Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೇ 26 ರಿಂದ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ
ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆಯು ಹೆಚ್ಚಾಗುತ್ತಿದೆ. ಅಲ್ಲದೇ ದೇಶದಲ್ಲಿ ಇಂಧನ ಬೆಲೆಯು ಕೂಡ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮೊರೆ ಹೋಗುತ್ತಿದ್ದಾರೆ.

ಇದರಿಂದ ಬಹುತೇಕ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಪ್ರಾರಂಭಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಯು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ. ಇದರ ನಡುವೆ ಕಿಯಾ ಇಂಡಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಕಿಯಾ ಇಂಡಿಯಾವು ಈ ಹೊಸ ವರ್ಷದಲ್ಲಿ ಕೈಗೆಟುಕವ ದರಲ್ಲಿ ಕ್ಯಾರೆನ್ಸ್ ಮೂರು-ಸಾಲಿನ ಯುವಿ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿ ಹೊಸ ಸಂಚಲವನ್ನು ಮೂಡಿಸಿತ್ತು.

ಕಿಯಾ ಇಂಡಿಯಾ ಕಂಪನಿಯು ಇವಿ6 ಹೆಸರನ್ನು ಈಗ ಭಾರತದಲ್ಲಿ ಟ್ರೇಡ್‌ಮಾರ್ಕ್ ಮಾಡಲಾಗಿತ್ತು. ಇದೀಗ ದಕ್ಷಿಣ ಕೊರಿಯಾದ ಕಾರು ತಯಾರಕರಾದ ಕಿಯಾ ಎಲೆಕ್ಟ್ರಿಕ್ ಫ್ಲ್ಯಾಗ್‌ಶಿಪ್ ಇವಿ6 ಕಾರನ್ನು ಬಿಡುಗಡೆಗೊಳಿಸುವುದಾಗಿ ಖಚಿತಪಡಿಸಿದೆ. ಕಿಯಾ ಕಂಪನಿಯು ಈ ಇವಿ6 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಮೇ 26 ರಂದು ಪ್ರಾರಂಭಿಸಲಿದೆ ಎಂದು ಘೋಷಿಸಿದೆ.

ಈ ಕಾರಿನ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಹೇಳಿದೆ. ಕಿಯಾ ಇವಿ6 ಎಲೆಕ್ಟ್ರಿಕ್ ಕಾರನ್ನು ಭಾರತಕ್ಕೆ ಸೀಮಿತ ಸಂಖ್ಯೆಯಲ್ಲಿ ತರಬಹುದು. ಈ ಕಿಯಾ ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ಸಂಪೂರ್ಣವಾಗಿ ಸಿಬಿಯು ಆಗಿ ಭಾರತಕ್ಕೆ ಬರಲಿದೆ

2021ರ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು ಯುರೋಪ್ ನಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಈ ಕಿಯಾ ಇವಿ6 E-GMP ಸ್ಕೇಟ್‌ಬೋರ್ಡ್ ಆರ್ಕಿಟೆಕ್ಚರ್ ಅನ್ನು ಆಧರಿಸಿದ ಮೊದಲ BEV ಆಗಿದೆ ಮತ್ತು ಇದು ಹ್ಯುಂಡೈ Ioniq 5 ನೊಂದಿಗೆ ಸಾಕಷ್ಟು ಸಾಮಾನ್ಯವಾಗಿದೆ. ಫೇಸ್‌ಲಿಫ್ಟೆಡ್ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಈ ವರ್ಷದ ನಂತರ ಬಿಡುಗಡೆಯಾಗಲಿದೆ ಮತ್ತು ಅದರ ಸೋದರಸಂಬಂಧಿ, ಕಿಯಾ ನಿರೋ ಇವಿ ಕೂಡ 2023ಕ್ಕೆ ಬಿಡುಗಡೆಯಾಗಬಹುದು.

ಕಿಯಾ ಇವಿ6 ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಟೆಸ್ಲಾ ಮಾಡೆಲ್ ವೈ, ಫೋರ್ಡ್ ಮಸ್ಟಾಂಗ್ ಮ್ಯಾಕ್-ಇ ಮತ್ತು ವಿಡಬ್ಲ್ಯೂ ಐಡಿ ಕಾರುಗಳಿಗೆ ಪೈಪೋಟಿ ನೀಡುತ್ತಿದೆ. ಕಿಯಾ ಇವಿ6 ಎಲೆಕ್ಟ್ರಿಕ್ ಕಾರು 4 ಟ್ರಿಮ್ ಗಳಲ್ಲಿ ಬಿಡುಗಡೆಗೊಳಿಸಬಹುದು.

ಫೈಲಿಂಗ್‌ಗಳ ಪ್ರಕಾರ, ಕಿಯಾ ಕಂಪನಿಯು ಟ್ರೇಡ್‌ಮಾರ್ಕ್‌ಗಳಾದ ಇವಿ6, ಇವಿ6 ಏರ್, ಇವಿ6 ವಾಟರ್, ಇವಿ6 ಅರ್ಥ್ ಮತ್ತು ಇವಿ6 ಲೈಟ್‌ಗಾಗಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮುಂಬರುವ ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ಕೇವಲ ಮೂರು ಟ್ರಿಮ್ ಗಳಲ್ಲಿ ಲಭ್ಯವಿದೆ,

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿರುವ ಕಿಯಾ ಇವಿ6 ಕ್ರಾಸ್‌ಒವರ್ ಲೈಟ್, ವಿಂಡ್ ಮತ್ತು ಜಿಟಿ-ಲೈನ್ ಮೂರು ಟ್ರಿಮ್ ಆಗಿದೆ. ಈ ಎಂಟ್ರಿ ಲೆವೆಲ್ ಮಾದರಿ 58 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ ಮತ್ತು 167 ಬಿಹೆಚ್‍ಪಿ ಪವರ್ ಮತ್ತು 349 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲು ಸಹಾಯ ಮಾಡುವ ಎಲೆಕ್ಟ್ರಿಕ್ ಮೋಟರ್. ಹಿಂಭಾಗದಲ್ಲಿದೆ.

