ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಕಿಯಾ ಇಂಡಿಯಾ 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಸೊನೆಟ್(Sonet) ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಸೆಲ್ಟೋಸ್, ಕಾರ್ನಿವಲ್ ಬಳಿಕ ಕಿಯಾ ಮೋಟಾರ್ಸ್ ಮೂರನೇ ಮಾದರಿಯಾಗಿ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತ್ತು.

Recommended Video

Mahindra Scorpio Classic Launched | Price At Rs 11.99 Lakh | Scorpio Classic Vs Scorpio N In Kannada

ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಕಿಯಾ ಸೊನೆಟ್ ಎಕ್ಸ್ ಲೈನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ದಕ್ಷಿಣ ಕೊರಿಯಾದ ಆಟೋ ಮೇಜರ್ ಕಳೆದ ವರ್ಷ ಭಾರತದಲ್ಲಿ ಸೆಲ್ಟೋಸ್ ಎಕ್ಸ್ ಲೈನ್ ಅನ್ನು ಪರಿಚಯಿಸಿತು ಮತ್ತು ಇದೇ ಮಾದರಿಯಲ್ಲಿ, ಸೋನೆಟ್ ಎಕ್ಸ್ ಲೈನ್ ನಿಯಮಿತ ರೂಪಾಂತರದಿಂದ ತನ್ನನ್ನು ಪ್ರತ್ಯೇಕಿಸಲು ಹಲವಾರು ಬಾಹ್ಯ ಮತ್ತು ಆಂತರಿಕ ಪರಿಷ್ಕರಣೆಗಳನ್ನು ಪಡೆಯುತ್ತದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಕಿಯಾ ಸೊನೆಟ್ ಎಕ್ಸ್-ಲೈನ್ ಕಪ್ಪಾಗಿಸಿದ ಟೈಲ್‌ಗೇಟ್ ಅಲಂಕರಣ, ಎಕ್ಸ್-ಲೈನ್ ಬ್ಯಾಡ್ಜಿಂಗ್, ಕಪ್ಪು ಮತ್ತು ಕಾಂಟ್ರಾಸ್ಟ್ ಬಣ್ಣದಲ್ಲಿ ಬಂಪರ್ ಇನ್ಸರ್ಟ್‌ಗಳು ಇತ್ಯಾದಿಗಳೊಂದಿಗೆ ಬರಲಿದೆ. ಕಾಂಟ್ರಾಸ್ಟ್ ಆಕ್ಸೆಂಟ್‌ಗಳೊಂದಿಗೆ ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳೊಂದಿಗೆ ಬರುತ್ತದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಇದರೊಂದಿಗೆ ಪ್ರಾಯಶಃ ಗ್ರ್ಯಾಫೈಟ್ ಫಿನಿಶ್ ಲಭ್ಯವಿರಬಹುದು. ಹೊರಭಾಗದಂತೆಯೇ ಒಂದೇ ರೀತಿಯ ಥೀಮ್ ಅನ್ನು ಹೊಂದಿರುವ ಕ್ಯಾಬಿನ್ ಡ್ಯಾಶ್‌ಬೋರ್ಡ್ ಮತ್ತು ಸೆಂಟರ್ ಕನ್ಸೋಲ್‌ನಾದ್ಯಂತ ವಿಭಿನ್ನ ಹೊಲಿಗೆ ಮತ್ತು ಕಪ್ಪು ಅಲಂಕಾರದೊಂದಿಗೆ ಹೊಸ ಲೆದರ್ ಸೀಟ್‌ಗಳನ್ನು ಪಡೆಯಬಹುದು.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಹ್ಯುಂಡೈ ವೆನ್ಯೂ ಎನ್ ಲೈನ್‌ಗೆ ಬಿಡುಗಡೆ ದಿನಾಂಕವನ್ನು ಘೋಷಿಸಿದ ಹಿನ್ನೆಲೆಯಲ್ಲಿ ಇದು ಬರುತ್ತದೆ, ಇದು ದೃಶ್ಯ ಪರಿಷ್ಕರಣೆಗಳೊಂದಿಗೆ ಸೆಪ್ಟೆಂಬರ್ 6, 2022 ರಂದು ಮಾರಾಟವಾಗಲಿದೆ, ಬಹುಶಃ ಗಟ್ಟಿಯಾದ ಸಸ್ಪೆಂಕ್ಷನ್ ಮತ್ತು ಸ್ಪೋರ್ಟಿಯರ್ ಎಕ್ಸಾಸ್ಟ್ ನೋಟ್. ಮುಂಬರುವ ಕಿಯಾ ಸೊನೆಟ್ ಎಕ್ಸ್ ಲೈನ್ ಸ್ಟ್ಯಾಂಡರ್ಡ್ ಎಸ್‍ಯುವಿಯ ಟಾಪ್-ಎಂಡ್ ರೂಪಾಂತರವನ್ನು ಆಧರಿಸಿರುತ್ತದೆ ಮತ್ತು ಪ್ಯಾಕೇಜ್‌ನ ಭಾಗವಾಗಿ ಯಾವುದೇ ಯಾಂತ್ರಿಕ ಬದಲಾವಣೆಗಳನ್ನು ನಾವು ನಿರೀಕ್ಷಿಸುವುದಿಲ್ಲ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಪೆಟ್ರೋಲ್ ಮತ್ತು ಎರಡು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಯುನಿಟ್ ಮತ್ತು 1.0-ಲೀಟರ್ ಟರ್ಬೊ-ಚಾರ್ಜ್ಡ್ ಪೆಟ್ರೋಲ್ ಅನ್ನು ಹೊಂದಿದೆ. ಇದರಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ 84 ಬಿಹೆಚ್‌ಪಿ ಪವರ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್‌ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಇನ್ನು ಈ ಎಸ್‍ಯುವಿಯ ಟಾಪ್ ಸ್ಪೆಕ್ ಮಾದರಿಯಲ್ಲಿರುವ 1.0-ಲೀಟರ್ ಪೆಟ್ರೋಲ್ ಎಂಜಿನ್ 119 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 7 ಅಥವಾ 6-ಸ್ಪೀಡ್ ಐಎಂಟಿ ಅನ್ನು ಕೂಡ ಜೋಡಿಸಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಇನ್ನು ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯ ಡೀಸೆಲ್ ಎಂಜಿನ್ ಬಗ್ಗೆ ಹೇಳುವುದಾದರೆ, 1.5-ಲೀಟರ್ ಡೀಸೆಲ್ ಡಬ್ಲ್ಯುಜಿಟಿ ಎಂಜಿನ್ 99 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿಜಿಟಿ ಎಂಜಿನ್ 114 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಸ್ಟ್ಯಾಂಡರ್ಡ್ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ಸ್, ಎಲ್ಇಡಿ ಡಿಆರ್‌ಎಲ್ಎಸ್, ಫಾಗ್ ಲ್ಯಾಂಪ್ಸ್, ಸಿಗ್ನೆಚೆರ್ ಟೈಗರ್ ನೊಸ್ ಫ್ರಂಟ್ ಗ್ರಿಲ್, 16-ಇಂಚಿನ ಕ್ರಿಸ್ಟಲ್ ಕಟ್ ಅಲಾಯ್ ವೀಲ್ಹ್, ರಿಪ್ಲೆಕ್ಟರ್ ಸ್ಟ್ರೀಪ್‌ಗೆ ಹೊಂದಿಕೊಂಡಂತಿರುವ ಹಾರ್ಟ್ ಬಿಟ್‌ ವಿನ್ಯಾಸದ ಎಲ್ಇಡಿ ಟೈಲ್ ಲೈಟ್ಸ್, ಫ್ಲಕ್ಸ್ ಡಿಫ್ಯೂಸರ್ ಮತ್ತು ರಿಯರ್ ಬಂಪರ್ ಹೊಂದಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಈ ಸೊನೆಟ್ ಎಸ್‍ಯುವಿ ಒಳಭಾಗದಲ್ಲೂ ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ನೀಡಲಾಗಿದೆ. ಇದರಲ್ಲಿ ಮುಂಭಾಗದಲ್ಲಿ ವೆಂಟಿಲೆಟೆಡ್ ಲೆದರ್ ಸೀಟುಗಳು, ತ್ರಿ ಸ್ಪೋಕ್ ಡಿ ಕಟ್ ಸ್ಟೀರಿಂಗ್ ವೀಲ್ಹ್ ಜೊತೆ ಮೌಂಟೆಡ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್‌ಸ್ಟುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 10.25-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿಟಿಯನ್ನು ಒಳಗೊಂಡಿದೆ. ಇದರೊಂದಿಗೆ ಈ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ವೈರ್‌ಲೆಸ್ ಚಾರ್ಜರ್, ಸೌಂಡ್ ಮೋಡ್ ಲೈಟಿಂಗ್ ಮತ್ತು ಬಾಷ್ ಸಿಸ್ಟಂ ಹೊಂದಿರುವ 7-ಸ್ಪೀಕರ್ಸ್ ಅನ್ನು ಒಳಗೊಂಡಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಇನ್ನು ಕಿಯಾ ಮೋಟಾರ್ಸ್‌ ಅಭಿವೃದ್ದಿಪಡಿಸಿರುವ ಯುವಿಒ ಕಾರ್ ಕನೆಕ್ಟ್ ಟೆಕ್ನಾಲಜಿ ಸೌಲಭ್ಯವು ಗರಿಷ್ಠ ಫೀಚರ್ಸ್ ಹೊಂದಿದ್ದು, ಸುಮಾರು 57 ಫೀಚರ್ಸ್‌ಗಳನ್ನು ಯುವಿಒ ಆ್ಯಪ್ ಮೂಲಕವೇ ಕಾರಿನ ಪ್ರಮುಖ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದು. ಈ ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ, ಇದರಲ್ಲಿ 6-ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ವೆಹಿಕಲ್ ಸ್ಟ್ಯಾಬಿಲಿಟಿ ಮ್ಯಾನೆಜ್‌ಮೆಂಟ್(ವಿಎಸ್ಎಂ), ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೊಲ್, ಬ್ರೇಕ್ ಅಸಿಸ್ಟ್, ಎಮರ್ಜೆನ್ಸಿ ಸ್ಟಾಪ್ ಸಿಗ್ನಲ್, ಇಂಪ್ಯಾಕ್ಟ್ ಸೆನ್ಸಾರ್ ಆಟೋ ಡೋರ್ ಅನ್‌ಲಾಕ್, ಸ್ಪೀಡ್-ಸೆನ್ಸಿಂಗ್ ಆಟೋ ಡೋರ್ ಲಾಕ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ಕ್ರೂಸ್ ಕಂಟ್ರೊಲ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಅನ್ನು ನೀಡಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಬಿಡುಗಡೆಯಾದ ಆರಂಭದಲ್ಲೇ ಅತಿ ಹೆಚ್ಚು ಪೈಪೋಟಿ ಹೊಂದಿರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲವನ್ನು ಮೂಡಿಸಿತು. ಕಿಯಾ ಸೊನೆಟ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಇನ್ನು ಹೊಸ ಕಿಯಾ ಸೊನೆಟ್ ಎಕ್ಸ್ ಲೈನ್ ವೆರಿಯೆಂಟ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ

Most Read Articles

Kannada
English summary
New kia sonet x line variant first teaser out launch soon details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X