ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸರಣಿಯನ್ನು ವಿಸ್ತರಿಸಲು ಮುಂದಾಗಿದೆ. ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿರುವ ಮುಂದಿನ ಕಾರು ಸಿಟಿಯ ಹೈಬ್ರಿಡ್ ಆವೃತ್ತಿಯಾಗಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಈ ಹೋಂಡಾ ಕಂಪನಿಯು ಸಿಟಿ ಹೈಬ್ರಿಡ್ ಕಾರನ್ನು ಇತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈಗಗಾಲೇ ಮಾರಾಟ ಮಾಡುತ್ತಿದೆ. ಹೋಂಡಾ ಸಿಟಿ ಹೈಬ್ರಿಡ್ ಕಾರು ಕಳೆದ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಗೊಳಿಸಲು ಉದ್ದೇಶಿಸಿತ್ತು. ಆದರೆ ಕರೋನಾ ಆತಂಕದಿಂದ ಈ ಹೈಬ್ರಿಡ್ ಕಾರಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಕಾರು ಈ ವರ್ಷದ ಬಹುಶಃ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಬಹುದು. ಹೋಂಡಾದ ಎಂಜಿನಿಯರ್‌ಗಳಿಗೆ ಹೋಂಡಾ ಸಿಟಿಯ ಹೈಬ್ರಿಡ್ ಆವೃತ್ತಿಯ ವಿವಿಧ ಗುಣಲಕ್ಷಣಗಳನ್ನು ಭಾರತೀಯ ರಸ್ತೆಗಳಿಗೆ ಸರಿಹೊಂದುವಂತೆ ಮತ್ತು ಇತರ ಹಲವು ಅಂಶಗಳನ್ನು ನವೀಕರಿಸುತ್ತಾರೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ದೆಹಲಿ RTO ದಾಖಲೆಯು ಹೊಸ ಹೋಂಡಾ ಸಿಟಿ ಇ: HEV ಹೈಬ್ರಿಡ್‌ನ ವಿಶೇಷಣಗಳನ್ನು ಅದರ ಅನಾವರಣಕ್ಕೆ ಮುಂಚಿತವಾಗಿ ಬಹಿರಂಗಪಡಿಸಿದೆ. ಹೊಸ ಮಾದರಿಯನ್ನು ಎರಡು ಟ್ರಿಮ್‌ಗಳಲ್ಲಿ ನೀಡಲಾಗುವುದು. ಹೋಂಡಾ ಸಿಟಿ ಹೈಬ್ರಿಡ್ ವಿ ಮತ್ತು ಝೆಡ್ಎಕ್ಸ್ ಎಂಬ ಎರಡು ಟ್ರಿಮ್ ಆಗಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಟಾಪ್ ಸ್ಪೆಕ್ ಝೆಡ್ಎಕ್ಸ್ ಟ್ರಿಮ್ ಹೋಂಡಾ ಸೆನ್ಸಿಂಗ್ ಸುರಕ್ಷತಾ ತಂತ್ರಜ್ಞಾನದೊಂದಿಗೆ ಬರುತ್ತದೆ, ಅದು ADAS (ಸುಧಾರಿತ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್). ಸೆಡಾನ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪಿಂಗ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಡಿಪಾರ್ಚರ್ ವಾರ್ನಿಂಗ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಆಟೋ ಹೈ ಬೀಮ್ ಅಸಿಸ್ಟ್ ವೈಶಿಷ್ಟ್ಯಗಳನ್ನು ನೀಡುತ್ತದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಹೋಂಡಾ ಕಂಪನಿಯು ಹೊಸ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಬಾಹ್ಯ ವಿನ್ಯಾಸದ ವಿಷಯದಲ್ಲಿ, ಸ್ಟ್ಯಾಂಡರ್ಡ್ ಆವೃತ್ತಿಯಂತೆಯೇ ಇರುತ್ತದೆ, ಆದರೆ ಇಲ್ಲಿ ಮತ್ತು ಅಲ್ಲಿ ಕೆಲವು ವ್ಯತ್ಯಾಸಗಳಿವೆ. ಟೀಸರ್ ನಲ್ಲಿ ಒಂದು ಸ್ಪೋರ್ಟಿ ಟೈಲ್‌ಗೇಟ್-ಮೌಂಟೆಡ್ ಸ್ಪಾಯ್ಲರ್ ಅನ್ನು ತೋರಿಸುತ್ತದೆ. ಜೊತೆಗೆ ಟೈಲ್‌ಲೈಟ್‌ಗಳಲ್ಲಿ ಪಿಯಾನೋ ಬ್ಲ್ಯಾಕ್ ಹೈಲೈಟ್‌ಗಳನ್ನು ತೋರಿಸುತ್ತದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಈ ಕಾರಿನ ಮುಂಭಾಗದ ಗ್ರಿಲ್‌ನಲ್ಲಿನ ಕ್ರೋಮ್ ಮುಖ್ಯಾಂಶಗಳನ್ನು ಪಿಯಾನೋ ಬ್ಲ್ಯಾಕ್ ಅಂಶಗಳಿಂದ ಬದಲಾಯಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ. ಹೊಸ ಹೋಂಡಾ ಸಿಟಿ ಹೈಬ್ರಿಡ್ ಕಾರಿನ ಕೆಲವು ವಿವರಗಳು ಮತ್ತು ವಿಶೇಷಣಗಳ ಕೆಲವು ಸುಳಿವುಗಳು ಬಹಿರಂಗವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಹೋಂಡಾ ಸಿಟಿ ಹೈಬ್ರಿಡ್ ಸಾಮಾನ್ಯ ಸಿಟಿಯಂತೆಯೇ (ಐದನೇ ತಲೆಮಾರಿನ ಮಾದರಿ) ವಿನ್ಯಾಸವನ್ನು ಒಳಗೊಂಡಿರುತ್ತದೆ..

