ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡ ಪ್ರಮುಖ ಕಾರುಗಳಿವು!

ದೇಶಿಯ ಮಾರುಕಟ್ಟೆಯಲ್ಲಿ ಹಲವು ಹೊಸ ಕಾರುಗಳು ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆ ಪ್ರವೇಶಿಸಿದ್ದು, ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಪ್ರಮುಖ ಕಾರುಗಳ ಮಾಹಿತಿ ಇಲ್ಲಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಕಾರುಗಳಲ್ಲಿ ಮಧ್ಯಮ ಕ್ರಮಾಂಕದ ಮಾದರಿಗಳ ಜೊತೆಗೆ ಐಷಾರಾಮಿ ಕಾರುಗಳು ಸಹ ಬಿಡುಗಡೆಯಾಗಿದ್ದು, ಹೊಸ ಕಾರುಗಳ ಬೆಲೆ, ಎಂಜಿನ್ ಮತ್ತು ಪ್ರಮುಖ ಫೀಚರ್ಸ್ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ. ಪ್ರಮುಖ ಹೊಸ ಕಾರುಗಳಲ್ಲಿ ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳು ಹೆಚ್ಚಿನ ಗಮನಸೆಳೆದಿದ್ದು, ಹೊಸ ಕಾರುಗಳ ಮಾಹಿತಿಯನ್ನು ಕೆಳಗಿನ ಸ್ಪೈಡ್‌ಗಳಲ್ಲಿ ನೋಡೋಣ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹೈಬ್ರಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.48 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.99 ಲಕ್ಷ ಬೆಲೆ ಹೊಂದಿದೆ. ವಿವಿಧ ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಇ, ಎಸ್, ಜಿ, ವಿ ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಹೈರೈಡರ್ ಎಸ್‌ಯುವಿ ಮಾರುತಿ ಸುಜುಕಿಯ ಗ್ರ್ಯಾಂಡ್ ವಿಟಾರಾ ಮಾದರಿಯೊಂದಿಗೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹಂಚಿಕೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೈರೈಡರ್‌ನಲ್ಲಿ ಟೊಯೊಟಾ ಕಂಪನಿಯು 1.5 ಲೀಟರ್ ಅಟ್ಕಿನ್ಸನ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಇದು ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ. ಇದರಲ್ಲಿ ಇ-ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 27.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಸಾಮಾನ್ಯ ಮಾದರಿಯು 1.5 ಲೀಟರ್ K15C ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಮಾರುತಿ ಗ್ರ್ಯಾಂಡ್ ವಿಟಾರಾ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಬಹುನಿರೀಕ್ಷಿತ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.45 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.65 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ನೀಡುತ್ತದೆ ಎಂದು ಮಾರುತಿ ಹೇಳಿಕೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹಾಗೆಯೇ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 5 ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ನೊಂದಿಗೆ ಜೋಡಿಸಲಾಗಿದೆ. ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಟಾಟಾ ಟಿಯಾಗೋ ಎಲೆಕ್ಟ್ರಿಕ್

ಪ್ರಸ್ತುತ ಮಾರುಕಟ್ಟೆಯಲ್ಲಿ ನೆಕ್ಸಾನ್ ಇವಿ, ನೆಕ್ಸಾನ್ ಮ್ಯಾಕ್ಸ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್ಸ್-ಟಿ ಇವಿ ಕಾರುಗಳ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಟಿಯಾಗೋ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎರಡು ಮಾದರಿಯ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಟಿಯಾಗೋ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಇ, ಎಕ್ಸ್‌ಟಿ, ಎಕ್ಸ್‌ಜೆಡ್ ಪ್ಲಸ್, ಎಕ್ಸ್‌ಜೆಡ್ ಪ್ಲಸ್ ಟೆಕ್ ಲಕ್ಸ್ ವೆರಿಯೆಂಟ್‌ಗಳನ್ನು ಹೊಂದಿದ್ದು, ಬ್ಯಾಟರಿ ಆಯ್ಕೆಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.79 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಟಾಟಾ ಮೋಟಾರ್ಸ್ ಕಂಪನಿಯು ಆರಂಭಿಕ ಮಾದರಿಯಲ್ಲಿ 19.2 kWh ಲೀಥಿಯಂ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ಪ್ರತಿ ಚಾರ್ಜ್‌ಗೆ ಗರಿಷ್ಠ 250 ಕಿ.ಮೀ ಮೈಲೇಜ್ ನೀಡಲಿದ್ದರೆ ಹೈ ಎಂಡ್ ಮಾದರಿಗಳಲ್ಲಿರುವ 24 kWh ಲೀಥಿಯಂ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಗಳು ಪ್ರತಿ ಚಾರ್ಜ್‌ಗೆ 315 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹ್ಯುಂಡೈ ವೆನ್ಯೂ ಎನ್ ಲೈನ್ ವರ್ಷನ್

