ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಕೋವಿಡ್ ಮತ್ತು ಸೆಮಿಕಂಡಕ್ಟರ್ ಪೂರೈಕೆಯಲ್ಲಿ ಆಗುತ್ತಿರುವ ಕೊರತೆಯ ಪರಿಣಾಮ ಹೊಸ ವಾಹನಗಳ ಮಾರಾಟವು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಏರಿಳಿತ ಅನುಭವಿಸುತ್ತಿದ್ದು, ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಸೆಮಿ ಕಂಡಕ್ಟರ್ ಹಾಗೂ ಕೋವಿಡ್ ಕಾರಣಕ್ಕೆ ಪ್ರಮುಖ ಕಾರು ಕಂಪನಿಗಳ ಉತ್ಪಾದನೆಯು ಇಳಿಕೆಯಾಗಿದ್ದು, ಬಿಡಿಭಾಗಗಳ ಕೊರತೆಯ ನಡುವೆಯು ಈ ವರ್ಷದ ಆರಂಭದಲ್ಲಿ ಪ್ರಮುಖ ಹೊಸ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿವೆ. ಹಾಗಾದರೆ ಜನವರಿಯಲ್ಲಿ ಬಿಡುಗಡೆಯಾದ ಹೊಸ ಕಾರು ಯಾವುವು? ಹೊಸ ಕಾರುಗಳ ಬೆಲೆ ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್

ಟಾಟಾ ಮೋಟಾರ್ಸ್ ಕಂಪನಿಯು ಸಿಎನ್‌ಜಿ ತಂತ್ರಜ್ಞಾನವನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಮತ್ತಷ್ಟು ಬದಲಾವಣೆಗೊಳಿಸಿ ಇನ್‌ಕ್ರೆಡೆಬಲ್‌ ಸಿಎನ್‌ಜಿ(ಐ-ಸಿಎನ್‌ಜಿ) ಎಂದು ಘೋಷಣೆ ಮಾಡಿದ್ದು, ಹೊಸ ಸಿಎನ್‌ಜಿ ಕಾರುಗಳಲ್ಲಿ ಯಾವುದೇ ಕಂಪನಿಯು ನೀಡಿರದಂತಹ ಹಲವು ತಾಂತ್ರಿಕ ಸೌಲಭ್ಯಗಳನ್ನು ನೀಡಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಹೊಸ ಟಾಟಾ ಟಿಯಾಗೋ ಸಿಎನ್‌ಜಿ ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6,09,900 ದಿಂದ ಟಾಪ್ ಎಂಡ್ ಮಾದರಿಯು ರೂ. 7,52,900 ಬೆಲೆ ಹೊಂದಿದ್ದರೆ ಟಿಗೋರ್ ಸಿಎನ್‌ಜಿ ಆವೃತ್ತಿಯು ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ಆರಂಭಿಕವಾಗಿ ರೂ. 7,69,900 ದಿಂದ ಟಾಪ್ ಎಂಡ್ ಮಾದರಿಯು ರೂ. 8,29,900 ಬೆಲೆ ಹೊಂದಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಹೊಸ ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳು ಸ್ಟ್ಯಾಂಡರ್ಡ್ ಪೆಟ್ರೋಲ್ ಮಾದರಿಗಿಂತಲೂ ರೂ. 1 ಲಕ್ಷದಷ್ಟು ದುಬಾರಿಯಾಗಿದ್ದರೂ ಪರಿಸರ ಸ್ನೇಹಿ ಸಿಎನ್‌ಜಿ ತಂತ್ರಜ್ಞಾನದೊಂದಿಗೆ ಅತ್ಯಧಿಕ ಮೈಲೇಜ್ ಪ್ರೇರಣೆ ಹೊಂದಿವೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಸೆಲೆರಿಯೊ ಸಿಎನ್‌ಜಿ ವರ್ಷನ್ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ತನ್ನ ನ್ಯೂ ಜನರೇಷನ್ ಸೆಲೆರಿಯೊ ಮಾದರಿಯಲ್ಲಿ ಸಿಎನ್‌ಜಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಸಿಎನ್‌ಜಿ ಮಾದರಿಗಳಲ್ಲಿಯೇ ಅತಿ ಮೈಲೇಜ್ ಹೊಂದಿರುವ ಸೆಲೆರಿಯೊ ಸಿಎನ್‌ಜಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.58 ಲಕ್ಷ ಬೆಲೆ ಹೊಂದಿದೆ. ಹೊಸ ಸೆಲೆರಿಯೊ ಸಿಎನ್‌ಜಿ ಅತ್ಯಂತ ಇಂಧನ ದಕ್ಷತೆಯ ಕಾರು ಎಂದು ಮಾರುತಿ ಸುಜುಕಿ ಹೇಳಿಕೊಂಡಿದ್ದು, ಸೆಲೆರಿಯೊ ಸಿಎನ್‌ಜಿ ಕಾರು ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 35.60 ಕಿಮೀ ಮೈಲೇಜ್ ನೀಡುತ್ತದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಪೆಟ್ರೋಲ್ ಎಂಜಿನ್ ಹೊಂದಿರುವ ನ್ಯೂ ಜನರೇಷನ್ ಸೆಲೆರಿಯೊ ಕಾರು ಮಾದರಿಯು ಪ್ರತಿ ಲೀಟರ್‌ಗೆ 26.68 ಮೈಲೇಜ್ ಹೊಂದಿದ್ದು, ಸಿಎನ್‌ಜಿ ಮಾದರಿಯು ದೀರ್ಘಾವಧಿಯಲ್ಲಿ ಪೆಟ್ರೋಲ್ ಮಾದರಿಗಿಂತ ಹೆಚ್ಚು ಮಿತವ್ಯಯಕಾರಿಯಾಗಿದೆ. ಸೆಲೆರಿಯೊ ಸಿಎನ‌ಜಿ ಮಾದರಿಯಲ್ಲಿ ಪೆಟ್ರೋಲ್ ಮಾದರಿಯಂತೆಯೇ 1.0-ಲೀಟರ್ ಕೆ10ಸಿ ಡ್ಯುಯಲ್ ಜೆಟ್ ಎಂಜಿನ್ ಹೊಂದಿದ್ದು, ಈ ಎಂಜಿನ್ 57 ಬಿಎಚ್‌ಪಿ ಮತ್ತು 82.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಟಾಟಾ ಸಫಾರಿ ಡಾರ್ಕ್ ಎಡಿಷನ್ ಬಿಡುಗಡೆ

