Just In
- 9 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 12 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 13 hrs ago
ವಾರದ ಸುದ್ದಿಗಳು: ಎಕ್ಸ್‌ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- Movies
ಅಮ್ಮನಿಂದಲೇ ಮಗಳಿಗೆ ಮಹಾ ಮೋಸ!
- News
ಮಹಾ ಬಂಡಾಯ: ಸುಪ್ರೀಂಕೋರ್ಟ್ ಅಂಗಳಕ್ಕೆ 16 ಶಾಸಕರ ಅನರ್ಹತೆ ಚೆಂಡು!
- Sports
ಭಾರತ ತಂಡದ ಭವಿಷ್ಯದ ನಾಯಕ ನಿಶ್ಚಿತವಾಗಿಯೂ ಈತನೇ ಎಂದ ದಿಲೀಪ್ ವೆಂಗ್ಸರ್ಕಾರ್
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಈ ಪ್ರಮುಖ ಕಾರುಗಳ ಖರೀದಿಗೆ ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು..
ದೇಶಿಯ ಮಾರುಕಟ್ಟೆಯಲ್ಲಿ ಪ್ರಮುಖ ಕಾರುಗಳ ಮಾರಾಟವು ಕಳೆದ ಕೆಲ ತಿಂಗಳಿನಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಉತ್ಪಾದನಾ ಪ್ರಮಾಣವನ್ನು ಆಧರಿಸಿ ಪ್ರಮುಖ ಕಾರುಗಳ ಖರೀದಿಗಾಗಿ ಕಾಯುವಿಕೆ ಅವಧಿಯು ಸಾಕಷ್ಟು ಏರಿಕೆಯಾಗುತ್ತಿದೆ.

ಹೊಸ ಕಾರುಗಳ ಖರೀದಿಗೂ ಮುನ್ನ ಬುಕಿಂಗ್ ಸಲ್ಲಿಸುವ ಗ್ರಾಹಕರು ವಿತರಣೆ ಪಡೆದುಕೊಳ್ಳಲು ಕೆಲವು ದಿನಗಳ ಕಾಯಬೇಕಾಗುತ್ತದೆ. ಕಾಯುವಿಕೆ ಅವಧಿಯು ಬುಕಿಂಗ್ ಮಾಡುವ ಕಾರು ಮಾದರಿಯ ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ನಿರ್ಧಾರವಾಗಲಿದ್ದು, ಕೆಲವು ಕಾರುಗಳಿಗೆ ಬುಕಿಂಗ್ ನಂತರ ಮರುದಿನವೇ ವಿತರಣೆಯಾಗಲಿದ್ದರೆ ಇನ್ನು ಕೆಲವು ಕಾರುಗಳಿಗೆ ಒಂದು ವರ್ಷಕ್ಕಿಂತಲೂ ಹೆಚ್ಚು ಕಾಯಬೇಕಾಗುತ್ತದೆ.

ಹೆಚ್ಚು ಕಾಯುವಿಕೆ ಕಾರುಗಳ ಪಟ್ಟಿಯಲ್ಲಿ ನ್ಯೂ ಜನರೇಷನ್ ಕಾರುಗಳ ಮಾದರಿಗಳು ಅಗ್ರಸ್ಥಾನದಲ್ಲಿದ್ದು, ಇತ್ತೀಚೆಗೆ ಮಾರುಕಟ್ಟೆಗೆ ಪ್ರವೇಶಿಸಿದ ಪ್ರಮುಖ ಕಾರುಗಳ ಬೇಡಿಕೆ ಕೂಡಾ ಸಾಕಷ್ಟು ಹೆಚ್ಚಳವಾಗಿದೆ. ಹಾಗಾದರೆ ಭಾರತದಲ್ಲಿ ಸದ್ಯ ಅತಿ ಹೆಚ್ಚು ಕಾಯುವಿಕೆ ಅವಧಿ ಹೊಂದಿರುವ ಕಾರುಗಳ ಪಟ್ಟಿಯನ್ನು ಇಲ್ಲಿ ನೋಡೋಣ.

