Just In
- 10 hrs ago
ಮಂಗಳೂರಿನಲ್ಲಿರುವ ಒಕಿನಾವ ಇವಿ ಸ್ಕೂಟರ್ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ
- 11 hrs ago
ಮ್ಯೂಸಿಕಲ್ ಸ್ಕೂಟರ್ನ ವಿಡಿಯೋ ಹಂಚಿಕೊಂಡು "ಭಾರತದಲ್ಲಿ ಮಾತ್ರ" ಎಂದ ಆನಂದ್ ಮಹೀಂದ್ರಾ
- 12 hrs ago
ಕೋಟಿ ಬೆಲೆಯ ಮರ್ಸಿಡಿಸ್ ಜಿಎಲ್ಎಸ್ ಎಸ್‍ಯುವಿ ಖರೀದಿಸಿದ ನಟ ವರುಣ್ ಧವನ್
- 14 hrs ago
ಮೇ ತಿಂಗಳಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟ ದಾಖಲಿಸಿದ 8 ಮಾರುತಿ ಸುಜುಕಿ ಕಾರುಗಳು
Don't Miss!
- Lifestyle
Today RashiBhavishya: ಶನಿವಾರದ ದಿನ ಭವಿಷ್ಯ: ವೃಷಭ, ಕುಂಭ, ಮೀನ ರಾಶಿಯ ಉದ್ಯೋಗಿಗಳು ಕಚೇರಿ ಕೆಲಸದ ಮೇಲೆ ಗಮನಹರಿಸಿ
- News
ಫ್ಲೆಕ್ಸ್ ಹಾಕಿದ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಾಗಿಲ್ಲ ಏಕೆ?
- Sports
ENG vs NZ: ನ್ಯೂಜಿಲೆಂಡ್ ವಿರುದ್ಧ ಸತತ 2ನೇ ಶತಕ ದಾಖಲಿಸಿದ ಜಾನಿ ಬೈಸ್ಟ್ರೋವ್
- Finance
ಈ 220 ಉದ್ಯೋಗಿಗಳಿಗೆ ವಾರ್ಷಿಕ 1 ಕೋಟಿ ರು ಸಂಬಳ, ಯಾವ್ದು ಕಂಪನಿ?
- Movies
ಕಾರ್ತಿಕ್ ಆರ್ಯನ್ಗೆ ಕೋಟಿಗಟ್ಟಲೆ ಮೌಲ್ಯದ ಕಾರು ಉಡುಗೊರೆ ನೀಡಿದ ನಿರ್ಮಾಪಕ!
- Education
CLAT 2022 Result : ಕ್ಲಾಟ್ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲಿ ಪ್ರಕಟ
- Technology
60,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್ಟಾಪ್ಗಳು!
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಭಾರತದಲ್ಲಿ ಬಿಡುಗಡೆಯಾಗಲಿದೆ ಬಹುಬೇಡಿಕೆಯ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್
ಜಪಾನ್ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ(Toyota) ತನ್ನ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್(Land Cruiser) ಎಸ್‍ಯುವಿಯನ್ನು ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ಪರಿಚಯಿಸಿತು. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿ ಸಂಚಲವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ.

ಜಪಾನ್‌ನಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಈ ಟೊಯೊಟಾ ಲ್ಯಾಂಡ್ ಕ್ರೂಸರ್ ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಕೇವಲ ಆಯ್ದ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದ್ದರೂ ಲ್ಯಾಂಡ್ ಕ್ರೂಸರ್ ಎಲ್ಸಿ300 ಮಾದರಿಯ ಕಾಯುವ ಅವಧಿಯು ಈಗಾಗಲೇ ನಾಲ್ಕು ವರ್ಷಗಳವರೆಗೆ ತಲುಪಿದೆ ಎಂದು ವರದಿಗಳಾಗಿತ್ತು. ಇದೀಗ ಟೊಯೊಟಾ ಕಂಫನಿಯು ಈ ಸುದ್ದಿಯು ನಿಜ ಎಂದು ದೃಢಪಡಿಸಿದೆ. ಈ ಬಹುಬೇಡಿಕೆಯ ನ್ಯೂ ಜನರೇಷನ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಪ್ರಸ್ತುತ ಬೇಡಿಕೆಯನ್ನು ಪೂರೈಸಲು 4 ವರ್ಷಗಳವರೆಗೆ ತೆಗೆದುಕೊಳ್ಳುತ್ತದೆ ಎಂದು ಘೋಷಿಸಿದೆ.