ಡಾರ್ಕ್ ಎಡಿಷನ್‌ಗಳನ್ನು ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ನೆಕ್ಸಾನ್, ಆಲ್‌ಟ್ರೊಜ್ ಮತ್ತು ಹ್ಯಾರಿಯರ್ ಮಾದರಿಗಳಲ್ಲಿ ಮಾರಾಟಗೊಳಿಸುತ್ತಿದ್ದು, ಕಂಪನಿಯು ಇದೀಗ ಸಫಾರಿ ಎಸ್‌ಯುವಿ ಮಾದರಿಯಲ್ಲೂ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಡಾರ್ಕ್ ಎಡಿಷನ್ ಮಾದರಿಯು ಸಫಾರಿ ಎಸ್‌ಯುವಿಯ ಎಕ್ಸ್‌ಟಿ ಪ್ಲಸ್, ಎಕ್ಸ್‌ಟಿಎ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್‌ಎ ಪ್ಲಸ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಸಂಪೂರ್ಣ ಕಪ್ಪು ಬಣ್ಣದೊಂದಿಗೆ ಐಷಾರಾಮಿ ಲುಕ್ ಹೊಂದಿರುವ ಸಫಾರಿ ಡಾರ್ಕ್ ಎಡಿಷನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19.05 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.51 ಲಕ್ಷ ಬೆಲೆ ಹೊಂದಿದೆ. ಸಫಾರಿ ಎಸ್‌ಯುವಿ ಮಾದರಿಯು ಇದೀಗ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಟ್ಯಾಂಡರ್ಡ್, ಡಾರ್ಕ್ ಮತ್ತು ಅಡ್ವೆಂಚರ್ ಪೆರಸೊನಾ ಆವೃತ್ತಿಗಳನ್ನು ಹೊಂದಿದ್ದು, ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.29 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಬಿಎಂಡಬ್ಲ್ಯು ಎಕ್ಸ್3 ಫೇಸ್‌ಲಿಫ್ಟ್ ಬಿಡುಗಡೆ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ನವೀಕರಿಸಿದ ಎಕ್ಸ್3 ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ.59.90 ಲಕ್ಷ ಆರಂಭಿಕ ಬೆಲೆ ಹೊಂದಿದ್ದು, 30ಐ ಸ್ಪೋರ್ಟ್ಎಕ್ಸ್ ಪ್ಲಸ್ (30i SportX Plus) ಮತ್ತು 30ಐ ಎಂ ಸ್ಪೋರ್ಟ್ (30i M Sport) ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಹೊಸ ಎಕ್ಸ್3 ಎಸ್‍ಯುವಿಯು 2.0-ಲೀಟರ್, ನಾಲ್ಕು-ಸಿಲಿಂಡರ್, ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 252 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಬಿಡುಗಡೆ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ಬಹುನಿರೀಕ್ಷಿತ 2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಸೋಲ್ಡ್ ಔಟ್ ಆಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

