ಜೆಡ್ಎಸ್ ಇವಿಗೆ ಭರ್ಜರಿ ಬೇಡಿಕೆ- ಶೀಘ್ರದಲ್ಲಿಯೇ ಹೊಸ ಇಂಟಿರಿಯರ್ ಪರಿಚಯಿಸಲಿರುವ ಎಂಜಿ!
ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಬಿಡುಗಡೆಯೊಂದಿಗೆ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಉತ್ತಮ ಬೇಡಿಕೆ ದಾಖಲಿಸುತ್ತಿದ್ದು, ಹೊಸ ಕಾರು ಮಾದರಿಯು ತುಸು ದುಬಾರಿ ಬೆಲೆ ಹೊಂದಿದ್ದರೂ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.
2022ರ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಪ್ರೀಮಿಯಂ ಫೀಚರ್ಸ್, ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌ನೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಕಾರು ಇದುವರೆಗೆ ಸುಮಾರು 5 ಸಾವಿರಕ್ಕೂ ಹೆಚ್ಚು ಗ್ರಾಹಕರಿಗೆ ಬುಕಿಂಗ್ ಪಡೆದುಕೊಂಡಿದೆ.

ಹೊಸ ಕಾರನ್ನು ಕಂಪನಿಯು ಸದ್ಯ ಬಿಡಿಭಾಗಗಳ ಲಭ್ಯತೆ ಮತ್ತು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರತಿ ತಿಂಗಳು 500ರಿಂದ 600 ಯುನಿಟ್ ವಿತರಣೆ ಮಾಡುತ್ತಿದ್ದು, ಉತ್ಪಾದನಾ ಸಾಮಾರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ. ಕಂಪನಿಯು ಸದ್ಯಕ್ಕೆ ಹೊಸ ಕಾರಿನಲ್ಲಿ ಎಕ್ಸ್‌ಕ್ಲೂಸಿವ್ ವೆರಿಯೆಂಟ್ ಮಾತ್ರ ವಿತರಣೆ ಮಾಡುತ್ತಿದ್ದು, ಇದೀಗ ಕಂಪನಿಯು ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ವೆರಿಯೆಂಟ್ ಎಕ್ಸೈಟ್ ಅನ್ನು ಈ ತಿಂಗಳಾಂತ್ಯಕ್ಕೆ ವಿತರಣೆ ಆರಂಭಿಸಲಿದೆ.

ಎಕ್ಸ್‌ಕ್ಲೂಸಿವ್ ಮತ್ತು ಎಕ್ಸೈಟ್ ವೆರಿಯೆಂಟ್ ಹೊಂದಿರುವ ಹೊಸ ಜೆಡ್ಎಸ್ ಇವಿ ಕಾರಿನಲ್ಲಿ ಕಂಪನಿಯು ಬಿಡಿಭಾಗಗಳ ಲಭ್ಯತೆ ಆಧರಿಸಿ ಮೊದಲ ಹಂತದಲ್ಲಿ ಟಾಪ್ ಎಂಡ್ ಮಾದರಿಯಾದ ಎಕ್ಸ್‌ಕ್ಲೂಸಿವ್ ವೆರಿಯೆಂಟ್ ವಿತರಣೆ ಮಾಡುತ್ತಿದೆ.

ಇದೀಗ ಕಂಪನಿಯು ಬೆಸ್ ವೆರಿಯೆಂಟ್ ವಿತರಣೆ ಆರಂಭಿಸುತ್ತಿದ್ದು, ಹೊಸ ವೆರಿಯೆಂಟ್ ವಿತರಣೆ ಆರಂಭದೊಂದಿಗೆ ಕಂಪನಿಯು ಹೊಸ ಕಾರಿನ ಇಂಟಿರಿಯರ್ ಬಣ್ಣದ ಆಯ್ಕೆಯಲ್ಲಿ ಕೆಲವು ಬದಲಾವಣೆ ಪರಿಚಯಿಸುತ್ತಿದೆ. ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ಹೊಸ ಜೆಡ್ಎಸ್ ಇವಿ ಕಾರು ಸಂಪೂರ್ಣ ಕಪ್ಪು ಬಣ್ಣದ ಆಯ್ಕೆ ಹೊಂದಿರುವ ಕ್ಯಾಬಿನ್ ಪಡೆದುಕೊಳ್ಳಲಿದ್ದು, ಈಗಾಗಲೇ ಖರೀದಿಗೆ ಲಭ್ಯವಿರುವ ಸಾಂಗ್ರಿಯಾ ರೆಡ್, ಟುಕ್ಸೆಡೊ ಬ್ಲ್ಯಾಕ್ ಮತ್ತು ಐವರಿ ಬಣ್ಣಗಳಲ್ಲಿ ಹೊಸ ಬಣ್ಣದ ಆಯ್ಕೆ ಉತ್ತಮ ಬೇಡಿಕೆ ಪಡೆದುಕೊಳ್ಳಲಿದೆ.

ಭಾರತದಲ್ಲಿ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯು ಮೊದಲ ಬಾರಿಗೆ 2019ರಲ್ಲಿ ಬಿಡುಗಡೆ ನಂತರ ಹಲವಾರು ಬಾರಿ ಅಪ್‌ಡೆಟ್ ಪಡೆದುಕೊಂಡಿದ್ದು, ಮೈಲೇಜ್ ಪ್ರಮಾಣದಲ್ಲಿ ಹೆಚ್ಚಳ ಮೂಲಕ ಇವಿ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 22 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25.88 ಲಕ್ಷ ಬೆಲೆ ಹೊಂದಿದೆ.

ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತಲೂ ಸುಮಾರು ರೂ. 60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.

ಎಂಜಿ ಮೋಟಾರ್ ಕಂಪನಿಯು ಹೊಸ ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಕಾರು ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸಿದ್ದು, ಹೊಸ ಕಾರು ಕೇವಲ 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗಪಡೆದುಕೊಳ್ಳುವ ಮೂಲಕ 176 ಬಿಎಚ್‌ಪಿ ಉತ್ಪಾದನೆ ಮಾಡಬಲ್ಲದು.

ಹಾಗೆಯೇ ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನಲ್ಲಿ ಈ ಹಿಂದಿನ ರೆಡ್, ವೈಟ್ ಮತ್ತು ಪೊಲಾರ್ ವೈಟ್ ಬಣ್ಣಗಳ ಜೊತೆಗೆ ಹೊಸ ಮಾದರಿಯಲ್ಲಿ ಸಿಲ್ವರ್, ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಜೆಡ್ಎಸ್ ಇವಿ ಮಾದರಿಯಲ್ಲಿ ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದ್ದು, ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ.

ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದ್ದು, ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ.

ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದ್ದು, ಹೊಸ ಕಾರಿನಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ.

ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದ್ದು, 10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ.

ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್‌ಗಳ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಮಾಡಿದೆ.


Click it and Unblock the Notifications