ಭಾರತದಲ್ಲಿ ಖರೀದಿಸಬಹುದಾದ ಕಡಿಮೆ ಬೆಲೆಯ ಅತ್ಯುತ್ತಮ ಎಂಪಿವಿ ಕಾರುಗಳಿವು..
ಎಂಪಿವಿ ವಿಭಾಗವು ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಹಲವು ಜನಪ್ರಿಯ ಕಾರು ತಯಾರಕರು ಎಂಪಿವಿ ಕಾರುಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳು ಉತ್ತಮ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಭಾರತೀಯ ಕಾರು ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ 6/7 ಸೀಟುಗಳ ವಾಹನಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಎಂಪಿವಿ ಕಾರುಗಳ ಖರೀದಿದಾರರಿಗೆ ಸಾಕಷ್ಟು ಆಯ್ಕೆಗಳು ಲಭ್ಯವಿವೆ. ಆದರೆ ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಕಾರುಗಳ ಬೆಲೆಗಳು ಹೆಚ್ಚಾಗುತ್ತಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಎಂಪಿವಿ ಕಾರುಗಳು ಲಭ್ಯವಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಎಂಪಿವಿ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ದಟ್ಸನ್ ಗೋ ಪ್ಲಸ್
ದಟ್ಸನ್ ಗೋ ಪ್ಲಸ್ ಅತ್ಯಂತ ಕೈಗೆಟುಕುವ ಎಂಪಿವಿಯಾಗಿದೆ. ಈ ಎಂಪಿವಿಯ ಆರಂಭಿಕ ಬೆಲೆಯು ರೂ.4.25 ಲಕ್ಷವಾಗಿದೆ. ಬೆಲೆಗೆ, ಇದು ಸಾಕಷ್ಟು ಸ್ಥಳಾವಕಾಶ ಮತ್ತು ಸೌಕರ್ಯವನ್ನು ನೀಡುತ್ತದೆ, ಆದರೆ ಇದು ಖರೀದಿದಾರರಲ್ಲಿ ಜನಪ್ರಿಯವಾಗಿಲ್ಲ.

ಇನ್ನು ದಟ್ಸನ್ ಗೋ ಪ್ಲಸ್ ಕಾರು 1.2-ಲೀಟರ್ ಮೂರು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಐದು-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯು 68 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಇನ್ನು ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯು 75 ಬಿಹೆಚ್‌ಪಿ ಮತ್ತು 104 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ದಟ್ಸನ್ ಗೋ ಮತ್ತು ಗೋ ಪ್ಲಸ್ ಕಾರುಗಳಲ್ಲಿ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯು ಹೊಂದಿರುವುದು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯಲು ಸಹಕಾರಿಯಾಗಿದೆ. ಹೊಸ ದಟ್ಸನ್ ಗೋ ಮತ್ತು ಗೋ ಪ್ಲಸ್ ಕಾರುಗಳು ಡಿ, ಎ, ಟಿ, ಟಿ ಸಿವಿಟಿ, ಟಿ ಸಿವಿಟಿ ಮತ್ತು ಟಿ(ಒ) ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಕಾರುಗಳು ಆಕರ್ಷಕ ಲುಕ್ ಅನ್ನು ಹೊಂದಿದೆ.

ಮಾರುತಿ ಎರ್ಟಿಗಾ
ಮಾರುತಿ ಸುಜುಕಿ ಎರ್ಟಿಗಾ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಪಿವಿ ಮಾದರಿಗಳಲ್ಲಿ ಒಂದಾಗಿದೆ. ಎರ್ಟಿಗಾ ಎಂಪಿವಿಯು ಅರೆನಾ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಎರ್ಟಿಗಾ ನಂ.1 ಸ್ಥಾನದಲ್ಲಿದೆ. ಈ ಮಾರುತಿ ಎರ್ಟಿಗಾ ಕಾರಿನ ಆರಂಬಿಕ ಬೆಲೆಯು ರೂ.8.12 ಲಕ್ಷವಾಗಿದೆ.

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತವ ಸಾಮರ್ಥ್ಯವನ್ನು ಹೊಂದಿದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ ಎರ್ಟಿಗಾ ಎಂಪಿವಿಯೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಒಳಗೊಂಡಿದೆ.

ಈ ಮಾರುತಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಹೊಂದಿದೆ.

ರೆನಾಲ್ಟ್ ಟ್ರೈಬರ್
ರೆನಾಲ್ಟ್ ಟ್ರೈಬರ್ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯವಾಗಿದೆ, ಈ ರೆನಾಲ್ಟ್ ಟ್ರೈಬರ್ ಎಂಫಿವಿಯ ಆರಂಬಿಕ ಬೆಲೆಯು ರೂ.5.76 ಲಕ್ಷವಾಗಿದೆ. ಇದು ಯೋಗ್ಯ ಕ್ಯಾಬಿನ್ ಸ್ಥಳ ಮತ್ತು ಉತ್ತಮ ಸೌಕರ್ಯವನ್ನು ಹೊಂದಿರುವ ಎಂಪಿವಿಯಾಗಿದೆ.

