ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಸೆಮಿಕಂಡಕ್ಟರ್ ಕೊರತೆಯಿಂದಾಗಿ ತಗ್ಗಿದ್ದ ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟವು ಸುಧಾರಣೆ ಕಾಣುತ್ತಿದ್ದು, ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ತಮ್ಮ ಹೊಸ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಬಿಡಿಭಾಗಗಳ ಕೊರತೆಯಿಂದಾಗಿ ಈ ವರ್ಷದ ಆರಂಭದಲ್ಲಿ ಪ್ರಮುಖ ಹೊಸ ಕಾರು ಕಂಪನಿಗಳು ಉತ್ಪಾದನೆಯಲ್ಲಿ ಹಿನ್ನಡೆ ಅನುಭವಿಸಿದ್ದರೂ ಹೊಸ ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಳೆದ ತಿಂಗಳು ಮಾರ್ಚ್‌ನಲ್ಲೂ ಕೂಡಾ ಹಲವಾರು ಹೊಸ ಕಾರು ಮಾದರಿಗಳು ಬಿಡುಗಡೆಯಾಗಿವೆ. ಹಾಗಾದರೆ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಹೊಸ ಕಾರುಗಳು ಯಾವುವು? ಹೊಸ ಕಾರುಗಳ ಬೆಲೆ ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಸ್ಕೋಡಾ ಸ್ಲಾವಿಯಾ

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಮಾದರಿಯ ಮಾರಾಟವನ್ನು ಕೊನೆಗೊಳಿಸುವ ಸ್ಕೋಡಾ ಕಂಪನಿಯು ಹೊಸ ಸ್ಲಾವಿಯಾ ಪರಿಚಯಿಸಿದ್ದು, ರ‍್ಯಾಪಿಡ್ ಮಾದರಿಗಿಂತಲೂ ಹೊಸ ಸ್ಲಾವಿಯಾ ಹೆಚ್ಚು ಸುಧಾರಿತ ತಂತ್ರಜ್ಞಾನ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಮಧ್ಯಮ ಕ್ರಮಾಂಕದ ಪ್ರಮುಖ ಸೆಡಾನ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಸ್ಕೋಡಾ ಕಂಪನಿಯು ಸ್ಲಾವಿಯಾ ಸೆಡಾನ್ ಮಾದರಿಯನ್ನು 1.0-ಲೀಟರ್ ಟಿಎಸ್ಐ ಮತ್ತು 1.5 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳೊಂದಿಗೆ ಬಿಡುಗಡೆ ಮಾಡಿದ್ದು, 1.0 ಲೀಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.39 ಲಕ್ಷ ಬೆಲೆ ಹೊಂದಿದ್ದರೆ 1.5 ಲೀಟರ್ ಮಾದರಿಯು ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.79 ಲಕ್ಷ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

2022ರ ಎಂಜಿ ಜೆಡ್ಎಸ್ ಇವಿ

ಎಂಜಿ ಕಂಪನಿಯು 2022ರ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ಈ ಹಿಂದಿನಂತೆ ಎಕ್ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಂಡಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21,99,800 ರಿಂದ ಟಾಪ್ ಎಂಡ್ ಮಾದರಿಯು ರೂ. 25,88,000 ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಎಂಜಿ ಮೋಟಾರ್ ಕಂಪನಿಯು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಯಲ್ಲಿ ಈ ಹಿಂದೆ ಪ್ರತಿ ಚಾರ್ಜ್‌ಗೆ 419 ಕಿ.ಮೀ ಒದಗಿಸುತ್ತಿದ್ದ 44.5 kWh ಬ್ಯಾಟರಿ ಪ್ಯಾಕ್ ಅನ್ನು 50.3 kWh ಅಡ್ವಾನ್ಸ್ ಬ್ಯಾಟರಿ ಪ್ಯಾಕ್‌ಗೆ ಉನ್ನತೀಕರಿಸಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 461 ಕಿ.ಮೀ ಮೈಲೇಜ್ ನೀಡುತ್ತದೆ. ಹೊಸ ಕಾರು ಮಾದರಿಯು ಹೊಸ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಜೋಡಣೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಮಾರುತಿ ಡಿಜೈರ್ ಎಸ್-ಸಿಎನ್‌ಜಿ

