Just In
- 2 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 3 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 4 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
- 4 hrs ago
ಅತಿ ಕಡಿಮೆ ಅವಧಿಯಲ್ಲಿ ಕಿಯಾ ಸೆಲ್ಟೋಸ್ ಹೊಸ ಮೈಲಿಗಲ್ಲು: ದೇಶದಲ್ಲಿ ದಾಖಲೆಯ ಮಾರಾಟ
Don't Miss!
- Sports
ಐರ್ಲೆಂಡ್ vs ಅಫ್ಘಾನಿಸ್ತಾನ: 3ನೇ ಟಿ20 ಪಂದ್ಯ Live ಸ್ಕೋರ್ ಹಾಗೂ ಆಡುವ ಬಳಗ
- News
ಇಂಗ್ಲೆಂಡ್; ಕೆಲವು ಭಾಗದಲ್ಲಿ ಅತೀ ತಾಪಮಾನ, ಬರಗಾಲದ ಎಚ್ಚರಿಕೆ
- Movies
ಐರಾ- ಯಥರ್ವ್ ರಕ್ಷಬಂಧನ್ ಫೋಟೋ ವೈರಲ್!
- Lifestyle
Surya Gochar 2022 : ಆ. 17ಕ್ಕೆ ಸಿಂಹದಲ್ಲಿ ಸೂರ್ಯ ಸಂಚಾರ: ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವವೇನು?
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಆಸ್ಟರ್ ಮಾದರಿಗಾಗಿ ಹೊಸ ಬೆಸ್ ವೆರಿಯೆಂಟ್ ಪರಿಚಯಿಸಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಯು ಆಸ್ಟರ್ ಕಾರು ಮಾದರಿಯ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿದ್ದು, ಹೊಸ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಇದೀಗ ಗ್ರಾಹಕರ ಬೇಡಿಕೆ ಅನುಸಾರವಾಗಿ ಬೆಸ್ ವೆರಿಯೆಂಟ್ ಪರಿಚಯಿಸಿದೆ.

ಆಸ್ಟರ್ ಕಾರು ಮಾದರಿಯ ಬೆಲೆಯಲ್ಲಿ ಕಳೆದ ತಿಂಗಳ ಹಿಂದಷ್ಟೇ ಬೆಲೆ ಏರಿಕೆ ಮಾಡಿದ್ದ ಎಂಜಿ ಮೋಟಾರ್ ಕಂಪನಿಯು ಇದೀಗ ಬೆಲೆ ಕಡಿತದೊಂದಿಗೆ ಹೊಸ ವೆರಿಯೆಂಟ್ ಪರಿಚಯಿಸಿದ್ದು, ಹೊಸ ವೆರಿಯೆಂಟ್‌ನಲ್ಲಿ ಕಂಪನಿಯು ಕೆಲವು ತಾಂತ್ರಿಕ ಸೌಲಭ್ಯಗಳನ್ನು ಕೈಬಿಟ್ಟಿದೆ. ಸೆಮಿ ಕಂಡಕ್ಟರ್ ಕೊರತೆಯ ಪರಿಣಾಮ ಹೊಸ ಕಾರು ಮಾದರಿಯ ಪೂರೈಕೆ ಹೆಚ್ಚಿಸಲು ಹೊಸ ವೆರಿಯೆಂಟ್ ಪರಿಚಯಿಸಲಾಗಿದ್ದು, ಹೊಸ ವೆರಿಯೆಂಟ್‌ನಲ್ಲಿ ಪ್ರಮುಖ ಸುರಕ್ಷಾ ಸೌಲಭ್ಯಗಳನ್ನು ತೆಗೆದುಹಾಕಲಾಗಿದೆ.

ಹೊಸ ವೆರಿಯೆಂಟ್‌ಗಳು ಸುಮಾರು ರೂ. 6 ಸಾವಿರದಿಂದ ರೂ. 12 ಸಾವಿರ ತನಕ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯು ಪೆಟ್ರೋಲ್-ಮ್ಯಾನ್ಯುವಲ್ ಸಂಯೋಜನೆಯಲ್ಲಿ ಮಾತ್ರ ಲಭ್ಯವಿರುತ್ತವೆ.

