ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲಿಯೇ ತನ್ನ ಹೊಸ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆಗೆ ಸಿದ್ದವಾಗಿದೆ.
ಫೆಸ್‌ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇದೇ ತಿಂಗಳು 31ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಈಗಾಗಲೇ ಉತ್ತಮ ಬೇಡಿಕೆ ಹೊಂದಿರುವ ಎಂಜಿ ಗ್ಲೊಸ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಆವೃತ್ತಿಯೊಂದಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಫೇಸ್‌ಲಿಫ್ಟ್ ಮಾದರಿಯಲ್ಲಿ ಪ್ರಸ್ತುತ ಮಾದರಿಗಿಂತ ಹೆಚ್ಚಿನ ಮಟ್ಟದ ಬದಲಾವಣೆ ನೀರಿಕ್ಷೆಯಲ್ಲವಾದರೂ ಹೊಸ ಕಾರಿನ ಪ್ರಮುಖ ಬದಲಾವಣೆಗಳು ಗ್ರಾಹಕರನ್ನು ಸೆಳೆಯಲಿವೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಫೇಸ್‌ಲಿಫ್ಟ್ ಗ್ಲೊಸ್ಟರ್‌ನಲ್ಲಿ ಎಂಜಿ ಕಂಪನಿಯು ಒಳ ಮತ್ತು ಹೊರಭಾಗದ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಸ ಮಾದರಿಯಲ್ಲಿ ಈ ಹಿಂದಿನ ಎಂಜಿನ್ ಆಯ್ಕೆಯನ್ನೇ ಮುಂದುವರಿಸಲಾಗುತ್ತಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಕಂಪನಿಯು ಸ್ಪೋರ್ಟಿ ಲುಕ್ ಹೆಚ್ಚಿಸಲು ಶಾರ್ಪ್ ಡಿಸೈನ್ ಮತ್ತು ಹೊಸ ವಿನ್ಯಾಸದ ಅಲಾಯ್ ವ್ಹೀಲ್ ನೀಡಲಿದ್ದು, ಒಳಭಾಗದಲ್ಲಿನ ಬದಲಾವಣೆಗಾಗಿ ಹೊಸ ಕನೆಕ್ಟೆಡ್ ಫೀಚರ್ಸ್ ಹೊಂದಿರುವ ಸುಧಾರಿತ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಬಹುದಾಗಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಹೊಸ ಕಾರಿನಲ್ಲಿ ಈ ಹಿಂದಿನ ಎಂಜಿನ್ ಆಯ್ಕೆಯನ್ನೇ ಮುಂದುವರಿಸಲಾಗಿದ್ದರೂ ಗ್ರಾಹಕರ ಸಲಹೆ ಆಧರಿಸಿ ಕಂಪನಿಯು ಎಂಜಿನ್ ಕಾರ್ಯಕ್ಷಮತೆಯನ್ನು ಉನ್ನತೀಕರಿಸುವುದಾಗಿ ಹೇಳಿಕೊಂಡಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಸದ್ಯ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಮಾದರಿಯಾಗಿ ಗುರುತಿಸಿಕೊಂಡಿರುವ ಎಂಜಿ ಗ್ಲೊಸ್ಟರ್ ಕಾರ ಮಾದರಿಯು ಫೇ‌ಸ್‌ಲಿಫ್ಟ್‌ನೊಂದಿಗೆ ತುಸು ದುಬಾರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

2020ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಗ್ಲೊಸ್ಟರ್ ಕಾರು ಮಾದರಿಯು ಇದೀಗ ಭಾರತದಲ್ಲಿ ಮತ್ತೊಮ್ಮೆ ನವೀಕರಣ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಎಸ್‌ಯುವಿ ಮಾದರಿಗಿಂತಲೂ ಹಲವಾರು ವಿಶೇಷತೆಗಳನ್ನು ಒಳಗೊಂಡಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಹೊಸ ಗ್ಲೊಸ್ಟರ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 31.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ. 39.50 ಲಕ್ಷ ಬೆಲೆ ಪಡೆದುಕೊಂಡಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಆಟೋನಮಸ್ ಲೆವಲ್ 1 ಟೆಕ್ನಾಲಜಿಯೊಂದಿಗೆ ಅತಿ ಹೆಚ್ಚು ಸುರಕ್ಷಿತ ಕಾರು ಮಾದರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಹೊಸ ಗ್ಲೊಸ್ಟರ್ ಎಸ್‌ಯುವಿಯಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್ (ಎಪಿಎ), ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ), ಫಾರ್ವರ್ಡ್ ಕೂಲಿಷನ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಹಾಗೂ ಲೇನ್ ಎಕ್ಸಿಟ್ ವಾರ್ನಿಂಗ್ ಸೌಲಭ್ಯಗಳಿವೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಹಾಗೆಯೇ ಹೊಸ ಕಾರಿನಲ್ಲಿ ಎಲ್‌ಇಡಿ ಲೈಟಿಂಗ್, ಆಟೋ ಲೆವೆಲಿಂಗ್‌ನೊಂದಿಗೆ ಹೆಡ್‌ಲ್ಯಾಂಪ್‌ಗಳು, ಎಂಜಿ ಲೋಗೋ ಹೊಂದಿರುವ ಒಆರ್‌ವಿಎಂ, ಪನೊರಮಿಕ್ ಸನ್‌ರೂಫ್, 19 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್, ಫ್ರಂಟ್-ರಿಯರ್ ಫಾಗ್ ಲ್ಯಾಂಪ್‌, ಸ್ಟೀರಿಂಗ್-ಅಸಿಸ್ಟ್ ಕಾರ್ನರಿಂಗ್ ಲ್ಯಾಂಪ್‌, ಡ್ಯುಯಲ್-ಬ್ಯಾರೆಲ್ ಟ್ವಿನ್ ಕ್ರೋಮ್ ಎಕ್ಸಾಸ್ಟ್ ಗಳಿವೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಒಳಭಾಗದಲ್ಲಿ ಲೆದರ್ ಸೀಟ್, ಎರಡನೇ ಸಾಲಿನಲ್ಲಿ ಪರ್ಸನಲ್ ಕ್ಯಾಪ್ಟನ್ ಸೀಟ್, ಆ್ಯಪಲ್ ಕಾರ್ ಪ್ಲೇ ಹೊಂದಿರುವ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ, ಎಂಜಿ ಕಂಪನಿಯ ಹೊಸ ಐ-ಸ್ಮಾರ್ಟ್ ಕನೆಕ್ಟೆಡ್ ಟೆಕ್ನಾಲಜಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್, 8 ಇಂಚಿನ ಎಂಐಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪ್ಯಾಡಲ್ ಶಿಫ್ಟರ್‌, ತ್ರೀ ಜೋನ್ ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ರನ್ನಿಂಗ್ ಟೇಲ್‌ಗೇಟ್, ಹಿಟ್/ಕೂಲ್ ಮಾಡಬಹುದಾದ ಮುಂಭಾಗದ ಆಸನಗಳು, ವೈರ್‌ಲೆಸ್ ಚಾರ್ಜಿಂಗ್, ಮಲ್ಟಿ-ವೇ ಎಲೆಕ್ಟ್ರಾನಿಕ್ ಅಡ್ಜೆಸ್ಟ್ ಫ್ರಂಟ್ ಸೀಟ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಹಾಗೆಯೇ ಐ-ಸ್ಮಾರ್ಟ್ ತಂತ್ರಜ್ಞಾನವು ಚಾಲಕನ ಸ್ಮಾರ್ಟ್‌ಫೋನ್ ಮೂಲಕ ಅಪ್ಲಿಕೇಶನ್ ಸಂಪರ್ಕಿಸಲು ಅನುವು ಮಾಡಿಕೊಡುತ್ತದೆ. ಇದು ವಾಹನದ ಸ್ಥಿತಿ, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಜಿಯೋಫೆನ್ಸಿಂಗ್, ಕಾರಿನ ವಿವಿಧ ಫೀಚರ್ ಗಳ ರಿಮೋಟ್ ಫಂಕ್ಷನ್ ಸೇರಿದಂತೆ ಒಟ್ಟು 57 ಹೆಚ್ಚುವರಿ ಫೀಚರ್ ಗಳನ್ನು ನೀಡುತ್ತದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಈ ಮೂಲಕ ಕಾರು ಪ್ರಯಾಣವನ್ನು ಆರಾಮದಾಯಕ ಮತ್ತು ಸುರಕ್ಷಿತವಾಗಿಸುವ ಹೊಸ ಗ್ಲೊಸ್ಟರ್ ಎಸ್‌ಯುವಿ ಕಾರು 4,985-ಎಂ ಉದ್ದ, 1,926-ಎಂಎಂ ಅಗಲ, 1,867-ಎಂಎಂ ಎತ್ತರ ಹಾಗೂ 2,950-ಎಂಎಂ ವ್ಹೀಲ್ ಬೇಸ್ ಹೊಂದಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಗ್ಲೊಸ್ಟರ್ ಎಸ್‌ಯುವಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದ್ದು, ಸೂಪರ್ ಹಾಗೂ ಸ್ಮಾರ್ಟ್ ಮಾದರಿಗಳು ಒಂದೇ ಟರ್ಬೋ ಚಾರ್ಜರ್ ಅನ್ನು ಹೊಂದಿದ್ದರೆ ಟಾಪ್-ಎಂಡ್ ಮಾದರಿಗಳಾದ ಶಾರ್ಪ್ ಹಾಗೂ ಸ್ಯಾವಿಯಲ್ಲಿ ಟ್ವಿನ್-ಟರ್ಬೊ ಸೆಟಪ್ ಅಳವಡಿಸಲಾಗಿದೆ.

ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಫೇಸ್‌ಲಿಫ್ಟ್

ಬೇಸ್ ಮಾದರಿಗಳಲ್ಲಿರುವ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 160-ಬಿಹೆಚ್‌ಪಿ, 375-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ, ಟಾಪ್-ಎಂಡ್ ಮಾದರಿಯಲ್ಲಿರುವ 2.0-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 216-ಬಿಹೆಚ್‌ಪಿ, 480-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
English summary
Mg reveals gloster facelift launch date in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X