Just In
- 10 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 13 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 14 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- Movies
ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆ ಬಹುಭಾಷಾ ನಟ ನಾಸಿರ್! ಕಾರಣವೇನು?
- Sports
ಐರ್ಲೆಂಡ್-ಭಾರತ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದಿರುವ ಟೀಂ ಇಂಡಿಯಾ
- News
ಮಹಾ ಬಂಡಾಯ: ಸುಪ್ರೀಂಕೋರ್ಟ್ ಅಂಗಳಕ್ಕೆ 16 ಶಾಸಕರ ಅನರ್ಹತೆ ಚೆಂಡು!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಭಾರತದಲ್ಲಿ ಹೊಸ ರೂಪದಲ್ಲಿ ಬಿಡುಗಡೆಯಾಗಲಿದೆ ಹ್ಯುಂಡೈ ಟ್ಯೂಸಾನ್ ಎಸ್‍ಯುವಿ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನ್ಯೂ ಜನರೇಷನ್ ಟ್ಯೂಸಾನ್ ಎಸ್‍ಯುವಿಯನ್ನು ಹೊಸ ರೂಪದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್(Hyundai Tucson) ಎಸ್‍ಯುವಿಯು ಹಲವಾರು ಹೊಸ ಅಪ್ದೇಟ್ ಗಳೊಂದಿಗೆ ಬಿಡುಗಡೆಯಾಗಲಿದೆ.

ಹುಂಡೈ ಮೋಟಾರ್ ಕಂಪನಿಯು ಇತ್ತೀಚಿನ ತಲೆಮಾರಿನ (ಅಂತರರಾಷ್ಟ್ರೀಯವಾಗಿ ನಾಲ್ಕನೇ ತಲೆಮಾರಿನ) ಟ್ಯೂಸಾನ್ ಅನ್ನು ಅನಾವರಣಗೊಳಿಸಿತ್ತು ಪ್ರಸ್ತುತ ಅಂತಿಮ ಪರೀಕ್ಷೆಯ ಹಂತದಲ್ಲಿರುವ ಹ್ಯುಂಡೈ ಟ್ಯೂಸಾನ್ ಮಾದರಿಯು ಗಮನಾರ್ಹ ವಿನ್ಯಾಸ ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಪಡೆಯುತ್ತದೆ. ಹೊಸ ವರದಿಗಳ ಪ್ರಕಾರ, 2022ರ ಹ್ಯುಂಡೈ ಟ್ಯೂಸಾನ್ ಅನ್ನು 7-ಸೀಟ್ ಕಾನ್ಫಿಗರೇಶನ್‌ನಲ್ಲಿ ಮಾತ್ರ ನೀಡಲಾಗುವುದು ಪ್ರಸ್ತುತ ಮಾದರಿಯನ್ನು 7-ಸೀಟರ್ ಆವೃತ್ತಿಗೆ ಹೋಲಿಸಿದರೆ, 150 ಎಂಎಂ ಉದ್ದ ಮತ್ತು 85 ಎಂಎಂ ಉದ್ದದ ವೀಲ್‌ಬೇಸ್ ಅನ್ನು ಹೆಚ್ಚು ಹೊಂದಿದೆ. ಇದರ ಅಗಲವನ್ನು 15 ಎಂಎಂ ಹೆಚ್ಚಿಸಲಾಗಿದೆ.

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಸ್ಟ್ಯಾಂಡರ್ಡ್ ವೀಲ್‌ಬೇಸ್ 2680 ಎಂಎಂ ಮತ್ತು ಲಾಂಗ್-ವೀಲ್‌ಬೇಸ್ 2755 ಎಂಎಂ ನೊಂದಿಗೆ ಬರುತ್ತದೆ. ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.25 ಲಕ್ಷದಿಂದ 35 ಲಕ್ಷದವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಎಸ್‍ಯುವಿಯನ್ನು ಸಿಕೆಡಿ (ಸಂಪೂರ್ಣವಾಗಿ ನಾಕ್ಡ್ ಡೌನ್) ಯುನಿಟ್ ಆಗಿ ಬರುತ್ತದೆ.

