ಎಂಜಿ ಜೆಡ್ಎಸ್ ಇವಿ ಎಕ್ಸೈಟ್ ಎಂಟ್ರಿ ಲೆವಲ್ ಜೊತೆ ಡ್ಯುಯಲ್ ಟೋನ್ ವೆರಿಯೆಂಟ್ ಬಿಡುಗಡೆ
ಎಂಜಿ ಮೋಟಾರ್ ಇಂಡಿಯಾ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಕಂಪನಿಯು ಜೆಡ್ಎಸ್ ಇವಿ ಕಾರಿನ ಆರಂಭಿಕ ಆವೃತ್ತಿಯ ಮಾರಾಟಕ್ಕೆ ಅಧಿಕೃತ ಚಾಲನೆಯೊಂದಿಗೆ ಡ್ಯುಯಲ್ ಟೋನ್ ಮಾದರಿಯನ್ನು ಬಿಡುಗಡೆ ಮಾಡಿದೆ.

ಜೆಡ್ಎಸ್ ಎಲೆಕ್ಟ್ರಿಕ್ ಹೊಸ ಆವೃತ್ತಿಯನ್ನು ಈ ವರ್ಷದ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿದ್ದ ಎಂಜಿ ಮೋಟಾರ್ ಕಂಪನಿಯು ಆರಂಭದಲ್ಲಿ ಹೊಸ ಕಾರಿನ ಟಾಪ್ ಎಂಡ್ ಮಾದರಿಯ ಮಾರಾಟಕ್ಕೆ ಮಾತ್ರ ಚಾಲನೆ ನೀಡಿತ್ತು. ಇದೀಗ ಕಂಪನಿಯ ಹೊಸ ಕಾರಿನ ಆರಂಭಿಕ ಮಾದರಿಯ ಮಾದರಿಯ ಮಾರಾಟ ಆರಂಭದೊಂದಿಗೆ ಹೈ ಎಂಡ್ ಮಾದರಿಗಾಗಿ ಡ್ಯುಯಲ್ ಟೋನ್ ಮಾದರಿಯನ್ನು ಪರಿಚಯಿಸಿದೆ.

ವಿಶೇಷ ಸೌಲಭ್ಯಗಳನ್ನು ಒಳಗೊಂಡಿರುವ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯು ರೂ. 22.58 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 26.59 ಲಕ್ಷ ಬೆಲೆ ಹೊಂದಿದೆ.

ಎಕ್ಸೈಟ್ ಎಂಟ್ರಿ ಲೆವಲ್ ಮಾದರಿಯು ಸಿಂಗಲ್ ಟೋನ್ ಬಣ್ಣದ ಆಯ್ಕೆ ಹೊಂದಿದ್ದರೆ ಎಕ್ಸ್‌ಕ್ಲೂಸಿವ್ ಟಾಪ್ ಎಂಡ್ ಮಾದರಿಯು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿದ್ದು, ಎರಡೂ ಮಾದರಿಗಳಲ್ಲೂ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಎಕ್ಸ್‌ಕ್ಲೂಸಿವ್ ಮಾದರಿಯಲ್ಲಿ ಇದೀಗ ಗ್ರಾಹಕರು ಬ್ಲ್ಯಾಕ್ ಮತ್ತು ಐವರಿ ಬಣ್ಣಗಳ ಡ್ಯುಯಲ್ ಟೋನ್ ಖರೀದಿಸಬಹುದಾಗಿದ್ದು, ಜೊತೆಗೆ ಹೊಸ ಐ ಸ್ಮಾರ್ಟ್ ಸೌಲಭ್ಯದೊಂದಿಗೆ ಪನೊರಮಿಕ್ ಸನ್‌ರೂಫ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವನ್ನು ಸಹ ನೀಡಿದೆ.

ಐ-ಸ್ಮಾರ್ಟ್ ಸೌಲಭ್ಯದಲ್ಲಿ ಇದೀಗ ಕಂಪನಿಯು ಹೊಸದಾಗಿ ಪಾರ್ಕ್ ಪ್ಲಸ್ ನೆಟಿವ್, ಮ್ಯಾಪ್‌ಮೈಇಂಡಿಯಾ, ಆನ್‌ಲೈನ್ ನ್ಯಾವಿಗೇಷನ್, ಡಿಸ್ಕವರ್, ವೆದರ್ ಅಪ್‌ಡೇಟ್ ಆ್ಯಪ್ ಒಳಗೊಂಡ ಸೇವೆಗಳು ಲಭ್ಯವಾಗಿದ್ದು, ಎಕ್ಸೈಟ್ ವೆರಿಯೆಂಟ್‌ನಲ್ಲಿ ಎಕ್ಸ್‌ಕ್ಲೂಸಿವ್ ಮಾದರಿಗಿಂತ ಕೆಲವು ಕಡಿಮೆ ಫೀಚರ್ಸ್ ನೀಡಲಾಗಿದೆ.

ಎಕ್ಸೈಟ್ ವೆರಿಯೆಂಟ್‌ನಲ್ಲೂ ಐ-ಸ್ಮಾರ್ಟ್ ಸೇರಿದಂತೆ 360 ಡಿಗ್ರಿ ಕ್ಯಾಮೆರಾ, ಹಿಲ್ ಡಿಸೆಂಟ್ ಕಂಟ್ರೋಲ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಹಿಂಬದಿಯ ಆಸನಗಳಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವು ಸೌಲಭ್ಯಗಳಿದ್ದು, ಇನ್ನುಳಿದಂತೆ ಬ್ಯಾಟರಿ, ಎಲೆಕ್ಟ್ರಿಕ್ ಮೋಟಾರ್ ಜೋಡಣೆಯು ಸ್ಟ್ಯಾಂಡರ್ಡ್ ಆಗಿರಲಿವೆ.

ಭಾರತದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಬಾರಿ ಅಪ್‌ಡೆಟ್ ಪಡೆದುಕೊಂಡಿದ್ದು, ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತಲೂ ಸುಮಾರು ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಕಾರು ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುವ ಮೂಲಕ 176 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಹಾಗೆಯೇ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಜೆಡ್ಎಸ್ ಇವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದ್ದು, ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದ್ದು, ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ.

ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್‌ಗಳ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಮಾಡಿದೆ.


Click it and Unblock the Notifications