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಸಿಟಿ ಹೈಬ್ರಿಡ್ ಕಾರಿನ ವಿಭಿನ್ನ ಮುಂಭಾಗದ ಗ್ರಿಲ್, ಮರುಹೊಂದಿಸಲಾದ ಬಂಪರ್‌ಗಳು ಮತ್ತು ವಿಭಿನ್ನ ಬ್ಯಾಡ್ಜ್‌ಗಳಂತಹ ಕೆಲವು ಸಣ್ಣ ವ್ಯತ್ಯಾಸಗಳು ಮಾತ್ರ ಇರುತ್ತವೆ. ಈ ಹೋಂಡಾ ಸಿಟಿ ಹೈಬ್ರಿಡ್ ಕಾರು ಗ್ಲೋಸ್-ಬ್ಲ್ಯಾಕ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಡಿಫ್ಯೂಸರ್ನಲ್ಲಿ ಕಾರ್ಬನ್-ಪ್ಯಾಟರ್ನ್ ಟ್ರಿಮ್, ಹೊಸ ಫಾಗ್ ಲ್ಯಾಂಪ್, ಹೊಸ ಮಿರರ್ ಕವರ್ ಮತ್ತು ಗ್ಲೋಸ್-ಬ್ಲ್ಯಾಕ್ ಫಿನಿಶ್‌ನಲ್ಲಿ ಡಕ್‌ಟೇಲ್ ಸ್ಪಾಯ್ಲರ್ ಅನ್ನು ಹೊಂದಿರಲಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಹೋಂಡಾ ಸಿಟಿ ಇ:ಹೆಚ್‌ಇವಿ ಕಾರು ಡ್ಯುಯಲ್-ಟೋನ್ 16-ಇಂಚಿನ ಅಲಾಯ್ ವ್ಹೀಲ್ ಗಳನ್ನು ಒಳಗೊಂಡಿವೆ.ಈ ಹೊಸ ಹೋಂಡಾ ಸಿಟಿ ಹೈಬ್ರಿಡ್ ಸ್ಟ್ಯಾಂಡರ್ಡ್ ಆಗಿ ಆಟೋಮ್ಯಾಟಿಕ್ ಎಲ್ಇಡಿ ಹೆಚ್ ಲ್ಯಾಂಪ್ ಗಳು, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್, ಎಲ್ಇಡಿ ರಿಯರ್ ಲೈಟ್ಸ್, ಪುಶ್ ಸ್ಟಾರ್ಟ್ ನೊಂದಿಗೆ ಕೀಲೆಸ್ ಎಂಟ್ರಿ, ಸಿಂಗಲ್-ಜೋನ್ ಆಟೋ ಕ್ಲೈಮೇಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಹಿಂಭಾಗದ ಏರ್-ಕಾನ್ ವೆಂಟ್ಸ್, ಸ್ಟೀಯರಿಂಗ್ ಆಡಿಯೊ ಬಟನ್ ಮತ್ತು 8.0-ಇಂಚಿನ ಟಚ್ಸ್ಕ್ರೀನ್ ಹೆಡ್ ಯುನಿಟ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಎಂಟು ಸ್ಪೀಕರ್ ಆಡಿಯೊ ಸಿಸ್ಟಂನೊಂದಿಗೆ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ಸ್ ಅನ್ನು ಹೊಂದಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಇದರೊಂದಿಗೆ ಹೆಚ್ಚುವರಿಯಾಗಿ, ಅಲ್ಟ್ರಾಸ್ಯೂಡ್ ಸೀಟುಗಳು, ಐ-ಎಂಎಂಡಿಗೆ ಡಿಕ್ಲೀರೇಶನ್ ಸೆಲೆಕ್ಟರ್ ಪ್ಯಾಡಲ್, ಲೆದರ್ ಸ್ಟೀರಿಂಗ್ ವ್ಹೀಲ್, ಗೇರ್ ಲಿವರ್ ಕನ್ಸೋಲ್, ಸೆಂಟರ್ ಟನಲ್ ಮತ್ತು ಡ್ಯಾಶ್‌ಬೋರ್ಡ್, ಅಲ್ಯೂಮಿನಿಯಂ ಸ್ಪೋರ್ಟ್ ಪೆಡಲ್‌ಗಳು. ಆರು ಏರ್‌ಬ್ಯಾಗ್‌ಗಳು, ವಿಎಸ್‌ಎ, ಹಿಲ್ ಸ್ಟಾರ್ಟ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿವೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಹೊಸ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಮಾದರಿಯಲ್ಲಿ ಮಲ್ಟಿ-ಮೋಡ್ ಡ್ರೈವ್ (ಐ-ಎಂಎಂಡಿ) ಪವರ್‌ಟ್ರೇನ್ ಆಗಿದ್ದು ಅದು ಐ-ಡಿಸಿಡಿಯನ್ನು ಬದಲಾಯಿಸಿದೆ. ಇದು ಪೆಟ್ರೋಲ್ ಮೋಡ್, ಪೆಟ್ರೋಲ್-ಎಲೆಕ್ಟ್ರಿಕ್ ಹೈಬ್ರಿಡ್ ಮೋಡ್ ಮತ್ತು ಎಲೆಕ್ಟ್ರಿಕ್ ಮೋಡ್ ಆಗಿದೆ. ಇದರಲ್ಲಿ 1.5-ಲೀಟರ್ ಅಟ್ಕಿನ್ಸನ್-ಸೈಕಲ್ ಡಿಒಹೆಚ್‌ಸಿ ಐ-ವಿಟಿಇಸಿ ನಾಲ್ಕು-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

ಬಿಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಈ ಎಂಜಿನ್ 98 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಎರಡು ಮೋಟರ್‌ಗಳಿಗೆ ಹೊಂದಿಕೆಯಾಗುತ್ತದೆ. ಇನ್ನು ಈ ಎಲೆಕ್ಟ್ರಿಕ್ ಮೋಟರ್ ಅಸಿಸ್ಟ್ ಜನರೇಟರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅದು ಸ್ಟಾರ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ. ಇನ್ನು ದೊಡ್ಡದಾದ ಎರಡನೇ ಮೋಟರ್ 108 ಬಿಹೆಚ್‍ಪಿ ಪವರ್ ಮತ್ತು 253 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಈ ಹೈಬ್ರಿಡ್ ಕಾರು 27 ಕಿ.ಮೀ.ಗೂ ಹೆಚ್ಚು ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದೆ, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರು ಕೂಡ ಉತ್ತಮ ಮೈಲೇಜ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

ಡುಗಡೆಗೂ ಮುನ್ನ ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರಿನ ಮಾಹಿತಿ ಬಹಿರಂಗ

ಕಳೆದ ತಿಂಗಳು ಹೋಂಡಾ ಕಂಪನಿಯು ಒಟ್ಟು 8,832 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು 8,172 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.8 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಹೋಂಡಾ ಸಿಟಿ ಇ:ಹೆಚ್‌ಇವಿ ಹೈಬ್ರಿಡ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಬಹುದು.

Most Read Articles

Kannada
Read more on ಹೋಂಡಾ honda
English summary
New honda city ehev hybrid variants specifications details revealed
Story first published: Wednesday, April 13, 2022, 15:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X