ಹ್ಯುಂಡೈ ಕಂಪನಿಯು ತನ್ನ ಬಹುನೀರಿಕ್ಷಿತ ವೆನ್ಯೂ ಎನ್ ಲೈನ್ ಪರ್ಫಾಮೆನ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.16 ಲಕ್ಷ ಬೆಲೆ ಹೊಂದಿದೆ. ಹೊಸ ವೆನ್ಯೂ ಎನ್ ಲೈನ್ ಆವೃತ್ತಿಯು ವಿವಿಧ ತಾಂತ್ರಿಕ ಅಂಶಗಳನ್ನು ಆಧರಿಸಿ ಎನ್6 ಮತ್ತು ಎನ್8 ಎನ್ನುವ ಎರಡು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದ್ದು, ಎನ್8 ರೂಪಾಂತರವು ರೂ. 13.15 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಎನ್6 ಮತ್ತು ಎನ್8 ರೂಪಾಂತರಗಳು ಸ್ಟ್ಯಾಂಡರ್ಡ್ ರೂಪಾಂತರಗಳಾದ ಎಸ್(ಒ) ಮತ್ತು ಎಸ್ಎಕ್ಸ್(ಒ) ರೂಪಾಂತರಗಳನ್ನು ಆಧರಿಸಿದ್ದು, ಹೊಸ ಆವೃತ್ತಿಯನ್ನು ಕಂಪನಿಯು ಕೇವಲ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಮಾರಾಟ ಮಾಡುತ್ತಿದೆ. ಹೊಸ ಮಾದರಿಯಲ್ಲಿ ಹಲವಾರು ಹೊಸ ಫೀಚರ್ಸ್ ನೀಡಿದ್ದು, ಇವು ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳಲು ಸಹಕಾರಿಯಾಗಲಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಸಿಟ್ರನ್ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್

ಸಿಟ್ರನ್ ಇಂಡಿಯಾ ಕಂಪನಿಯು ತನ್ನ ಹೊಸ ಸಿ5 ಏರ್‌ಕ್ರಾಸ್ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಎಸ್‌ಯುವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 36.67 ಲಕ್ಷ ಬೆಲೆ ಹೊಂದಿದೆ. ಸಿ5 ಏರ್‌ಕ್ರಾಸ್ ಕಾರು ಮಾದರಿಯು ಇದೀಗ ಫೇಸ್‌ಲಿಫ್ಟ್ ಮಾದರಿಯೊಂದಿಗೆ ಕೇವಲ ಶೈನ್ ಟಾಪ್ ಎಂಡ್ ವೆರಿಯೆಂಟ್‌ನಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಫೇಸ್‌ಲಿಫ್ಟ್ ಕಾರಿನಲ್ಲಿ ಸಿಟ್ರನ್ ಕಂಪನಿಯು ಈ ಹಿಂದಿನ ಮಾದರಿಯಲ್ಲಿದ್ದ 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 177 ಬಿಎಚ್‌ಪಿ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಫೇಸ್‌ಲಿಫ್ಟ್ ಮಾದರಿಯಲ್ಲಿ ಕಂಪನಿಯು ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಕಿಯಾ ಸೊನೆಟ್ ಎಕ್ಸ್ ಲೈನ್