ಮಹೀಂದ್ರಾ ಎಕ್ಸ್‌ಯುವಿ700
ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ 50 ಸಾವಿರ ಯನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಒಟ್ಟು 1.20 ಲಕ್ಷಕ್ಕೂ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರುವ ಎಕ್ಸ್‌ಯುವಿ700 ಮಾದರಿಯ ಖರೀದಿಗೆ ಸದ್ಯ ಬುಕಿಂಗ್ ಸಲ್ಲಿಸುವ ಗ್ರಾಹಕರು ಕನಿಷ್ಠ 15 ತಿಂಗಳಿನಿಂದ ಗರಿಷ್ಠ 21 ತಿಂಗಳ ಕಾಲ ಕಾಯಬೇಕಿದ್ದು, ಕಾಯುವಿಕೆ ಅವಧಿಯನ್ನು ವಿವಿಧ ವೆರಿಯೆಂಟ್ ಆಧರಿಸಿ ನಿರ್ಧರಿಸಲಾಗುತ್ತದೆ. ಹೆಚ್ಚಿನ ಬೇಡಿಕೆಯ ಸಂದರ್ಭದಲ್ಲಿ ಬಹುತೇಕ ಕಂಪನಿಗಳು ಬೆಸ್ ವೆರಿಯೆಂಟ್‌ಗಿಂತಲೂ ಹೆಚ್ಚು ಟಾಪ್ ಎಂಡ್ ಮಾದರಿಯನ್ನು ಖರೀದಿಸುವ ಗ್ರಾಹಕರಿಗೆ ಮೊದಲ ಆದ್ಯತೆ ನೀಡುತ್ತವೆ.

ಸದ್ಯ ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಹೊಸ ಕಾರು ಬಿಡುಗಡೆಯ ನಂತರ ಇದುವರೆಗೆ ಸುಮಾರು 30 ಸಾವಿರ ಯುನಿಟ್ ವಿತರಿಸಿದ್ದು, ಇನ್ನುಳಿದ ಯುನಿಟ್‌ಗಳ ವಿತರಣೆ ಪ್ರಮಾಣವನ್ನು ಹೆಚ್ಚಿಸಲು ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಹೊಸ ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.58 ಲಕ್ಷ ಬೆಲೆ ಹೊಂದಿದೆ.

ಕಿಯಾ ಕಾರೆನ್ಸ್
ಕಿಯಾ ಇಂಡಿಯಾ ಕಂಪನಿಯು ಹೊಸ ಕಾರೆನ್ಸ್ ಎಂಯುವಿ ಮಾದರಿಯ ಮೂಲಕ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಹೊಸ ಕಾರು ಆಕರ್ಷಕ ಬೆಲೆ ಮತ್ತು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 80 ಸಾವಿರಕ್ಕೂ ಗ್ರಾಹಕರಿಂದ ಬುಕಿಂಗ್ ಪಡೆದುಕೊಂಡಿದೆ.

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಮಾದರಿಗಳಿಗೆ ನಿಗದಿತ ಕಾಯುವಿಕೆ ಅವಧಿಯನ್ನು ಪ್ರಕಟಸಿದೆ. ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಎಂಪಿವಿ ಕಾಯುವಿಕೆ ಅವಧಿಯು ಹೆಚ್ಚುತ್ತಿದೆ.

ಮಾಹಿತಿಗಳ ಪ್ರಕಾರ, ಹೊಸದಾಗಿ ಬುಕಿಂಗ್ ಮಾಡುವ ಗ್ರಾಹಕರು ಕಾರೆನ್ಸ್ ಕಾರು ಖರೀದಿಗಾಗಿ ಕನಿಷ್ಠ 12 ತಿಂಗಳಿನಿಂದ ಗರಿಷ್ಠ 18 ತಿಂಗಳ ಕಾಲ ಕಾಯಬೇಕಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾಯುವಿಕೆ ಅವಧಿಯನ್ನು ನಿರ್ಧರಿಸಲಾಗುತ್ತದೆ. ಕಳೆದ ಫೆಬ್ರವರಿ ಮಧ್ಯಂತರದಲ್ಲಿ ಬಿಡುಗಡೆಯಾಗಿದ್ದ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿದ್ದು, ವಿವಿಧ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಭರ್ಜರಿ ಮುಂಚೂಣಿ ಸಾಧಿಸುತ್ತಿದೆ.

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮಧ್ಯಮ ಕ್ರಮಾಂಕದ ಎಂಪಿವಿ ಮತ್ತು ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ. ಹೊಸ ಕಾರೆನ್ಸ್ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಜೋಡಣೆ ಮಾಡಿದ್ದು, ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಈ ವಿಭಾಗದಲ್ಲಿಯೇ ಅತಿ ಹೆಚ್ಚು ಮೈಲೇಜ್ ನೀಡುವ ಮಾದರಿ ಇದಾಗಿದೆ.