2022ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲಿ ಸ್ಕೋಡಾ ಆಟೋ ಇಂಡಿಯಾ ಮುಂದಿನ ನಾಲ್ಕು ತಿಂಗಳುಗಳ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಸ್ಕೋಡಾ ಕೊಡಿಯಾಕ್ ಅನ್ನು ಭಾರತದಲ್ಲಿ ಎರಡು ವರ್ಷಗಳ ವಿರಾಮದ ನಂತರ ರೂ.34.99 ಲಕ್ಷದ ಆರಂಭಿಕ ಬೆಲೆಗೆ ಬಿಡುಗಡೆಯಾಗಿದೆ, 7-ಸೀಟುಗಳ ಈ ಎಸ್‍ಯುವಿಯ ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಘಟಕವಾಗಿ ನೀಡಲಾಗುತ್ತದೆ ಮತ್ತು ಔರಂಗಾಬಾದ್‌ನಲ್ಲಿರುವ ಸ್ಕೋಡಾ ಆಟೋ ವೋಕ್ಸ್‌ವ್ಯಾಗನ್ ಇಂಡಿಯಾದ ಉತ್ಪಾದನಾ ಘಟಕದಲ್ಲಿ ಸ್ಥಳೀಯವಾಗಿ ಜೋಡಿಸಲಾಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

2022ರ ಟೊಯೊಟಾ ಕ್ಯಾಮ್ರಿ ಹೈಬ್ರಿಡ್

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ನವೀಕರಿಸಿದ ಕ್ಯಾಮ್ರಿ ಹೈಬ್ರಿಡ್‌ ಸೆಡಾನ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟೊಯೊಟಾ ಕ್ಯಾಮ್ರಿ ಹೈಬ್ರಿಡ್‌ ಸೆಡಾನ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.41.70 ಲಕ್ಷವಾಗಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ನವೀಕರಿಸಿದ ಟೊಯೊಟಾ ಕ್ಯಾಮ್ರಿ ಅದರ ಬಾಹ್ಯ ವಿನ್ಯಾಸ, ಕ್ಯಾಬಿನ್ ವಿನ್ಯಾಸ ಮತ್ತು ವೈಶಿಷ್ಟ್ಯಗಳ ಪಟ್ಟಿಯನ್ನು ಒಳಗೊಂಡಿರುವ ನವೀಕರಣಗಳನ್ನು ಪಡೆದಿದೆ. ಈ ಹೊಸ ಟೊಯೊಟಾ ಕ್ಯಾಮ್ರಿ ಹೈಬ್ರಿಡ್‌ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿಸಲಾಗಿದೆ. ಹೊಸ ಕ್ಯಾಮ್ರಿ ಹೈಬ್ರಿಡ್ ಕಾರಿನಲ್ಲಿ 2.5-ಲೀಟರ್, ನಾಲ್ಕು-ಸಿಲಿಂಡರ್ ಪೆಟ್ರೋಲ್ ಹೈಬ್ರಿಡ್ ಡೈನಾಮಿಕ್ ಫೋರ್ಸ್ ಎಂಜಿನ್‌ ಅನ್ನು ಹೊಂದಿದೆ, ಇದು ಶಕ್ತಿಯುತ ಮೋಟಾರ್ ಜನರೇಟರ್‌ನೊಂದಿಗೆ ಜೋಡಿಯಾಗಿ 160kW (218PS) ಸಂಯೋಜಿತ 218 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಪೋರ್ಷೆ ಹೊಸ ಕಾರುಗಳು ಬಿಡುಗಡೆ

