ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ವಿಶ್ವದಾದ್ಯಂತ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಇದರ ಜೊತೆಗೆ ಹೈಬ್ರಿಡ್ ಕಾರುಗಳ ಮಾರಾಟವು ಸಹ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಭವಿಷ್ಯದಲ್ಲಿ ಇವಿ ಕಾರುಗಳ ಜೊತೆ ಹೈಬ್ರಿಡ್ ಕಾರುಗಳ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಇತ್ತೀಚೆಗೆ ಮಾರುಕಟ್ಟೆ ಪ್ರವೇಶಿಸಿರುವ ಹೊಸ ಹೈಬ್ರಿಡ್ ಕಾರುಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಪ್ರಸ್ತುತ ಮಾರಾಟದಲ್ಲಿರುವ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಕಾರು ಮಾದರಿಗಳನ್ನು ಮೈಲ್ಡ್, ಸ್ಟ್ರಾಂಗ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಮಾದರಿಗಳಾಗಿ ಮಾರಾಟ ಮಾಡಲಾಗುತ್ತಿದ್ದು, ಭಾರತದಲ್ಲಿ ಇತ್ತೀಚೆಗೆ ಹಲವಾರು ಕಾರು ಕಂಪನಿಗಳು ಹೊಸ ಹೈಬ್ರಿಡ್ ಮಾದರಿಗಳನ್ನು ಬಿಡುಗಡೆ ಮಾಡಿವೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಟೊಯೊಟಾ ಹೈರೈಡರ್

ಮಧ್ಯಮ ಕ್ರಮಾಂಕದ ಕಾರುಗಳಲ್ಲಿ ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಸೌಲಭ್ಯವನ್ನು ಹೊಂದಿರುವ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಟೊಯೊಟಾ ಹೈರೈಡರ್ ಕಾರು ಮಾದರಿಯು ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ವಿವಿಧ ವೆರಿಯೆಂಟ್ ಅನುಗುಣವಾಗಿ ಸ್ಮಾರ್ಟ್ ಹೈಬ್ರಿಡ್ ಮತ್ತು ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ನೀಡಲಾಗುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಸ್ಟ್ರಾಂಗ್ ಹೈಬ್ರಿಡ್ ಮಾದರಿಯಲ್ಲಿರುವ 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದ್ದು, ಇದರಲ್ಲಿರುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಮತ್ತು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೈಬ್ರಿಡ್ ತಂತ್ರಜ್ಞಾನದ ಪ್ರಮುಖ ತಾಂತ್ರಿಕ ಅಂಶವಾಗಿದೆ. ಸ್ಟ್ರಾಂಗ್ ಹೈಬ್ರಿಡ್ ತಂತ್ರಜ್ಞಾನ ಹೊಂದಿರುವ ಹೈರೈಡರ್ ವೆರಿಯೆಂಟ್‌ಗಳಲ್ಲಿ ಟೊಯೊಟಾ ಕಂಪನಿಯು ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಮಾರುತಿ ಗ್ರ್ಯಾಂಡ್ ವಿಟಾರಾ ಹೈಬ್ರಿಡ್

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯು ಒಟ್ಟು ಆರು ವಿಭಿನ್ನ ರೂಪಾಂತರ ಹಂತಗಳಲ್ಲಿ ನೀಡಲಾಗುತ್ತದೆ. ಇದು ಸಿಗ್ಮಾ, ಡೆಲ್ಟಾ, ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+. ಆಗಿದೆ. ಝೀಟಾ, ಝೀಟಾ+, ಆಲ್ಫಾ ಮತ್ತು ಆಲ್ಫಾ+ ರೂಪಾಂತರಗಳನ್ನು ಹೊಂದಿದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎರಡು ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಲಭ್ಯವಿದ್ದು, ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟಾರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಮ್‌ನೊಂದಿಗೆ ಲಭ್ಯವಿದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ನೀಡುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಹೋಂಡಾ ಸಿಟಿ ಹೈಬ್ರಿಡ್