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತದಲ್ಲಿ ಕಾಣಿಸಿಕೊಂಡ ಸ್ಪೈ ಚಿತ್ರಗಳು ಇತ್ತೀಚೆಗೆ ಬಹಿರಂಗವಾಗಿತ್ತು. ಭಾರತದಲ್ಲಿ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. .

ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಟ್ಯೂಸಾನ್ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸದಿಂದ ಕೂಡಿದೆ. ಈ ಹೂಸ ಟ್ಯೂಸಾನ ಹೆಡ್‌ಲ್ಯಾಂಪ್ ಯುನಿಟ್ ಹೆಚ್ಚು ಆಕರ್ಷಕವಾಗಿದೆ.

ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ. ಈ ಎಸ್‍ಯುವಿಯಲ್ಲಿ 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸವನ್ನು ಒಳಗೊಂಡಿದೆ.

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ. ಎಸ್‍ಯುವಿಯ ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಇನ್ನು ಈ ಟ್ಯೂಸನ್ ಎಸ್‍ಯುವಿಯಲಿರುವ ಟೈಲ್-ಲೈಟ್ ಕ್ರೆಟಾದ ಟೈಲ್-ಲ್ಯಾಂಪ್‌ನ ವಿಕಾಸಗೊಂಡ ಆವೃತ್ತಿಯಂತೆ ಕಾಣುತ್ತದೆ.

ಈ ಹೊಸ ಟ್ಯೂಸಾನ್ 7-ಸೀಟರ್ ಎಸ್‍ಯುವಿಯ ಕೆಳಗಿನ ಬಂಪರ್ ಸಿಲ್ವರ್ ಸ್ಕಿಡ್ ಪ್ಲೇಟ್, ಸ್ಟಾಪ್ ಲ್ಯಾಂಪ್‌ಗಳು ಮತ್ತು ಏರ್ ವೆಂಟ್ಸ್ ಗಳನ್ನು ಹೊಂದಿವೆ. ಇದು ಇಂಟಿಗ್ರೇಟೆಡ್ ಬ್ರೇಕ್ ಲೈಟ್ ಗಳೊಂದಿಗೆ ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ. ಈ ಹೊಸ ಟ್ಯೂಸಾನ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ದೊಡ್ಡದಾದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಇದರೊಂದಿಗೆ ಎಸಿ ಮತ್ತು ಇತರ ಕಂಟ್ರೋಲ್ ಗಳಿಗಾಗಿ ಟಚ್-ಪ್ಯಾನೆಲ್‌ಗಳು, ಅನನ್ಯವಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್, ಪಾರ್ಕಿಂಗ್ ಬ್ರೇಕ್, ಗೇರ್‌ಬಾಕ್ಸ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ವೈರ್‌ಲೆಸ್ ಚಾರ್ಜಿಂಗ್ ಮತ್ತು ನೂತನ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರುತ್ತದೆ.

ಹೊಸ ಟ್ಯೂಸಾನ್ 7-ಸೀಟರ್ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೊ-ಪೆಟ್ರೋಲ್ ಮತ್ತು ಟರ್ಬೊ-ಡೀಸೆಲ್ ಎಂಜಿನ್ ಆಯ್ಕೆಗಳನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಜೀಪ್ ಕಂಪಾಸ್, ಫೋಕ್ಸ್‌ವ್ಯಾಗನ್ ಟಿಗ್ವಾನ್ ಮತ್ತು ಸಿಟ್ರನ್ ಸಿ5 ಏರ್‌ಕ್ರಾಸ್‌ಗಳ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಹ್ಯುಂಡೈ ಕಂಪನಿಯು ತನ್ನ ಹೊಸ ಟ್ಯೂಸಾನ್ ಎಸ್‍ಯುವಿಯನ್ನು ಇತ್ತೀಚೆಗೆ ಯುರೋ NCAP ಕ್ರ್ಯಾಶ್ ಟೆಸ್ಟ್‌ಗೆ ಒಳಪಡಿಸಿತ್ತು. ಈ ಕ್ರ್ಯಾಶ್ ಟೆಸ್ಟ್‌ನಲ್ಲಿ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು 5-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಯುರೋ NCAP ಕ್ರ್ಯಾಶ್ ಟೆಸ್ಟ್‌ನಲ್ಲಿ ಟ್ಯೂಸಾನ್ ಎಸ್‍ಯುವಿಯು ವಯಸ್ಕ ಪ್ರಯಾಣಿಕರ ವಿಭಾಗದಲ್ಲಿ ಶೇ.86 ರಷ್ಟು ಮತ್ತು ಮಕ್ಕಳ ಸುರಕ್ಷತಾ ವಿಭಾಗದಲ್ಲಿ ಶೇ.87 ರಷ್ಟು ಅಂಕಗಳನ್ನು ಗಳಿಸಿದೆ. ಈ ಯುರೋ NCAP ಪ್ರಕಾರ, ಟ್ಯೂಸಾನ್ ಎಸ್‍ಯುವಿ ಮುಂಭಾಗದ ಆಫ್‌ಸೆಟ್ ಪರೀಕ್ಷೆಯಲ್ಲಿ ಸ್ಥಿರವಾಗಿತ್ತು. ಟ್ಯೂಸಾನ್ ಎಸ್‍ಯುವಿ ಚಾಲಕ ಮತ್ತು ಪ್ರಯಾಣಿಕ ಇಬ್ಬರ ಮೊಣಕಾಲುಗಳು ಮತ್ತು ತೊಡೆಗಳಿಗೆ ಉತ್ತಮ ರಕ್ಷಣೆ ನೀಡಿತು.