ಮಾರುತಿ ಸುಜುಕಿ ಡಿಜೈರ್ ಸಿಎನ್‌ಜಿ ಕಾರು ಉತ್ತಮ ಮೈಲೇಜ್ ಮತ್ತು ಆಕರ್ಷಕ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಫ್ಯಾಕ್ಟರಿ ಫಿಟೆಡ್ ಸಿಎನ್‌ಜಿ ಕಿಟ್ ಅನ್ನು VXi ಮತ್ತು ZXi ರೂಪಾಂತರಗಳಲ್ಲಿ ನೀಡಲಾಗಿದ್ದು, ಇವುಗಳ ಬೆಲೆಯನ್ನು ಕ್ರಮವಾಗಿ ರೂ. 8.14 ಲಕ್ಷ ಮತ್ತು ರೂ. 8.82 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಸಿಎನ್‌ಜಿ ಆವೃತ್ತಿಯು ಪೆಟ್ರೋಲ್ ಮಾದರಿಗಿಂತ ಸ್ವಲ್ಪ ಕಡಿಮೆ ಪವರ್ ಮತ್ತು ಟಾರ್ಕ್ ಉತ್ಪಾದಿಸಲಿದ್ದು, ಹೊಸ ಡಿಜೈರ್ ಸಿಎನ್‌ಜಿ ರೂಪಾಂತರವು 31.12 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹೀಗಾಗಿ ಇದು ದೇಶದ ಅತ್ಯಂತ ಮಿತವ್ಯಯ ಮತ್ತು ಶಕ್ತಿಯುತ ಸಿಎನ್‌ಜಿ ಸೆಡಾನ್ ಆಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಹೊಸ ಟೊಯೊಟಾ ಗ್ಲಾಂಝಾ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ತನ್ನ ಬಹುನಿರೀಕ್ಷಿತ ಗ್ಲಾಂಝಾ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಗ್ಲಾಂಝಾ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.39 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.69 ಲಕ್ಷ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಗ್ಲಾಂಝಾ ಹೊಸ ಕಾರಿನಲ್ಲಿ 1.2-ಲೀಟರ್ ಡ್ಯುಯಲ್-ಜೆಟ್ ಪೆಟ್ರೋಲ್ ಎಂಜಿನ್‌ ಜೋಡಿಸಲಾಗಿದ್ದು, 89 ಬಿಹೆಚ್‌ಪಿ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಜೋಡಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಟಾಟಾ ಆಲ್‌ಟ್ರೊಜ್ ಡಿಸಿಟಿ ಆಟೋಮ್ಯಾಟಿಕ್ ವರ್ಷನ್

ಟಾಟಾ ಬಹುನೀರಿಕ್ಷಿತ ಆಲ್‌‌ಟ್ರೊಜ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್(ಡಿಸಿಟಿ) ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.09 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.89 ಲಕ್ಷ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಹೊಸ ಆಟೋಮ್ಯಾಟಿಕ್ ಆವೃತ್ತಿಗಳು 1.2 ಲೀಟರ್ ನ್ಯಾಚುರಲಿ ಆಸ್ಪೆರೆಟಡ್ ರೆವೊಟ್ರಾನ್ ಪೆಟ್ರೋಲ್ ಎಂಜಿನ್‌ ಆಯ್ಕೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಆಟೋಮ್ಯಾಟಿಕ್ ಆವೃತ್ತಿಯು 6-ಸ್ಪೀಡ್ ಡ್ಯುಯಚ್ ಕ್ಲಚ್ ಗೇರ್‌‌ಬಾಕ್ಸ್ ಮೂಲಕ 86 ಬಿಎಚ್‌ಪಿ ಮತ್ತು 113 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಟೊಯೊಟಾ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್

ಹೊಸ ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ ಮಾದರಿಯನ್ನು ಟೊಯೊಟಾ ಕಂಪನಿಯು 4x4 ಸ್ಟ್ಯಾಂಡರ್ಡ್ ಮತ್ತು 4x4 ಹೈ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿದ್ದು, 4x4 ಸ್ಟ್ಯಾಂಡರ್ಡ್ ಮಾದರಿಯು ಕೇವಲ ಮ್ಯಾನುವಲ್ ಆವೃತ್ತಿ ಖರೀದಿಗೆ ಲಭ್ಯವಿದ್ದರೆ 4x4 ಹೈ ಮಾದರಿಯಲ್ಲಿ ಕಂಪನಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಹೈಲಕ್ಸ್ ಲೈಫ್‌ಸ್ಟೈಲ್ ಪಿಕ್ಅಪ್ 4x4 ಸ್ಟ್ಯಾಂಡರ್ಡ್ ಮ್ಯಾನುವಲ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 34 ಲಕ್ಷ ಬೆಲೆ ಹೊಂದಿದ್ದರೆ 4x4 ಹೈ ಮ್ಯಾನುವಲ್ ಮಾದರಿಯು ರೂ. 35.80 ಲಕ್ಷ ಮತ್ತು 4x4 ಹೈ ಆಟೋಮ್ಯಾಟಿಕ್ ಮಾದರಿಯು ರೂ. 36.80 ಲಕ್ಷ ಬೆಲೆ ಹೊಂದಿದೆ. ಹೊಸ ಪಿಕ್ಅಪ್‌ನಲ್ಲಿ ಟೊಯೊಟಾ ಕಂಪನಿಯು ಫಾರ್ಚೂನರ್ ಮಾದರಿಯಲ್ಲಿರುವ 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಬಿಡುಗಡೆ ಮಾಡಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

