ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ನವೀಕರಿಸಿದ ಗ್ಲೊಸ್ಟರ್ ಎಸ್‍ಯುವಿಯನ್ನು ಟೆಸ್ಟ್ ಮಾಡಲು ಪ್ರಾರಂಭಿಸಿದೆ. ಇತ್ತೀಚೆಗೆ ಹೊಸ ಎಂಜಿ ಗ್ಲೊಸ್ಟರ್ ಎಸ್‍ಯುವಿಯು ಬೆಳಗಾವಿಯಲ್ಲಿ ರೋಡ್ ಟೆಸ್ಟ್ ಮಾಡುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹೊಸ ಎಂಜಿ ಗ್ಲೊಸ್ಟರ್ ಎಸ್‍ಯುವಿಯು ಪರಿಷ್ಕೃತ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ, ಇದರ ಹಿಂಭಾಗದ ಬಂಪರ್ ಮತ್ತು ಟೈಲ್ ಗೇಟ್ ಅಸ್ತಿತ್ವದಲ್ಲಿರುವ ಮಾದರಿಯಂತೆಯೇ ಕಾಣುತ್ತದೆ. ಈಗಿನಂತೆ, ಹೊಸ 2022ರ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್‌ನ ಎಸ್‍ಯುವಿಯ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ. ಆದರ ಈ ಹೊಸ ಎಸ್‍ಯುವಿಯು ನವೀಕರಿಸಿದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಸ್ವಲ್ಪ ಪರಿಷ್ಕೃತ ರೇಡಿಯೇಟರ್ ಗ್ರಿಲ್ ಮತ್ತು ಮುಂಭಾಗದ ಬಂಪರ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳೊಂದಿಗೆ ಬರುವ ಸಾಧ್ಯತೆಯಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹೊಸ 2022ರ ಎಂಜಿ ಗ್ಲೊಸ್ಟರ್ ಎಸ್‍ಯುವಿಯ ಒಳಭಾಗವು ಹೊಸ ಕೆಲವು ನವೀಕರಣಗಳನ್ನು ಪಡೆದುಕೊಳ್ಳಬಹುದು. ಫುಲ್ ಸೈಜ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಹಲವಾರು ಆಧುನಿಕ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ಹೊಸ ಗ್ಲೊಸ್ಟರ್ ಮಾದರಿಯು ಬಿಡುಗಡೆಯ ನಂತರ ಗ್ರಾಹಕರ ಬೇಡಿಕೆ ಕೆಲವು ಬದಲಾವಣೆಗಳನ್ನು ಪಡೆಯಬಹುದು.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಗ್ಲೊಸ್ಟರ್ ಎಸ್‍ಯುವಿ ಮಾದರಿ ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ನಾಲ್ಕು ವೆರಿಯೆಂಟ್ ಹೊಂದಿದೆ. ಇದು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಎಸ್‌ಯುವಿ ಮಾದರಿಗಳಲ್ಲೇ ಅತಿ ಹೆಚ್ಚು ವೀಲ್ಹ್ ಬೆಸ್ ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಆಟೋನಮಸ್ ಲೆವಲ್ 1 ಟೆಕ್ನಾಲಜಿಯೊಂದಿಗೆ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಹೊಸ ಗ್ಲೊಸ್ಟರ್ ಎಸ್‌ಯುವಿಯಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್ (ಎಪಿಎ), ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ), ಫಾರ್ವರ್ಡ್ ಕೂಲಿಷನ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಹಾಗೂ ಲೇನ್ ಎಕ್ಸಿಟ್ ವಾರ್ನಿಂಗ್ ಅನ್ನು ಒಳಗೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಈ ಎಸ್‍ಯುವಿಯಲ್ಲಿ ಎಲ್‌ಇಡಿ ಲೈಟಿಂಗ್, ಆಟೋ ಲೆವೆಲಿಂಗ್‌ನೊಂದಿಗೆ ಹೆಡ್‌ಲ್ಯಾಂಪ್‌ಗಳು, ಎಂಜಿ ಲೋಗೋ ಹೊಂದಿರುವ ಒಆರ್‌ವಿಎಂ, ಪನೊರಮಿಕ್ ಸನ್‌ರೂಫ್, 19 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್, ಫ್ರಂಟ್-ರಿಯರ್ ಫಾಗ್ ಲ್ಯಾಂಪ್‌, ಸ್ಟೀರಿಂಗ್-ಅಸಿಸ್ಟ್ ಕಾರ್ನರಿಂಗ್ ಲ್ಯಾಂಪ್‌, ಡ್ಯುಯಲ್-ಬ್ಯಾರೆಲ್ ಟ್ವಿನ್ ಕ್ರೋಮ್ ಎಕ್ಸಾಸ್ಟ್ ಗಳಿವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಒಳಭಾಗದಲ್ಲಿ ಲೆದರ್ ಸೀಟ್, ಎರಡನೇ ಸಾಲಿನಲ್ಲಿ ಪರ್ಸನಲ್ ಕ್ಯಾಪ್ಟನ್ ಸೀಟ್, ಆ್ಯಪಲ್ ಕಾರ್ ಪ್ಲೇ ಹೊಂದಿರುವ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ, ಎಂಜಿ ಕಂಪನಿಯ ಹೊಸ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 8 ಇಂಚಿನ ಎಂಐಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಪ್ಯಾಡಲ್ ಶಿಫ್ಟರ್ ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಇದರೊಂದಿಗೆ ತ್ರೀ ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ರನ್ನಿಂಗ್ ಟೇಲ್‌ಗೇಟ್, ಹಿಟ್/ಕೂಲ್ ಮಾಡಬಹುದಾದ ಮುಂಭಾಗದ ಆಸನಗಳು, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ವೇ ಎಲೆಕ್ಟ್ರಾನಿಕ್ ಅಡ್ಜೆಸ್ಟ್ ಫ್ರಂಟ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹಾಗೆಯೇ ಐ-ಸ್ಮಾರ್ಟ್ ತಂತ್ರಜ್ಞಾನವು ಚಾಲಕನ ಸ್ಮಾರ್ಟ್‌ಫೋನ್ ಮೂಲಕ ಅಪ್ಲಿಕೇಶನ್ ಸಂಪರ್ಕಿಸಲು ಅನುವು ಮಾಡಿಕೊಡುತ್ತದೆ. ಇದು ವಾಹನದ ಸ್ಥಿತಿ, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಜಿಯೋಫೆನ್ಸಿಂಗ್, ಕಾರಿನ ವಿವಿಧ ಫೀಚರ್ ಗಳ ರಿಮೋಟ್ ಫಂಕ್ಷನ್ ಸೇರಿದಂತೆ ಒಟ್ಟು 57 ಹೆಚ್ಚುವರಿ ಫೀಚರ್ ಗಳನ್ನು ಹೊಂದಿವೆ. 2022ರ ಎಂಜಿ ಗ್ಲೊಸ್ಟರ್ ಎಸ್‍ಯುವಿ ಮಾದರಿ ಪ್ರಯಾಣವನ್ನು ಆರಾಮದಾಯಕ ಮತ್ತು ಸುರಕ್ಷಿತವಾಗಿಸುವ ಹೊಸ ಗ್ಲೊಸ್ಟರ್ ಎಸ್‌ಯುವಿ ಕಾರು 4,985-ಎಂ ಉದ್ದ, 1,926-ಎಂಎಂ ಅಗಲ, 1,867-ಎಂಎಂ ಎತ್ತರ ಹಾಗೂ 2,950-ಎಂಎಂ ವ್ಹೀಲ್ ಬೇಸ್ ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಗ್ಲೊಸ್ಟರ್ ಎಸ್‌ಯುವಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದ್ದು, ಸೂಪರ್ ಹಾಗೂ ಸ್ಮಾರ್ಟ್ ಮಾದರಿಗಳು ಒಂದೇ ಟರ್ಬೋ ಚಾರ್ಜರ್ ಅನ್ನು ಹೊಂದಿದ್ದರೆ ಟಾಪ್-ಎಂಡ್ ಮಾದರಿಗಳಾದ ಶಾರ್ಪ್ ಹಾಗೂ ಸ್ಯಾವಿಯಲ್ಲಿ ಟ್ವಿನ್-ಟರ್ಬೊ ಸೆಟಪ್ ಅಳವಡಿಸಲಾಗಿದೆ. ಬೇಸ್ ಮಾದರಿಗಳಲ್ಲಿರುವ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 160 ಬಿಹೆಚ್‌ಪಿ ಪವರ್ ಮತ್ತು 375-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ, ಟಾಪ್-ಎಂಡ್ ಮಾದರಿಯಲ್ಲಿರುವ 2.0-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 216 ಬಿಹೆಚ್‌ಪಿ ಪವರ್ ಮತ್ತು 480 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಇಂಡಿಯಾ 2022ರ ಜನವರಿ ತಿಂಗಳ ಕಾರು ಮಾರಾಟ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ. ವರದಿಯ ಪ್ರಕಾರ, ಎಂಜಿ ಮೋಟಾರ್ ಕಂಪನಿಯು ಕಳೆದ ತಿಂಗಳಿನಲ್ಲಿ 4,306 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷ ಇದೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.20 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ,ಆದರೂ ನಡೆಯುತ್ತಿರುವ ಜಾಗತಿಕ ಸೆಮಿಕಂಡಕ್ಟರ್ ಕೊರತೆಯಿಂದಾಗಿ ಪೂರೈಕೆಯು ಪರಿಣಾಮ ಬೀರಿತು, ಇದು ಉತ್ಪಾದನೆಯನ್ನು ಕಡಿಮೆ ಮಾಡಲು ಕಾರಣವಾಯಿತು. 2021ರ ಡಿಸೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ, ಕಂಪನಿಯು ಶೇಕಡಾ 69 ರಷ್ಟು ಗಣನೀಯ ಬೆಳವಣಿಗೆಯನ್ನು ದಾಖಲಿಸಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಇತ್ತೀಚೆಗೆ ಅಗಾಧ ಪ್ರತಿಕ್ರಿಯೆಯನ್ನು ಗಳಿಸಿದೆ, ಜೊತೆಗೆ, ಹೆಕ್ಟರ್ ಮತ್ತು ಗ್ಲೋಸ್ಟರ್ ತಮ್ಮ ವಿಭಾಗಗಳಲ್ಲಿ ಉತ್ತಮ ಮಾರಾಟದ ಪ್ರವೃತ್ತಿಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಎಂಜಿ ಜೆಡ್ಎಸ್ ಇವಿ ಭಾರತೀಯ ಮಾರುಕಟ್ಟೆಯಲ್ಲಿ ಎರಡು ವರ್ಷಗಳನ್ನು ಪೂರೈಸಿದೆ ಮತ್ತು ಕಂಪನಿಯ ಯಶಸ್ಸನ್ನು ಮುಂದುವರೆಸಿದೆ ಎಂದು ಕಂಪನಿಯು ಘೋಷಿಸಿದೆ. ಹೊಸ ಎಂಜಿ ಗ್ಲೊಸ್ಟರ್ ಎಸ್‍ಯುವಿಯು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Article Published On: Friday, February 18, 2022, 10:28 [IST]
English summary
Mg motor to offer new updates for gloster full size suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+