ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ ಜೆಡ್ಎಸ್ ಇವಿ ಕಾರು ಮಾದರಿಯ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಹೊಸ ಇವಿ ಕಾರುಗಳ ಹೆಚ್ಚುತ್ತಿದ್ದಂತೆ ಕಂಪನಿಯು ಮಾರಾಟದ ಜೊತೆ ಗ್ರಾಹಕರ ಸೇವೆಗಳಿಗಳಿಗಾಗಿ ತನ್ನದೇ ಪ್ರತ್ಯೇಕ ಇವಿ ಚಾರ್ಜರ್ ನಿಲ್ದಾಣಗಳ ನಿರ್ಮಾಣಕ್ಕೆ ನೀಡಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಹೊಸ ಇವಿ ಕಾರುಗಳ ಮಾರಾಟ ಹೆಚ್ಚಳಕ್ಕೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ಅವಶ್ಯಕತೆಯನ್ನು ಅರಿತಿರುವ ಇವಿ ಕಾರು ಉತ್ಪಾದನಾ ಕಂಪನಿಗಳು ಇವಿ ಕಾರುಗಳ ಉತ್ಪಾದನೆ ಜೊತೆಗೆ ಚಾರ್ಜಿಂಗ್ ನಿಲ್ದಾಣಗಳ ಹೆಚ್ಚಳಕ್ಕೂ ಹೊಸ ಯೋಜನೆಗಳನ್ನು ರೂಪಿಸುತ್ತಿವೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಜೆಡ್ಎಸ್ ಇವಿ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಹೊಂದಿರುವ ಎಂಜಿ ಮೋಟಾರ್ ಕಂಪನಿಯು ಸಹ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳ ಅಭಿವೃದ್ದಿಗೆ ಪ್ರಯತ್ನಿಸುತ್ತಿದ್ದು, ಟಾಟಾ ಪವರ್ ಜೊತೆಗೂಡಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ಆರಂಭಿಸಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಇದೀಗ ಕಂಪನಿಯು ಸಾರ್ವಜನಿಕ ಬಳಕೆಯ ಇವಿ ಮಾದರಿಗಳೊಂದಿಗೆ ಕಮ್ಯೂನಿಟಿ ಇವಿ ಚಾರ್ಜಿಂಗ್ ಕೇಂದ್ರಗಳಿಗೂ ಚಾಲನೆ ನೀಡಿದ್ದು, ತನ್ನ ಮೊದಲ ಕಮ್ಯೂನಿಟಿ ಇವಿ ಚಾರ್ಜಿಂಗ್ ಕೇಂದ್ರವನ್ನು ರಾಜಸ್ತಾನದ ಜೈಪುರ್‌ದಲ್ಲಿ ಆರಂಭಿಸಲಾಗಿದೆ. ದೊಡ್ಡ ಮಟ್ಟದ ಅಂಪಾಟ್ಮೆಂಟ್‌ಗಳಲ್ಲಿನ ಇವಿ ಕಾರು ಬಳಕೆದಾರರಿಗೆ ಇದು ಸಾಕಷ್ಟು ಅನುಕೂರವಾಗಿದ್ದು, ಎಂಜಿ ಮೋಟಾರ್ ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಒಟ್ಟು 1 ಸಾವಿರ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುವ ಗುರಿಯೋಜನೆ ಹೊಂದಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಎಂಜಿ ಮೋಟಾರ್ ಕಂಪನಿಯು ಕಮ್ಯೂನಿಟ್ ಚಾರ್ಜಿಂಗ್ ನಿಲ್ದಾಣಗಳಿಗಾಗಿ ಟೈಪ್ 2 ಚಾರ್ಜರ್‌ಗಳನ್ನು ಬಳಕೆ ಮಾಡಿದ್ದು, ಸಿಮ್ ಮೂಲಕ ಸಕ್ರಿಯಗೊಳಿಸಲಾಗಿರುವ ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳು ಚಾರ್ಜರ್ ನಿರ್ವಹಣಾ ವ್ಯವಸ್ಥೆಯೊಂದಿಗೆ ಗ್ರಾಹಕರ ಬಳಕೆಯೆಗೆ ಸಾಕಷ್ಟು ಅನೂಕರವಾಗಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಹೊಸ ಇವಿ ಚಾರ್ಜಿಂಗ್ ನಿಲ್ದಾಣಗಳಲ್ಲಿ ಕಂಪನಿಯು ಗ್ರಾಹಕರ ನೆರವಿಗಾಗಿ 24x7 ಸೇವೆಗಳನ್ನು ಒದಗಿಸಲಿದ್ದು, ಚಾರ್ಜಿಂಗ್ ನಿಲ್ದಾಣಗಳ ಮಾಹಿತಿ, ಚಾರ್ಜಿಂಗ್ ಮುನ್ನ ಹಣ ಪಾವತಿ ಸೇರಿದಂತೆ ಪ್ರಮುಖ ಮಾಹಿತಿಗಳಿಗಾಗಿ ಪ್ರತ್ಯೇಕ ಆ್ಯಪ್ ಮೂಲಕ ಇವಿ ನಿಲ್ದಾಣಗಳನ್ನು ನಿಯಂತ್ರಿಸಲಾಗುತ್ತದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಇನ್ನು ಎಂಜಿ ಮೋಟಾರ್ ಕಂಪನಿಯು ಇತ್ತೀಚೆಗೆ 2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಹೊಸ ಕಾರು ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಭಾರತದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಬಾರಿ ಅಪ್‌ಡೆಟ್ ಪಡೆದುಕೊಂಡಿದ್ದು, ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಹೊಸ ಕಾರು ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುವ ಮೂಲಕ 176 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಹಾಗೆಯೇ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಜೆಡ್ಎಸ್ ಇವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದ್ದು, ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದ್ದು, ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ. ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಎಂಜಿ ಮೊದಲ ಕಮ್ಯೂನಿಟಿ ಇವಿ ಚಾರ್ಜರ್ ಆರಂಭ- 1 ಸಾವಿರ ನಿಲ್ದಾಣಗಳನ್ನು ಆರಂಭಿಸುವ ಗುರಿ..

ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

Most Read Articles

Kannada
English summary
Mg motors inaugurates its first community ev charger in jaipur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X