Just In
Don't Miss!
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- News
Breaking; ತುರ್ತಾಗಿ ಬನ್ನಿ, ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಕರೆ
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರು ಮಾದರಿಗಳಿವು!
ಸೆಮಿಕಂಡಕ್ಟರ್ ಕೊರತೆ ನಿವಾರಣೆಯಾಗುತ್ತಿದ್ದಂತೆ ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಸಾಕಷ್ಟು ಸುಧಾರಣೆ ಕಾಣುತ್ತಿದ್ದು, ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ತಮ್ಮ ಹೊಸ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ.

ಆಟೋ ಬಿಡಿಭಾಗಗಳ ಕೊರತೆಯಿಂದಾಗಿ ಈ ವರ್ಷದ ಆರಂಭದಲ್ಲಿ ಹೊಸ ವಾಹನಗಳ ಬಿಡುಗಡೆಗೆ ಹಿಂದೇಟು ಹಾಕಿದ್ದ ಪ್ರಮುಖ ಹೊಸ ಕಾರು ಕಂಪನಿಗಳು ಇದೀಗ ಹಂತ-ಹಂತವಾಗಿ ಹೊಸ ವಾಹನ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಳೆದ ತಿಂಗಳು ಏಪ್ರಿಲ್‌ನಲ್ಲೂ ಕೂಡಾ ಹಲವಾರು ಹೊಸ ಕಾರು ಮಾದರಿಗಳು ಬಿಡುಗಡೆಯಾಗಿವೆ. ಹಾಗಾದರೆ ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾದ ಹೊಸ ಕಾರುಗಳು ಯಾವುವು? ಹೊಸ ಕಾರುಗಳ ಬೆಲೆ ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

2022ರ ಮಾರುತಿ ಸುಜುಕಿ ಎರ್ಟಿಗಾ
ಹೊಸ ಎರ್ಟಿಗಾದಲ್ಲಿ ಮಾರುತಿ ಸುಜುಕಿ ಕಂಪನಿಯು ಎಂಜಿನ್ ಬದಲಾವಣೆ ಸೇರಿದಂತೆ ಹಲವಾರು ಹೆಚ್ಚುವರಿ ಸುರಕ್ಷಾ ಸೌಲಭ್ಯಗಳು ಮತ್ತು ಪ್ರಮುಖ ಪ್ರೀಮಿಯಂ ಸೌಲಭ್ಯಗಳನ್ನು ಅಳವಡಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿದೆ.

2022ರ ಎರ್ಟಿಗಾ ಮಾದರಿಯ ನವೀಕೃತ ಪೆಟ್ರೋಲ್ ಎಂಜಿನ್ ಜೊತೆಗೆ ಸಿಎನ್‌ಜಿ ಮಾದರಿಯ ಆಯ್ಕೆಯನ್ನು ಸಹ ಹೊಂದಿದ್ದು, ಹೊಸ ಮಾದರಿಯಲ್ಲಿ ಈ ಹಿಂದಿನ 1.5 ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಬದಲಾಗಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಮಾದರಿಯನ್ನು ಅಳವಡಿಸಲಾಗಿದೆ.

2022ರ ಕಿಯಾ ಸೆಲ್ಟೊಸ್ ಮತ್ತು ಸೊನೆಟ್
ಹೊಸ ಸೊನೆಟ್ ಕಾರು ಮಾದರಿಯೊಂದಿಗೆ ಕಿಯಾ ಕಂಪನಿಯು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಬಾರಿ ಎಂಟ್ರಿ ಲೆವಲ್ ಮಾದರಿಯಲ್ಲೂ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ಅಳವಡಿಸಿದೆ. ಹೀಗಾಗಿ ಹೊಸ ಕಾರಿನ ಬೆಲೆಯಲ್ಲಿ ತುಸು ಹೆಚ್ಚಳವಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.69 ಲಕ್ಷ ಬೆಲೆ ಹೊಂದಿದೆ.

2022ರ ಸೆಲ್ಟೊಸ್ ಮಾದರಿಯ ಬೆಸ್ ವೆರಿಯೆಂಟ್‌ನಲ್ಲೂ ಈ ಬಾರಿ ಹಲವಾರು ಹೊಸ ಫೀಚರ್ಸ್ ನೀಡಿರುವ ಕಿಯಾ ಕಂಪನಿಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಹೊಸ ಮಾದರಿಯು ಹೆಚ್ಚಿನ ಮಟ್ಟದ ಸೇಫ್ಟಿ ಫೀಚರ್ಸ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.45 ಲಕ್ಷ ಬೆಲೆ ಹೊಂದಿದೆ.

