Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 9 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
1 ಸಾವಿರ ದಿನಗಳಲ್ಲಿ 1 ಸಾವಿರ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ ಎಂಜಿ ಮೋಟಾರ್
ಎಂಜಿ ಮೋಟಾರ್ ಇಂಡಿಯಾ ಚಾರ್ಜಿಂಗ್ ನಿಲ್ದಾಣಗಳನ್ನು ದೇಶಾದ್ಯಂತ ವೇಗವಾಗಿ ವಿಸ್ತರಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದ್ದು, 'ಎಂಜಿ ಚಾರ್ಜ್' ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಗುರಿಹೊಂದಿದೆ.

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದ್ದಂತೆ ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ಮೂಲಸೌಕರ್ಯವೂ ಸಹ ಉತ್ತಮಗೊಳ್ಳುತ್ತಿದ್ದು, ಕೇಂದ್ರ ವಿದ್ಯುತ್ ಸಚಿವಾಲಯದ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯು ಗಮನಾರ್ಹವಾಗಿ ಹೆಚ್ಚಳವಾಗಿದೆ.

ಕೇಂದ್ರ ಸರ್ಕಾರದ ಹೊಸ ಯೋಜನೆಗಳ ಪರಿಣಾಮ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

ಎಂಜಿ ಮೋಟಾರ್ ಕಂಪನಿಯು ಸಹ ಈಗಾಗಲೇ ಟಾಟಾ ಪವರ್ ಜೊತೆಗೂಡಿ ನೂರಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದಿದ್ದು, ಇದೀಗ ಕಂಪನಿಯು ಪ್ರತ್ಯೇಕವಾಗಿ ತನ್ನ ಯೋಜನೆಯ ಭಾಗವಾಗಿ ಎಂಜಿ ಚಾರ್ಜ್ ಎನ್ನುವ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಯೋಜಿಸಿದೆ.

ಹೊಸ ಯೋಜನೆ ಅಡಿ ಕಂಪನಿಯು ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದ್ದು, ಪ್ರಸ್ತುತ ಮತ್ತು ಭವಿಷ್ಯದ ಎಲೆಕ್ಟ್ರಿಕ್ ವಾಹನಗಳನ್ನು ಬೆಂಬಲಿಸುವ ಸ್ಮಾರ್ಟ್ ಎಸಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಿದೆ.

ಎಂಜಿ ಚಾರ್ಜ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಚಾರ್ಜಿಂಗ್ ಸೌಲಭ್ಯಗಳು ಸಿಮ್ ಆಧಾರಿತವಾಗಿರುತ್ತವೆ ಮತ್ತು ಸಂಯೋಜಿತ ಚಾರ್ಜಿಂಗ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇವು ಗ್ರಾಹಕರಿಗೆ ಲಭ್ಯತೆಯ ನಿಖರ ಮಾಹಿತಿ ಮತ್ತು ಪಾವತಿ ವಿಧಾನಗಳನ್ನು ಸರಳಗೊಳಿಸುತ್ತವೆ.

ಹೊಸ ಯೋಜನೆಗಾಗಿ ಎಂಜಿ ಮೋಟಾರ್ ಕಂಪನಿಯು ಎಲೆಕ್ಟ್ರಿಪಿ(Electreefi) ಎಕ್ಸಿಗಾಂ(Exicom) ಇಚಾರ್ಜ್‌ಬೇಸ್(Echargebays) ಮತ್ತು ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಪ್ರಮುಖ ಸಂಸ್ಥೆಗಳೊಂದಿಗೆ ಪಾಲುದಾರಿಕೆ ಪ್ರಕಟಿಸಿದ್ದು, ಹೊಸ ಯೋಜನೆ ಅಡಿಯಲ್ಲಿ ಕಂಪನಿಯು ವಸತಿ ಸಮುಚ್ಚಯಗಳಲ್ಲೂ ಹೊಸ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದೆ.

ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಇವಿ ಕಾರು ಮಾರಾಟ ಪಟ್ಟಿಯಲ್ಲಿ ಉತ್ತಮ ಸ್ಥಾನ ಹೊಂದಿರುವ ಜೆಡ್ಎಸ್ ಇವಿ ಕಾರು ಇದುವರೆಗೆ 4 ಸಾವಿರ ಯುನಿಟ್ ಮಾರಾಟ ಗುರಿಸಾಧಿಸಿದ್ದು, ಹೊಸ ಆವೃತ್ತಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಹೊಸ ಜೆಡ್ಎಸ್ ಇವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿರಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು 44.5 kWh ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಚ್‌ಗೆ 419 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದ್ದರೆ 2022ರ ಮಾದರಿಯು 51 kWh ಬ್ಯಾಟರಿ ಪ್ಯಾಕ್ ಮೂಲಕ ಹೊಸ ಕಾರಿನ ಮೈಲೇಜ್ ರೇಂಜ್ ಇದೀಗ ಪ್ರತಿ ಚಾರ್ಜ್‌ಗೆ 480 ಕಿ.ಮೀ ಗೆ ಹೆಚ್ಚಳವಾಗಿದೆ.

ಮೈಲೇಜ್ ಹೆಚ್ಚಳದೊಂದಿಗೆ ಕಾರಿನ ಪರ್ಫಾಮೆನ್ಸ್ ಕೂಡಾ ಸಾಕಷ್ಟು ಸುಧಾರಣೆಗೊಂಡಿರುವುದು ಎಲೆಕ್ಟ್ರಿಕ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದ್ದು, ಹೊಸ ಮಾದರಿಯು ಎಂಜಿ ಮೋಟಾರ್ ಕಂಪನಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಪ್ರೀಮಿಯಂ ಮಾದರಿಗೆ ಪೂರಕವಾಗಿ ಬಣ್ಣದ ಆಯ್ಕೆಯನ್ನು ಸಹ ವಿಸ್ತರಿಸಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

ಇದರೊಂದಿಗೆ ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

ಇದರ ಜೊತೆ ಉನ್ನತೀಕರಿಸಿದ ಮಾದರಿಯಲ್ಲಿ ಅತ್ಯುತ್ತಮ ದರ್ಜೆಯ ಹಿಂಭಾಗದ ಆಸನದ ಸೌಕರ್ಯದ ವೈಶಿಷ್ಟ್ಯಗಳನ್ನು ನೀಡಲಾಗಿದ್ದು, ಹಿಂದಿನ ಸೀಟ್‌ನಲ್ಲಿ ಸೆಂಟರ್ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಮತ್ತು ಹೆಡ್‌ರೆಸ್ಟ್ ಒಳಗೊಂಡಂತೆ ಹಿಂಬದಿಯ ಪ್ರಯಾಣಿಕರಿಗೂ ಏರ್ ಕಂಡಿಷನ್ ವೆಂಟ್ಸ್ ಸೇರಿದಂತೆ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ ಸದ್ಯ ಅತಿ ಹೆಚ್ಚು ಬೇಡಿಕೆಯಲ್ಲಿರುವ ಎಲೆಕ್ಟ್ರಿಕ್ ಕಾರಗಳ ಮಾರಾಟ ಪಟ್ಟಿಯಲ್ಲಿ ಟಾಟಾ ನೆಕ್ಸಾನ್ ಇವಿ ನಂತರ ಎರಡನೇ ಸ್ಥಾನ ಕಾಯ್ದುಕೊಂಡಿರುವ ಜೆಡ್ಎಸ್ ಇವಿ ಕಾರು ತುಸು ದುಬಾರಿ ಬೆಲೆ ಹೊಂದಿದ್ದರೂ ಹೆಚ್ಚಿನ ಮೈಲೇಜ್ ರೇಂಜ್ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಹೀಗಾಗಿ 2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್‌ನೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ರೂ. 1.50 ಲಕ್ಷದಿಂದ ರೂ. 2 ಲಕ್ಷದ ತನಕ ಹೆಚ್ಚುವರಿ ಬೆಲೆ ಹೊಂದಬಹುದಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಮಾದರಿಯು ವಿವಿಧ ಮಾದರಿಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21.49 ಲಕ್ಷದಿಂದ ರೂ. 25.18 ಲಕ್ಷ ಬೆಲೆ ಹೊಂದಿದ್ದು, ಹೊಸ ಮಾದರಿಯು ಮತ್ತಷ್ಟು ದುಬಾರಿಯಾಗಿರಲಿದೆ.