ಈ ಕಾರು ಕೇವಲ 8 ಸೆಕೆಂಡುಗಳಲ್ಲಿ ಶೂನ್ಯದಿಂದ 96 ಕಿಮೀ ವೇಗವನ್ನು ಪಡೆಯುತ್ತದೆ ಮತ್ತು 185 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ ಕಿಯಾ ಕಾರು ಕ್ಲೈಮ್ ಮಾಡಲಾದ ಡ್ರೈವಿಂಗ್ ರೇಂಜ್ 373 ಕಿ,ಮೀ ಆಗಿದೆ ಮತ್ತು ವೈಶಿಷ್ಟ್ಯಗಳ ಪಟ್ಟಿಯು ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಂಪರ್ಕದೊಂದಿಗೆ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು 19-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

ಇದರೊಂದಿಗೆ ಹೊಂದಾಣಿಕೆ ಮಾಡಬಹುದಾದ ಡ್ರೈವಿಂಗ್ ಸೀಟ್, ವೈರ್‌ಲೆಸ್ ಅನ್ನು ಹೊಂದಿದೆ. ಚಾರ್ಜಿಂಗ್ ಸೌಲಭ್ಯ, ಲೆದರ್ ಸುತ್ತುವ ಸ್ಟೀಯರಿಂಗ್ ವ್ಹೀಲ್, ಹೈ ಬೀಮ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿರಲಿವೆ. ಕಿಯಾ ಇವಿ6 ಎಲೆಕ್ಟ್ರಿಕ್ ಕಾರಿನಲ್ಲಿ ದೊಡ್ಡದಾದ 77.4 kWh ಬ್ಯಾಟರಿಯನ್ನು ಹೊಂದಿದೆ. ಇದು 7.2 ಸೆಕೆಂಡುಗಳಲ್ಲಿ 0-96 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಮಾದರಿಯು 185 ಕಿ,ಮೀ ಟಾಪ್ ಸ್ಫೀಡ್ ಹೊಂದಿದೆ.

ಹೆಚ್ಚು ಪವರ್ ಫುಲ್ ಎಲೆಕ್ಟ್ರಿಕ್ ಮೋಟಾರು ಸಹಾಯ ಮಾಡುತ್ತದೆ.ಇನ್ನು ಈ ಕಾರಿನಲ್ಲಿ ಟ್ವಿನ್ ಮೋಟಾರ್ 320 ಬಿಹೆಚ್‍ಪಿ ಪವರ್ ಮತ್ತು 604 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಮಾದರಿಯು 188 ಕಿ,ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಇದು ಕೇವಲ 5.1 ಸೆಕೆಂಡುಗಳಲ್ಲಿ ಶೂನ್ಯದಿಂದ 96 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. RWD ಮತ್ತು ಎಡಬ್ಲ್ಯುಡಿ ಸಿಸ್ಟಂ ಯುಎಸ್‌ನಲ್ಲಿ ಕ್ರಮವಾಗಿ 500 ಕಿ.ಮೀ ಮತ್ತು 441 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಕಿಯಾ ಇವಿ6 ಬಿಡುಗಡೆಯು ಭಾರತದಲ್ಲಿ ಎಲೆಕ್ಟ್ರಿಕ್ ಭವಿಷ್ಯವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಅದರ ಜೊತೆಗೆ, ಜಾಗ್ವಾರ್, ಮರ್ಸಿಡಿಸ್-ಬೆಂಝ್, ಬಿಎಂಡಬ್ಲ್ಯು, ಆಡಿ, ಇತ್ಯಾದಿ ಪ್ರೀಮಿಯಂ ಕಾರ್ ಬ್ರಾಂಡ್‌ಗಳು ನೀಡುವ ಪ್ರಸ್ತುತ ಇವಿಗಳಿಗೆ ಹೋಲಿಸಿದರೆ ಕಿಯಾ ಇವಿ6 ಪ್ರೀಮಿಯಂ ಗ್ರಾಹಕರಿಗೆ ಹೆಚ್ಚು ಕೈಗೆಟುಕುವ ಬೆಲೆಯಲ್ಲಿ ಲಭಿಸಬಹುದು.

ಭಾರತದಲ್ಲಿ ಬಿಡುಗಡೆಯಾದಾಗ, ಸಿಬಿಯು ಮೂಲಕ ತರಲಾದ ಕಿಯಾ ಇವಿ6 ಜಿಟಿ ಲೈನ್ ಬೆಲೆಯು ರೂ.50 ಲಕ್ಷಕ್ಕಿಂತ ಹೆಚ್ಚಿನ ಬೆಲೆಯನ್ನು ಹೊಂದಿರಬಹುದು. ಆದರೆ ಈ ಮಾದರಿಗಳು ಎಲ್ಲಾ ಆಯ್ಜೆಗಳೊಂದಿಗೆ ಸ್ಟ್ಯಾಂಡರ್ಡ್ ಆಗಿ ಪ್ಯಾಕ್ ಮಾಡಲ್ಪಡಿರುತ್ತದೆ,