ಜನಪ್ರಿಯ ಮಹೀಂದ್ರಾ ಥಾರ್‌ಗೆ ಸೆಡ್ಡು ಹೊಡೆಯಲು ಅಖಾಡಕ್ಕೆ ಇಳಿಯಲಿದೆ 5-ಡೋರ್ ಮಾರುತಿ ಜಿಮ್ನಿ
ಅಂತರರಾಷ್ಟ್ರೀಯ ಮಾರುಕಟ್ಟೆಗಲ್ಲಿ ಸುಜುಕಿ ಜಿಮ್ನಿ (Suzuki Jimny) ಮಿನಿ-ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಆಫ್-ರೋಡರ್ ಮಿನಿ-ಎಸ್‍ಯುವಿಯು 2018ರಲ್ಲಿ ಬಿಡುಗಡೆಗೊಳಿಸಿದ್ದರು. ಭಾರತದಲ್ಲಿ ಜಿಮ್ನಿ ಎಸ್‌ಯುವಿ ಬಿಡುಗಡೆಗೆ ಸಂಬಂಧಿಸಿದಂತೆ ಮಾರುತಿ ಸುಜುಕಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದಿದೆ.
ಇಂಡೋ-ಜಪಾನೀಸ್ ವಾಹನ ತಯಾರಕರಾದ ಮಾರುತಿ ಸುಜುಕಿ ಬೆಲೆ, ಎಸ್‍ಯುವಿಯ ನಿರ್ದಿಷ್ಟತೆ ಮತ್ತು ಬಿಡುಗಡೆ ದಿನಾಂಕದಂತಹ ನಿರ್ಣಾಯಕ ಅಂಶಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಸುಜುಕಿ ಜಿಮ್ನಿ ಕಾಂಪ್ಯಾಕ್ಟ್ ಎಸ್‍ಯುವಿ ಆಗಿದ್ದರೂ (ಭಾರತೀಯ ಗ್ರಾಹಕರಲ್ಲಿ ನೆಚ್ಚಿನ ವಿಭಾಗ), ಮಾರುತಿ ಸುಜುಕಿ ಜಿಮ್ನಿ ಆಫ್-ರೋಡ್ ಎಸ್‍ಯುವಿಯಾಗಿದ್ದು, ಇದು ಭಾರತೀಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಇತರ ಕಾಂಪ್ಯಾಕ್ಟ್ ಎಸ್‍ಯುವಿಗಳಿಗಿಂತ ಸ್ವಲ್ಪ ಕಡಿಮೆ ಪ್ರಾಯೋಗಿಕ ಮತ್ತು ಹೆಚ್ಚು ಉದ್ದೇಶಿತವಾಗಿದೆ. ಮಾರುತಿ ಜಿಮ್ನಿ 2023ರ ಆಗಸ್ಟ್ ವೇಳೆಗೆ ರಸ್ತೆಗಿಳಿಯಲಿದೆ.

ಮಾರುತಿ ಸುಜುಕಿ ಕಂಪನಿಯು ಜಿಮ್ನಿಯ ಅಧಿಕೃತ ಅನಾವರಣಕ್ಕೆ ಮುಂಚಿತವಾಗಿ, ಕಂಪನಿಯು ದೇಶದಲ್ಲಿ ವಾಹನವನ್ನು ಪರೀಕ್ಷಿಸಲು ಪ್ರಾರಂಭಿಸಿದೆ. ಹೊಸ ಜಿಮ್ನಿಯನ್ನು ಲೈಫ್ ಸ್ಟೈಲ್ ಆಫ್-ರೋಡ್ ಎಸ್‌ಯುವಿಯಾಗಿ ಪರಿಚಯಿಸಲಾಗುವುದು.ಗ್ರಾಹಕ ಬೇಸ್. ಇದು ಮುಂಬರುವ 5-ಡೋರಿನ ಮಹೀಂದ್ರಾ ಥಾರ್ ಮತ್ತು ಫೋರ್ಸ್ ಗೂರ್ಖಾ ಮಾದರಿಗಳಿಗೆ ಪೈಪೋಟಿ ನೀಡಲಿದೆ. ಹುಡ್ ಅಡಿಯಲ್ಲಿ, ಹೊಸ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ 1.5L Dualjet K15C ಮೋಟಾರ್ ಬದಲಿಗೆ ಹಳೆಯ K15B ಪೆಟ್ರೋಲ್ ಎಂಜಿನ್ ಅನ್ನು ಬಳಸಿಕೊಳ್ಳುತ್ತದೆ ಎಂದು ವರದಿಯಾಗಿದೆ.