ಟ್ರೈಬರ್ ಮಿನಿ ಎಂಪಿವಿ ಕಾರಿನಲ್ಲಿ ಸದ್ಯ ನ್ಯಾಚುರಲಿ ಆಸ್ಪೆರೆಟೆಡ್ ಹೊಂದಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ. ಈ ಎಂಜಿನ್ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 71 ಬಿಎಚ್‌ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾಡಿಸುವ ಸಾಮರ್ಥ್ಯವನ್ನು ಹೊಂದಿದೆ.

ಕಿಯಾ ಕಾರೆನ್ಸ್
ಕಿಯಾ ಕಾರೆನ್ಸ್ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ಈ ಕಾರು ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಹೊಸ ಕಾರು ಖರೀದಿಗೆ ಲಭ್ಯವಿದೆ.

ಕಿಯಾ ಕಂಪನಿಯು ಸೆಲ್ಟೊಸ್ ಮಾದರಿಯುವಂತೆಯೇ ಹೊಸ ಕಾರೆನ್ಸ್ ಕಾರಿನಲ್ಲೂ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ. ಈ ಕಿಯಾ ಕಾರೆನ್ಸ್ ಎಂಪಿವಿಯ ಆರಂಬಿಕ ಬೆಲೆಯು ರೂ.8.99 ಲಕ್ಷವಾಗಿದೆ.

ಮಾರುತಿ ಎಕ್ಸ್‌ಎಲ್6
ಭಾರತದ ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಎಕ್ಸ್‌ಎಲ್6 ಅನ್ನು ಜನವರಿ 2022 ರಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂದು ವರದಿಗಳಾಗಿದೆ. ಈ ಮಾದರಿಯು ಒಳಗೆ ಮತ್ತು ಹೊರಗೆ ಸಣ್ಣ ಬದಲಾವಣೆಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಮಾರುತಿ ಎಕ್ಸ್‌ಎಲ್6 ಕಾರಿನ ಬೆಲೆಯು ರೂ.10.14 ಲಕ್ಷವಾಗಿದೆ.

ವಿನ್ಯಾಸದ ದೃಷ್ಟಿಯಿಂದ, ಎರ್ಟಿಗಾಕ್ಕಿಂತ ಎಕ್ಸ್‌ಎಲ್6 ಹೆಚ್ಚು ಪ್ರೀಮಿಯಂ ಆಗಿ ಕಾಣುತ್ತದೆಮಾರುತಿ ಸಾಮಾನ್ಯ ಎರ್ಟಿಗಾದಿಂದ ಪ್ರತ್ಯೇಕಿಸಲು ಕಾರಿನ ಒಟ್ಟಾರೆ ನೋಟಕ್ಕೆ ಅಗತ್ಯ ಬದಲಾವಣೆಗಳನ್ನು ಮಾಡಿದೆ. ಮುಂಭಾಗವನ್ನು ಮರುವಿನ್ಯಾಸಗೊಳಿಸಲಾಗಿದೆ. ಇದು ಈಗ ಪ್ರೀಮಿಯಂ ಲುಕಿಂಗ್ ಫ್ರಂಟ್ ಗ್ರಿಲ್ ಅನ್ನು ಪಡೆಯುತ್ತದೆ,

ಕ್ರೋಮ್ ಸ್ಟ್ರಿಪ್‌ಗಳು ಮಧ್ಯದಲ್ಲಿ ಗ್ರಿಲ್ ಅನ್ನು ಎರಡು ಭಾಗಗಳಾಗಿ ವಿಭಜಿಸುತ್ತವೆ. 2019ರಲ್ಲಿ ಬಿಡುಗಡೆಯಾದ ಮಾರುತಿ ಎಕ್ಸ್‌ಎಲ್6 ಎಂಪಿವಿ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್‌ಗೆ ಆಧಾರವಾಗಿದೆ ಮತ್ತು 6 ಆಸನಗಳ ವಿನ್ಯಾಸದೊಂದಿಗೆ ಬರುತ್ತದೆ. ಫೆಬ್ರವರಿ 2020 ರಲ್ಲಿ ಸುಜುಕಿ ಕಂಪನಿಯು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಸುಜುಕಿ ಎಕ್ಸ್‌ಎಲ್7 ಎಂಬ 7-ಸೀಟರ್ ಮಾದರಿಯನ್ನು ಅನ್ನು ಪರಿಚಯಿಸಿತು. 2022ರ ಮಾರುತಿ ಎಕ್ಸ್‌ಎಲ್6 ಅನ್ನು ಮುಂದಿನ ವರ್ಷದ ಆರಂಭದಲ್ಲಿ 7-ಸೀಟರ್ ಸಂರಚನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ಹೇಳಲಾಗುತ್ತಿದೆ.


Click it and Unblock the Notifications