ಪೊಲೊ ಲೆಜೆಂಡ್ ಎಡಿಷನ್
ಪೊಲೊ ಲೆಜೆಂಡ್ ವಿಶೇಷ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಸೀಮಿತ ಅವಧಿಗಾಗಿ ಮಾತ್ರ ಬಿಡುಗಡೆ ಮಾಡಿದ್ದು, ಕೇವಲ 700 ಯುನಿಟ್ ಮಾತ್ರ ಉತ್ಪಾದನೆ ಮಾಡಲು ನಿರ್ಧರಿಸಿದೆ. ಹೀಗಾಗಿ ನಿಗದಿತ ಕಾರು ಮಾರಾಟದ ನಂತರ ಲೆಜೆಂಡ್ ಎಡಿಷನ್ ಮಾರಾಟ ಮುಕ್ತಾಯಗೊಳ್ಳಲಿದೆ.

ಹೊಸ ಪೊಲೊ ಲೆಜೆಂಡ್ ಮಾದರಿಯು ಜಿಟಿ ಟಿಎಸ್ಐ ಟಾಪ್ ಎಂಡ್ ಮಾದರಿಯನ್ನು ಆಧರಿಸಿ ಬಿಡುಗಡೆಗೊಂಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.25 ಲಕ್ಷ ಬೆಲೆ ಹೊಂದಿದೆ. ಪೊಲೊ ಲೆಜೆಂಡ್ ಮಾದರಿಯಲ್ಲಿ ಕಂಪನಿಯು ಕೆಲವು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ನೀಡಿದ್ದು, ಕಾರಿನ ಫೆಂಡರ್ ಮತ್ತು ಹಿಂಬದಿಯಲ್ಲಿ ಲೆಜೆಂಡ್ ಬೂಟ್ ಬ್ಯಾಜ್ಡ್ ಹೊಂದಿದೆ.

2022ರ ಮಾರುತಿ ಸುಜುಕಿ ಎಕ್ಸ್‌ಎಲ್6
ಹೊಸ ಎಕ್ಸ್ಎಲ್6 ಮಾದರಿಯು ಎರ್ಟಿಗಾ ಪ್ರೀಮಿಯಂ ಮಾದರಿಯಾಗಿ ಮಾರಾಟಗೊಳ್ಳುತ್ತಿದ್ದು, ನೆಕ್ಸಾ ಡೀಲರ್ಸ್ ಮೂಲಕ ಮಾರಾಟಗೊಳ್ಳುತ್ತಿರುವ ಹೊಸ ಎಕ್ಸ್ಎಲ್6 ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಈ ಬಾರಿ ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬಂದಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11.29 ಲಕ್ಷ ಬೆಲೆ ಹೊಂದಿದ್ದು, ಹೊಸ ಬದಲಾವಣೆಗಳು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.

2022ರ ಎಕ್ಸ್ಎಲ್6 ಮಾದರಿಯು ಅಲ್ಫಾ, ಜೆಟಾ, ಅಲ್ಫಾ ಪ್ಲಸ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ರೂ. 11.29 ಲಕ್ಷದಿಂದ ಆರಂಭಗೊಂಡ ಟಾಪ್ ಎಂಡ್ ಮಾದರಿಗೆ ರೂ. 14.55 ಲಕ್ಷ ಬೆಲೆ ಹೊಂದಿದೆ. ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15ಸಿ ಡ್ಯುಯಲ್‌ಜೆಟ್ ಪೆಟ್ರೋಲ್ ಮಾದರಿಯನ್ನು ಅಳವಡಿಸಲಾಗಿದ್ದು, 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋ ಗೇರ್‌ಬಾಕ್ಸ್ ಹೊಂದಿದೆ.

ಟೊಯೊಟಾ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್
ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು 4x4 ಸ್ಟ್ಯಾಂಡರ್ಡ್ ಮತ್ತು 4x4 ಹೈ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, 4x4 ಸ್ಟ್ಯಾಂಡರ್ಡ್ ಮಾದರಿಯು ಕೇವಲ ಮ್ಯಾನುವಲ್ ಆವೃತ್ತಿ ಖರೀದಿಗೆ ಲಭ್ಯವಿದ್ದರೆ 4x4 ಹೈ ಮಾದರಿಯಲ್ಲಿ ಕಂಪನಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿದೆ.

ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ 4x4 ಸ್ಟ್ಯಾಂಡರ್ಡ್ ಮ್ಯಾನುವಲ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 34 ಲಕ್ಷ ಬೆಲೆ ಹೊಂದಿದ್ದರೆ 4x4 ಹೈ ಮ್ಯಾನುವಲ್ ಮಾದರಿಯು ರೂ. 35.80 ಲಕ್ಷ ಮತ್ತು 4x4 ಹೈ ಆಟೋಮ್ಯಾಟಿಕ್ ಮಾದರಿಯು ರೂ. 36.80 ಲಕ್ಷ ಬೆಲೆ ಹೊಂದಿದೆ. ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮಾಡಲಾಗಿದೆ.

2022ರ ರೆನಾಲ್ಟ್ ಕಿಗರ್
ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಹೊಸ ಆವೃತ್ತಿಗಳನ್ನು ಉನ್ನತೀಕರಿಸುತ್ತಿದ್ದು, ಕಂಪನಿಯು ಇದೀಗ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ 2022ರ ಮಾದರಿಯನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡಿದೆ. ಹೊಸ ಫೀಚರ್ಸ್‌ಗಳೊಂದಿಗೆ ಕಿಗರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.40 ಲಕ್ಷ ಬೆಲೆ ಹೊಂದಿದೆ.

ಕೆಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರಿನಲ್ಲಿ ಈ ಹಿಂದಿನಂತೆ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಸ್ಕೋಡಾ ಕುಶಾಕ್ ಆಂಬಿಷನ್ ಕ್ಲಾಸಿಕ್
ಸ್ಕೋಡಾ(Skoda) ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕುಶಾಕ್(Kushaq) ಮಾದರಿಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಹೊಸ ಕಾರಿನಲ್ಲಿ ಈ ಬಾರಿ ಹೊಸ ಸುರಕ್ಷಾ ವೈಶಿಷ್ಟ್ಯತೆಗಳನ್ನು ಒಳಗೊಂಡಿರುವ ಮಧ್ಯಮ ಕ್ರಮಾಂಕದಲ್ಲಿ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಹೊಸ ಕುಶಾಕ್ ಆಂಬಿಷನ್ ಕ್ಲಾಸಿಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಮ್ಯಾನುವಲ್ ಮಾದರಿಗೆ ರೂ. 12.69 ಲಕ್ಷ ಮತ್ತು ಆಟೋಮ್ಯಾಟಿಕ್ ಮಾದರಿಗೆ ರೂ. 14.09 ಲಕ್ಷ ನಿಗದಿಪಡಿಸಿದ್ದು, ಫೋಕ್ಸ್‌ವ್ಯಾಗನ್ ಹೊಸ ಟೈಗುನ್ 1.0 ಹೈಲೈನ್ ಮಾದರಿಗೆ ಸಮನಾಗಿ ಈ ಹೊಸ ವೆರಿಯೆಂಟ್ ಸೇರ್ಪಡೆಗೊಳಿಸಲಾಗಿದೆ. ಹೊಸ ಮಾದರಿಗಳಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರ ನೀಡಲಾಗಿದೆ.

ಜೀಪ್ ಕಂಪಾಸ್ ನೈಟ್ ಈಗಲ್ ಎಡಿಷನ್
ಅಮೆರಿಕಾ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಹೊಸ ಕಂಪಾಸ್ ನೈಟ್ ಈಗಲ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಜೀಪ್ ಕಂಪಾಸ್ ನೈಟ್ ಈಗಲ್ ಎಡಿಷನ್ ಆರಂಬಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.21.95 ಲಕ್ಷವಾಗಿದೆ.

