Just In
- 7 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 7 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 8 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 9 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಳುತ್ತಿದೆ. ಅಲ್ಲದೇ ಇಂಧನ ಬೆಲೆಯು ಕೂಡ ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮೊರೆ ಹೋಗುತ್ತಿದ್ದಾರೆ. ಇದರಿಂದ ಬಹುತೇಕ ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿದ್ದಾರೆ.

ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ಜನಪ್ರಿಯ ವಾಹನ ತಯಾರಕ ಕಂಪನಿಯು ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ. ಇದರ ನಡುವೆ ಕಿಯಾ ಇಂಡಿಯಾ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ಯೋಜಿಸುತ್ತಿದೆ, ಕಿಯಾ ಇಂಡಿಯಾವು ಈ ಹೊಸ ವರ್ಷದಲ್ಲಿ ಕೈಗೆಟುಕವ ದರಲ್ಲಿ ಕ್ಯಾರೆನ್ಸ್ ಮೂರು-ಸಾಲಿನ ಯುವಿ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿ ಹೊಸ ಸಂಚಲವನ್ನು ಮೂಡಿಸಿತ್ತು. ಇದೀಗ ದಕ್ಷಿಣ ಕೊರಿಯಾದ ಆಟೋ ಮೇಜರ್ ಮುಂಬರುವ ತಿಂಗಳುಗಳಲ್ಲಿ ಫೇಸ್‌ಲಿಫ್ಟೆಡ್ ಸೆಲ್ಟೋಸ್ ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಮತ್ತು ಇವಿ6 ಎಲೆಕ್ಟ್ರಿಕ್ ಕ್ರಾಸ್ಒವರ್ ಅನ್ನು ಈ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ.

ಕಿಯಾ ಇಂಡಿಯಾ ಕಂಪನಿಯು ಇವಿ6 ಹೆಸರನ್ನು ಈಗ ಭಾರತದಲ್ಲಿ ಟ್ರೇಡ್‌ಮಾರ್ಕ್ ಮಾಡಲಾಗಿದೆ, ಈ ಇವಿ6 ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ವರದಿಗಳ ಪ್ರಕಾರ, ಈ ಹೊಸ ಎಲೆಕ್ಟ್ರಿಕ್ ಕಾರು ಈ ವರ್ಷದ ಮೇ ತಿಂಗಳಿನಲ್ಲಿ ಬಿಡುಗಡೆಯಾಗಬಹುದು.

2021ರ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು ಯುರೋಪ್ ನಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಈ ಇವಿ6 E-GMP ಸ್ಕೇಟ್‌ಬೋರ್ಡ್ ಆರ್ಕಿಟೆಕ್ಚರ್ ಅನ್ನು ಆಧರಿಸಿದ ಮೊದಲ BEV ಆಗಿದೆ ಮತ್ತು ಇದು ಹ್ಯುಂಡೈ Ioniq 5 ನೊಂದಿಗೆ ಸಾಕಷ್ಟು ಸಾಮಾನ್ಯವಾಗಿದೆ.

ಫೇಸ್‌ಲಿಫ್ಟೆಡ್ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಈ ವರ್ಷದ ನಂತರ ಬಿಡುಗಡೆಯಾಗಲಿದೆ ಮತ್ತು ಅದರ ಸೋದರಸಂಬಂಧಿ, ಕಿಯಾ ನಿರೋ ಇವಿ ಕೂಡ 2023ಕ್ಕೆ ಬಿಡುಗಡೆಯಾಗಬಹುದು. ಕಿಯಾ ಇವಿ6 ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಟೆಸ್ಲಾ ಮಾಡೆಲ್ ವೈ, ಫೋರ್ಡ್ ಮಸ್ಟಾಂಗ್ ಮ್ಯಾಕ್-ಇ ಮತ್ತು ವಿಡಬ್ಲ್ಯೂ ಐಡಿ ಕಾರುಗಳಿಗೆ ಪೈಪೋಟಿ ನೀಡುತ್ತಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 4 ಮತ್ತು ಇದು ಸಿಬಿಯು (ಸಂಪೂರ್ಣವಾಗಿ ಬಿಲ್ಟ್-ಅಪ್) ಮಾರ್ಗದ ಮೂಲಕ ಭಾರತಕ್ಕೆ ತರಲಾಗುವುದು. ಕಿಯಾ ಇವಿ6 ಜಾಗತಿಕವಾಗಿ ತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಮತ್ತು ಭಾರತದಲ್ಲಿ ಖರೀದಿದಾರರು ಹೇಗೆ ಪ್ರತಿಕ್ರಿಯೆಸಬಹುದು ಕಾದು ನೋಡಬೇಕಿದೆ.

