ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಅಮೇರಿಕ ಮೂಲದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಜೀಪ್ ತನ್ನ ಗ್ರ್ಯಾಂಡ್ ಚೆರೋಕೀ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಜೀಪ್ ಈ ಹೊಸ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಪ್ರಾರಂಭಿಸಲಾಗಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಈ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿಯು ಇದೇ ನವೆಂಬರ್‌ 11 ರಂದು ಬಿಡುಗಡೆಯಾಗಲಿದೆ. ಇದೇ ತಿಂಗಳ ಅಂತ್ಯದ ವೇಳೆಗೆ ವಿತರಣೆಗಳು ಪ್ರಾರಂಭವಾಗುವ ಸಾಧ್ಯತೆಯಿದೆ. ಪುಣೆಯಲ್ಲಿರುವ ಕಂಪನಿಯ ರಂಜನ್‌ಗಾಂವ್ ಘಟಕದಲ್ಲಿ ಇದು ಬ್ರಾಂಡ್‌ನ ನಾಲ್ಕನೇ ಮಾದರಿಯಾಗಿದೆ. ಹೊಸ ಗ್ರ್ಯಾಂಡ್ ಚೆರೋಕೀ ತನ್ನ ವಿನ್ಯಾಸದ ಕೆಲವು ಅಂಶಗಳನ್ನು ವ್ಯಾಗನೀರ್ ಮತ್ತು ಮೆರಿಡಿಯ ಎರವಲು ಪಡೆಯಲಿದೆ. ಕ್ಯಾಬಿನ್ ಒಳಗೆ ಕೆಲವು ಬದಲಾವಣೆಗಳು ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಸಹ ಮಾಡಲಾಗುವುದು.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಈ ಬಾರಿ, ಎಸ್‌ಯುವಿಯನ್ನು ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ನೀಡಲಾಗುತ್ತದೆ. ಈ ಹೊಸ ಗ್ರ್ಯಾಂಡ್ ಚೆರೋಕೀ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 2.0 ಲೀಟರ್ ಟರ್ಬೊ ಗ್ಯಾಸೋಲಿನ್ ಮೋಟಾರ್ ಅನ್ನು ಬಳಸುತ್ತದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇದು Quadra-Trac I 4X4 ಸಿಸ್ಟಮ್ ಮತ್ತು ಆಯ್ಕೆ ಮಾಡಬಹುದಾದ ಭೂಪ್ರದೇಶ ವಿಧಾನಗಳೊಂದಿಗೆ ಬರುತ್ತದೆ. ಜಾಗತಿಕವಾಗಿ, ಅಮೇರಿಕನ್ ಎಸ್‍ಯುವಿ ತಯಾರಕರು ಇದನ್ನು ಎರಡು ಆವೃತ್ತಿಗಳಲ್ಲಿ ಮಾರಾಟ ಮಾಡುತ್ತಾರೆ. ಇದು 5-ಸೀಟುಗಳು ಮತ್ತು ಮೂರು-ಸಾಲು ಗ್ರಾಂಡ್ ಚೆರೋಕೀ ಆಗಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಭಾರತದಲ್ಲಿ, ಕಂಪನಿಯು ಎಸ್‍ಯುವಿಯ 5-ಸೀಟರ್ ಆವೃತ್ತಿಯನ್ನು ಪರಿಚಯಿಸುತ್ತದೆ. ಹೊಸ 2023ರ ಜೀಪ್ ಗ್ರ್ಯಾಂಡ್ ಚೆರೋಕೀ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 10.25-ಇಂಚಿನ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮಂಟ್ ಕ್ಲಸ್ಟರ್ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಮುಂಭಾಗದ ಪ್ರಯಾಣಿಕರಿಗೆ 10.25 ಇಂಚಿನ ಟಚ್‌ಸ್ಕ್ರೀನ್ ಇರುತ್ತದೆ. ಈ ಎಸ್‍ಯುವಿಯಲ್ಲಿ ಪಾದಚಾರಿಗಳಿಗೆ ಎಮರ್ಜನ್ಸಿ ಬ್ರೇಕಿಂಗ್, ಫಾರ್ವರ್ಡ್ ಕೊಲಿಷನ್ ಅಲರ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಹಿಂಬದಿಯ ಅಡ್ಡ ಮಾರ್ಗ ಪತ್ತೆಯೊಂದಿಗೆ ಬ್ಲೈಂಡ್ ಸ್ಪಾಟ್ ಮಾನಿಟರಿಂಗ್‌ನಂತಹ ವೈಶಿಷ್ಟ್ಯಗಳನ್ನು ನೀಡುವ ADAS (ಸುಧಾರಿತ ಡ್ರೈವಿಂಗ್ ಅಸಿಸ್ಟೆಂಟ್ ಸಿಸ್ಟಮ್) ನೊಂದಿಗೆ ಬರುವುದನ್ನು ಮುಂದುವರಿಸುತ್ತದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಪರಿಷ್ಕೃತ 7-ಸ್ಲಾಟ್ ಗ್ರಿಲ್, LED DRL ಗಳೊಂದಿಗೆ ಸ್ಲಿಮ್ ಹೆಡ್‌ಲ್ಯಾಂಪ್‌ಗಳು, ಡಿ-ಪಿಲ್ಲರ್‌ನಲ್ಲಿ ಫ್ಲೋಟಿಂಗ್ ರೂಫ್ ಎಫೆಕ್ಟ್ ಮತ್ತು ನವೀಕರಿಸಿದ ಹಿಂಭಾಗದ ಪಿಲ್ಲರ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇದಲ್ಲದೆ, ಈ ಹೊಸ ಎಸ್‍ಯುವಿಯಲ್ಲಿ ಸಂಪೂರ್ಣ ಪ್ರೀಮಿಯಂ ಅನುಭವ ನೀಡಲು ಹೊಸ ಮಾದರಿಯಲ್ಲಿ ಟ್ರೆಂಡಿಯಾಗಿರುವಂತೆ ಪನೋರಮಿಕ್ ಸನ್‌ರೂಫ್, ಲೆದರ್ ಅಪ್ಹೋಲ್ಸ್ಟರಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಹೆಡ್-ಅಪ್ ಡಿಸ್ಪ್ಲೇ ಮತ್ತು ರನ್ನಿಂಗ್ ಟೈಲ್‌ಗೇಟ್ ಅನ್ನು ನೀಡಲಾಗಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇದರ ಇಂಟಿರಿಯರ್ ಕೂಡ ಹೆಚ್ಚು ಆಕರ್ಷಕವಾಗಿದ್ದು, ಕಂಫರ್ಟ್ ಅನ್ನು ಖಚಿತಪಡಿಸಲು ಆರಾಮದಾಯಕ ಸೀಟುಗಳನ್ನು ನೀಡಿದೆ. ಹೆಚ್ಚಾಗಿ ಬ್ರೌನ್, ಬ್ಲೂ ಮತ್ತು ಬ್ಲಾಕ್ ಬಣ್ಣಗಳನ್ನು ಒಳಭಾಗದಲ್ಲಿ ಕಾಣಬಹುದು. ಇವೆಲ್ಲವೂ ಒಳಾಂಗಣವನ್ನು ಹೆಚ್ಚು ಆಕರ್ಷಕವಾಗಿಸಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಈ ಹೊಸ ಎಸ್‍ಯುವಿ ಪನೋರಮಿಕ್ ಸನ್‌ರೂಫ್, ಲೆದರ್ ಅಪ್ಹೋಲ್ಸ್ಟರಿ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಹೆಡ್-ಅಪ್ ಡಿಸ್ ಪ್ಲೇ ಮತ್ತು ಚಾಲಿತ ಟೈಲ್‌ಗೇಟ್ ಅನ್ನು ಸಹ ಪಡೆದಿದೆ. ಇನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಹೊಸ ಜೀಪ್ ಗ್ರಾಂಡ್ ಚೆರೋಕೀ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರ ಪಡೆಯಲಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇನ್ನು ಈ ಎಸ್‍ಯುವಿಯ ಎಂಜಿನ್‌ನ ಪವರ್ ಔಟ್‌ಪುಟ್‌ಗಳು ಇನ್ನೂ ಬಹಿರಂಗಗೊಳ್ಳಬೇಕಿದೆ. 