Just In
- 19 min ago
ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ಎಂಜಿ ಎಲೆಕ್ಟ್ರಿಕ್ ಕಾರು
- 26 min ago
ರೈಲು ಚಾಲನೆಗೆ ಇಬ್ಬರು ಲೋಕೋ ಪೈಲಟ್ಗಳನ್ನು ಏಕೆ ನೇಮಿಸುತ್ತಾರೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
- 1 hr ago
ಆಕರ್ಷಕದ ವಿನ್ಯಾಸದಲ್ಲಿ ಹ್ಯುಂಡೈ ಐಯಾನಿಕ್ ಎಲೆಕ್ಟ್ರಿಕ್ ಕಾರು ಅನಾವರಣ
- 2 hrs ago
ಮಳೆಯಲ್ಲಿ ಬೈಕ್ ಚಾಲನೆ ಮಾಡುವ ಸವಾರರು ಸುರಕ್ಷಿತವಾಗಿರಲು ಈ ಟಿಪ್ಸ್ ಫಾಲೋ ಮಾಡಿ
Don't Miss!
- Sports
ಭಾರತ vs ಇಂಗ್ಲೆಂಡ್ 5ನೇ ಟೆಸ್ಟ್: ಎಡ್ಜ್ಬಾಸ್ಟನ್ ಪಿಚ್ ವರದಿ, ಸ್ಕ್ವಾಡ್
- Education
IWST Recruitment 2022 : 13 ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಸುನೇತ್ರಾ ಪಂಡಿತ್: ಆಕ್ಸಿಡೆಂಟ್ ಬಳಿಕ ನಟನೆಗೆ ಮರಳಿದ ಸುನೇತ್ರಾ ಪಂಡಿತ್
- News
ಗ್ರಾಮೀಣ ರಸ್ತೆ ದುರಸ್ತಿ; ಎನ್ಎಚ್ಎಐ ಅಧಿಕಾರಿಗಳ ವಿರುದ್ಧ ಗೋಪಾಲಯ್ಯ ಗರಂ
- Finance
ಡಾಲರ್ ಎದುರು ಮತ್ತೆ ಸಾರ್ವಕಾಲಿತ ಕುಸಿತ ಕಂಡ ರೂಪಾಯಿ
- Technology
ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್ನಲ್ಲಿ ಈ ಫೋನ್ಗಳಿಗೆ ಬಿಗ್ ಆಫರ್!
- Lifestyle
ಫಸ್ಟ್ ಟೈಮ್ ಪ್ರೆಗ್ನೆನ್ಸಿ?ನೀವು ತಿಳಿಯಲೇಬೇಕಾದ ಸಂಗತಿಗಳಿವು
- Travel
ದೇವಿ ಮೂಕಾಂಬಿಕೆಯ ದೈವಿಕ ಸನ್ನಿಧಿಯ ಸ್ಥಳ - ಕೊಲ್ಲೂರು
ಬಿಡುಗಡೆಗೆ ಸಿದ್ದವಾಗಿರುವ ನ್ಯೂ ಜನರೇಷನ್ ಸ್ಕಾರ್ಪಿಯೋ-ಎನ್ ಎಂಜಿನ್ ಮಾಹಿತಿ ಬಹಿರಂಗ
ಮಹೀಂದ್ರಾ ಕಂಪನಿಯು ತನ್ನ ಮೂರನೇ ತಲೆಮಾರಿನ ಸ್ಕಾರ್ಪಿಯೋ-ಎನ್ ಎಸ್‌ಯುವಿ ಮಾದರಿಯನ್ನು ಮುಂದಿನ ತಿಂಗಳು 27ರಂದು ಅಧಿಕೃತವಾಗಿ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಲಿಷ್ಠ ಎಂಜಿನ್ ಆಯ್ಕೆ ಸಹ ಹೊಂದಿರಲಿದೆ.

ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿರುವ ಮಹೀಂದ್ರಾ ಕಂಪನಿಯು ಹೊಸ ಮಾದರಿಯನ್ನು ಮಹತ್ವದ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸುತ್ತಿದ್ದು, ಸಂಪೂರ್ಣ ಹೊಸ ಚಾಸಿಸ್‌ನೊಂದಿಗೆ ಸುಧಾರಿತ ವೈಶಿಷ್ಟ್ಯತೆಗಳು ಮತ್ತು ಹೊಸ ಎಂಜಿನ್ ಆಯ್ಕೆ ಹೊಂದಿರಲಿದೆ.

