ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಮಾರುತಿ ಸುಜುಕಿ(Maruti Suzuki) ಕಂಪನಿಯು ತನ್ನ ಪ್ರಮುಖ ಕಾರುಗಳ ಹೊಸ ತಲೆಮಾರಿನ ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರುಗಳ ಪಟ್ಟಿಯಲ್ಲಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ ಎಸ್‌ಯುವಿ ಕೂಡಾ ಒಂದಾಗಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಕಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಬರೋಬ್ಬರಿ 7 ಕಾರು ಮಾದರಿಗಳೊಂದಿಗೆ ಮುಂಚೂಣಿಯಲ್ಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಮಾರುತಿ ಸುಜುಕಿ ಕಂಪನಿಯು ಹೊಸ ವಿಟಾರಾ ಬ್ರೆಝಾ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಕಾರು ಮಾದರಿಯು ಇದೇ ತಿಂಗಳು 30ರಂದು ಬಿಡುಗಡೆಯಾಗಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಂಜಿನ್ ನವೀಕರಣದೊಂದಿಗೆ ಹೊಸ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಬಿಎಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿಯು ಪ್ರಮುಖ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಹೊಸ ಎಂಜಿನ್ ಆಯ್ಕೆಯೊಂದಿಗೆ ನವೀಕರಿಸಲಾದ ವಿನ್ಯಾಸಗಳು ಮತ್ತು ಪ್ರೀಮಿಯಂ ಫೀಚರ್ಸ್ ಗ್ರಾಹಕರನ್ನು ಸೆಳೆಯಲಿವೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಪ್ರಸ್ತುತ ಮಾರುಕಟ್ಟೆಯಲ್ಲಿ ವಿಟಾರಾ ಬ್ರೆಝಾ ಮಾದರಿಯಲ್ಲಿ ಮಾರುತಿ ಸುಜುಕಿ ಕಂಪನಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15ಸಿ ಪೆಟ್ರೋಲ್ ಎಂಜಿನ್‌ ಆಯ್ಕೆ ನೀಡುತ್ತಿದ್ದು, ಇದು ಉತ್ತಮ ಇಂಧನ ದಕ್ಷತೆ ಹೊಂದಿದೆ. ಹೊಸ ತಲೆಮಾರಿನ ಆವೃತ್ತಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಮಾದರಿಯನ್ನು ಪರಿಚಯಿಸಲಾಗುತ್ತಿದ್ದು, ಸಿಎನ್‌ಜಿ ಆಯ್ಕೆ ಹೊಂದಿರುವ ಮೊದಲ ಎಸ್‌ಯುವಿ ಮಾದರಿಯಾಗಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹಾಗೆಯೇ ಹೊಸ ಕಾರಿನಲ್ಲಿ ನವೀಕರಣಗೊಳಿಸಲಾದ ಎಂಜಿನ್ ಉನ್ನತೀಕರಣ ಸೇರಿದಂತೆ ಬದಲಾದ ಮುಂಭಾಗದ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್, ಗರಿಷ್ಠ ಸುರಕ್ಷತೆಗಾಗಿ ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್ ಜೋಡಣೆ ಹೊಂದಿರಲಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಜೊತೆಗೆ ಹೊಸ ಕಾರಿನಲ್ಲಿ ಪ್ಯಾಡಲ್ ಶಿಫ್ಟರ್, ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ದೊಡ್ಡ ಟಚ್‌ಸ್ಕ್ರೀನ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಹೊಸ ಮಾದರಿಯ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ ಹೊಂದಿರಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಇದರಲ್ಲದೆ 2022ರ ವಿಟಾರಾ ಬ್ರೆಝಾ ಹೆಚ್ಚು ಸುಧಾರಿತ ಕನೆಕ್ಟಿವಿಟಿ ಕಾರು ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಕ್ಲೈಮೇಟ್ ಕಂಟ್ರೋಲ್ ಮತ್ತು ಹೆಡ್‌ಲೈಟ್ ಕಂಟ್ರೋಲ್‌ನಂತಹ ವೈಶಿಷ್ಟ್ಯತೆಗಳು ಪಡೆಯುವ ಸಾಧ್ಯತೆಗಳಿವೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ವಿಟಾರಾ ಬ್ರೆಝಾದ ಒಳಭಾಗ ಮತ್ತು 2022 ಬಲೆನೊದ ಒಳಭಾಗದ ನಡುವೆ ಸಾಕಷ್ಟು ಹೋಲಿಕೆಗಳು ಕಂಡುಬರುವ ಸಾಧ್ಯತೆಯಿದ್ದು, ಹೊಸ ವಿಟಾರಾ ಬ್ರೆಝಾದಲ್ಲಿ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್ ಮುಂತಾದ ವೈಶಿಷ್ಟ್ಯತೆಗಳೊಂದಿಗೆ 4 ಸ್ಟಾರ್ ಗ್ಲೋಬರ್ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ಸ್ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ವಿಟಾರಾ ಬ್ರೆಝಾ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.84 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.20 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ತಲೆಮಾರಿನ ಆವೃತ್ತಿಯು ಹಲವು ಹೊಸ ಬದಲಾವಣೆಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ನಂತರವೂ ವಿಟಾರಾ ಬ್ರೆಝಾ ಖರೀದಿದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಹೊಸ ಬದಲಾವಣೆಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಸದ್ಯ ಮಾರುಕಟ್ಟೆಯಲ್ಲಿರುವ ಬಹುತೇಕ ವಿಟಾರಾ ಬ್ರೆಝಾ ಶ್ರೇಣಿಯ ಸಮನಾಂತರ ಮಾದರಿಗಳು ಹೆಚ್ಚಿನ ಮಟ್ಟ ಸುಧಾರಿತ ಹಾಗೂ ಅತ್ಯತ್ತಮ ತಂತ್ರಜ್ಞಾನ ಅಳವಡಿಕೆಯೊಂದಿಗೆ ಬಿಡುಗಡೆಯಾಗಿದ್ದು, ಮಾರುತಿ ಸುಜುಕಿ ಸಹ ಹೊಸ ಮಾದರಿಯನ್ನು ಸಾಕಷ್ಟು ಬದಲಾವಣೆಗಳೊಂದಿಗೆ ಬಿಡುಗಡೆ ಮಾಡುವ ನೀರಿಕ್ಷೆಯಿದೆ.

Article Published On: Wednesday, June 1, 2022, 8:45 [IST]
English summary
New gen maruti suzuki brezza set to be launched on 30 june
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+