2022 ರ ಜೀಪ್ ಗ್ರ್ಯಾಂಡ್ ಚೆರೋಕೀ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಉತ್ತಮ ವಿನ್ಯಾಸ ಮತ್ತು ಇತ್ತೀಚಿನ ವೈಶಿಷ್ಟ್ಯಗಳನ್ನು ಪಡೆದಿದೆ. ಆದ್ದರಿಂದ, ಇದು ಸುಧಾರಿತ ಡ್ರೈವರ್ ಅಸಿಸ್ಟ್‌ನೊಂದಿಗೆ ಬರುತ್ತದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇನ್ನು ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಫಾರ್ಚೂನರ್ ಎಸ್‍ಯುವಿಗೆ ಪೈಪೋಟಿ ನೀಡಲು ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್‍ಯುವಿಯನ್ನು ಕೆಲವು ತಿಂಗಳ ಹಿಂದೆ ಬಿಡುಗಡೆಗೊಳಿತು. ಈ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ ಮತ್ತು ಕಂಪಾಸ್ ಆಧಾರಿತವಾದ ಫ್ಲಾಟ್ ಫಾರ್ಮ್ ಅನ್ನು ಹಂಚಿಕೊಳ್ಳುತ್ತದೆ. ಬಿ

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಬಿಡುಗಡೆಯಾದ ಕೆಲವೇ ದಿನಗಳಲ್ಲಿ, ಮೆರಿಡಿಯನ್ ತನ್ನ ಪ್ರತಿಸ್ಪರ್ಧಿಗಳಿಗೆ ತೀವ್ರ ಸ್ಪರ್ಧೆಯನ್ನು ನೀಡುತ್ತಿದೆ. ಪ್ರಸ್ತುತ ದೇಶದಲ್ಲಿ ಜಪ್[ ಕಂಪನಿಯು ಕಂಪಾಸ್ ಮತ್ತು ಮೆರಿಡಿಯನ್ ಮಾದರಿಗಳನ್ನು ಮಾರಾಟ ಮಾಡುತ್ತಿದೆ. ಈ ಹೊಸ ಜೀಪ್ ಮೆರಿಡಿಯನ್ ಜನಪ್ರಿಯ ಕಂಪಾಸ್ ಎಸ್‍ಯುವಿಯನ್ನು ಆಧರಿಸಿದೆ. ಜೀಪ್ ಮೆರಿಡಿಯನ್ ಮಾದರಿ ದಕ್ಷಿಣ ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಜೀಪ್ ಕಮಾಂಡರ್‌ನೊಂದಿಗೆ ಹಲವಾರು ಸಾಮ್ಯತೆಯನ್ನು ಹೊಂದಿದೆ.

ಭಾರತದಲ್ಲಿ ಹೊಸ ಜೀಪ್ ಗ್ರ್ಯಾಂಡ್ ಚೆರೋಕೀ ಎಸ್‍ಯುವಿ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಇನ್ನು ಜೀಪ್ ಮೆರಿಡಿಯನ್‌ ಪ್ರೀಮಿಯಂ ಎಸ್‍ಯುವಿಯ ಮುಂಭಾಗವನ್ನು ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಮುಂಭಾಗದ ಫಾಸಿಕ ವಿಶಿಷ್ಟವಾದ ಕ್ರೋಮ್ ಸ್ಲೇಟೆಡ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ. ಇದರೊಂದಿಗೆ ಮಸ್ಕಲರ್ ಬಾನೆಟ್ ರಚನೆ, ಅಗಲವನ್ನು ಒಳಗೊಂಡ ದಪ್ಪ ಅಡ್ಡ ರೇಖೆಯೊಂದಿಗೆ ಸ್ಪೋರ್ಟಿ ಬಂಪರ್, ಅಗಲವಾದ ಸೆಂಟ್ರಲ್ ಏರ್ ಟೆಕ್ ಮತ್ತು ಬಾನೆಟ್‌ನ ಅಂಚಿನಲ್ಲಿ ಜೀಪ್ ಬ್ಯಾಡ್ಜ್ ಅನ್ನು ಹೊಂದಿದೆ.

Most Read Articles

Kannada
Read more on ಜೀಪ್ jeep
English summary
New jeep grand cherokee suv production begins bookings open in india details
Story first published: Tuesday, November 8, 2022, 11:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X