ಜಾಗತಿಕ ಸೆಮಿಕಂಡಕ್ಟರ್ ಕೊರತೆಯು ವಿಷಯಗಳನ್ನು ಇನ್ನಷ್ಟು ಸಂಕಷ್ಟವನ್ನು ಉಂಟುಮಾಡುತ್ತಿದೆ. ಬಹುಪಾಲು ಖರೀದಿದಾರರು (ಶೇ. 90 ಕ್ಕಿಂತ ಹೆಚ್ಚು) ZX ಮತ್ತು GR ಸ್ಪೋರ್ಟ್ ಟ್ರಿಮ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ, ಇವುಗಳು ವಿತರಣೆಗೆ ಹೆಚ್ಚು ಸಮಯ ತೆಗೆದುಕೊಳ್ಳುವ ಎಸ್‍ಯುವಿಯ ರೂಪಾಂತರಗಳಾಗಿವೆ.

ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್ಸಿ300 ಈ ವರ್ಷದ ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹಿಂದಿನ ಫೆಬ್ರವರಿಯಲ್ಲಿ, ಟೊಯೋಟಾ ವಿತರಕರು ವಿ6 ಡೀಸೆಲ್ ರೂಪಾಂತರಕ್ಕಾಗಿ ಬುಕ್ಕಿಂಗ್ ತೆಗೆದುಕೊಳ್ಳುತ್ತಿದ್ದರು. ಮೊದಲ ಬ್ಯಾಚ್ ಮಾರಾಟವಾಗಿದೆ. ಸೆಮಿಕಂಡಕ್ಟರ್ ಚಿಪ್‌ಗಳ ಜಾಗತಿಕ ಕೊರತೆ ಮತ್ತು ಆಟೋ ಉದ್ಯಮದ ಮೇಲೆ ಪರಿಣಾಮ ಬೀರುವ ಇತರ ಸಮಸ್ಯೆಗಳಿಂದಾಗಿ ಈಗ ಬುಕ್ಕಿಂಗ್‌ಗಳನ್ನು ಮುಚ್ಚಲಾಗಿದೆ.

ಟೊಯೊಟಾ ಲ್ಯಾಂಡ್ ಕ್ರೂಸರ್ ಬೃಹತ್ ಗಾತ್ರದ ಆಫ್-ರೋಡ್ ಎಸ್‍ಯುವಿಯಾಗಿದೆ. ಟೊಯೊಟಾ ಕಂಪನಿಯು ಐಕಾನಿಕ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951 ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು.ಇದುವರೆಗೂ 170 ದೇಶಗಳಲ್ಲಿ ಲ್ಯಾಂಡ್ ಕ್ರೂಸರ್‌ನ 1.04 ಕೋಟಿ ಯೂನಿಟ್‌ಗಳನ್ನು ಮಾರಾಟ ಮಾಡಿದೆ. ನ್ಯೂ ಜನರೇಷನ್ ಮಾದರಿಯನ್ನು ಹಿಂದಿನದಕ್ಕಿಂತ ಹೆಚ್ಚು ಆಧುನಿಕ ಮತ್ತು ಪ್ರೀಮಿಯಂ ಮಾದರಿಯಾಗಿದೆ.

ಲ್ಯಾಂಡ್ ಕ್ರೂಸರ್' ಬ್ರ್ಯಾಂಡ್ ಹೆಸರು ಇಂದಿಗೂ ಜನಪ್ರಿಯ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು. ಇನ್ನು ಕಳೆದ ಕೆಲವು ವರ್ಷಗಳಿಗಿಂದ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಮತ್ತು ಬೇಡಿಕೆಯು ಕಡಿಮೆಯಾಗಿತ್ತು.

