ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು..

ಹೊಸ ವಾಹನ ಖರೀದಿಗೂ ಮುನ್ನ ಸಾಮಾನ್ಯವಾಗಿ ಗ್ರಾಹಕರು ಇಂತಿಷ್ಟು ಮುಂಗಡ ಹಣ ಪಾವತಿ ಮಾಡಿ ಕಾಯ್ದಿರಿಸಿದ ನಂತರ ವಿತರಣೆಗಾಗಿ ಕಾಯಬೇಕಾಗುತ್ತದೆ. ಬುಕಿಂಗ್ ನಂತರ ವಾಹನ ವಿತರಣೆಯ ಅವಧಿಯು ವಿವಿಧ ವಾಹನ ಮಾದರಿಗಳಿಗೆ ಅನುಗುಣವಾಗಿ ನಿರ್ಧಾರವಾಗಿದ್ದು, ಕೆಲವು ವಾಹನಗಳಿಗೆ ಬುಕಿಂಗ್ ನಂತರ ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾದರೆ ಇನ್ನು ಕೆಲವೇ ವಾಹನಗಳ ಖರೀದಿಗಾಗಿ ಗ್ರಾಹಕರು ವರ್ಷಾನುಗಟ್ಟಲೆ ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಹೌದು, ಗ್ರಾಹಕರು ಹೊಸ ವಾಹನಗಳ ಖರೀದಿ ವೇಳೆ ಬುಕಿಂಗ್ ಮಾಡಿದ ನಂತರ ಕೆಲವು ವಾಹನಗಳ ವಿತರಣೆಗೆ ಹೆಚ್ಚಿನ ಕಾಲಾವಧಿಗೆ ಕಾಯಲೇಬೇಕಾದ ಅನಿವಾರ್ಯತೆಗಳಿದ್ದು, ಅತಿ ಹೆಚ್ಚು ಕಾಯುವಿಕೆ ಪಟ್ಟಿಯಲ್ಲಿ ಹಲವಾರು ಜನಪ್ರಿಯ ಕಾರುಗಳಿವೆ. ವಾಹನಗಳ ಕಾಯುವಿಕೆ ಅವಧಿಯು ಉತ್ಪಾದನಾ ಪ್ರಮಾಣವನ್ನು ಅವಲಂಭಿಸಿದ್ದು, ಅತಿ ಹೆಚ್ಚು ಕಾಯಲೇಬೇಕಾದ ಕೆಲವು ಕಾರುಗಳ ಮಾಹಿತಿ ಇಲ್ಲಿದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.18 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 24.58 ಲಕ್ಷ ಬೆಲೆ ಹೊಂದಿದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ 50 ಸಾವಿರ ಯನಿಟ್‌ಗಳಿಗೆ ಬುಕಿಂಗ್ ಪಡೆದುಕೊಂಡಿದ್ದ ಮಹೀಂದ್ರಾ ಕಂಪನಿಯು ಇದುವರೆಗೆ ಒಟ್ಟು 1 ಲಕ್ಷಕ್ಕೂ ಯುನಿಟ್‌ಗಳಿಗೆ ಬುಕಿಂಗ್ ಸ್ವಿಕರಿಸಿದ್ದು, ಹೊಸದಾಗಿ ಬುಕಿಂಗ್ ಮಾಡುವ ಗ್ರಾಹಕರು ಎಕ್ಸ್‌ಯುವಿ700 ಖರೀದಿಗೆ ಕನಿಷ್ಠ 15 ತಿಂಗಳಿನಿಂದ 20 ತಿಂಗಳು ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಕಿಯಾ ಕಾರೆನ್ಸ್

ಕಾರೆನ್ಸ್ ಕಾರಿನ ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಕಂಪನಿಯು ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ಮಾದರಿಗಳಿಗೆ ನಿಗದಿತ ಕಾಯುವಿಕೆ ಅವಧಿಯನ್ನು ಪ್ರಕಟಸಿದೆ. ಹೊಸ ಕಾರು ಮಾದರಿಯಲ್ಲಿ ಪೆಟ್ರೋಲ್ ಮಾದರಿಗಳಿಂತಲೂ ಡೀಸೆಲ್ ಮಾದರಿಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಎಂಪಿವಿ ಕಾಯುವಿಕೆ ಅವಧಿಯು ಹೆಚ್ಚುತ್ತಿದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಮಾಹಿತಿಗಳ ಪ್ರಕಾರ, ಹೊಸದಾಗಿ ಕಾರೆನ್ಸ್ ಮಾದರಿಗೆ ಬುಕಿಂಗ್ ಮಾಡುವ ಗ್ರಾಹಕರು 10 ತಿಂಗಳಿನಿಂದ 18 ತಿಂಗಳು ಕಾಲ ಕಾಯಬೇಕಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಕಾಯುವಿಕೆ ಅವಧಿಯನ್ನು ನಿರ್ಧರಿಸಲಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ನ್ಯೂ ಜನರೇಷನ್ ಮಹೀಂದ್ರಾ ಥಾರ್

