ಜುಲೈ ತಿಂಗಳಿನಲ್ಲಿ 4,013 ಕಾರುಗಳನ್ನು ಮಾರಾಟ ಮಾಡಿದ ಎಂಜಿ ಮೋಟಾರ್
ಜನಪ್ರಿಯ ಕಾರು ತಯಾರಕ ಕಂಪನಿಯಾ ಎಂಜಿ ಮೋಟಾರ್ ಇಂಡಿಯಾ 2022ರ ಜುಲೈ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಈ ವರದಿಯ ಪ್ರಕಾರ, ಕಳೆದ ತಿಂಗಳು ಎಂಜಿ ಮೋಟಾರ್ ಇಂಡಿಯಾ ಕಂಪನಿಯು 4,13 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ದೇಶದಲ್ಲಿ ಪೂರೈಕೆ ಸರಪಳಿ-ಸಂಬಂಧಿತ ಸಮಸ್ಯೆಗಳನ್ನು ಎದುರಿಸುವುದನ್ನು ಮುಂದುವರೆದಿದೆ. 2021ರ ಜುಲೈ ತಿಂಗಳಿನಲ್ಲಿ ಎಂಜಿ ಮೋಟಾರ್ ಇಂಡಿಯಾ ಕಂಪನಿಯು 4,225 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.5 ರಷ್ಟು ಕಡಿಮೆಯಾಗಿದೆ. ಇನ್ನು 2022ರ ಜೂನ್ ತಿಂಗಳಿನಲ್ಲಿ 4,503 ಯುನಿಟ್‌ಗಳ ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.11 ರಷ್ಟು ಕಡಿಮೆಯಾಗಿದೆ.

ಅದರ ಉತ್ಪಾದನೆಯು ಪೂರೈಕೆ-ಸರಪಳಿಯ ನಿರ್ಬಂಧಗಳಿಂದ ಪ್ರಭಾವಿತವಾಗಿರುತ್ತದೆ ಎಂದು ಕಂಪನಿಯು ಹೇಳಿದೆ, ಆದರೂ ಅವರು ಸರಬರಾಜುಗಳನ್ನು ಹೆಚ್ಚಿಸುವ ಮತ್ತು ಅದರ ಮಾದರಿಗಳಿಗೆ ಗ್ರಾಹಕರ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುದೆ ಎಂದು ಹೇಳಿದ್ದಾರೆ.

ಹೆಕ್ಟರ್ ಭಾರತದಲ್ಲಿ ಎಂಜಿ ಕಂಪನಿಯ ಹೆಚ್ಚು ಮಾರಾಟವಾದ ಮಾದರಿಯಾಗಿ ಉಳಿದಿದೆ, ಜೆಡ್ಎಸ್ ಇವಿ ಸಹ ಹೆಚ್ಚಿನ ಮಾರಾಟವನ್ನು ದಾಖಲಿಸುತ್ತಿದೆ ಎಂದು ಕಂಪನಿ ಹೇಳಿದೆ. ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಬ್ರ್ಯಾಂಡ್‌ನ ಇತ್ತೀಚಿನ ಹೊಸ ನವೀಕರಿಸಿದ ಮಾಡೆಲ್ ಅನ್ನು ಬಿಡುಗಡೆಗೊಳಿಸಿತು. ಕಂಪನಿಯು ಈಗ ಭಾರತದಲ್ಲಿ ಹೊಸ ಹೆಕ್ಟರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಇನ್ನು ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ಅನ್ನು ಒದಗಿಸುತ್ತದೆ.

ಹೊಸ ಜೆಡ್ಎಸ್ ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುತ್ತದೆ ಮತ್ತು 176 ಬಿಎಚ್‌ಪಿ ಉತ್ಪಾದಿಸುತ್ತದೆ. ಹಾಗೆಯೇ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದೆ.

ಜೆಡ್ಎಸ್ ಇವಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಜೆಡ್ಎಸ್ ಇವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದೆ. ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ನವೀಕರಿಸಿದ ಈ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಇನ್ನು ಎಂಜಿ ಮೋಟಾರ್ ಇಂಡಿಯಾ ತನ್ನ ಅತ್ಯಂತ ಜನಪ್ರಿಯ ಹೆಕ್ಟರ್ ಎಸ್‍ಯುವಿಯನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ 2022ರ ಎಂಜಿ ಹೆಕ್ಟರ್ ಎಸ್‍ಯುವಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಭಾರತದಲ್ಲಿ ತ್ವರಿತವಾಗಿ ತನ್ನನ್ನು ತಾನು ಗುರುತಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಬ್ರಾಂಡ್‌ಗಳಲ್ಲಿ ಎಂಜಿ ಕೂಡ ಒಂದಾಗಿದೆ. ಹೆಕ್ಟರ್, ಗ್ಲೋಸ್ಟರ್, ಆಸ್ಟರ್ ಮತ್ತು ಜೆಡ್ಎಸ್ ಇವಿ ಯಂತಹ ಮಾದರಿಗಳನ್ನು ಹೊಂದಿವೆ. ಎಂಜಿ ಮೋಟಾರ್ ಇಂಡಿಯಾ ಮೊದಲು ಬಿಡುಗಡೆಗೊಳಿಸಿದ ಮಾದರಿ ಹೆಕ್ಟರ್ ಆಗಿದೆ.