ಕಿಯಾ ಇಂಡಿಯಾ ತನ್ನ ಜನಪ್ರಿಯ ಕಾರು ಮಾದರಿಯಾದ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸದಾಗಿ ಎಕ್ಸ್ ಲೈನ್ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಎಕ್ಸ್‌ಶೋರೂಂ ಪ್ರಕಾರ ರೂ. 13.39 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಕಿಯಾ ಸೊನೆಟ್ ಎಕ್ಸ್ ಲೈನ್ ಎಸ್‍ಯುವಿಯ ಟಾಪ್-ಸ್ಪೆಕ್ GTX+ ರೂಪಾಂತರವನ್ನು ಆಧರಿಸಿದೆ. ಸೊನೆಟ್ ಎಕ್ಸ್-ಲೈನ್ ಸ್ಟ್ಯಾಂಡರ್ಡ್ ಮಾದರಿಯೊಂದಿಗೆ ತನ್ನನ್ನು ಪ್ರತ್ಯೇಕಿಸಲು ಕೆಲವು ನವೀಕರಣಗಳನ್ನು ಪಡೆದುಕೊಂಡಿದೆ. ಸೊನೆಟ್ ಎಕ್ಸ್ ಲೈನ್‌ನ ಅತಿದೊಡ್ಡ ಕಾಸ್ಮೆಟಿಕ್ ಬದಲಾವಣೆಯೆಂದರೆ ಮ್ಯಾಟ್ ಗ್ರೇ ಪೇಂಟ್ ಸ್ಕೀಮ್‌ ಪಡೆದುಕೊಂಡಿದ್ದು, ಇದು ಭಾರತದಲ್ಲಿ ಸಬ್ -4-ಮೀಟರ್ ಎಸ್‌ಯುವಿಗಳಲ್ಲಿ ಹೊಸ ಬಣ್ಣದ ಆಯ್ಕೆಯಾಗಿದೆ. ಈ ಹೊಸ ಸೊನೆಟ್ ಎಕ್ಸ್ ಲೈನ್ ಎಸ್‍ಯುವಿಯಲ್ಲಿ 'ಟೈಗರ್ ನೋಸ್' ಗ್ರಿಲ್, ಮುಂಭಾಗ ಮತ್ತು ಹಿಂಭಾಗದ ಸ್ಕೀಡ್ ಪ್ಲೇಟ್‌ಗಳು ಮತ್ತು ರಿಯರ್ ವ್ಯೂ ಮಿರರ್‌ಗಳು ಬ್ಲ್ಯಾಕ್ ಬಣ್ಣದ ಫಿನಿಶಿಂಗ್ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

2022ರ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ 2022ರ ಗ್ಲೊಸ್ಟರ್ ಎಸ್‌ಯುವಿಯನ್ನು ಬಿಡುಗಡೆ ಮಾಡಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 31.99 ಲಕ್ಷ ಬೆಲೆಯೊಂದಿಗೆ ಹಲವಾರು ಅತ್ಯಾಧುನಿಕ ಫೀಚರ್ಸ್ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

2022ರ ಎಂಜಿ ಗ್ಲೊಸ್ಟರ್ ಎಸ್‌ಯುವಿಯು ಸೂಪರ್, ಶಾರ್ಪ್ ಮತ್ತು ಸ್ಯಾವಿ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದ್ದು, 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಹೊಂದಿರುವ ಹೊಸ ಕಾರು ನವೀಕೃ ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟ್ ಸಿಸ್ಟಮ್ (ADAS) ನೊಂದಿಗೆ ಡೋರ್ ಓಪನ್ ವಾರ್ನಿಂಗ್ (DOW), ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ (RCTA), ಮತ್ತು ಲೇನ್ ಚೇಂಜ್ ಅಸಿಸ್ಟ್ (LCA) ನಂತಹ ಹೆಚ್ಚುವರಿ ಮೊದಲ-ಇನ್-ಸೆಗ್ಮೆಂಟ್ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಇನೋವಾ ಕ್ರಿಸ್ಟಾ ಪೆಟ್ರೋಲ್ ಲಿಮಿಟೆಡ್ ಎಡಿಷನ್

