ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಅಬ್ಬರ ಜೋರಾಗಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗುತ್ತಿವೆ. ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿರುವ ಹೊಸ ಕಾರುಗಳು ಗ್ರಾಹಕರನ್ನು ಆಕರ್ಷಿಸಲಿದ್ದು, ಹೊಸ ಕಾರುಗಳ ಮಾಹಿತಿಯನ್ನು ಕೆಳಗಿನ ಸ್ಲೈಡ್‌ಗಳಲ್ಲಿ ಒಂದೊಂದಾಗಿ ನೋಡೋಣ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಹ್ಯುಂಡೈ ವೆನ್ಯೂ ಎನ್-ಲೈನ್

ಹ್ಯುಂಡೈ ಇಂಡಿಯಾ ಕಂಪನಿಯು ಪರ್ಫಾಮೆನ್ಸ್ ಪ್ರಿಯರಿಗಾಗಿ ವೆನ್ಯೂ ಎನ್-ಲೈನ್ ಆವೃತ್ತಿಯನ್ನು ಪರಿಚಯಿಸುತ್ತಿದ್ದು, ಸೆಪ್ಟೆಂಬರ್ 6ರಂದು ಹೊಸ ಕಾರು ಬಿಡುಗಡೆಯಾಗಲಿದ್ದು, ಹೊಸ ಕಾರಿನ ವೆರಿಯೆಂಟ್, ಬಣ್ಣಗಳ ಆಯ್ಕೆ ಮತ್ತು ತಾಂತ್ರಿಕ ಸೌಲಭ್ಯಗಳ ಮಾಹಿತಿ ಇಲ್ಲಿ ನೀಡಲಾಗಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಹೊಸ ವೆನ್ಯೂ ಎನ್-ಲೈನ್ ಮಾದರಿಗಾಗಿ ಹ್ಯುಂಡೈ ಕಂಪನಿಯು ಈಗಾಗಲೇ ಬುಕಿಂಗ್ ಸಹ ಆರಂಭಿಸಿದೆ. ರೂ. 21 ಸಾವಿರ ಮುಂಗಡದೊಂದಿಗೆ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಆವೃತ್ತಿಗಾಗಿ ಗ್ರಾಹಕರ ಆನ್‌ಲೈನ್ ಅಥವಾ ನೇರವಾಗಿ ಡೀಲರ್ಸ್‌ ಬಳಿಯಲ್ಲಿ ಮುಂಗಡ ಹಣ ಪಾವತಿ ಮಾಡಬಹುದಾಗಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ವೆನ್ಯೂ ಎನ್-ಲೈನ್ ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಅತ್ಯುತ್ತಮ ಫೀಚರ್ಸ ಮತ್ತು ಸ್ಪೋರ್ಟಿ ಡಿಸೈನ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಫೀಚರ್ಸ್‌ಗಳಿಗೆ ಅನುಗುಣವಾಗಿ ಎನ್6 ಮತ್ತು ಎನ್8 ವೆರಿಯೆಂಟ್ ಹೊಂದಿರಲಿದೆ. ಸ್ಟ್ಯಾಂಡರ್ಡ್ ವೆನ್ಯೂ ಮಾದರಿಗಳಿಗೆ ಹೋಲಿಸಿದರೆ ಎನ್-ಲೈನ್‌ನಲ್ಲಿ ಸಾಕಷ್ಟು ವಿನ್ಯಾಸ ಬದಲಾವಣೆಗಳಾಗಿದ್ದು, ಇದು ಡಾರ್ಕ್ ಕ್ರೋಮ್ ಫ್ರಂಟ್ ಗ್ರಿಲ್, ಸ್ಪೋರ್ಟಿ ಟೈಲ್‌ಗೇಟ್ ಸ್ಪಾಯ್ಲರ್, ಗ್ರಿಲ್‌ನಲ್ಲಿ ಎನ್-ಲೈನ್ ಬ್ಯಾಡ್ಜ್, ಸೈಡ್ ಫೆಂಡರ್‌ಗಳು ಮತ್ತು ಟೈಲ್‌ಗೇಟ್, 16-ಇಂಚಿನ ಮಿಶ್ರಲೋಹದ ಚಕ್ರಗಳು ಮತ್ತು ಎನ್ ಬ್ರ್ಯಾಂಡಿಂಗ್ ಹೊಂದಿರುತ್ತದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಜೊತೆಗೆ ಸ್ಪೋರ್ಟಿ ಬಂಪರ್, ನವೀಕರಿಸಿದ ಫೆಂಡರ್‌ಗಳು, ಸೈಡ್ ಸಿಲ್ ಮತ್ತು ರೂಫ್ ರೈಲ್‌ಗಳು ಅಥ್ಲೆಟಿಕ್ ರೆಡ್ ಹೈಲೈಟ್‌ಗಳು, ಬ್ಲ್ಯಾಕ್ ಅಥ್ಲೆಟಿಕ್ ಸ್ಪೋರ್ಟಿ ವಿನ್ಯಾಸ ಪಡೆಯಲಿದ್ದು, ರೆಡ್ ಆಕ್ಸೆಂಟ್‌ನೊಂದಿಗೆ ಒಳಾಂಗಣ, ಮುಂಭಾಗದ ಬ್ರೇಕ್‌ನಲ್ಲಿ ರೆಡ್ ಕ್ಯಾಲಿಪರ್‌ಗಳನ್ನು ನೀಡಲಾಗಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಮಹೀಂದ್ರಾ ಎಕ್ಸ್‌ಯುವಿ400