ಈ ಎಸ್‍ಯುವಿ ಚಾಲಕನ ಎದೆಗೆ ರಕ್ಷಣೆಯು ಕನಿಷ್ಠವಾಗಿತ್ತು. ಪೂರ್ಣ-ಅಗಲದ ಕಟ್ಟುನಿಟ್ಟಿನ ತಡೆಗೋಡೆ ಟೆಸ್ಟ್‌ನಲ್ಲಿ, ದೇಹದ ಅತ್ಯಂತ ಪ್ರಮುಖ ಅಂಗಗಳಿಗೆ ಸಾಕಷ್ಟು ಉತ್ತಮ ರಕ್ಷಣೆ ಒದಗಿಸಲಾಗಿದೆ. ಆದರೆ ಚಾಲಕ ಎದೆಯ ರಕ್ಷಣೆಯನ್ನು ಕನಿಷ್ಠ ಎಂದು ರೇಟ್ ಮಾಡಲಾಗಿದೆ. ಅಡ್ಡ ತಡೆ ಟೆಸ್ಟ್‌ನಲ್ಲಿ, ದೇಹದ ಪ್ರಮುಖ ಅಂಗಗಳಿಗೂ ರಕ್ಷಣೆ ಉತ್ತಮ ಅಥವಾ ಸಮರ್ಪಕವಾಗಿದೆ ಇನ್ನು ಸೈಡ್ ಪೋಲ್ ಇಂಪ್ಯಾಕ್ಟ್ ಟೆಸ್ಟ್‌ನಲ್ಲಿ, ಪ್ರಯಾಣಿಕರಿಗೆ ರಕ್ಷಣೆ ಉತ್ತಮವಾಗಿತ್ತು ಮತ್ತು ಕಾರು ಗರಿಷ್ಠ ಅಂಕಗಳನ್ನು ಗಳಿಸಿತು. ಮುಂಭಾಗದ ಆಫ್‌ಸೆಟ್ ಟೆಸ್ಟ್ ಮತ್ತು ಅಡ್ಡ ತಡೆ ಪರಿಣಾಮ ಎರಡರಲ್ಲೂ, ಎರಡೂ ಮಕ್ಕಳ ಡಮ್ಮಿಗಳಿಗೆ ರಕ್ಷಣೆ ಉತ್ತಮವಾಗಿತ್ತು. ಒಟ್ಟಾರೆಯಾಗಿ ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಗರಿಷ್ಠ ಸುರಕ್ಷತೆ ಹೊಂದಿದೆ.

ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ವಿದೇಶಗಳಲ್ಲಿನ ಮಾರುಕಟ್ಟೆಗಳಲ್ಲಿ ಕಳೆದ ವರ್ಷ ಪರಿಚಯಿಸಿದ್ದರು. ಇದೀಗ ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಬಿಡುಗಡೆಯಾಗುವ ಸಾಧ್ಯತೆಗಳಿದೆ.