Just In
- 3 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 4 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 6 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- News
ಶಿವಮೊಗ್ಗ: ಮಳೆಯಲ್ಲಿ ಸಿಲುಕಿದ್ದ 150 ಮಂದಿಗೆ ಆಪತ್ಭಾಂಧವರಾದ ಅಗ್ನಿಶಾಮಕ ದಳ
- Sports
MI ಆಡುವ 11ರ ಬಳಗದಲ್ಲಿ ಮಗನಿಗೆ ಅವಕಾಶ ಸಿಗದ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ
ಮಹೀಂದ್ರಾ (Mahindra) ಕಂಪನಿಯು ತನ್ನ ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯು ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಪ್ರಮುಖ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆ ಮಾಡಿರುವ ಮಹೀಂದ್ರಾ ಕಂಪನಿಯು ಇದೀಗ ಹೊಸ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದೆ.

ಭಾರತದಲ್ಲಿ ಸ್ಕಾರ್ಪಿಯೋ ಮೊದಲ ತಲೆಮಾರಿನ ಆವೃತ್ತಿಯು ಬಿಡುಗಡೆಯಾಗಿ ಯಶಸ್ವಿ 20 ವರ್ಷ ಪೂರೈಸುತ್ತಿದ್ದು, ಮುಂದಿನ ತಿಂಗಳು ಜೂನ್‌ನಲ್ಲಿ ಪೂರ್ಣಗೊಳ್ಳಲಿರುವ 20ನೇ ವರ್ಷದ ಸಂಭ್ರಮಾಚರಣೆ ವೇಳೆಗೆ ಕಂಪನಿಯು ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾರಾಜೋ ಎಂಪಿವಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಇದಲ್ಲದೆ ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಇನ್ನು ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೆ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ, ಕೆಳಗಿನ ಭಾಗದಲ್ಲಿ ಫಾಗ್ ಲೈಟ್ ಇರಿಸಲಾಗಿದೆ. ಅದರ ಪಕ್ಕದಲ್ಲಿ ನೋಂದಣಿ ಫಲಕವನ್ನು ಹಾಕಲಾಗಿದ್ದು, ವಾಹನವನ್ನು ಟೊಯಿಂಗ್ ಮಾಡಲು ಸಹ ಸಹಕಾರಿಯಾಗಿದೆ.

ಮುಂಭಾಗದಿಂದ ಬಲವಾದ ನೋಟವನ್ನು ನೀಡುವ ಅದರ ಬಾನೆಟ್ ಮೇಲೆ ಗೆರೆಗಳನ್ನು ಕಾಣಬಹುದು. ಅದರ ಬದಿಯಲ್ಲಿ ದೊಡ್ಡ ಮಿಶ್ರಲೋಹದ ಚಕ್ರಗಳು ಕಂಡುಬರುತ್ತವೆ. ಇದು ಈ ಎಸ್‌ಯುವಿಯ ಗಾತ್ರಕ್ಕೆ ಸಾಕಾಗಲಿದ್ದು, ಇದರ ಪಕ್ಕದಲ್ಲಿರುವ ಪುಟ್ ಸ್ಟೆಪ್‌ಗಳನ್ನು ಮೊದಲಿಗಿಂತ ದೊಡ್ಡದಾಗಿ ಇರಿಸಬಹುದಾಗಿದ್ದು, ಪ್ರಯಾಣಿಕರು ಏಳಲು ಮತ್ತು ಇಳಿಯಲು ಸಹಾಯ ಮಾಡುತ್ತದೆ. ಹಿಂಭಾಗದಲ್ಲಿ ಟೈಲ್ ಗೇಟ್ ಮತ್ತು ಅದನ್ನು ತೆರೆಯಲು ಬದಿಯಲ್ಲಿ ಡೋರ್ ಹ್ಯಾಂಡಲ್ ಇದ್ದು, ಎಲ್ಇಡಿ ಟೈಲ್ ಲೈಟ್ ಇದರಲ್ಲಿ ಕಾಣಬಹುದಾಗಿದೆ.

ಹಿಂಭಾಗದಲ್ಲಿ ಸ್ಟಾಪ್ ಲೈಟ್, ದೊಡ್ಡ ವೈಪರ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಮೇಲಿನ ಭಾಗದಲ್ಲಿ ಕಾಣಬಹುದಾಗಿದ್ದು, ಇದು ಹಿಂಭಾಗದಿಂದ ವಿನ್ಯಾಸವನ್ನು ಮತ್ತಷ್ಟು ಬಲಿಷ್ಠತೆ ನೀಡುತ್ತದೆ. ಈ ಮೂಲಕ ಕಾರಿನ ಗಾತ್ರವು ಮೊದಲಿಗಿಂತ ದೊಡ್ಡದಾಗಿದೆ.

ಇದರೊಂದಿಗೆ 2022ರ ಮಹೀಂದ್ರಾ ಸ್ಕಾರ್ಪಿಯೋ ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಬಹುದು. ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾಗಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.61 ಲಕ್ಷ ಬೆಲೆ ಹೊಂದಿದೆ.

ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತಲೂ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರಿನಲ್ಲಿ ಹೊಸ ವಿನ್ಯಾಸ, ವಿಸ್ತರಿತ ಕ್ಯಾಬಿನ್ ಸ್ಥಳಾವಕಾಶ, ವಿವಿಧ ಎಂಜಿನ್ ಆಯ್ಕೆಯು ಸ್ಕಾರ್ಪಿಯೋ ಕಾರು ಬೇಡಿಕೆ ಹೆಚ್ಚಿಸಲಿದೆ.