Just In
- 25 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News ಸ್ಟಾರ್ ಪ್ರಚಾರಕರ ಜೊತೆ ವೇದಿಕೆ ಹಂಚಿಕೊಂಡರೆ ವೆಚ್ಚ ಅಭ್ಯರ್ಥಿ ಖಾತೆಗೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಟರ್ ಎಸ್ಯುವಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಗಳು ಭಾರತದಲ್ಲಿ ತನ್ನ ಪ್ರಮುಖ ಕಾರು ಮಾದರಿಗಳೊಂದಿಗೆ ಮಧ್ಯಮ ಕ್ರಮಾಂಕದ ಎಸ್ಯುವಿ ಮಾರಾಟದಲ್ಲಿ ಉತ್ತಮ ಮಾರುಕಟ್ಟೆ ಕಾಯ್ದುಕೊಂಡಿದ್ದು, ಕಂಪನಿಯು ಇದೀಗ ಆಸ್ಟರ್ ಮಾದರಿಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾಗುತ್ತಿದೆ.
ಆಸ್ಟರ್ ಹೊಸ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಕಂಪನಿಯು ಇದೀಗ ಆರಂಭಿಕ ಆವೃತ್ತಯಾದ ಸ್ಟೈಲ್ನಲ್ಲಿ ವಿಟಿಐ ತಂತ್ರಜ್ಞಾನ ಪ್ರೇರಿತ ಮ್ಯಾನುವಲ್ ಮಾದರಿಯನ್ನು ಬಿಡುಗಡೆ ಮಾಡಲು ಮುಂದಾಗಿದೆ.
ಹೊಸ ಆವೃತ್ತಿಯು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಆರಂಭಿಕ ಆವೃತ್ತಿಗಳ ಬೆಲೆಗೆ ಅನುಗುಣವಾಗಿ ಅಭಿವೃದ್ದಿಗೊಳಿಸಲಾಗಿದ್ದು, ಹೊಸ ಆವೃತ್ತಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.
ಸ್ಟೈಲ್ ವಿಟಿಐ ಮ್ಯಾನುವಲ್ ಆವೃತ್ತಿಯ ಬಿಡುಗಡೆಗಾಗಿ ಕಂಪನಿಯು ಕೇಂದ್ರ ರಸ್ತೆ ಸಾರಿಗೆ ಇಲಾಖೆಯಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದ್ದು, ಹೊಸ ಕಾರು ಮಾದರಿಯನ್ನು ಕಂಪನಿಯು 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಬಿಡುಗಡೆ ಮಾಡಲಿದೆ.
ಹೊಸ ಆಸ್ಟರ್ ಕಾರು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 10.28 ಲಕ್ಷದಿಂದ ರೂ. 18.13 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಮಾದರಿಯು ರೂ. 9.50 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿವೆ.
ಇನ್ನು ಆಸ್ಟರ್ ಕಾರಿನಲ್ಲಿ ಹಲವು ಹೊಸ ಫೀಚರ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ಹೊಸ ಕಾರುಗಳ ಬೆಲೆಯು ಸಾಕಷ್ಟು ಹೆಚ್ಚಳವಾಗುತ್ತಿದ್ದು, ಎಂಜಿ ಮೋಟಾರ್ ಕಂಪನಿಯು ಸಹ ಹೊಸ ಕಾರು ಮಾದರಿಯ ಬೆಲೆಯಲ್ಲಿ ಕಳೆದ ತಿಂಗಳ ಹಿಂದಷ್ಟೇ ಪರಿಷ್ಕರಣೆ ಮಾಡಲಾಗಿತ್ತು.
ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ಗಳನ್ನು ಜೋಡಣೆ ಹೊಂದಿರುವ ಜೆಡ್ಎಸ್ ಮಾದರಿಯಲ್ಲಿ ಕಂಪನಿಯು ಭಾರೀ ಹೆಚ್ಚಳ ಮಾಡಲಾಗಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ರೂ.30 ಸಾವಿರದಿಂದ 46 ಸಾವಿರ ತನಕ ಬೆಲೆ ಹೆಚ್ಚಿಸಲಾಗಿದೆ.
ಆಸ್ಟರ್ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಆರಂಭಿಕ ಮಾದರಿಗಳಲ್ಲಿ 1.5 ಲೀಟರ್ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.3 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ 11 ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ.
ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಸಿವಿಟಿ ಗೇರ್ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹಾಗೆಯೇ ಆಸ್ಟರ್ ಕಾರು ಆಕರ್ಷಕವಾದ ಗ್ರಿಲ್ ಜೊತೆ ಹ್ವಾಕ್ ಐ ಹೆಡ್ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿರಲಿದ್ದು, ಕಾರಿನ ಒಳಭಾಗದಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.
ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.
ಮತ್ತೊಂದು ವಿಶೇಷವೆಂದರೆ ಹೊಸ ಕಾರಿನಲ್ಲಿ ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಜೋಡಿಸಲಾಗಿದ್ದು, ಇದು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.
ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್ಗಳಲಿವೆ.
ಆಕ್ಟಿವ್ ಸೇಫ್ಟಿ ಫೀಚರ್ಸ್ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.