ಹೋಂಡಾ ಸಿಟಿ ಭಾರತದಲ್ಲಿ ಸಾಮೂಹಿಕ ಮಾರುಕಟ್ಟೆಗಾಗಿ ಪ್ರವೇಶಿಸಿದ ಮೊದಲ ಪ್ರಬಲ ಹೈಬ್ರಿಡ್ ಕಾರು ಮಾದರಿಯಾಗಿದೆ. ಇದು ಸ್ಟ್ಯಾಂಡರ್ಡ್ ಸಿಟಿಯಂತೆಯೇ ಅದೇ ವಿನ್ಯಾಸವನ್ನು ಹೊಂದಿದ್ದರೂ ಹೈಬ್ರಿಡ್ ಮಾದರಿಗಾಗಿ ಹೆಚ್ಚುವರಿ ವೈಶಿಷ್ಟ್ಯಗಳು ಮತ್ತು ಸೆನ್ಸಿಂಗ್‌ನಂತಹ ಭದ್ರತಾ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಅತ್ಯಾಕರ್ಷಕ ಲುಕ್‌ನೊಂದಿಗೆ ಆಧುನಿಕ ಫೀಚರ್ಸ್‌ಗಳನ್ನೊಳಗೊಂಡಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಸಿಟಿ ಹೈಬ್ರಿಡ್ ಮಾದರಿಯು 1.5 ಲೀಟರ್ ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಿಡಲಿದ್ದು, ಎರಡು ಎಲೆಕ್ಟ್ರಿಕ್ ಮೋಟಾರ್‌ಗಳೊಂದಿಗೆ ಜೋಡಿಯಾಗಿರುವ ಘಟಕದಲ್ಲಿ ಮುಂಭಾಗದ ಆಕ್ಸಲ್‌ನಲ್ಲಿ ಸ್ಟಾರ್ಟರ್-ಜನರೇಟರ್ ಮತ್ತು ಪ್ರೊಪಕ್ಷನ್ ಮೋಟಾರ್ ಹೊಂದಿದ್ದು, ಇದು ಗರಿಷ್ಠ 126 ಬಿಎಚ್‌ಪಿ ಮತ್ತು 253 ಎನ್ಎಂ ಟಾರ್ಕ್ ಅನ್ನು ಉತ್ಪಾದನೆಯೊಂದಿಗೆ ಪ್ರತಿ ಲೀಟರ್‌ಗೆ 26.5 ಮೈಲೇಜ್ ಹಿಂದಿರುಗಿಸುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಟೊಯೊಟಾ ಕ್ಯಾಮ್ರಿ

ಹೈಬ್ರಿಡ್ ಕಾರುಗಳ ಸಾಲಿನಲ್ಲಿ ಟೊಯೊಟಾ ಕ್ಯಾಮ್ರಿ ಕೂಡಾ ಪ್ರಮುಖವಾಗಿದ್ದು, ಇದು ಅತ್ಯುತ್ತಮ ಸೌಕರ್ಯವನ್ನು ಒದಗಿಸಲು ಹೆಸರುವಾಸಿಯಾದ ಸೆಡಾನ್ ಮಾದರಿಯಾಗಿದೆ. ವಿಶೇಷವಾಗಿ ಹಿಂದಿನ ಸೀಟುಗಳಲ್ಲಿನ ಪ್ರಯಾಣಿಕರಿಗೆ ಆರಾಮದಾಯಕವಾಗಿಸಲು ಹೆಚ್ಚು ಸ್ಪೇಸ್ ನೀಡಲಾಗಿದ್ದು, ಹೈಬ್ರಿಡ್ ಎಂಜಿನ್ ಕಾರ್ಯಕ್ಷಮತೆ ಗಮನಸೆಳೆಯುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಕಾರಿನ ಹೈಬ್ರಿಡ್ ಎಂಜಿನ್ 2.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು CVT ಯೊಂದಿಗೆ ಜೋಡಿಸಲಾಗಿದೆ. ಮುಂಭಾಗದ ಆಕ್ಸಲ್ ನಿಕಲ್-ಮೆಟಲ್ ಹೈಡ್ರೈಡ್ ಬ್ಯಾಟರಿಯಿಂದ ಚಾಲಿತವಾಗಿದ್ದು, ಇದು ಎಲೆಕ್ಟ್ರಿಕ್ ಮೋಟರ್‌ಗೆ ಶಕ್ತಿಯನ್ನು ನೀಡುತ್ತದೆ. ಇದು ಗರಿಷ್ಠ 218 ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಟಾಪ್ ಸ್ಪೀಡ್‌ನಲ್ಲೂ ಚಾಲಕನಿಗೆ ಉತ್ತಮ ನಿಯಂತ್ರಣ ಅನುಭವವನ್ನು ನೀಡಲಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ 19.23 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಲೆಕ್ಸಸ್ ಎನ್ಎಕ್ಸ್ 350ಹೆಚ್