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿ ಇದಾಗಿದೆ. ಹೊಸ ಟೋಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ.

ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸತ್ತದೆ. ಇನ್ನು ನ್ಯೂ ಜನರೇಷನ್ ಟೋಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಈ ಗೇರ್ ಬಾಕ್ಸ್ ಇಂಧನ ಬಳಕೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಹಿಂದಿನದಕ್ಕಿಂತ ಶೇ.10 ಕಡಿಮೆ ಮಾಡುತ್ತದೆ ಎಂದು ಕಂಪನಿ ಹೇಳಿದೆ,

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ.

ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್‍ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆಯುತ್ತದೆ. ಈ ಹೊಸ ಎಸ್‍ಯುವಿಯ ಇಂಟಿರಿಯರ್ ನಲ್ಲಿ ದೊಡ್ಡ ಟ್ಯಾಬ್ಲೆಟ್ ಶೈಲಿಯ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಹೊಸ ಡ್ಯಾಶ್‌ಬೋರ್ಡ್ ವಿನ್ಯಾಸವನ್ನು ಪಡೆದುಕೊಂಡಿದೆ,

ಈ ಮಾದರಿಯಂತಲ್ಲದೆ 4 ಹೈ ಮತ್ತು 4 ಲೋ ಮೋಡ್‌ಗಳನ್ನು ಹೊಂದಿರುವ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಈಈ ಎಸ್‍ಯುವಿ ಒಳಗೊಂಡಿದೆ. ಈ ಎಸ್‍ಯುವಿಯಲ್ಲಿ ಫಿಸಿಕಲ್ ಡಯಲ್‌ಗಳನ್ನು ಹೊಂದಿರುವ ಗೇಜ್ ಕ್ಲಸ್ಟರ್ ಮತ್ತು ಇನ್ಫೋ ಡಿಸ್ ಪ್ಲೇ, ಹೀಟಡ್ ಸೀಟುಗಳು, ಜೆಬಿಎಲ್ ಆಡಿಯೋ, ಟೊಯೊಟಾ ಸೇಫ್ಟಿ ಸೆನ್ಸ್ ಪ್ಯಾಕೇಜ್ ಮತ್ತು ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಕೂಡ ಒಳಗೊಂಡಿವೆ. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಮ್ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ. ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ,

ಇನ್ನು ಟೊಯೊಟಾ ಕಂಪನಿಯು ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಆಫ್-ರೋಡ್ ಪರ್ಫಾಮೆನ್ಸ್ ವೀಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ಈ ವೀಡಿಯೊಗಳಲ್ಲಿನ ವಾಯ್ಸ್‌ಓವರ್ ಕೇವಲ ಜಪಾನೀಸ್‌ನಲ್ಲಿ ಮಾತ್ರವಿದೆ. ಆದರೆ ವೀಡಿಯೊದಲ್ಲಿ ಲ್ಯಾಂಡ್ ಕ್ರೂಸರ್ ಎಷ್ಟು ಸಮರ್ಥ ಆಫ್-ರೋಡರ್ ಎಂದು ತಿಳಿಯುತ್ತದೆ. ಈ ವೀಡಿಯೋದಲ್ಲಿ ಲ್ಯಾಂಡ್ ಕ್ರೂಸರ್ ಎಸ್‍ಯುವಿ ಬೆಟ್ಟ, ಗುಡ್ಡಗಳ ಜೊತೆಯಲ್ಲಿ ಮರಳಿನಲ್ಲಿ ಸಾಗುವುದನ್ನು ಪ್ರದರ್ಶಿಸಿದ್ದಾರೆ. ಇನ್ನು ಈ ಎಸ್‍ಯುವಿಯು ಜಿಗಿಯುವುದನ್ನು ತೋರಿಸಿದ್ದಾರೆ.