಾಗದ ಫೆಂಡರ್‌ಗಳನ್ನು ಪರಿಷ್ಕರಿಸಿದ್ದಾರೆ. ಹ್ಯಾಚ್‌ಬ್ಯಾಕ್‌ನ ಹಿಂಭಾಗದ ಪ್ರೊಫೈಲ್ ಹೊಸ ಟೈಲ್‌ಗೇಟ್ ಮತ್ತು ಹೊಸದಾಗಿ ಶೈಲಿಯ ಎಲ್-ಆಕಾರದ ಟೈಲ್-ಲೈಟ್‌ಗಳನ್ನು ಪಡೆಯುತ್ತದೆ. ಇದು ಹೊಸ ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳನ್ನು ಸಹ ಹೊಂದಿದೆ. ಹಿಂದಿನ ಸ್ಪೈ ಚಿತ್ರಗಳು 2022ರ ಮಾರುತಿ ಬಲೆನೊ ಸಂಪೂರ್ಣವಾಗಿ ಮರು-ವಿನ್ಯಾಸಗೊಳಿಸಲಾದ ಡ್ಯಾಶ್‌ಬೋರ್ಡ್ ಮತ್ತು ಬಣ್ಣದ ಸ್ಕೀಮ್‌ನೊಂದಿಗೆ ಎಲ್ಲಾ-ಹೊಸ ಒಳಾಂಗಣವನ್ನು ಹೊಂದಿರುತ್ತದೆ ಎಂದು ಬಹಿರಂಗಪಡಿಸುತ್ತದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಒಳಬಾಗದ ವಿನ್ಯಾಸವು ಜಾಗತಿಕ ಹೊಸ ಎಸ್-ಕ್ರಾಸ್ ಕ್ರಾಸ್‌ಒವರ್‌ನಿಂದ ಪ್ರೇರಿತವಾಗಿದೆ. ಸೆಂಟ್ರಲ್ ಕನ್ಸೋಲ್‌ನಲ್ಲಿ ಪ್ರಾಬಲ್ಯ ಹೊಂದಿರುವ ಫ್ರೀ-ಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಇದೆ, ಕನ್ಟಿವಿಟಿ ಸಿಸ್ಟಂನೊಂದಿಗೆ ದೊಡ್ಡದಾದ, 8.0-ಇಂಚಿನ ಫ್ರೀ-ಸ್ಟ್ಯಾಂಡಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನೊಂದಿಗೆ ಬರುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸಿಮ್-ಆಧಾರಿತ ಕನೆಕ್ಟಿವಿಟಿ ಸೂಟ್‌ನೊಂದಿಗೆ ಬರುತ್ತದೆ.

2021ರಲ್ಲಿ ದಾಖಲೆ ಮಟ್ಟದಲ್ಲಿ ಮಾರಾಟವಾದ ಜನಪ್ರಿಯ Maruti Baleno ಕಾರು

ಹೊಸ ಮಾರುತಿ ಸುಜುಕಿ ಬಲೆನೊ ಮಾದರಿಯು ಕೆಲವು ಹೆಚ್ಚುವರಿ ಫೀಚರ್ಸ್ ಗಳನ್ನು ಒಳಗೊಂಡಿರುತ್ತದೆ. ಇನ್ನು ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಇನ್ನು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್, ಹೋಂಡಾ ಜಾಝ್, ಫೋಕ್ಸ್‌ವ್ಯಾಗನ್ ಪೊಲೊ ಕಾರುಗಳಿಗೆ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Maruti suzuki sold over 1 7 lakh units of baleno hatchback in 2021 details
Story first published: Saturday, January 29, 2022, 12:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X