ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಜೀಪ್ ಮೆರಿಡಿಯನ್ ಜನಪ್ರಿಯ ಕಂಪಾಸ್ ಎಸ್‍ಯುವಿಯನ್ನು ಆಧರಿಸಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಜೀಪ್ ಮೆರಿಡಿಯನ್ ಮೂರು-ಸಾಲು ಎಸ್‍ಯುವಿಯ ಅಧಿಕೃತ ವಿವರಗಳನ್ನು ಮಾರ್ಚ್ 29, 2022 ರಂದು ವಿಶ್ವ ಪ್ರೀಮಿಯರ್‌ನಲ್ಲಿ ಬಹಿರಂಗಪಡಿಸಲಾಗುತ್ತದೆ. ಈ ಹೊಸ ಮೆರಿಡಿಯನ್ ಅನ್ನು ಈ ವರ್ಷದ ಮೇ ತಿಂಗಳಿನಲ್ಲಿ ಮಹಾರಾಷ್ಟ್ರದ ಪುಣೆ ಬಳಿಯ ಬ್ರಾಂಡ್‌ನ ರಂಜನ್‌ಗಾಂವ್ ಘಟಕದಲ್ಲಿ ಉತ್ಪಾದಿಸಲಿದೆ. ಇದೇ ಮೇ ತಿಂಗಳಿನಲ್ಲಿ ಈ ಹೊಸ ಎಸ್‍ಯುವಿಯು ಬಿಡುಗಡೆಯಾಗಲಿದೆ. ಜೀಪ್ ಮೆರಿಡಿಯನ್ ಮಾದರಿ ದಕ್ಷಿಣ ಅಮೆರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಜೀಪ್ ಕಮಾಂಡರ್‌ನೊಂದಿಗೆ ಹಲವಾರು ಸಾಮ್ಯತೆಯನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಹೊಸ ಜೀಪ್ ಮೆರಿಡಿಯನ್‌ ಪ್ರೀಮಿಯಂ ಎಸ್‍ಯುವಿಯ ಮುಂಭಾಗವನ್ನು ಕಂಪಾಸ್‌ಗೆ ಹೋಲಿಸಿದರೆ ವಿಭಿನ್ನ ಸ್ಟೈಲಿಂಗ್ ಅಂಶಗಳೊಂದಿಗೆ ಇದು ಹೆಚ್ಚು ಮಸ್ಕ್ಲರ್ ಲುಕ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಮುಂಭಾಗದ ಫಾಸಿಕ ವಿಶಿಷ್ಟವಾದ ಕ್ರೋಮ್ ಸ್ಲೇಟೆಡ್ ಫ್ರಂಟ್ ಗ್ರಿಲ್, ಮಸ್ಕಲರ್ ಬಾನೆಟ್ ರಚನೆ, ಅಗಲವನ್ನು ಒಳಗೊಂಡ ದಪ್ಪ ಅಡ್ಡ ರೇಖೆಯೊಂದಿಗೆ ಸ್ಪೋರ್ಟಿ ಬಂಪರ್, ಅಗಲವಾದ ಸೆಂಟ್ರಲ್ ಏರ್ ಟೆಕ್ ಮತ್ತು ಬಾನೆಟ್‌ನ ಅಂಚಿನಲ್ಲಿ ಜೀಪ್ ಬ್ಯಾಡ್ಜ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಮೆರಿಡಿಯನ್‌ ಎಸ್‍ಯುವಿಯ ಇತರ ಸ್ಟೈಲಿಂಗ್ ಮುಖ್ಯಾಂಶಗಳು ಸ್ಕ್ವೇರ್-ಆಫ್ ವ್ಹೀಲ್ ಆರ್ಚ್‌ಗಳು, ಬ್ಲ್ಯಾಕ್ ಬಾಡಿ ಕ್ಲಾಡಿಂಗ್ ಮತ್ತು ಮುಂಭಾಗದ ಡೋರುಗಳು, ದೊಡ್ಡ ವಿಂಡೋಗಲು ಮತ್ತು ಪ್ರಮುಖ ರೂಫ್ ರೈಲ್ ಗಳ ಮೇಲೆ ಮೆರಿಡಿಯನ್ ಎಂದು ಬರೆಯಲಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಇನ್ನು ಈ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿಯಲ್ಲಿ ಸುತ್ತುವ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಮತ್ತು ನೇರವಾದ ಟೈಲ್‌ಗೇಟ್ ಅನ್ನು ಹೊಂದಿದೆ. ಮೆರಿಡಿಯನ್ ಅನ್ನು ಸಿಂಗಲ್ ಮತ್ತು ಡ್ಯುಯಲ್ ಟೋನ್ ಬಣ್ಣಗಳಲ್ಲಿ ಲಭ್ಯವಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಇನ್ನು ಕಂಪಾಸ್‌ಗೆ ಹೋಲಿಸಿದರೆ, ಹೊಸ ಮೂರು-ಸಾಲಿನ ಮೆರಿಡಿಯನ್‌ ಎಸ್‍ಯುವಿಯು ಸುಮಾರು 364 ಎಂಎಂ ಉದ್ದ, 41 ಎಂಎಂ ಅಗಲ ಮತ್ತು 42 ಎಂಎಂ ಎತ್ತರವನ್ನು ಹೊಂದಿದೆ, ಈ ಹೊಸ ಮೆರಿಡಿಯನ್‌ ಎಸ್‌ಯುವಿಯು 2794 ಎಂಎಂ ವೀಲ್‌ಬೇಸ್‌ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಹೊಸ ಜೀಪ್ ಮೆರಿಡಿಯನ್‌ ಎಸ್‍ಯುವಿಯಲ್ಲಿ 2.0 ಲೀಟರ್ ನಾಲ್ಕು-ಸಿಲಿಂಡರ್ ಮಲ್ಟಿಜೆಟ್ II ಡೀಸೆಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಎಂಜಿನ್ ಅನ್ನು 6 ಸ್ಪೀಡ್ ಎಂಟಿ ಅಥವಾ ಎಟಿಯೊಂದಿಗೆ ಜೋಡಿಸಲಾಗುತ್ತದೆ. ಮೊದಲನೆಯದು 4×2 ಸಿಸ್ಟಮ್ ಮತ್ತು ಎರಡನೆಯದು 4×2 ಮತ್ತು 4×4 ಕಾನ್ಫಿಗರೇಶನ್‌ಗಳನ್ನು ಹೊಂದಿದೆ. ಇನ್ನು ಮೈಲ್ಡ್-ಹೈಬ್ರಿಡ್ ಸಿಸ್ಟಂ ಅನ್ನು ಕೂಡ ಒಳಗೊಂಡಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಜೀಪ್ ಮೆರಿಡಿಯನ್ ಮೂಲತಃ ಕಂಪಾಸ್‌ನ 7-ಸೀಟರುಗಳ ಆವೃತ್ತಿಯಾಗಿದೆ, ಇದು ಈಗಾಗಲೇ ಕಮಾಂಡರ್ ಆಗಿ ಆಯ್ದ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ. ಆದರೆ ಭಾರತದಲ್ಲಿ ಇಂಡಿಯಾ-ಸ್ಪೆಕ್ ಮಾದರಿಯನ್ನು 'ಮೆರಿಡಿಯನ್' ಹೆಸರನ್ನು ನೀಡಲಾಗಿದೆ, ಏಕೆಂದರೆ ಮಹೀಂದ್ರಾ ಕಂಪನಿಯು ಭಾರತದಲ್ಲಿ 'ಕಮಾಂಡರ್' ಟ್ರೇಡ್‌ಮಾರ್ಕ್ ಹೊಂದಿದೆ. ಇದರಿಂದ ಮೆರಿಡಿಯನ್‌ ಹೆಸರಿನಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಹೊಸ ಮೆರಿಡಿಯನ್ ಎಸ್‍ಯುವಿಯು ಸಂಪೂರ್ಣವಾಗಿ 'ಮೇಡ್-ಇನ್-ಇಂಡಿಯಾ' ಎಂದು ಕಂಪನಿ ಹೇಳಿಕೊಂಡಿದೆ. ಕಂಪನಿಯು ಮರೆಮಾಚುವ ಚಿತ್ರ ಮತ್ತು ಮುಂಬರುವ 3-ಸಾಲು ಜೀಪ್ ಮೆರಿಡಿಯನ್‌ನ ಟೀಸರ್ ವೀಡಿಯೊವನ್ನು ಸಹ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಹೊಸ ಮೆರಿಡಿಯನ್ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 5,000 ಕಿ.