ಇದು ಗ್ಲಾಸ್ ಬ್ಲ್ಯಾಕ್ ಗ್ರಿಲ್ ಜೊತೆಗೆ ಅದೇ ರೀತಿ ಸಿದ್ಧಪಡಿಸಿದ ಗ್ರಿಲ್ ರಿಂಗ್‌ಗಳು, 18-ಇಂಚಿನ ಬ್ಲ್ಯಾಕ್ ಅಲಾಯ್ ವ್ಹೀಲ್ ಗಳು, ಬ್ಲ್ಯಾಕ್ ರೂಫ್ ರೈಲ್ ಗಳು, ಗ್ಲೋಸ್ ಬ್ಲ್ಯಾಕ್ ವಿಂಗ್ ಮಿರರ್‌ಗಳು ಮತ್ತು ಫಾಗ್ ಲ್ಯಾಂಪ್ ಬೆಜೆಲ್‌ಗಳನ್ನು ಪಡೆಯುತ್ತದೆ. ನೈಟ್ ಈಗಲ್ ಎಡಿಷನ್ ಅನ್ನು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಿದ್ದು, 2.0-ಲೀಟರ್ ಟರ್ಬೊ, ಆರು-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮತ್ತು 1.4-ಲೀಟರ್ ಮಲ್ಟಿಏರ್ ಪೆಟ್ರೋಲ್ ಟರ್ಬೊ 7-ಸ್ಫೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿದೆ.

ಡಿಸ್ಕವರಿ ಮೆಟ್ರೋಪಾಲಿಟನ್ ಎಡಿಷನ್
ಲ್ಯಾಂಡ್ ರೋವರ್ ತನ್ನ ಡಿಸ್ಕವರಿ ಮೆಟ್ರೋಪಾಲಿಟನ್ ಎಡಿಷನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಲ್ಯಾಂಡ್ ರೋವರ್ ಡಿಸ್ಕವರಿ ಮೆಟ್ರೋಪಾಲಿಟನ್ ಎಡಿಷನ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.26 ಕೋಟಿಯಾಗಿದೆ. ಹೊಸ ಎಡಿಷನ್ ಹಕುಬಾ ಸಿಲ್ವರ್, 20-ಇಂಚಿನ ಸ್ಯಾಟಿನ್ ಡಾರ್ಕ್ ಗ್ರೇ ಅಲಾಯ್ ವ್ಹೀಲ್ ಗಳು ಮತ್ತು ಬ್ಲ್ಯಾಕ್ ಲ್ಯಾಂಡ್ ರೋವರ್ ಬ್ರೇಕ್ ಕ್ಯಾಲಿಪರ್‌ಗಳನ್ನು ಒಳಗೊಂಡಿದೆ.

ಹೊಸ ಎಡಿಷನ್ P360 ನ ಟರ್ಬೋಚಾರ್ಜ್ಡ್ 3.0-ಲೀಟರ್ ಎಂಜಿನ್ 5,500 ಮತ್ತು 6,500 ಆರ್‌ಪಿಎಂ ನಡುವೆ 355 ಬಿಹೆಚ್‍ಪಿ ಪವರ್ ಮತ್ತು 1,750 ಮತ್ತು 5,000 ಆರ್‌ಪಿಎಂ ನಡುವೆ 50 ಎನ್ಎಂ ಟಾರ್ಕ್ ಅನ್ನು ಉತ್ಪದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಎಕ್ಸ್4 ಸಿಲ್ವರ್ ಶ್ಯಾಡೋ ಎಡಿಷನ್
ಬಿಎಂಡಬ್ಲ್ಯು ಕಂಪನಿಯು ಹೊಸ ಎಕ್ಸ್4 ಸಿಲ್ವರ್ ಶ್ಯಾಡೋ ಮಾದರಿಯನ್ನು ಮೊದಲ ಬಾರಿಗೆ ಚೆನ್ನೈನಲ್ಲಿಯಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಮರಜೋಡಣೆ ಕೈಗೊಂಡಿದ್ದು, ಹೊಸ ಕಾರು ಪ್ರಮುಖ ಎರಡು ವೆರಿಯೆಂಟ್‌ಗಳಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಎರಡು ಮಾದರಿಗಳನ್ನು ಖರೀದಿಗೆ ಲಭ್ಯವಿದೆ.

ಹೊಸ ಎಕ್ಸ್4 ಸಿಲ್ವರ್ ಶ್ಯಾಡೋ ಆವೃತ್ತಿಯ ಎಕ್ಸ್‌ಡ್ರೈವ್30ಐ ಮಾದರಿಯು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದರೆ ಎಕ್ಸ್‌ಡ್ರೈವ್30ಡಿ ಮಾದರಿಯು ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಎಕ್ಸ್‌ಡ್ರೈವ್30ಐ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 71.90 ಲಕ್ಷ ಬೆಲೆ ಹೊಂದಿದ್ದರೆ ಎಕ್ಸ್‌ಡ್ರೈವ್30ಡಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 73.90 ಲಕ್ಷ ಬೆಲೆ ಹೊಂದಿದೆ.