ರಫ್ತು ಮಾರುಕಟ್ಟೆಗಳಿಗಾಗಿ ಭಾರತದಲ್ಲಿ ನಿರ್ಮಿಸಲಾದ ತನ್ನ 3-ಡೋರಿನ ಆವೃತ್ತಿಯಲ್ಲಿ ಅದೇ ಪವರ್‌ಟ್ರೇನ್ ಅನ್ನು ಹೊಂದಿದೆ. ಈ ಎಂಜಿನ್ 102 ಬಿಹೆಚ್‍ಪಿ ಪವರ್ ಮತ್ತು 130 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಮೋಟರ್ ಅನ್ನು ಹೆಚ್ಚಿಸಬಹುದು, ಹೀಗಾಗಿ ಇದು ಹೆಚ್ಚು ಇಂಧನ-ಸಮರ್ಥವಾಗಿಸುತ್ತದೆ ಮತ್ತು ಅದರ ಹೊರಸೂಸುವಿಕೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ 5-ಡೋರಿನ ಮಾರುತಿ ಜಿಮ್ನಿ ಅದರ 3-ಡೋರಿನ ಆವೃತ್ತಿಗಿಂತ 300 ಎಂಎಂ ಉದ್ದವಾಗಿರುತ್ತದೆ.
ಇದರ ವ್ಹೀಲ್‌ಬೇಸ್ ಕೂಡ 300 ಎಂಎಂ ವಿಸ್ತರಿಸಲಿದೆ. ಆಫ್-ರೋಡ್ ಎಸ್‍ಯುವಿ 3850 ಎಂಎಂ ಉದ್ದ, 1645 ಎಂಎಂ ಅಗಲ ಮತ್ತು 1730 ಎಂಎಂ ಎತ್ತರವನ್ನು 2550mm ವ್ಹೀಲ್‌ಬೇಸ್‌ನೊಂದಿಗೆ ಹೊಂದಿದೆ. ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯು ತನ್ನ ಗುರುಗ್ರಾಮ್ ಸ್ಥಾವರದಲ್ಲಿ ಮೂರು-ಡೋರಿನ ಜಿಮ್ನಿ ಎಸ್‍ಯುವಿಯನ್ನು ತಯಾರಿಸುತ್ತದೆ ಮತ್ತು ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡುತ್ತಿದೆ. ಈ ಸುಜುಕಿ ಜಿಮ್ನಿ ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಈ ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಐದು ಡೋರುಗಳ ಜಿಮ್ನಿ ಇನ್ನು ನಾಲ್ಕು ಮೀಟರ್ ಉದ್ದದ ಮಾದರಿಯಾಗಿದೆ. ಭಾರತದಲ್ಲಿ ಇದು ತೆರಿಗೆ ಪ್ರಯೋಜನಗಳನ್ನು ಪಡೆಯುತ್ತದೆ. 2,550 ಎಂಎಂ ವ್ಹೀಲ್ ಬೇಸ್ ಉದ್ದವು ಕಾಂಪ್ಯಾಕ್ಟ್ ಎಸ್‌ಯುವಿಗಳಿಗಿಂತ ಹೆಚ್ಚಿನದಾಗಿರುತ್ತದೆ. ಈ ಆಫ್-ರೋಡ್ ಎಸ್‍ಯುವಿಯು ಸುಮಾರು 2,500 ಎಂಎಂ ವ್ಹೀಲ್‌ಬೇಸ್ ಹೊಂದಿದೆ ಆದರೆ ಮಧ್ಯಮ ಗಾತ್ರದ ಎಸ್‍ಯುವಿಗಿಂತ ಚಿಕ್ಕದಾಗಿದೆ.
ಇದರಿಂದ 5-ಡೋರ್ ಜಿಮ್ನಿ ಮಾದರಿಯು ಕಾಂಪ್ಯಾಕ್ಟ್ ಎಸ್‌ಯುವಿ ಮತ್ತು ಮಧ್ಯಮ ಗಾತ್ರದ ಎಸ್‍ಯುವಿಯ ನಡುವಿನ ವಿಭಾಗದಲ್ಲಿ ಇರಿಸಬಹುದು. ಒಟ್ಟಾರೆ ಮಾರುತಿ ಸುಜುಕಿ ಜಿಮ್ನಿ ಆಫ್-ರೋಡ್ ಎಸ್‍ಯುವಿಯು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ, ಅಗ್ರೇಸಿವ್ ಲುಕ್ ನೊಂದಿಗೆ ಸಾಟಿಯಿಲ್ಲದ ಆಫ್-ರೋಡ್ ಸಾಮರ್ಥ್ಯವನ್ನು ಕೂಡ ಹೊಂದಿರುತ್ತದೆ. ಈ ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಐಕಾನಿಕ್ ಆಪ್-ರೋಡರ್ ಜಿಮ್ನಿ ಬೇಡಿಕೆಯು ಅಷ್ಟರ ಪ್ರಮಾಣಕ್ಕೆ ಇದೆ. ಇದರಿಂದ ಭಾರತದಲ್ಲಿ ಮಾರುತಿ ಸುಜುಕಿಯ ಗುರುಗಾಂವ್‌ನಲ್ಲಿರುವ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿದ್ದಾರೆ. ಇನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿರುವುದರಿಂದ ಮೂರು ಡೋರಿನ ಸುಜುಕಿ ಜಿಮ್ನಿ ಮಾದರಿಯನ್ನು ಭಾರತದಿಂದ ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. ಜಿಮ್ನಿಯನ್ನು ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಜಿಮ್ನಿ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಹುಬೇಡಿಕೆಯ ಮಾದರಿಯಾಗಿದೆ.


Click it and Unblock the Notifications