ಕ್ರ್ಯಾಶ್ ಟೆಸ್ಟ್‌ನಲ್ಲಿ ಕೇವಲ 1-ಸ್ಟಾರ್ ರೇಟಿಂಗ್ ಪಡೆದುಕೊಂಡ ಜನಪ್ರಿಯ ಮಾರುತಿ ಸ್ವಿಫ್ಟ್
ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸುಜುಕಿ ಸ್ವಿಫ್ಟ್ ಕಳೆದ 15 ವರ್ಷಕ್ಕೂ ಹೆಚ್ಚು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಇಂದಿಗೂ ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.
ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯು ಕೂಡ ಸುಜುಕಿ ಸ್ವಿಫ್ಟ್ ಕಾರು ಉತ್ತಮವಾಗಿ ಮಾರಾಟವಾಗುತ್ತಿದೆ. ಪ್ರಸ್ತುತ ತಲೆಮಾರಿನ ಸುಜುಕಿ ಸ್ವಿಫ್ಟ್ ಕಾರನ್ನು ಸುಜುಕಿ ಕಂಪನಿಯು 2017 ರಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನು 2018 ರಲ್ಲಿ ಆರಂಭದಲ್ಲಿ ಇದನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನು ಗ್ಲೋಬಲ್ NCAP ಮತ್ತೊಮ್ಮೆ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಟೆಸ್ಟ್ ಮಾಡಿದೆ.

ಈ ಬಾರಿಯ ಕ್ರ್ಯಾಶ್ ಟೆಸ್ಟ್‌ನಲ್ಲಿ ಸಿಂಗಲ್-ಸ್ಟಾರ್ ರೇಟಿಂಗ್ ಅನ್ನು ಗಳಿಸಿದೆ. ಕ್ರ್ಯಾಶ್ ಟೆಸ್ಟ್‌ನಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ವಯಸ್ಕ ಪ್ರಯಾಣಿಕರ ರಕ್ಷಣೆಯಲ್ಲಿ 34 ರಲ್ಲಿ 19.19 ಅಂಕಗಳನ್ನು ಗಳಿಸಿದರೆ, ಮಕ್ಕಳ ರಕ್ಷಣೆಯಲ್ಲಿ 49 ರಲ್ಲಿ 16.68 ಅಂಕಗಳನ್ನು ಗಳಿಸಿದೆ. ಇನ್ನು ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮಾದರಿಯು ಡ್ಯುಯಲ್ ಏರ್‌ಬ್ಯಾಗ್‌ಗಳು, EBD ಜೊತೆ ABS ಮತ್ತು ಸೀಟ್-ಬೆಲ್ಟ್ ರಿಮೈಂಡರ್ ಸಿಸ್ಟಂ ಅನ್ನು ಹೊಂದಿದೆ.
ಇದರ ಜೂತೆಗೆ ಸೀಟ್-ಬೆಲ್ಟ್ ರಿಮೈಂಡರ್ ಸಿಸ್ಟಮ್‌ಗಳು, Isofix ಚೈಲ್ಡ್ ಸೀಟ್ ಆಂಕಾರೇಜ್‌ಗಳು, ಜೊತೆಗೆ ಸೀಟ್-ಬೆಲ್ಟ್ ಪ್ರಿ-ಟೆನ್ಷನರ್‌ಗಳು ಮತ್ತು ಲೋಡ್ ಲಿಮಿಟರ್‌ಗಳನ್ನು ಹೊಂದಿತ್ತು. ESC ಅನ್ನು ಸ್ಟ್ಯಾಂಡರ್ಡ್ ಆಗಿ ವೈಶಿಷ್ಟ್ಯವಾಗಿ ಸ್ವೀಕರಿಸದ ಹ್ಯಾಚ್‌ಬ್ಯಾಕ್‌ನ ಬಾಡಿ ಶೆಲ್ ಅನ್ನು ಅಸ್ಥಿರ ಎಂದು ರೇಟ್ ಮಾಡಲಾಗಿದೆ. ಇನ್ನು ಈ ಬಾರಿಯ ಕ್ರ್ಯಾಶ್ ಟೆಸ್ಟ್ ನಲ್ಲಿ ಟೆಸ್ಟ್ ಮಾಡಿದ ಮಾರುತಿ ಸುಜುಕಿ ಸ್ವಿಫ್ಟ್ ಮಾದರಿಯು ದೇಶೀಯ ಮಾರುಕಟ್ಟೆಗಾಗಿ ಭಾರತದಲ್ಲಿ ತಯಾರಿಸಲ್ಪಟ್ಟಿದೆ.