ಸೆಮಿಕಂಡಕ್ಟರ್ ಚಿಪ್ ಸಮಸ್ಯೆಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿರುವ ಎಂಜಿ ಕಂಪನಿಯು ಪ್ರಮುಖ ಸುರಕ್ಷಾ ವೈಶಿಷ್ಟ್ಯಗಳನ್ನು ಬಿಟ್ಟುಕೊಡಲು ಸಿದ್ಧವಿರುವ ಗ್ರಾಹಕರಿಗಾಗ 'EX' ರೂಪಾಂತರಗಳನ್ನು ಶೀಘ್ರದಲ್ಲೇ ವಿತರಿಸುವ ಭರವಸೆ ನೀಡಿದೆ.

ಆಸ್ಟರ್ ಕಾರು ಸದ್ಯ ಸ್ಟೈಲ್, ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ಐದು ವೆರಿಯೆಂಟ್‌ಗಳನ್ನು ಹೊಂದಿದ್ದು, ಪ್ರಮುಖ ಮಾದರಿಗಳಲ್ಲಿ ಕಂಪನಿಯು ಸುರಕ್ಷಾ ವೈಶಿಷ್ಟ್ಯತೆಗಳನ್ನು ಕಡಿತಗೊಳಿಸಲಾದ ಇಎಕ್ಸ್ ವೆರಿಯೆಂಟ್ ಪರಿಚಯಿಸಿದೆ.

ಬೆಲೆ ಕಡಿತ ಮಾಡಲಾದ ವೆರಿಯೆಂಟ್‌ನಲ್ಲಿ ಕಂಪನಿಯು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್. ಹಿಲ್ ಡಿಸೆಂಟ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಲೇನ್ ಚೇಂಜ್ ಅಸಿಸ್ಟ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಫೀಚರ್ಸ್ ತೆಗೆದುಹಾಕಿದೆ.

ಸುರಕ್ಷಾ ಫೀಚರ್ಸ್ ಹೊಂದಿರುವ ಮಾದರಿಗಳು ಮೇಲೆ ನೀಡಲಾಗಿರುವ ಫೀಚರ್ಸ್ ಜೊತೆಗೆ ಆರು ಏರ್‌ಬ್ಯಾಗ್‌ಗಳು, ನಾಲ್ಕು ಡಿಸ್ಕ್ ಬ್ರೇಕ್‌ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, 360-ಡಿಗ್ರಿ ಕ್ಯಾಮೆರಾ, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್-ಕೀಪ್ ಅಸಿಸ್ಟ್, ಬ್ಲೈಂಡ್ ಅಸಿಸ್ಟ್, ಸ್ಪಾಟ್ ಡಿಟೆಕ್ಷನ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ ಮತ್ತು ಎಡಿಎಎಸ್(ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹೈ-ಬೀಮ್ ಅಸಿಸ್ಟ್‌ನಂತಹ ಸುರಕ್ಷತಾ ಸಾಧನಗಳನ್ನು ಹೊಂದಿದೆ.

ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿರುವ ಜೆಡ್ಎಸ್ ಮಾದರಿಯಲ್ಲಿ ಕಂಪನಿಯು ಬೆಲೆ ಹೆಚ್ಚಳ ಮಾಡಲಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಳೆದು ತಿಂಗಳು ರೂ.30 ಸಾವಿರದಿಂದ 46 ಸಾವಿರ ತನಕ ಬೆಲೆ ಹೆಚ್ಚಿಸಲಾಗಿತ್ತು.

ಆಸ್ಟರ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಆರಂಭಿಕ ಮಾದರಿಗಳಲ್ಲಿ 1.5 ಲೀಟರ್ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.3 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ 11 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಮತ್ತೊಂದು ವಿಶೇಷವೆಂದರೆ ಹೊಸ ಕಾರಿನಲ್ಲಿ ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಜೋಡಿಸಲಾಗಿದ್ದು, ಇದು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.