2022ರ ರೆನಾಲ್ಟ್ ಕಿಗರ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಹೊಸ ಆವೃತ್ತಿಗಳನ್ನು ಉನ್ನತೀಕರಿಸುತ್ತಿದ್ದು, ಕಂಪನಿಯು ಇದೀಗ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ 2022ರ ಮಾದರಿಯನ್ನು ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆ ಮಾಡಿದೆ. ಹೊಸ ಫೀಚರ್ಸ್‌ಗಳೊಂದಿಗೆ ಕಿಗರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.40 ಲಕ್ಷ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಕೆಲವು ಹೊಸ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರಿನಲ್ಲಿ ಈ ಹಿಂದಿನಂತೆ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಬಿಎಂಡಬ್ಲ್ಯು ಎಕ್ಸ್4 ಎಸ್‍ಯುವಿ

ಹೊಸ ಬಿಎಂಡಬ್ಲ್ಯು ಎಕ್ಸ್4 ಎಸ್‍ಯುವಿಯು ಪ್ರಮುಖ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಹೊಸ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಆವೃತ್ತಿಗಳಲ್ಲಿ ಲಭ್ಯವಿರುತ್ತದೆ. ಹೊಸ ಎಕ್ಸ್4 ವಿಶೇಷವಾದ 'ಬ್ಲ್ಯಾಕ್ ಶ್ಯಾಡೋ' ಆವೃತ್ತಿಯು ಸೀಮಿತ ಸಂಖ್ಯೆಯಲ್ಲಿ ಲಭ್ಯವಿದೆ ಮತ್ತು ಬ್ಲ್ಯಾಕ್ ಸಫೈರ್ ಮತ್ತು ಎಂ ಬ್ರೂಕ್ಲಿನ್ ಗ್ರೇ ಮೆಟಾಲಿಕ್ ಪೇಂಟ್‌ವರ್ಕ್‌ಗಳಲ್ಲಿ ಲಭ್ಯವಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಹೊಸ ಬಿಎಂಡಬ್ಲ್ಯು ಎಕ್ಸ್4 ಎಸ್‍ಯುವಿಯ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ರೂ.70.50 ಲಕ್ಷವಾಗಿದ್ದು, ಹೊಸ 3.0 ಲೀಟರ್ ಆರು-ಸಿಲಿಂಡರ್ ಡೀಸೆಲ್ ಎಂಜಿನ್, 2.0-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಡೀಸೆಲ್ ಮಾದರಿಯು 265 ಬಿಹೆಚ್‍ಪಿ, 620 ಎನ್ಎಂ ಟಾರ್ಕ್ ಉತ್ಪಾದಿಸಿದ್ದಲ್ಲಿ ಪೆಟ್ರೋಲ್ ಮಾದರಿಯು 252 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಮರ್ಸಿಡಿಸ್-ಮೇಬ್ಯಾಕ್ ಎಸ್-ಕ್ಲಾಸ್

ಐಷಾರಾಮಿ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ಸ್ಥಳೀಯವಾಗಿ ನಿರ್ಮಾಣಗೊಳಿಸಿದ ಮೇಬ್ಯಾಕ್ ಎಸ್-ಕ್ಲಾಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 2.50 ಕೋಟಿ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಮೇಬ್ಯಾಕ್ ಎಸ್-ಕ್ಲಾಸ್ ಎಸ್580 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 2.50 ಕೋಟಿ ಬೆಲೆ ಹೊಂದಿದ್ದರೆ ಮೇಬ್ಯಾಕ್ ಎಸ್-ಕ್ಲಾಸ್ ಎಸ್680 ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 3.20 ಕೋಟಿ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯಲ್ಲಿ 4 ಮ್ಯಾಟಿಕ್ ತಂತ್ರಜ್ಞಾನ ಪ್ರೇರಿತ 9 ಸ್ಪೀಡ್ ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಎರಡು ಎಂಜಿನ್ ಆಯ್ಕೆಗಳಿದ್ದು, ಎಸ್580 ಮಾದರಿಯಲ್ಲಿ 4.0-ಲೀಟರ್ ವಿ8 ಎಂಜಿನ್ ಮತ್ತು ಎಸ್680 ಮಾದರಿಯಲ್ಲಿ 6.0-ಲೀಟರ್ ವಿ12 ಎಂಜಿನ್ ಜೋಡಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿ

ಹೊಸ ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿಯು ಎಕ್ಸ್ಕ್ವಿಸೈಟ್, ಎಕ್ಸ್ಕ್ಲೂಸಿವ್ ಮತ್ತು ಎಫ್-ಸ್ಪೋರ್ಟ್ ಎಂಬ ಮೂರು ರೂಪಾಂತರಗಳಲ್ಲಿ ಬಿಡುಗಡೆಗೊಂಡಿದ್ದು, ಈ ಹೊಸ ಮಾದರಿಯು ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್ (TNGA-L) ಪ್ಲಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸಿದೆ. ಐದನೇ ತಲೆಮಾರಿನ ಟೊಯೊಟಾ ರಾವ್4 ನೊಂದಿಗೆ ಹಲವು ಅಂಶಗಳನ್ನು ಹಂಚಿಕೊಂಡಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 64.90 ಲಕ್ಷದಿಂದ ರೂ. 71.60 ಲಕ್ಷ ಬೆಲೆ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

2022ರ ಲೆಕ್ಸಸ್ ಎನ್ಎಕ್ಸ್ 350ಹೆಚ್ ಎಸ್‍ಯುವಿಯಲ್ಲಿ 2.5-ಲೀಟರ್, 4-ಸಿಲಿಂಡರ್ ಎಂಜಿನ್ ಜೊತೆಗೆ 259-ವೋಲ್ಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದ್ದು, ಅದು ಒಟ್ಟಾಗಿ 236 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ ಹೊಸ ಕಾರಿನಲ್ಲಿ ಇ-ಲಾಚ್ ಸಿಸ್ಟಮ್, ಸೇಫ್ ಎಕ್ಸಿಟ್ ಲೇನ್ ಅಸಿಸ್ಟ್, ಪನೊರೊಮಿಕ್ ವ್ಯೂ ಮಾನಿಟರ್, ರಿಮೋಟ್ ಫಂಕ್ಷನ್‌ನೊಂದಿಗೆ ಸುಧಾರಿತ ಪಾರ್ಕ್‌ನೊಂದಿಗೆ ಸುಧಾರಿತ ಡ್ರೈವಿಂಗ್ ಅಸಿಸ್ಟ್ ತಂತ್ರಜ್ಞಾನ ಪಡೆದುಕೊಳ್ಳುತ್ತದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಮಾರುತಿ ಸುಜುಕಿ ವ್ಯಾಗನ್ ಆರ್ ಟೂರ್ H3

ಮಾರುತಿ ಸುಜುಕಿ ತನ್ನ ಹೊಸ ವ್ಯಾಗನ್ ಆರ್ ಅನ್ನು ಬಿಡುಗಡೆ ಮಾಡಿದೆ. ಕಂಪನಿಯು ಈ ಮಾರುತಿ ವ್ಯಾಗನ್ ಆರ್ ಅನ್ನು ವ್ಯಾಗನ್ಆರ್ ಟೂರ್ ಹೆಚ್ (3 WagonR Tour H3) ಹೆಸರಿನಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾದ ಪ್ರಮುಖ ಕಾರು ಮಾದರಿಗಳಿವು!

ಜನಪ್ರಿಯ ಟೋಲ್ ಬಾಯ್ ಕಾರ್ "ವ್ಯಾಗನ್ಆರ್"ನ ಹೊಸ ರೂಪಾಂತರವನ್ನು ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು CNG ಇಂಧನ ಆಯ್ಕೆಗಳೊಂದಿಗೆ ಈ ಕಾರನ್ನು ಪರಿಚಯಿಸಿದೆ. ವ್ಯಾಗನ್ಆರ್ ಟೂರ್ ಹೆಚ್3 ಪೆಟ್ರೋಲ್ ಆವೃತ್ತಿಯ ಬೆಲೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ 5.39 ಲಕ್ಷ ಆದರೆ ಸಿಎನ್‌ಜಿ ಆವೃತ್ತಿಯ ಬೆಲೆ 6.34 ಲಕ್ಷದಿಂದ ಪ್ರಾರಂಭವಾಗುತ್ತದೆ.

Most Read Articles

Kannada
English summary
New launched cars in march 2022 toyota hilux tata altroz dca and more
Story first published: Saturday, April 2, 2022, 18:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X