ಮಹೀಂದ್ರಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹಲವು ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಹೊಸ ತಲೆಮಾರಿನ ಇವಿ ಕಾರುಗಳ ಬಿಡುಗಡೆಗೂ ಮುನ್ನ ಎಕ್ಸ್‌ಯುವಿ400 ಇವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಇದೇ ತಿಂಗಳು 8ರಂದು ಬಿಡುಗಡೆಯಾಗಲಿರುವ ಹೊಸ ಎಕ್ಸ್‌ಯುವಿ400 ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಎರಡು ರೀತಿಯ ಬ್ಯಾಟರಿ ಆಯ್ಕೆ ಪೆಡೆದುಕೊಳ್ಳಲಿದ್ದು, ಇದು ಪ್ರತಿ ಚಾರ್ಜ್‌ಗೆ ಕನಿಷ್ಠ 350 ಕಿ.ಮೀ ನಿಂದ 480 ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್‌‌ಗಳನ್ನು ಹೊಂದಿರಲಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಇದು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಯು ರೂ. 20 ಲಕ್ಷ ಬೆಲೆ ಹೊಂದಬಹುದಾಗಿದ್ದು, ಸ್ಟ್ಯಾಂಡರ್ಡ್ ಮತ್ತು ಎಕ್ಸ್ಸೆಂಡ್ ಮಾದರಿಗಳೊಂದಿಗೆ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಗೆ ಪೈಪೋಟಿಯಾಗಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಲಾಗಿದ್ದ ಇಎಕ್ಸ್‌ಯುವಿ300 ಮಾದರಿಯನ್ನೇ ಕಂಪನಿಯು ಇದೀಗ ಎಕ್ಸ್‌ಯುವಿ400 ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದ್ದು, ಸಾಮಾನ್ಯ ಎಕ್ಸ್‌ಯುವಿ300 ಮಾದರಿಗಿಂತಲೂ ಇವಿ ಕಾರು ಮಾದರಿಯು ವಿಭಿನ್ನವಾದ ವಿನ್ಯಾಸ ಹೊಂದಿರಲಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ವೈಶಿಷ್ಟ್ಯತೆಗಳ ವಿಷಯದಲ್ಲಿ ಹೊಸ ಇವಿ ಕಾರು ಮಾದರಿಗಳು ಐಷಾರಾಮಿ ಕಾರುಗಳಲ್ಲೂ ಇಲ್ಲದ ಹಲವು ಹೊಸ ಫೀಚರ್ಸ್‌ಗಳೊಂದಿಗೆ ಲೆವಲ್ 2 ಎಡಿಎಎಸ್ ಸೇರಿದಂತೆ ಹಲವಾರು ಫೀಚರ್ಸ್ ಹೊಂದಿರಲಿದ್ದು, ಎಲ್ಲಾ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಹೊಸ ಉತ್ಪನ್ನಗಳನ್ನು ಸಿದ್ದಪಡಿಸಲಾಗುತ್ತಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್

ಸಿಟ್ರನ್ ಕಂಪನಿಯು ಹೊಸ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಲು ಸಿದ್ಧವಾಗಿದ್ದು, 2022ರ ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಮಾದರಿಯ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. 2022ರ ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದ್ದು, ಫೇಸ್‌ಲಿಫ್ಟ್ ಮಾದರಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ನವೀಕರಿಸಿದ ಹೊಸ ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಈಗಾಗಲೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ. ಜಾಗತಿಕ-ಸ್ಪೆಕ್ ಮಾದರಿಯನ್ನು 1.5-ಲೀಟರ್ ಡೀಸೆಲ್, ಪೆಟ್ರೋಲ್ ಮತ್ತು ಪೆಟ್ರೋಲ್-ಹೈಬ್ರಿಡ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ಕಂಪನಿಯು ಇದೀಗ ಜಾಗತಿಕ ಮಾರುಕಟ್ಟೆಯಲ್ಲಿನ ಮಾದರಿಯಿಂದ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಇಂಡಿಯಾ-ಸ್ಪೆಕ್ 2022ರ ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ 2.0-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ನೀಡುವುದನ್ನು ಮುಂದುವರಿಸಲಿದ್ದು, ಈ ಎಂಜಿನ್ 177 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಡೀಸೆಲ್ ಎಂಜಿನ್ ಅನ್ನು 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ಮುಂದಿನ ಮೂರು ದಿನಗಳಲ್ಲಿ ಬಿಡುಗಡೆಯಾಗಲಿರುವ ಮೂರು ಹೊಸ ಕಾರು ಮಾದರಿಗಳಿವು!

ಹೊಸ 2022ರ ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಮಾದರಿಯು ಹ್ಯುಂಡೈ ಟ್ಯೂಸಾನ್, ಫೋಕ್ಸ್ ವ್ಯಾಗನ್ ಟಿಗ್ವಾನ್ ಮತ್ತು ಸ್ಕೋಡಾ ಕೊಡಿಯಾಕ್‌ ಎಸ್‍ಯುವಿಗಳಿಗೆ ಪೈಪೋಟಿ ನೀಡಲಿದ್ದು, ಬೆಲೆಯಲ್ಲಿ ಇದು ಪ್ರತಿಸ್ಪರ್ಧಿ ಮಾದರಿಗಿಂತಲೂ ತುಸು ದುಬಾರಿ ಎನ್ನಿಸಲಿದೆ.

Article Published On: Monday, September 5, 2022, 21:31 [IST]
English summary
New car launches in india next 3 days details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+