ಈ ಕ್ರ್ಯಾಶ್ ಟೆಸ್ಟ್ ಬಗ್ಗೆ ಟುವರ್ಡ್ಸ್ ಝೀರೋ ಫೌಂಡೇಶನ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಡೇವಿಡ್ ವಾರ್ಡ್, ಅವರು ಮಾತನಾಡಿ, ಮಾರುತಿ ಸುಜುಕಿ ತಮ್ಮ ಪ್ರತಿಸ್ಪರ್ಧಿಗಳು ಸಾಧಿಸುತ್ತಿರುವ ಸುರಕ್ಷತಾ ಪ್ರಗತಿಯನ್ನು ಹೊಂದಿಸಲು ವಿಫಲವಾಗಿರುವುದು ಮತ್ತೊಮ್ಮೆ ನಿರಾಶಾದಾಯಕವಾಗಿದೆ. ಕನಿಷ್ಠ ಈಗ ಭಾರತ ಸರ್ಕಾರದ ನಿಯಮಗಳು ಕನಿಷ್ಠ ಸುರಕ್ಷತಾ ಮಾನದಂಡಗಳನ್ನು ಅನ್ವಯಿಸಲು ಕಂಪನಿಯನ್ನು ಒತ್ತಾಯಿಸುತ್ತಿವೆ. ಆದರೆ ಅದಕ್ಕಿಂತ ಉತ್ತಮವಾಗಿ ಮಾಡಲು ಅವರು ತಮ್ಮ ಗ್ರಾಹಕರ ಬಗ್ಗೆ ಸಾಕಷ್ಟು ಕಾಳಜಿ ವಹಿಸಬೇಕು ಎಂದು ಹೇಳಿದ್ದಾರೆ.
ಈ ಮಾರುತಿ ಸ್ವಿಫ್ಟ್ ಕಾರಿನಲ್ಲಿ 1.2 ಎಲ್ ಡ್ಯುಯಲ್‌ಜೆಟ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಮೋಟಾರ್ ಅನ್ನು ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಮೂಲಕ ಹೆಚ್ಚಿಸಲಾಗಿದ್ದು ಅದು ಇಂಧನ ಕ್ಷಮತೆಯನ್ನು ಹೆಚ್ಚಿಸುತ್ತದೆ. ಇದು ARAI- ಪ್ರಮಾಣೀಕೃತ ಮೈಲೇಜ್ ಅನ್ನು 23.20 ಕಿ.ಮೀ ಆಗಿದೆ. ಇನ್ನು ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಗೇರ್ ಬಾಕ್ಸ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
ಈ 2022ರ ಮಾರುತಿ ಸುಜುಕಿ ಸ್ವಿಫ್ಟ್ ಒಟ್ಟಾರೆ ಉದ್ದ 3,845 ಎಂಎಂ, ಅಗಲ 1,530 ಎಂಎಂ ಮತ್ತು ಎತ್ತರ 1,735 ಎಂಎಂ ಮತ್ತು ವೀಲ್‌ಬೇಸ್ 2,450 ಎಂಎಂ ವರೆಗೆ ಹೊಂದಿದೆ. ಇನ್ನು ಮಾರುತಿ ಸುಜುಕಿ ಸ್ವಿಫ್ಟ್ ಎಸ್-ಸಿಎನ್‌ಜಿಯನ್ನು ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಡಿಜೈರ್ ಸಿಎನ್‌ಜಿಯೊಂದಿಗೆ ಎಂಜಿನ್ ಅನ್ನು ಹಂಚಿಕೊಳ್ಳುತ್ತದೆ, ಇದು ಫ್ಯಾಕ್ಟರಿ-ಫಿಟ್ ಮಾಡಿದ ಸಿಎನ್‌ಜಿ ಕಿಟ್‌ನೊಂದಿಗೆ 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಆಗಿದೆ.
ಇದು ಪೆಟ್ರೋಲ್ ಮಾತ್ರ ಮಾದರಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಪೆಟ್ರೋಲ್ ಆವೃತ್ತಿಯು 89 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬೂಟ್‌ನಲ್ಲಿರುವ ಸಿಎನ್‌ಜಿ ಟ್ಯಾಂಕ್ ಲಗೇಜ್ ಸ್ಪೇಸ್ ಮೇಲೆ ಪರಿಣಾಮ ಬೀರಲಿದೆ. ಇದರೊಂದಿಗೆ ಸಿಎನ್‌ಜಿ ಟ್ಯಾಂಕ್‌ನಲ್ಲಿರುವ 10 ಕೆಜಿ ಅನಿಲವು ಹಿಂಭಾಗದ ತೂಕವನ್ನು ಹೆಚ್ಚಿಸಿದೆ. ಹೆಚ್ಚುವರಿ ತೂಕವನ್ನು ಎದುರಿಸಲು, ಮಾರುತಿ ಸುಜುಕಿ ಕಂಪನಿಯು ಎಸ್-ಸಿಎನ್‌ಜಿ ರೂಪಾಂತರಗಳಲ್ಲಿ ಸ್ವಲ್ಪ ಗಟ್ಟಿಯಾದ ಸಸ್ಪೆಕ್ಷನ್ ಗಳನ್ನು ನೀಡಿದೆ.


Click it and Unblock the Notifications