ಈ ಹೆಕ್ಟರ್ ಎಸ್‍ಯುವಿಯನ್ನು 2019ರಲ್ಲಿ ಬಿಡುಗಡೆಗೊಳಿಸಲಾಗಿತ್ತು. ಇದನ್ನು 2021 ರಲ್ಲಿ ನವೀಕರಿಸಲ್ಪಟ್ಟಿದೆ. ಮತ್ತು ಇದೀಗ ಭಾರತದಲ್ಲಿ ನ್ಯೂ ಜನರೇಷನ್ ಅನ್ನು ಪ್ರಾರಂಭಿಸಲು ಸಿದ್ಧವಾಗುತ್ತಿದೆ. ಮಿಡ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಹೆಕ್ಟರ್ ಹೆಚ್ಚು ಮಾರಾಟವಾದ ಎಸ್‍ಯುವಿಗಳಲ್ಲಿ ಒಂದಾಗಿದೆ. ಆದರೆ ಮಹೀಂದ್ರಾ XUV700 ಆಗಮನದೊಂದಿಗೆ, ಹೆಕ್ಟರ್ ಬೇಡಿಕೆಯಲ್ಲಿ ಕುಸಿತವಾಗಿದೆ. ಟಾಟಾ ಸಫಾರಿ ಮತ್ತು ಹ್ಯಾರಿಯರ್ ಸಹ ಎಂಜಿ ಹೆಕ್ಟರ್ ಅನ್ನು ಮಾರಾಟದಲ್ಲಿ ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂ ಜನರೇಷನ್ ಹೆಕ್ಟರ್ ಮಾದರಿಯ ಸಹಾಯದಿಂದ, ಕಳೆದುಹೋದ ಕೆಲವು ಮಾರುಕಟ್ಟೆ ಪಾಲನ್ನು ಮರಳಿ ಪಡೆಯಲು ಎಂಜಿ ಆಶಿಸುತ್ತಿದೆ. ಹೆಕ್ಟರ್ ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರಗಳು ಈಗಗಾಲೇ ಬಹಿರಂಗವಾಗಿದೆ. ವಿನ್ಯಾಸದ ಮುಂಭಾಗದಲ್ಲಿ, ಗ್ರಿಲ್, ಹೆಡ್‌ಲೈಟ್‌ಗಳು ಮತ್ತು ಹೊಸ LED ಟೈಲ್-ಲೈಟ್‌ಗಳೊಂದಿಗೆ ಟೈಲ್ ವಿಭಾಗವನ್ನು ಒಳಗೊಂಡಂತೆ ಮುಂಭಾಗದ ಫಾಸಿಕ ಎಂಜಿ ಬದಲಾಯಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಒಳಭಾಗದಲ್ಲಿ, ಸ್ವಲ್ಪ ಮರುವಿನ್ಯಾಸದೊಂದಿಗೆ ಸ್ವಲ್ಪ ಹೆಚ್ಚು ಪ್ರೀಮಿಯಂ ಒಳಾಂಗಣಗಳೊಂದಿಗೆ ಬರಲಿದೆ. ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಕನಿಷ್ಟ ಬೆಜೆಲ್‌ಗಳೊಂದಿಗೆ ದೊಡ್ಡದಾಗಬಹುದು ಮತ್ತು ಸಾಫ್ಟ್‌ವೇರ್ ಮುಂಭಾಗದಲ್ಲಿ ಸ್ವಲ್ಪ ಉತ್ತಮ ಗ್ರಾಫಿಕ್ಸ್ ಆಗಬಹುದು.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಎಂಜಿ ಮೋಟಾರ್ ಇಂಡಿಯಾ ಕಂಪನಿಯು 2022ರ ಜುಲೈ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಎಂಜಿ ಕಂಪನಿಯು ದೇಶದಲ್ಲಿ ಪೂರೈಕೆ ಸರಪಳಿ-ಸಂಬಂಧಿತ ಸಮಸ್ಯೆಗಳನ್ನು ಎದುರಿಸುವುದನ್ನು ಮುಂದುವರೆದಿರುವುದರಿಂದ ಕಳೆದ ತಿಂಗಳ ಮಾರಾಟದಲ್ಲಿ ಕುಸಿತವನ್ನು ಕಂಡಿದೆ.


Click it and Unblock the Notifications