ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟವು ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಲು ಸಿದ್ದವಾಗಿವೆ. ಹೊಸ ಕಾರು ಮಾದರಿಗಳಲ್ಲಿ ಈ ಬಾರಿ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಹೈಬ್ರಿಡ್ ಮಾದರಿಗಳು ಗಮನಸೆಳೆಯಲಿವೆ. ಹಾಗಾದರೆ ಬಿುಡಗುಡೆಯಾಗಲಿರುವ ಹೊಸ ಕಾರುಗಳು ಯಾವುವು? ಮತ್ತು ಹೊಸ ಕಾರುಗಳ ಫೀಚರ್ಸ್ ಮತ್ತು ಅಂದಾಜು ಬೆಲೆ ಮಾಹಿತಿಯನ್ನು ಇಲ್ಲಿ ನೋಡಬಹುದು.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಇದೇ ತಿಂಗಳು 26ರಂದು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನಲ್ಲಿ 3 ಗೇರ್‌ಬಾಕ್ಸ್ ಸಂಯೋಜನೆಯೊಂದಿಗೆ ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಗ್ರ್ಯಾಂಡ್ ವಿಟಾರಾ ಮಾದರಿಗಳಾಗಿ ವಿವಿಧ ಟ್ಯೂನ್ ಹೊಂದಿರುವ 1.5 ಲೀಟರ್ ಟಿಎನ್‌ಜಿಎ ಅಟ್ಕಿನ್ಸನ್ ಸೈಕಲ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದರಲ್ಲಿ ಸ್ಟ್ರಾಂಗ್ ಹೈಬ್ರಿಡ್ ಮಾದರಿಯು ಪ್ರತಿ ಲೀಟರ್‌ಗೆ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಗ್ರಾಂಡ್ ವಿಟಾರಾ ಕಾರು ವಿಶೇಷ ವೈಶಿಷ್ಟ್ಯತೆಗಳೊಂದಿಗೆ 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದ್ದು, ಇದು ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆಗೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20 ಲಕ್ಷ ಬೆಲೆ ಹೊಂದಿರಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಟೊಯೊಟಾ ಹೈರೈಡರ್

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.99 ಲಕ್ಷ ಬೆಲೆ ಹೊಂದಿದೆ. ವಿವಿಧ ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, ಸದ್ಯಕ್ಕೆ ಹೈಬ್ರಿಡ್ ಮಾದರಿಯ ಬೆಲೆ ಮಾಹಿತಿ ಬಹಿರಂಗಪಡಿಸಲಾಗಿದೆ. ಹೀಗಾಗಿ ಮುಂದಿನ ವಾರ ಕಂಪನಿಯು ಬೆಸ್ ವೆರಿಯೆಂಟ್ ಜೊತೆ 4x4 ಡ್ರೈವ್‌ಸಿಸ್ಟಂ ಹೊಂದಿರುವ ಟಾಪ್ ಎಂಡ್ ಮಾದರಿಯ ಬೆಲೆಯನ್ನು ಬಹಿರಂಗ ಪಡಿಸಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಅರ್ಬನ್ ಕ್ರೂಸರ್ ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಇದು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ. ಇದರಲ್ಲಿ ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಸಾಮಾನ್ಯ ಮಾದರಿಯು 1.5 ಲೀಟರ್ K15C ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಟಾಟಾ ಟಿಯಾಗೋ ಇವಿ

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 28 ರಂದು ಹೊಸ ಟಿಯಾಗೋ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲಿದ್ದು, ಹೊಸ ಇವಿ ಕಾರು ಬಜೆಟ್ ಬೆಲೆಯೊಂದಿಗೆ ಹಲವಾರು ಹೊಸ ಫೀಚರ್ಸ್‌ಗಳೊಂದಿಗೆ ಖರೀದಿಗೆ ಲಭ್ಯವಾಗಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಬಿಡುಗಡೆಯ ನಂತರ ಮೂರನೇ ಎಲೆಕ್ಟ್ರಿಕ್ ಮಾದರಿಯಾಗಿರುವ ಟಿಯಾಗೋ ಇವಿಯು ಟಿಗೋರ್ ಇವಿ ಮಾದರಿಯಲ್ಲಿ ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಹೊಂದರಲಿದ್ದು, ಇದು ರೂ.10 ಲಕ್ಷ ಬಜೆಟ್‌ನಲ್ಲಿ ಅತ್ಯುತ್ತಮ ಮೈಲೇಜ್ ಹೊಂದಿರುವ ಇವಿ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಬಿವೈಡಿ ಅಟ್ಟೊ 3