ಮೀ ಗೂ ಹೆಚ್ಚು ದೂರವನ್ನು ಕವರ್ ಮಾಡುವುದರ ಮೂಲಕ ತೀವ್ರವಾದ ಪರೀಕ್ಷೆಯ ಮೂಲಕ ಸಾಗಿದೆ ಎಂದು ಟೀಸರ್ ವೀಡಿಯೊ ಬಹಿರಂಗಪಡಿಸಿತು. ಈ ವಿಡಿಯೋ ಕಂಡುಬರುವ ಎಸ್‍ಯುವಿಯು ವಿವಿಧ ರಾಜ್ಯಗಳ ಐಕಾನ್‌ಗಳನ್ನು ಬಹಿರಂಗಪಡಿಸುವ ವಿಶೇಷ ಮರೆಮಾಚುವಿಕೆಯಲ್ಲಿ ಮುಚ್ಚಲ್ಪಟ್ಟಿತ್ತು. ಈ ಕೆಲವು ಐಕಾನ್‌ಗಳಲ್ಲಿ ದೆಹಲಿಯಿಂದ ಇಂಡಿಯಾ ಗೇಟ್, ರಾಜಸ್ಥಾನದ ಒಂಟೆ, ಮಧ್ಯಪ್ರದೇಶದ ಹುಲಿ, ಕರ್ನಾಟಕದ ಆನೆ ಮತ್ತು ಇತರವು ಸೇರಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಮೆರಿಡಿಯನ್ ಎಸ್‍ಯುವಿಯ ಒಳಭಾಗವು ಬ್ರೌನ್ ಥೀಮ್ ಅನ್ನು ಹೊಂದಿದ್ದು, 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಲ್-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್, ಸನ್‌ರೂಫ್, ವೆಂಟಿಲೇಟೆಡ್ ಸೀಟ್‌ಗಳು, ಲೆದರ್ ಅಪ್ಹೋಲ್ಸ್ಟರಿ, ಅಡ್ಜೆಸ್ಟ್ ಮಾಡಬಹುದಾದ ಹೆಡ್‌ರೆಸ್ಟ್‌ಗಳು, ಮೆಟಾಲಿಕ್ ಆಕ್ಸೆಂಟ್‌ಗಳೊಂದಿಗೆ ಲೇಯರ್ಡ್ ಡ್ಯಾಶ್‌ಬೋರ್ಡ್, ವೈ-ಆಕಾರದ ಅಲಾಯ್ ವ್ಹೀಲ್ ಗಳು ಮತ್ತು ಮುಂತಾದವುಗಳನ್ನು ಸಹ ಒಳಗೊಂಡಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಇನ್ನು ಈ ಜೀಪ್ ಮೆರಿಡಿಯನ್ ಎಸ್‍ಯುವಿಯ ಆಫ್-ರೋಡ್ ಸಾಮರ್ಥ್ಯದ ವಿಡಿಯೋವನ್ನು ಕಳೆದ ಬಾರಿ ಬಿಡುಗಡೆಗೊಳಿಸಿತ್ತು. ಈ ವಿಡಿಯೋದಲ್ಲಿ ಬೆಟ್ಟ ಹತ್ತುವಿಕೆ, ವಿಭಿನ್ನ ಭೂಪ್ರದೇಶಗಳನ್ನು ಸಾಗುವುದನ್ನು ಪ್ರದರ್ಶಿಸಿದ್ದಾರೆ. ವಿವಿಧ ಆಫ್-ರೋಡ್ ಸವಾಲುಗಳನ್ನು ನಿರ್ವಹಿಸುವುದನ್ನು ವಿಡಿಯೋದಲ್ಲಿ ಪ್ರದರ್ಶಿಸಲಾಗಿದೆ. ಈ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿಯು ವಿಡಿಯೋದಲ್ಲಿ ಮೊದಲು ಕಡಿದಾದ ಇಳಿಜಾರಿನಲ್ಲಿ ಸುಲಭವಾಗಿ ಇಳಿಯುತ್ತದೆ. ಈ ಎಸ್‍ಯುವಿಯು ಉತ್ತಮ ಆಫ್-ರೋಡ್ ಸಾಮರ್ಥ್ಯ ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಜೀಪ್ ಮೆರಿಡಿಯನ್ ಎಸ್‍ಯುವಿ

ಈ ಹೊಸ ಜೀಪ್ ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್‍ಯುವಿ ಭಾರತದಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಫಾರ್ಚೂನರ್, ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಮತ್ತು ಮಹೀಂದ್ರಾ ಅಲ್ತುರಾಸ್ ಜಿ4 ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, March 25, 2022, 10:22 [IST]
English summary
New jeep meridian 7 seater suv set to launch in may 2022 features details
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+