Just In
Don't Miss!
- News
ಯುಎಪಿಎ ಅಡಿ ಯಾವುದೇ ವಕ್ತಿಯನ್ನು ವಿಚಾರಣೆಗೊಳಪಡಿಸಬಹುದು-ಹೈಕೋರ್ಟ್ ಆದೇಶ
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Sports
ICC Womens ODI Ranking: ಅಗ್ರ 10ರೊಳಗೆ ಸ್ಮೃತಿ ಮಂಧಾನ, 11ನೇ ಸ್ಥಾನದಲ್ಲಿ ರಾಜೇಶ್ವರಿ
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ 2022ರ ಎಂಜಿ ಜೆಡ್ಎಸ್ ಇವಿ ಮಾದರಿಗೆ ಭರ್ಜರಿ ಬೇಡಿಕೆ
ಎಂಜಿ ಮೋಟಾರ್(MG Motor) ಕಂಪನಿಯು 2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಹೊಸ ಕಾರು ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಜೆಡ್ಎಸ್ ಇವಿ ಕಾರು ಬಿಡುಗಡೆಯಾದ ಒಂದೇ ವಾರದಲ್ಲಿ 2022ರ ಅವಧಿಗೆ ಮಾರಾಟಗೊಳಿಸಲು ನಿಗದಿಪಡಿಸಿದ್ದ ಎಲ್ಲಾ ಯುನಿಟ್‌ಗಳಿಗೂ ಬುಕಿಂಗ್ ದಾಖಲಾಗಿದ್ದು, ಹೊಸ ಕಾರಿಗೆ ಇದುವರೆಗೆ ಸುಮಾರು 1,500 ಗ್ರಾಹಕರಿಂದ ಬೇಡಿಕೆ ಸಲ್ಲಿಕೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಬ್ಯಾಟರಿ ಪ್ಯಾಕ್ ಮತ್ತು ಸೆಮಿಕಂಡಕ್ಟರ್ ಪೂರೈಕೆಯನ್ನು ಆಧರಿಸಿ 2022ರ ಅವಧಿಗೆ ನಿಗದಿತ ಸಂಖ್ಯೆಯಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಮಾರಾಟ ಮಾಡುವ ಉದ್ದೇಶ ಹೊಂದಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರಿನ ಬುಕಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದು, ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಕಾರು ವಿತರಿಸುವ ಭರವಸೆ ನೀಡಿದೆ.

ಭಾರತದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಬಾರಿ ಅಪ್‌ಡೆಟ್ ಪಡೆದುಕೊಂಡಿದ್ದು, ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತಲೂ ಸುಮಾರು ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಕಾರು ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುವ ಮೂಲಕ 176 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಹಾಗೆಯೇ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಜೆಡ್ಎಸ್ ಇವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದ್ದು, ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದ್ದು, ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ.

ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್‌ಗಳ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಮಾಡಿದೆ.

ರಿಯರ್ ಎಡಿಎಎಸ್‌ನಲ್ಲಿ 360 ಡಿಗ್ರಿ ಕ್ಯಾಮೆರಾ ಮೂಲಕ ಲೈನ್ ಚೇಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ರಿಯರ್ ಕ್ರಾರ್ಸ್-ಟ್ರಾಫಿಕ್ ಅಲರ್ಟ್ ಸೌಲಭ್ಯಗಳನ್ನು ಹೊಂದಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಹಿಲ್ ಡಿಸೆಂಟ್ ಕಂಟ್ರೊಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಜೊತೆ ಆಟೋ ಹೋಲ್ಡ್ ಮತ್ತು 6 ಏರ್‌ಬ್ಯಾಗ್ ಸೌಲಭ್ಯಗಳನ್ನು ಹೊಂದಿದೆ.

ಮುಖ್ಯವಾಗಿ ಹೊಸ ಕಾರಿಗೆ ಗರಿಷ್ಠ ವಾರಂಟಿ ನೀಡಿರುವ ಎಂಜಿ ಕಂಪನಿಯು ಎಂಜಿ ಇ-ಶೀಲ್ಡ್ ಪ್ಯಾಕೇಜ್ ಅಡಿಯಲ್ಲಿ 5 ವರ್ಷಗಳ ಅನ್‌ಲಿಮಿಟೆಡ್ ವಾರಂಟಿ ಜೊತೆ 5 ವರ್ಷಗಳ ರೋಡ್‌ಸೈಡ್ ಅಸಿಸ್ಟ್, 5 ಉಚಿತ ಲೆಬರ್ ಸರ್ವಿಸ್, ಬ್ಯಾಟರಿ ಮೇಲೆ 8 ವರ್ಷ ಅಥವಾ 1.50 ಲಕ್ಷ ಕಿ.ಮೀ ಮೇಲೆ ವಾರಂಟಿ ಘೋಷಣೆ ಮಾಡಿದೆ.