ಲೆಕ್ಸಸ್ NX ಸರಣಿಯ ಎಸ್‌ಯುವಿಗಳು ಪರಿಸರ ಸ್ನೇಹಿ ಮಾದರಿಗಳಾಗಿದ್ದು, ಇದರಲ್ಲಿ ಸಿವಿಟಿ ಸ್ವಯಂಚಾಲಿತ ಗೇರ್‌ಬಾಕ್ಸ್‌ನೊಂದಿಗೆ ಜೋಡಣೆಯಾಗಿರುವ 2.5-ಲೀಟರ್ ಪೆಟ್ರೋಲ್ ಎಂಜಿನ್‌ನಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್‌ಗಳನ್ನು ಜೋಡಿಸಲಾಗಿದೆ. ಇದು ಗರಿಷ್ಠ 243 ಬಿಎಚ್‌ಪಿ ಉತ್ಪಾದನೆಯೊಂದಿಗೆ ಪ್ರತಿ ಲೀಟರ್‌ಗೆ ಗರಿಷ್ಠ 16.5 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಎನ್ಎಕ್ಸ್350ಹೆಚ್ ಮಾದರಿಯು ಐಷಾರಾಮಿ ಫೀಚರ್ಸ್‌ಗಳೊಂದಿಗೆ 5-ಆಸನಗಳ ಸೌಲಭ್ಯವುಳ್ಳ ಐಷಾರಾಮಿ ಸ್ಪೋರ್ಟಿ ಎಸ್‌ಯುವಿಯಾಗಿದೆ. ಇದರಲ್ಲಿನ ಆಕರ್ಷಕ ಫೀಚರ್ಸ್ ಮತ್ತು ಆರಾಮದಾಯಕ ಆಸನಗಳಿಂದ ಇದು ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

2023ರ ವೊಲ್ವೊ ಎಕ್ಸ್‌ಸಿ40 ಮತ್ತು ಎಕ್ಸ್‌ಸಿ90 ಹೈಬ್ರಿಡ್

ವೊಲ್ವೊ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಬಹುನೀರಿಕ್ಷಿತ 2023ರ ಎಕ್ಸ್‌ಸಿ40 ಮತ್ತು ಎಕ್ಸ್‌ಸಿ90 ಸರಣಿ ಎಸ್‌ಯುವಿ ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಎಸ್‌ಯುವಿ ಮಾದರಿಗಳು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಹಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಹೊಸ ಎಕ್ಸ್‌ಸಿ40 ಮಾದರಿಯು 2.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 48 ವೊಲ್ಟ್ ಮೈಲ್ಡ್ ಹೈಬ್ರಿಡ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 8 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 197 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಭಾರತದಲ್ಲಿ ಪ್ರಸ್ತುತ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಇನ್ನು ಎಕ್ಸ್‌ಸಿ90 ಎಸ್‌ಯುವಿ ಮಾದರಿಯು ಸಹ 2.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 48 ವೊಲ್ಟ್ ಮೈಲ್ಡ್ ಹೈಬ್ರಿಡ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 8 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 300 ಬಿಎಚ್‌ಪಿ ಮತ್ತು 420 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಇದರೊಂದಿಗೆ ಹೊಸ ಎಸ್‌ಯುವಿಗಳು ಪ್ರತಿ ಲೀಟರ್ ಪೆಟ್ರೋಲ್‌ಗೆ 12 ರಿಂದ 14.4 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

Most Read Articles

Kannada
English summary
Most fuel efficient hybrid cars in india right now
Story first published: Wednesday, September 28, 2022, 22:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X