ಭಾರತದಲ್ಲಿ ಮೊದಲ ಹಂತದಲ್ಲಿ ಇ6 ಎಂಪಿವಿ ಕಾರು ಬಿಡುಗಡೆ ಮಾಡಿದ್ದ ಕಂಪನಿಯು ಇದೀಗ ಎಸ್‌ಯುವಿ ವಿಭಾಗಕ್ಕೆ ಹೊಸ ಅಟ್ಟೊ 3 ಪರಿಚಯಿಸುತ್ತಿದ್ದು, ಹೊಸ ಕಾರು ಮುಂದಿನ ತಿಂಗಳು 11ರಂದು ಭಾರತದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಬಿವೈಡಿ ಅಟ್ಟೊ 3 ಎಸ್‌ಯುವಿ ಮಾದರಿಯು ಇದೀಗ ಭಾರತದಲ್ಲಿ ಕೆಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಂಜಿ ಜೆಡ್ಎಸ್ ಇವಿ ಮತ್ತು ಹ್ಯುಂಡೈ ಕೊನಾ ಇವಿ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಅಟ್ಟೊ 3 ಎಸ್‌ಯುವಿ ಮಾದರಿಯಲ್ಲಿ ಬಿವೈಡಿ ಕಂಪನಿಯು 60.48kWh ಮತ್ತು 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡುವ ಸಾಧ್ಯತೆಯಿದ್ದು, ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಖರೀದಿಸಬಹುದಾಗಿದೆ. 60.48kWh ಬ್ಯಾಟರಿ ಪ್ಯಾಕ್ ಮಾದರಿಯು ಪ್ರತಿ ಚಾರ್ಜ್‌ಗೆ 420 ಕಿ.ಮೀ ಮೈಲೇಜ್ ಹೊಂದಿದ್ದರೆ 49.92kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಮಾದರಿಯು 320 ಕಿ.ಮೀ ಮೈಲೇಜ್ ಹೊಂದಿದ್ದು, ಉತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

2022ರ ಎಂಜಿ ಹೆಕ್ಟರ್ ಎಸ್‍ಯುವಿ

ಎಂಜಿ ಮೋಟಾರ್ ಇಂಡಿಯಾ ತನ್ನ ಅತ್ಯಂತ ಜನಪ್ರಿಯ ಎಸ್‌ಯುವಿ ಮಾದರಿಯಾದ ಹೆಕ್ಟರ್ ಎಸ್‍ಯುವಿಯನ್ನು ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, 2022ರ ಮಾದರಿಯಲ್ಲಿ ಕಂಪನಿಯು ಹಲವಾರು ಬದಲಾವಣೆಗಳನ್ನು ತಂದಿದೆ.

ಶೀಘ್ರದಲ್ಲಿಯೇ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರು ಮಾದರಿಗಳಿವು!

ಹೊಸ ಎಸ್‌ಯುವಿ ಮಾದರಿಯು ಹೊರ ಭಾಗದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಳ್ಳದಿದ್ದರೂ ಇಂಟಿರಿಯರ್ ಸಾಕಷ್ಟು ಸುಧಾರಣೆಗೊಂಡಿದ್ದು, ಹೆಚ್ಚಿನ ಸುರಕ್ಷತೆಗಾಗಿ ಈ ಬಾರಿ ಎಡಿಎಎಸ್(ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಪಡೆದುಕೊಳ್ಳಲಿದೆ.

Article Published On: Saturday, September 24, 2022, 19:01 [IST]
English summary
New car launches in the coming weeks details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+