ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಮಹೀಂದ್ರಾ ಕಂಪನಿಯು ಇದೇ ತಿಂಗಳು 27ರಂದು ಹೊಸ ತಲೆಮಾರಿನ ವೈಶಿಷ್ಟ್ಯತೆಯ ಸ್ಕಾರ್ಪಿಯೋ-ಎನ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ-ಎನ್ ಕಾರು ಮಾದರಿಯನ್ನು ಮಹತ್ವದ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸುತ್ತಿದ್ದು, ಸಂಪೂರ್ಣವಾಗಿ ಹೊಸ ಚಾಸಿಸ್‌ನೊಂದಿಗೆ ಸುಧಾರಿತ ವೈಶಿಷ್ಟ್ಯತೆಗಳು ಮತ್ತು ಹೊಸ ಎಂಜಿನ್ ಆಯ್ಕೆ ಹೊಂದಿರಲಿದೆ. ಹಾಗೆಯೇ ಹೊಸ ಕಾರು ಸ್ಕಾರ್ಪಿಯೋ ಬದಲಾಗಿ ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಮಾದರಿಯೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಯು ಸಹ ಮಾರಾಟಗೊಳ್ಳಲಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ಕಾರು ಮಾದರಿಯು ಸ್ಕಾರ್ಪಿಯೋ-ಎನ್(Scorpio-N) ಹೆಸರಿನೊಂದಿಗೆ ಬಿಡುಗಡೆಯಾಗಲಿದ್ದರೆ ಹೊಸ ಮಾದರಿಯೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯು ಸ್ಕಾರ್ಪಿಯೋ ಕ್ಲಾಸಿಕ್(Scorpio Classic) ಹೆಸರಿನೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರು ಮಾದರಿಯು ಲ್ಯಾಡರ್ ಫ್ರೇಮ್ ಚಾಸಿಸ್ ಮೇಲೆ ನಿರ್ಮಾಣಗೊಂಡಿರುವುದು ಸಾಕಷ್ಟು ಬದಲಾವಣೆ ಕಾರಣವಾಗಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ 4,662 ಎಂಎಂ ಉದ್ದಳತೆ ಮತ್ತು 2,750 ಎಂಎಂ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹೆಚ್ಚುವರಿಯಾಗಿ 206 ಎಂಎಂ ಉದ್ದ ಮತ್ತು 97 ಎಂಎಂ ಅಗಲ ಹೊಂದಿದ್ದರೆ 125 ಎಂಎಂ ನಷ್ಟು ಪ್ರಸ್ತುತ ಮಾದರಿಗಿಂತಲೂ ಕಡಿಮೆ ಎತ್ತರ ಹೊಂದಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ವ್ಹೀಲ್‌ಬೇಸ್ ಸೌಲಭ್ಯವು ಪ್ರಸ್ತುತ ಮಾದರಿಗಿಂತಲೂ 70 ಎಂಂ ಉದ್ದವಾಗಿರುವುದರಿಂದ ಇದು ಖಂಡಿತವಾಗಿಯೂ ಹೆಚ್ಚಿನ ವೇಗದ ಸ್ಥಿರತೆಯನ್ನು ಸುಧಾರಿಸಲು ಸಹಾಯ ಮಾಡವುದಲ್ಲದೆ 2ನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಮೊಣಕಾಲುಗಳಿಗೆ ಹೆಚ್ಚಿನ ಸ್ಥಳಾವಕಾಶ ಒದಗಿಸುತ್ತದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರು ಎಕ್ಸ್‌ಯುವಿ700 ಮಾದರಿಗಿಂತಲೂ ಹೆಚ್ಚುವರಿಯಾಗಿ 27 ಎಂಎಂ ಅಗಲ ಮತ್ತು 115 ಎಂಎಂ ಎತ್ತರವನ್ನು ಹೊಂದಿದ್ದು, ಇದು ನಿಕಟ ಪ್ರತಿಸ್ಪರ್ಧಿ ಟಾಟಾ ಸಫಾರಿ ಎಸ್‌ಯುವಿ ಮಾದರಿಗಿಂತಲೂ ಹೆಚ್ಚುವರಿ 23 ಎಂಎಂ ಅಗಲ ಮತ್ತು 84 ಎಂಎಂ ಎತ್ತರ ಹೊಂದಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಆರ್ಟಿಫಿಶಲ್ ಇಂಟೆಜೆನ್ಸ್ ಹೊಂದಿರುವ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ನ್ಯೂ ಜನರೇಷನ್ ಮಾದರಿಯ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಟ್ವಿನ್ ಪಾಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಟಾಪ್ ಎಂಡ್ ಮಾದರಿಗಳಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಕಾರಿನಲ್ಲಿ 18 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಇನ್ನು ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ-ಎನ್ ಕಾರಿನಲ್ಲಿ ನ್ಯೂ ಜನರೇಷನ್ ಮಾದರಿಗಳಾದ ಥಾರ್ ಮತ್ತು ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯು ಈ ಹಿಂದಿನಂತೆಯೇ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಮಾರಾಟ ಮುಂದುವರಿಯಲಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹೊಸದಾಗಿ ಅಳವಡಿಸಲಾಗುತ್ತಿರುವ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಮಾದರಿಗಳನ್ನು ಸ್ಕಾರ್ಪಿಯೋ-ಎನ್ ಮಾದರಿಗಾಗಿ ಎಕ್ಸ್‌ಯುವಿ700 ಮಾದರಿಗಿಂತ ತುಸು ಡಿಟ್ಯೂನ್ ಮಾಡಲಾಗಿದ್ದು, ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟಕ್ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಬಿಡುಗಡೆಯಾಗಲಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ಪೆಟ್ರೋಲ್ ಮತ್ತು ಡೀಸೆಲ್ ಹೈ ಎಂಡ್ ರೂಪಾಂತರಗಳು 4x4 ಆಯ್ಕೆಗಳೊಂದಿಗೆ ಲಭ್ಯವಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಇನ್ನು ಹಲವಾರು ಹೊಸ ಸೌಲಭ್ಯಗಳನ್ನು ನೀಡಿದೆ.

ಟಾಟಾ ಸಫಾರಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಹೊರಭಾಗದ ವಿನ್ಯಾಸಗಳು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳೂಬಹುದಾಗಿದೆ.

Article Published On: Monday, June 13, 2022, 15:57 [IST]
English summary
New gen mahindra scorpio n dimensions details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+