ಮಹೀಂದ್ರಾ ಕಂಪನಿಯು 2020 ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ ಸುಮಾರು 70 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ವಿತರಣೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದು, ವಿತರಣೆ ಹೆಚ್ಚಳದ ನಡುವೆಯೂ ಹೊಸ ಕಾರಿಗೆ ಕನಿಷ್ಠ 8 ತಿಂಗಳಿನಿಂದ 11 ತಿಂಗಳು ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಮಾರುತಿ ಸುಜುಕಿ ಎರ್ಟಿಗಾ

ಎಂಪಿವಿ ಕಾರುಗಳ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಎರ್ಟಿಗಾ ಕಾರು ಮಾದರಿಯು ಟಾಪ್ 10 ಕಾರು ಮಾರಾಟದಲ್ಲಿ ಸ್ಥಾನಪಡೆದುಕೊಂಡಿದ್ದು, ಪ್ರತಿ ತಿಂಗಳು 8 ಸಾವಿರದಿಂದ 10 ಸಾವಿರ ಯುನಿಟ್ ಮಾರಾಟ ಹೊಂದಿದೆ. ಈ ಕಾರು ಖರೀದಿಸಲು ಗ್ರಾಹಕರು ಕನಿಷ್ಠ 6 ತಿಂಗಳಿನಿಂದ 10 ತಿಂಗಳ ಕಾಲ ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಎಂಜಿ ಆಸ್ಟರ್

ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಕಾರು ಮಾದರಿಯಾಗಿ ಗುರಿತಿಸಿಕೊಂಡಿರುವ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿಯು ಉತ್ತಮ ಬೇಡಿಕೆ ಹೊಂದಿದ್ದು, 1.5 ಲೀಟರ್ ಪೆಟ್ರೋಲ್ ಮತ್ತು 1.3 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಕಾರಿನ ಖರೀದಿಗೆ ಕನಿಷ್ಠ 4 ತಿಂಗಳಿನಿಂದ 6 ತಿಂಗಳ ಕಾಲ ಕಾಯಲೇಬೇಕು.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಕಿಯಾ ಸೊನೆಟ್

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಕಿಯಾ ಸೊನೆಟ್ ಆವೃತ್ತಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ ಕೆಲ ತಿಂಗಳ ಅವಧಿಯಲ್ಲೇ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಬುಕಿಂಗ್ ಪಡೆದುಕೊಂಡಿದೆ. ಬುಕಿಂಗ್ ಆಧರಿಸಿ ಹೊಸ ಕಾರಿನ ವಿತರಣೆಯು ಜೋರಾಗಿದ್ದು, ಈ ಕಾರು ಖರೀದಿಗೆ ಗ್ರಾಹಕರು ಕನಿಷ್ಠ 4 ತಿಂಗಳಿನಿಂದ 6 ತಿಂಗಳ ಕಾಲ ಕಾಯಲೇಬೇಕು.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ

ಪ್ರಮುಖ ಐದು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ ಕಾರು ಮಾದರಿಯಲ್ಲಿ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯ ಖರೀದಿಗೆ ಹೆಚ್ಚಿನ ಬೇಡಿಕೆಯಿದ್ದು, ಟಾಪ್ ಎಂಡ್ ಮಾದರಿಗಳು ಬುಕಿಂಗ್ ಮಾಡಿದ ನಂತರ ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾದಲ್ಲಿ ಬೆಸ್ ವೆರಿಯೆಂಟ್‌ಗಾಗಿ ಕನಿಷ್ಠ ನಾಲ್ಕರಿಂದ ಆರು ತಿಂಗಳು ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಹೋಂಡಾ ಸಿಟಿ ಹೈಬ್ರಿಡ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ತನ್ನ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಈ ಹೊಸ ಹೋಂಡಾ ಸಿಟಿ ಇ:ಎಚ್‌ಇವಿ ಸೆಡಾನ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.19.50 ಲಕ್ಷವಾಗಿದೆ. ಈ ಕಾರು ಖರೀದಿಗೆ ಕನಿಷ್ಠ ಆರು ತಿಂಗಳು ಕಾಯಬೇಕಾಗುತ್ತದೆ.

ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು.

ಸಿಟಿ ಹೈಬ್ರಿಡ್ ತನ್ನ ಪೆಟ್ರೋಲ್ ಪ್ರತಿರೂಪಕ್ಕಿಂತ 40 ಪ್ರತಿಶತ ಹೆಚ್ಚು ಇಂಧನ-ಸಮರ್ಥವಾಗಿದೆ ಮತ್ತು 26.5 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ ಎಂದು ಹೋಂಡಾ ಹೇಳಿಕೊಂಡಿದೆ. ಹೈಬ್ರಿಡ್ ಸಿಟಿಯು ತನ್ನ ಪೆಟ್ರೋಲ್ ಚಾಲಿತ ಆವೃತ್ತಿಗಿಂತ 110 ಕೆಜಿ ಭಾರವಾಗಿದೆ. ಈ ಕಾರಿನಲ್ಲಿ ಡಿಸ್ಕ್ ಬ್ರೇಕ್‌ಗಳು ಮತ್ತು ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್‌ ನೀಡಲಾಗಿದೆ.

Most Read Articles

Kannada
English summary
New cars with highest waiting period in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X