ಜರ್ಮನ್ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾಗಿರುವ ಪೋರ್ಷೆ ತನ್ನ ಜನಪ್ರಿಯ ಮಧ್ಯಮ ಕ್ರಮಾಂಕದ ಐಷಾರಾಮಿ ಸ್ಪೋರ್ಟ್ ಕಾರು ಮಾದರಿಗಳಾದ 718 ಕೆಮನ್ ಜಿಟಿಎಸ್ 4.0 ಮತ್ತು 718 ಬಾಕ್ಸ್‌ಸ್ಟರ್ ಜಿಟಿಎಸ್ 4.0 ಮಾದರಿಗಳನ್ನು ಭಾರತದಲ್ಲಿ ಸಂಕ್ರಾಂತಿ ವಿಶೇಷವಾಗಿ ಬಿಡುಗಡೆ ಮಾಡಿದ್ದು, ಹೊಸ ಕಾರು ಈ ಬಾರಿ ಸುಧಾರಿತ ಎಂಜಿನ್ ಮತ್ತು ನವೀಕೃತ ಸ್ಪೋರ್ಟಿ ವಿನ್ಯಾಸದಲ್ಲಿ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಹೊಸ 718 ಕೆಮನ್ ಜಿಟಿಎಸ್ 4.0 ಮತ್ತು 718 ಬಾಕ್ಸ್‌ಸ್ಟರ್ ಜಿಟಿಎಸ್ 4.0 ಮಾದರಿಗಳು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 1,46,50,000 ಮತ್ತು ಟಾಪ್ ಎಂಡ್ ಮಾದರಿಯು ರೂ. 1,49,78,000 ಬೆಲೆ ಹೊಂದಿವೆ. ಹೊಸ ಕಾರುಗಳು ಸುಧಾರಿತ 7-ಸ್ಪೀಡ್ ಪಿಡಿಕೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌‌ನೊಂದಿಗೆ 4.0-ಲೀಟರ್(4 ಸಾವಿರ ಸಿಸಿ) ಆರು-ಸಿಲಿಂಡರ್ ಫ್ಲಾಟ್ ಎಂಜಿನ್‌ನಿಂದ ಚಾಲನೆಗೊಳ್ಳಲಿವೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ನ್ಯೂ ಜನರೇಷನ್ ರೇಂಜ್ ರೋವರ್ ಎಸ್‍ಯುವಿ

ಲ್ಯಾಂಡ್ ರೋವರ್ ಕಂಪನಿಯು ತನ್ನ ನ್ಯೂ ಜನರೇಷನ್ ರೇಂಜ್ ರೋವರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ನ್ಯೂ ಜನರೇಷನ್ ರೇಂಜ್ ರೋವರ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 2.32 ಕೋಟಿ ಬೆಲೆ ಹೊಂದಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

2022ರ ರೇಂಜ್ ರೋವರ್ ಅನ್ನು ಹೊಸ ಎಂಎಲ್ಎ-ಫ್ಲೆಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಹೊಸ ಮಾದರಿಯು ಅದರ ಹಿಂದಿನ ಮಾದರಿಯಲ್ಲಿನ ಹೆಚ್ಚಿನ ಶೈಲಿಯನ್ನು ಉಳಿಸಿಕೊಂಡಿದ್ದರೂ ಹೊಸ ವೈಶಿಷ್ಟ್ಯತೆಯೊಂದಿಗೆ ಉನ್ನತೀಕರಣಗೊಂಡಿದೆ. ಹೊಸ ಎಸ್‍ಯುವಿಯಲ್ಲಿ 3 ಎಂಜಿನ್ ಆಯ್ಕೆಗಳಲ್ಲಿ ನೀಡಲಾಗಿದ್ದು, ಮೊದಲನೇ ಆವೃತ್ತಿಯು 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್, ಎರಡನೇ ಮಾದರಿಯು 3.0-ಲೀಟರ್ ಟರ್ಬೊ-ಡೀಸೆಲ್ ಮತ್ತು ಹೈ ಎಂಡ್ ಮಾದರಿಯು 4.4-ಲೀಟರ್ ಟ್ವಿನ್-ಟರ್ಬೊ ವಿ8 ಎಂಜಿನ್ ಆಯ್ಕೆ ಹೊಂದಿದೆ.

ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಟಾಪ್ 10 ಕಾರುಗಳಿವು!

ಇದರಲ್ಲಿ 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್ 394 ಬಿಹೆಚ್‍ಪಿ ಪವರ್ ಮತ್ತು 550 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ ಟರ್ಬೊ-ಡೀಸೆಲ್ ಎಂಜಿನ್ 346 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, ಟ್ವಿನ್-ಟರ್ಬೊ ವಿ8 ಎಂಜಿನ್ 523 ಬಿಹೆಚ್‍ಪಿ ಪವರ್ ಮತ್ತು 750 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

More from DriveSpark

Article Published On: Monday, January 31, 2022, 13:21 [IST]
English summary
New launched cars in january 2022 tata tiago icng celerio s cng new land rover range rover and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+