ಮಾರುತಿ ಸುಜುಕಿ ಎರ್ಟಿಗಾ ಫೇಸ್‌ಲಿಫ್ಟ್
ಮಾರುತಿ ಸುಜುಕಿ ಎರ್ಟಿಗಾ ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಎಂಪಿವಿ ಕಾರುಗಳಲ್ಲಿ ಒಂದಾಗಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಮಾರುತಿ ಸುಜುಕಿ ಎರ್ಟಿಕಾ ಕಡಿಮೆ ವೆಚ್ಚ ಮತ್ತು ಹೆಚ್ಚಿನ ಸೌಕರ್ಯಗಳೆರಡರ ಸಂಯೋಜನೆಯಾಗಿದ್ದು, ಹೊಸ ಮಾದರಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಎರ್ಟಿಗಾ ಖರೀದಿಗೆ ಕನಿಷ್ಠ 3 ರಿಂದ 4 ತಿಂಗಳ ಕಾಲ ಕಾಯಬೇಕಾಗುತ್ತದೆ.

2022ರ ಎರ್ಟಿಗಾದಲ್ಲಿ ಮಾರುತಿ ಸುಜುಕಿ ಕಂಪನಿಯು ಎಂಜಿನ್ ಬದಲಾವಣೆ ಸೇರಿದಂತೆ ಹಲವಾರು ಹೆಚ್ಚುವರಿ ಸುರಕ್ಷಾ ಸೌಲಭ್ಯಗಳು ಮತ್ತು ಪ್ರಮುಖ ಪ್ರೀಮಿಯಂ ಸೌಲಭ್ಯಗಳನ್ನು ಅಳವಡಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದೆ.

2022ರ ಎರ್ಟಿಗಾ ಮಾದರಿಯ ನವೀಕೃತ ಪೆಟ್ರೋಲ್ ಎಂಜಿನ್ ಜೊತೆಗೆ ಸಿಎನ್‌ಜಿ ಮಾದರಿಯ ಆಯ್ಕೆಯನ್ನು ಸಹ ಹೊಂದಿದ್ದು, ಹೊಸ ಮಾದರಿಯಲ್ಲಿ ಈ ಹಿಂದಿನ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಬದಲಾಗಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಮಾದರಿಯನ್ನು ಅಳವಡಿಸಲಾಗಿದೆ.

ಹ್ಯುಂಡೈ ಕ್ರೆಟಾ
ಕ್ರೆಟಾ ಹೊಸ ತಲೆಮಾರಿನ ಆವೃತ್ತಿ ಮೂಲಕ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿರುವ ಹ್ಯುಂಡೈ ಕಂಪನಿಯು ಭಾರೀ ಪ್ರಮಾಣದ ಬುಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ವಿತರಣೆ ಪ್ರಕ್ರಿಯೆ ಜೋರಾಗಿದೆ. ವಿತರಣೆ ಪ್ರಮಾಣದ ಹೆಚ್ಚಳ ನಡುವೆಯೂ ಕ್ರೆಟಾ ಖರೀದಿಗೆ ಸದ್ಯ ಬುಕಿಂಗ್ ಸಲ್ಲಿಸುವ ಗ್ರಾಹಕರು ಕನಿಷ್ಠ 6 ತಿಂಗಳು ಕಾಯಬೇಕಾಗುತ್ತದೆ.

ಕೈಗೆಟುಕುವ ಬೆಲೆ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿರುವ ಕ್ರೆಟಾ ಕಾರು ಕಾಲ ಕಾಲಕ್ಕೆ ಹಲವಾರು ಬದಲಾವಣೆಗಳನ್ನು ಪಡೆದುಕೊಳ್ಳುತ್ತಾ ಗ್ರಾಹಕರ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ಹೊಸ ಕಾರು ಹಳೆಯ ತಲೆಮಾರಿನ ಆವೃತ್ತಿಗಿಂತಲೂ ಹೆಚ್ಚು ಬಲಿಷ್ಠ, ಪ್ರೀಮಿಯಂ ಫೀಚರ್ಸ್ ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.44 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ. 18.18 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಕೆಲವೇ ದಿನಗಳಲ್ಲಿ 2022ರ ಮಾದರಿಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ನೀರಿಕ್ಷೆಯಲ್ಲಿದೆ.