ಎಂಟ್ರಿ ಲೆವೆಲ್ ಮಾದರಿ 58 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ ಮತ್ತು 167 ಬಿಹೆಚ್‍ಪಿ ಪವರ್ ಮತ್ತು 349 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲು ಸಹಾಯ ಮಾಡುವ ಹಿಂಭಾಗದಲ್ಲಿ ಅಳವಡಿಸಲಾಗಿರುವ ಎಲೆಕ್ಟ್ರಿಕ್ ಮೋಟರ್. ಇದು ಕೇವಲ ಎಂಟು ಸೆಕೆಂಡುಗಳಲ್ಲಿ ಶೂನ್ಯದಿಂದ 96 ಕಿಮೀ ವೇಗವನ್ನು ಪಡೆಯುತ್ತದೆ ಮತ್ತು 185 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಇನ್ನು ಈ ಕಿಯಾ ಕಾರು ಕ್ಲೈಮ್ ಮಾಡಲಾದ ಡ್ರೈವಿಂಗ್ ರೇಂಜ್ 373 ಕಿಮೀಗಳಷ್ಟಿದೆ ಮತ್ತು ವೈಶಿಷ್ಟ್ಯಗಳ ಪಟ್ಟಿಯು ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಂಪರ್ಕದೊಂದಿಗೆ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು 19-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿರಲಿದೆ,

ಇದರೊಂದಿಗೆ ಹೊಂದಾಣಿಕೆ ಮಾಡಬಹುದಾದ ಡ್ರೈವಿಂಗ್ ಸೀಟ್, ವೈರ್‌ಲೆಸ್ ಅನ್ನು ಹೊಂದಿದೆ. ಚಾರ್ಜಿಂಗ್ ಸೌಲಭ್ಯ, ಲೆದರ್ ಸುತ್ತುವ ಸ್ಟೀಯರಿಂಗ್ ವ್ಹೀಲ್, ಹೈ ಬೀಮ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿರಲಿವೆ.

ಕಿಯಾ ಇವಿ6 ಎಲೆಕ್ಟ್ರಿಕ್ ಕಾರಿನಲ್ಲಿ ದೊಡ್ಡದಾದ 77.4 kWh ಬ್ಯಾಟರಿಯನ್ನು ಹೊಂದಿದೆ. ಇದು 7.2 ಸೆಕೆಂಡುಗಳಲ್ಲಿ 0-96 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಮಾದರಿಯು 185 ಕಿ,ಮೀ ಟಾಪ್ ಸ್ಫೀಡ್ ಅನ್ನು ಹೊಂದಿದೆ. ಹೆಚ್ಚು ಶಕ್ತಿಶಾಲಿ ಎಲೆಕ್ಟ್ರಿಕ್ ಮೋಟಾರು ಸಹಾಯ ಮಾಡುತ್ತದೆ.ಇನ್ನು ಈ ಕಾರಿನಲ್ಲಿ ಟ್ವಿನ್ ಮೋಟಾರ್ 320 ಬಿಹೆಚ್‍ಪಿ ಪವರ್ ಮತ್ತು 604 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಮಾದರಿಯು 188 ಕಿ,ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಇದು ಕೇವಲ 5.1 ಸೆಕೆಂಡುಗಳಲ್ಲಿ ಶೂನ್ಯದಿಂದ 96 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. RWD ಮತ್ತು AWD ಯು ಯುಎಸ್‌ನಲ್ಲಿ ಕ್ರಮವಾಗಿ 500 ಕಿ.ಮೀ ಮತ್ತು 441 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

ಇನ್ನು ಕಿಯಾ ಇಂಡಿಯಾ ಕಂಪನಿಯು ಮಾರ್ಚ್ ತಿಂಗಳಿನಲ್ಲಿ 22,622 ಯುನಿಟ್‌ಗಳನ್ನು ಮಾರಾಟ ಮಾಡುವ ಮೂಲಕ ಶೇ18.44 ರಷ್ಟು ವಾರ್ಷಿಕ ಬೆಳವಣಿಗೆಯನ್ನು ದಾಖಲಿಸಿ ತನ್ನ ಅತ್ಯುತ್ತಮ ಮಾಸಿಕ ಮಾರಾಟವನ್ನು ಸಾಧಿಸಿದೆ. ಕಂಪನಿಯ ಪ್ರಮುಖ ಉತ್ಪನ್ನಗಳಾದ ಸೆಲ್ಟೋಸ್ 8,415 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಕಂಪನಿಯ ಅತ್ಯುತ್ತಮ ಮಾರಾಟವಾದ ಕಾರಾಗಿ ಮುಂದುವರೆದರೆ, ಇನ್ನು ಹೊಸದಾಗಿ ಬಿಡುಗಡೆಯಾದ ಕಾರವಾನ್ 7,008 ಯುನಿಟ್‌ಗಳ ಮಾರಾಟವನ್ನು ದಾಖಲಿಸುವ ಮೂಲಕ ವೇಗವನ್ನು ಪಡೆದುಕೊಂಡಿದೆ.

ಕಿಯಾ ಸಾನೆಟ್ (Kia Sonnet) ಮತ್ತು ಕಾರ್ನಿವಲ್ (Carnival) ಸಹ ಉತ್ತಮ ಮಾರಾಟವನ್ನು ನೋಂದಾಯಿಸಿವೆ, ಮಾರ್ಚ್ 2022ರಲ್ಲಿ ಈ ಎರಡು ಮಾದರಿಗಳು ಕ್ರಮವಾಗಿ 6,871 ಮತ್ತು 328 ಘಟಕಗಳು ಮಾರಾಟಗೊಂಡಿವೆ. ಮಾರ್ಚ್ 2022 ರಲ್ಲಿ ದೇಶೀಯ ವೈಯಕ್ತಿಕ ವಾಹನ (PV) ಮಾರುಕಟ್ಟೆಯಲ್ಲಿ 7% ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿರುವ ಕಿಯಾ ಇಂಡಿಯಾ ದೇಶದಲ್ಲಿ ಹೆಚ್ಚು ಮಾರಾಟವಾಗುವ ಐದು ಕಾರು ಬ್ರಾಂಡ್‌ಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. ಅಲ್ಲದೇ Kia ಇಂಡಿಯಾ ತನ್ನ ಅತ್ಯಧಿಕ ತ್ರೈಮಾಸಿಕ ಮಾರಾಟವನ್ನು ದಾಖಲಿಸಿದೆ, ಕಳೆದ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್ 2022) 60,062 ಯುನಿಟ್‌ಗಳ ದೇಶೀಯ ರವಾನೆಗಳೊಂದಿಗೆ, ವರ್ಷದಿಂದ ವರ್ಷಕ್ಕೆ ಶೇ9.5 ಬೆಳವಣಿಗ ಸಾಧಿಸಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಕಿಯಾ ಇಂಡಿಯಾ ದೇಶೀಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಪ್ರಮುಖ ಕಾರು ತಯಾರಕರಲ್ಲಿ ಒಂದಾಗಿದೆ. ಹೊಸ ಕಿಯಾ ಎಲೆಕ್ಟ್ರಿಕ್ ಕಾರು ಬಿಡುಗಡೆಯಾದ ಬಳಿಕ ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆ ನೀಡಬಹುದು.