ಮಹೀಂದ್ರಾ ಕಂಪನಿಯು ಹೊಸ ಮಾದರಿಯನ್ನು ಸ್ಕಾರ್ಪಿಯೋ-ಎನ್(Scorpio-N) ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಮಾದರಿಯೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಯನ್ನು ಸ್ಕಾರ್ಪಿಯೋ ಕ್ಲಾಸಿಕ್(Scorpio Classic) ಹೆಸರಿನೊಂದಿಗೆ ಮಾರಾಟ ಮುಂದುವರಿಸಲಿದೆ.

ಹೊಸ ಸ್ಕಾರ್ಪಿಯೋ-ಎನ್ ಮಾದರಿಯು ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಗಿಂತಲೂ ಹೆಚ್ಚಿನ ವೈಶಿಷ್ಟ್ಯತೆಗಳು ಮತ್ತು ಪ್ರೀಮಿಯಂ ಸೌಲಭ್ಯಗಳೊಂದಿಗೆ ಮಾರಾಟಗೊಳ್ಳಲಿದ್ದು, ಹೊಸ ಮಾದರಿಯು ಲ್ಯಾಡರ್ ಫ್ರೇಮ್ ಚಾಸಿಸ್ ಮೇಲೆ ನಿರ್ಮಾಣಗೊಂಡಿದೆ.

ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ-ಎನ್ ಕಾರಿನಲ್ಲಿ ನ್ಯೂ ಜನರೇಷನ್ ಮಾದರಿಗಳಾದ ಥಾರ್ ಮತ್ತು ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯು ಈ ಹಿಂದಿನಂತೆಯೇ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟ ಮುಂದುವರಿಯಲಿದೆ.

ಹೊಸದಾಗಿ ಅಳವಡಿಸಲಾಗುತ್ತಿರುವ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಮಾದರಿಗಳನ್ನು ಸ್ಕಾರ್ಪಿಯೋ-ಎನ್ ಮಾದರಿಗಾಗಿ ಎಕ್ಸ್‌ಯುವಿ700 ಮಾದರಿಗಿಂತ ತುಸು ಡಿಟ್ಯೂನ್ ಮಾಡಲಾಗಿದ್ದು, ಹೊಸ ಕಾರು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟಕ್ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಬಿಡುಗಡೆಯಾಗಲಿದೆ.

ಹೊಸ ಮಹೀಂದ್ರಾ ಸ್ಕಾರ್ಪಿಯೊ-ಎನ್ ಪೆಟ್ರೋಲ್ ಮತ್ತು ಡೀಸೆಲ್ ಹೈ ಎಂಡ್ ರೂಪಾಂತರಗಳು 4x4 ಆಯ್ಕೆಗಳೊಂದಿಗೆ ಲಭ್ಯವಿರಲಿದ್ದು, ಹೊಸ ಕಾರಿನಲ್ಲಿ ಕಂಪನಿಯು ಇನ್ನು ಹಲವಾರು ಹೊಸ ಸೌಲಭ್ಯಗಳನ್ನು ನೀಡಿದೆ.

ಬಿಡುಗಡೆಯಾಗಲಿರುವ ಹೊಸ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾರಾಜೋ ಎಂಪಿವಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ನ್ಯೂ ಜನರೇಷನ್ ಮಾದರಿಯ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಟ್ವಿನ್ ಪಾಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಟಾಪ್ ಎಂಡ್ ಮಾದರಿಗಳಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಇದರೊಂದಿಗೆ ಹೊಸ ಕಾರಿನಲ್ಲಿ 18 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಹಾಗೆಯೇ ಹೊಸ ಕಾರಿನಲ್ಲಿ ಹೊರಭಾಗದ ವಿನ್ಯಾಸಗಳು ಕೂಡಾ ಸಾಕಷ್ಟು ಬದಲಾವಣೆಗೊಂಡಿದ್ದು, ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.14 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದೆ.