ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಕಿಯಾ ಇಂಡಿಯಾ(Kia India) ಕಂಪನಿಯು ತನ್ನ ಜನಪ್ರಿಯ ಸೆಲ್ಟೊಸ್ ಎಸ್‌ಯುವಿ ಮಾದರಿಯ 2022ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಈ ಬಾರಿ ಹಲವಾರು ಹೊಸ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

2022ರ ಸೆಲ್ಟೊಸ್ ಮಾದರಿಯ ಬೆಸ್ ವೆರಿಯೆಂಟ್‌ನಲ್ಲೂ ಈ ಬಾರಿ ಹಲವಾರು ಹೊಸ ಫೀಚರ್ಸ್ ನೀಡಿರುವ ಕಿಯಾ ಕಂಪನಿಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಮಾದರಿಯು ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.45 ಲಕ್ಷ ಬೆಲೆ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಸೆಲ್ಟೊಸ್ ಮಾದರಿಯ ಮೂರು ಎಂಜಿನ್ ಆಯ್ಕೆಯೊಂದಿಗೆ ಒಟ್ಟು 17 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯಲ್ಲೂ ಕಂಪನಿಯು ಇದೀಗ ನಾಲ್ಕು ಏರ್‌ಬ್ಯಾಗ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಬ್ರೇಕ್ ಅಸಿಸ್ಟ್, ಹಿಲ್ ಅಸಿಸ್ಟ್ ಮತ್ತು ವೆಹಿಕಲ್ ಸ್ಟ್ಯಾಬಿಲಿಟಿ ಕಂಟ್ರೊಲ್ ಸೌಲಭ್ಯಗಳಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

2022ರ ಸೆಲ್ಟೊಸ್ ಮಾದರಿಯಲ್ಲಿ ಇದೀಗ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಹೊಸ ಕಾರಿನ ಎಲ್ಲಾ ಆಟೋಮ್ಯಾಟಿಕ್ ಮಾದರಿಗಳಲ್ಲೂ ಕಂಪನಿಯು ಪ್ಯಾಡಲ್ ಶಿಫ್ಟರ್ ಜೋಡಣೆ ಮಾಡಿದ್ದು, ಇದರ ಜೊತೆ ಹೆಚ್‌ಟಿಎಕ್ಸ್ ಡೀಸೆಲ್ ಮಾದರಿಯಲ್ಲೂ ಈ ಬಾರಿ ಆಟೋಮ್ಯಾಟಿಕ್ ಪರಿಚಯಿಸಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಹಾಗೆಯೇ ಹೊಸ ಕಾರಿನ ಬೆಸ್ ವೆರಿಯೆಂಟ್‌ನಲ್ಲಿ ಕಂಪನಿಯು ಹೊಸದಾಗಿ ವಿನ್ಯಾಸಗೊಳಿಸಲಾದ ಕಿಯಾ ಲೊಗೊ ಹೊಂದಿರುವ ವ್ಹೀಲ್ ಕವರ್, ಎಕ್ಸ್ ಲೈನ್ ಮಾದರಿಗಳಲ್ಲಿ ಕಂಪನಿಯು ಕಿಯಾ ಲೊಗೊ ಹೊಂದಿರುವ ಹೆಡ್‌ರೆಸ್ಟ್ ಸೇರಿದಂತೆ ಟಾಪ್ ಲೈನ್‌ಗಳಲ್ಲಿ ಆರು ಏರ್‌ಬ್ಯಾಗ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಟಾಪ್ ಎಂಡ್ ಮಾದರಿಯಲ್ಲಿರುವ ಹೆಚ್‌ಟಿಎಕ್ಸ್ ಪ್ಲಸ್, ಜಿಟಿಎಕ್ಸ್‌(ಒ), ಜಿಟಿಎಕ್ಸ್ ಪ್ಲಸ್ ಮತ್ತು ಎಕ್ಸ್-ಲೈನ್ ಮಾದರಿಗಳಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳಿದ್ದು, ಹೆಚ್‌ಟಿಎಕ್ಸ್ ಪ್ಲಸ್ ಡಿಸೇಲ್ ಮಾದರಿಗಳಲ್ಲಿ ಐಎಂಟಿ ಕ್ಲಚ್‌ಲೆಸ್ ಗೇರ್‌ಬಾಕ್ಸ್ ಆಯ್ಕೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಇದರ ಹೊರತಗಾಗಿ ಹೊಸ ಮಾದರಿಯಲ್ಲಿ ಈ ಹಿಂದಿನ ತಾಂತ್ರಿಕ ಸೌಲಭ್ಯಗಳನ್ನೇ ಮುಂದುವರಿಸಲಾಗಿದ್ದು, ಹೊಸ ಮಾದರಿಯಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಫೀಚರ್ಸ್‌ಗಳು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಇನ್ನು ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ ಬಿಎಸ್-6 ನಿಯಮ ಅನುಸಾರ ಜಿಟಿ ಲೈನ್ ಕಾರುಗಳಲ್ಲಿ 1.4-ಲೀಟರ್ ಟಿ-ಜಿಡಿಐ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದರೆ ಸಾಮಾನ್ಯ ಮಾದರಿಯ ಟೆಕ್-ಲೈನ್ ಕಾರುಗಳು ಬಿಎಸ್-6 ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್ ನೀಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ ಟೈಗರ್ ನೋಸ್ ಗ್ರಿಲ್, ಕ್ರೌನ್ ಜವೆಲ್ ಎಲ್ಇಡಿ ಹೆಡ್‌ಲ್ಯಾಂಪ್, 3ಡಿ ಮಲ್ಟಿ ಲೆಯರ್ ಸೈಡ್ ಟರ್ನ್ ಇಂಡಿಕೇಟರ್, ಆಕರ್ಷಕ ಡಿಸೈನ್ ಪ್ರೇರಿತ ಏರ್‌ಡ್ಯಾಮ್ ಜೊತೆ ಬಂಪರ್ ಮತ್ತು ಡೈಮಂಡ್ ಶೇಪ್ ಫ್ರಂಟ್ ಗ್ರಿಲ್ ಜೋಡಣೆ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಹೈ ಎಂಡ್ ವೆರಿಯೆಂಟ್‌ಗಳಲ್ಲಿ ವಾಯ್ಸ್ ಕಮಾಂಡ್, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಆಟೋ ಎಸಿ ಸೌಲಭ್ಯ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ರಿಯರ್ ಎಸಿ ವೆಂಟ್ಸ್ ಮತ್ತು 37 ಫೀಚರ್ಸ್ ಒಳಗೊಂಡಿರುವ ಬ್ಲ್ಯೂ ಲಿಂಕ್ ಸೂಟ್ಸ್‌ ಹೊಂದಿರುವ ಯುವಿಒ ಕನೆಕ್ಟ್ ಟೆಕ್ನಾಲಜಿ ಸೌಲಭ್ಯದಿಂದಾಗಿ ಹೊಸ ಸೆಲ್ಟೊಸ್ ಕಾರಿಗೆ ಗರಿಷ್ಠ ಭದ್ರತೆ ದೊರೆತಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಈ ಮೂಲಕ ಅತ್ಯುತ್ತಮ ಸ್ಟೀಲ್ ಬಳಕೆಯೊಂದಿಗೆ ಸೆಲ್ಟೊಸ್ ಕಾರಿನಲ್ಲಿ ಪ್ರೀಮಿಯಂ ಮತ್ತು ಸುರಕ್ಷಾ ಫೀಚರ್ಸ್‌‌ಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 6 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಎಸ್‌ಸಿ, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್ ಅಸಿಸ್ಟ್ ಕಂಟ್ರೋಲ್, ಸೆಫ್ಟಿ ಅಲರ್ಟ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಪ್ರೇರಣೆಯ ಸೌಲಭ್ಯಗಳನ್ನು ಜೋಡಿಸಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಐಷಾರಾಮಿ ಕಾರುಗಳ ಮಾದರಿಯಲ್ಲಿ ರನ್ನಿಂಗ್ ಟೈಲ್ ಲೈಟ್, ಡ್ಯುಯಲ್ ಎಕ್ಸಾಸ್ಟ್, ಸಿಲ್ವರ್ ಸ್ಕಿಡ್ ಪ್ಲೇಟ್, ಬ್ಲ್ಯಾಕ್ ಥೀಮ್ ಸ್ಪಾಯ್ಲರ್ ಸೇರಿದಂತೆ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು,ರೂಫ್ ರೈಲ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಶಾರ್ಕ್ ಫಿನ್ ಅಂಟೆನಾ, ಸ್ಕೀಡ್ ಪ್ಲೇಟ್ ರಿಪ್ಲೆಕ್ಟರ್ ಸೌಲಭ್ಯ ಹೊಸ ಕಾರಿನ ಖದರ್ ಹೆಚ್ಚಿಸಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ 2022ರ ಕಿಯಾ ಸೆಲ್ಟೊಸ್ ಬಿಡುಗಡೆ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಫೋಕ್ಸ್‌ವ್ಯಾಗನ್ ಟೈಗುನ್ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಕ್ರೆಟಾ ಕಾರು ಮಾದರಿಯು ಹೊಸ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
New kia seltos lunched wit imt gearbox in diesel engine and more features
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X