ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಜೆಡ್ಎಸ್ ಇವಿ ಮಾರಾಟದೊಂದಿಗೆ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಪ್ರಸ್ತುತ ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆಯು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಖರೀದಿದಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಎಂಜಿ ಮೋಟಾರ್ ಕಂಪನಿಯು ತನ್ನ ಜೆಡ್ಎಸ್ ಇವಿ ನಂತರ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆಗಾಗಿ ಯೋಜನೆ ರೂಪಿಸುತ್ತಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಸದ್ಯ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಇವಿ ಕಾರು ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ತುಸು ದುಬಾರಿ ಎನ್ನಿಸಲಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಯು ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ನಂ.1 ಸ್ಥಾನ ಕಾಯ್ದುಕೊಂಡಿರುವ ಟಾಟಾ ನೆಕ್ಸಾನ್ ಇವಿ ಕಾರು ಮಾದರಿಗೆ ಪೈಪೋಟಿಯಾಗಿ ಎಂಜಿ ಕಂಪನಿಯು ಹೊಸ ಕಾರು ಮಾದರಿಯನ್ನು ನಿರ್ಮಾಣ ಮಾಡುತ್ತಿದ್ದು, ಹೊಸ ಕಾರು ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾಗಿರಲಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಸದ್ಯ ಮಾರಾಟ ಮಾಡುತ್ತಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು 50.3 kWh ಬ್ಯಾಟರಿ ಪ್ಯಾಕ್ ಜೊತೆ ಸುಧಾರಿತ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಂಡಿದ್ದು, ಪ್ರತಿ ಚಾರ್ಚ್‌ಗೆ 461 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಆದರೆ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಎಂಜಿ ಇವಿ ಕಾರು ಮಾದರಿಯು ರೂ.10 ಲಕ್ಷದಿಂದ ರೂ. 12 ಲಕ್ಷ ಬೆಲೆ ಅಂತರದಲ್ಲಿ ಪ್ರತಿ ಚಾರ್ಜ್‌ಗೆ ಕನಿಷ್ಠ 300 ರಿಂದ 350 ಕಿ.ಮೀ ಮೈಲೇಜ್ ಪ್ರೇರಿತ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಮಾಹಿತಿಗಳ ಪ್ರಕಾರ ಹೊಸ ಕಾರು ಎರಡು ಬಾಗಿಲು ಹೊಂದಿರುವ ಸಣ್ಣ ಇವಿ ಮಾದರಿಯಾಗಿರಬಹುದು ಎನ್ನಲಾಗಿದ್ದು, E230 ಹೆಸರಿನಲ್ಲಿ ಈಗಾಗಲೇ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿರುವ ತನ್ನ ಸಹಭಾಗೀತ್ವ ಕಂಪನಿಯ ವುಲಿಂಗ್ ಮಿನಿ ಇವಿ ಮಾದರಿಯನ್ನೇ ಭಾರತದಲ್ಲಿ ಕೆಲವು ಹೊಸ ಬದಲಾವಣೆಗಳೊಂದಿಗೆ ಮಾರಾಟಗೊಳಿಸಬಹುದಾಗಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇದರ ಜೊತೆಗೆ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರು ಮಾದರಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲ ಭಾರತದಿಂದ ಪ್ರಮುಖ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆ ಹೊಂದಲಾಗಿದ್ದು, ಹೊಸ ಕಾರು ಬಜೆಟ್ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇದರೊಂದಿಗೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಥಳೀಯ ಸಂಪನ್ಮೂಲ ಬಳಕೆಯು ಇವಿ ವಾಹನಗಳ ಬೆಲೆ ಇಳಿಕೆಯಲ್ಲಿ ಪಾತ್ರವಹಿಸುವುದಾಗಿ ಹೇಳಿರುವ ಎಂಜಿ ಮೋಟಾರ್ ಮುಖ್ಯಸ್ಥರು ಮುಂಬರುವ ದಿನಗಳಲ್ಲಿ ಸ್ಥಳೀಯವಾಗಿ ಉತ್ಪಾದನೆಯಾದ ಬ್ಯಾಟರಿ ಉತ್ಪನ್ನದೊಂದಿಗೆ ಮತ್ತಷ್ಟು ಬೆಲೆ ಇಳಿಕೆ ಮಾಡಲು ಸಹಕಾರಿಯಾಗಿದೆ ಎಂದಿದ್ದಾರೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಸದ್ಯ ಬಹುತೇಕ ಎಲೆಕ್ಟ್ರಿಕ್ ವಾಹನ ತಯಾಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳಿಂದಲೇ ಹಲವಾರು ಬಿಡಿಭಾಗಗಳು ಮತ್ತು ಬ್ಯಾಟರಿ ಉತ್ಪನ್ನ ಆಮದು ಮಾಡಿಕೊಂಡು ಭಾರತದಲ್ಲಿ ಜೋಡಣೆ ಮಾಡಿ ಮಾರಾಟ ಮಾಡುತ್ತಿದ್ದು, ಇದು ಸ್ಥಳೀಯವಾಗಿ ಹೆಚ್ಚಳವಾದಾಗ ಮಾತ್ರವೇ ಇವಿ ವಾಹನಗಳ ಬೆಲೆಯನ್ನು ತಗ್ಗಿಸಲು ಸಾಧ್ಯವೆಂದಿದ್ದಾರೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಇನ್ನು ಸದ್ಯ ಮಾರುಕಟ್ಟೆಯಲ್ಲಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಭಾರತದಲ್ಲಿ ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಅಪ್‌ಡೆಟ್ ಪಡೆದುಕೊಂಡಿದ್ದು, ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತ ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಭಾರತದಲ್ಲಿ ಬಜೆಟ್ ಬೆಲೆಯ ಇವಿ ಕಾರು ಬಿಡುಗಡೆ ಮಾಡಲಿದೆ ಎಂಜಿ ಮೋಟಾರ್

ಜೊತೆಗೆ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಮಾಡಿದೆ.

Most Read Articles

Kannada
English summary
Mg motors plans to launch mini electric car in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X