ಟೊಯೊಟಾ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಎಂಪಿವಿ ಮಾದರಿಯಾದ ಇನೋವಾ ಕ್ರಿಸ್ಟಾದಲ್ಲಿ ಹೊಸ ಫೀಚರ್ಸ್ ಒಳಗೊಂಡ ಲಿಮಿಟೆಡ್ ಎಡಿಷನ್ ಬಿಡುಗಡೆ ಮಾಡಿದೆ. ಹೊಸ ಆವೃತ್ತಿಯು ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳಲ್ಲಿ ಖರೀದಿಸಬಹುದಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಆವೃತ್ತಿಗಳು ಜಿಎಕ್ಸ್ ರೂಪಾಂತರವನ್ನು ಆಧರಿಸಿರುವ ಲಿಮಿಟೆಡ್ ಎಡಿಷನ್ ಮ್ಯಾನುವಲ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 17.45 ಲಕ್ಷ ಬೆಲೆ ಹೊಂದಿದ್ದರೆ ಆಟೋಮ್ಯಾಟಿಕ್ ಮಾದರಿಯು ರೂ. 19.02 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ರೆನಾಲ್ಟ್ ಫೆಸ್ಟಿವಲ್ ಲಿಮಿಟೆಡ್ ಎಡಿಷನ್

ರೆನಾಲ್ಟ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರಮುಖ ಕಾರುಗಳ ಸರಣಿಯಲ್ಲಿ ಫೆಸ್ಟಿವಲ್ ಲಿಮಿಟೆಡ್ ಎಡಿಷನ್ ಕಾರುಗಳನ್ನು ಬಿಡುಗಡೆ ಮಾಡಿದೆ. ವಿಶೇಷ ಮಾದರಿಗಳು ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಮುಂಬರುವ ದಸರಾ ಮತ್ತು ದೀಪಾವಳಿ ಸಂಭ್ರಮಕ್ಕಾಗಿ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಫೆಸ್ಟಿವಲ್ ಲಿಮಿಟೆಡ್ ಎಡಿಷನ್‌ಗಳನ್ನು ರೆನಾಲ್ಟ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ಹೆಚ್ಚಿನ ಬೆಲೆಯೊಂದಿಗೆ ವಿಶೇಷ ಬಣ್ಣಗಳ ಆಯ್ಕೆ ಮತ್ತು ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರಾಟ ಮಾಡಲಿದ್ದು, ವಿಶೇಷತೆ ಆವೃತ್ತಿಗಳ ಬಿಡುಗಡೆಯೊಂದಿಗೆ ಬುಕಿಂಗ್ ಆರಂಭಿಸಲಾಗಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಬಿಎಂಡಬ್ಲ್ಯು ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಸರಣಿಯಲ್ಲಿ ಹೊಸದಾಗಿ 50 ಜಹ್ರೇ ಎಂ ಎಡಿಷನ್ ಬಿಡುಗಡೆಗೊಳಿಸುತ್ತಿದ್ದು, ಇದೀಗ ಎಕ್ಸ್4 ಕೂಪೆ ಮಾದರಿಯಲ್ಲೂ ಹೊಸ ಎಡಿಷನ್ ಪರಿಚಯಿಸಲಾಗಿದೆ. ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 72.90 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಸುಮಾರು ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಬಿಎಂಡಬ್ಲ್ಯು ಕಂಪನಿಯು ಹೊಸ ಎಕ್ಸ್4 50 ಜಹ್ರೇ ಎಂ ಎಡಿಷನ್ ಅನ್ನು ಎರಡು ವೆರಿಯೆಂಟ್‌ಗಳಲ್ಲಿ ಪರಿಚಯಿಸಿದ್ದು, ಆರಂಭಿಕ ಮಾದರಿಯಾದ ಎಕ್ಸ್4 30ಐ ಎಂ ಸ್ಪೋರ್ಟ್ 50 ಜಹ್ರೇ ಎಂ ಎಡಿಷನ್ ಬೆಲೆ ರೂ. 72.90 ಲಕ್ಷವಾದರೆ ಎಕ್ಸ್4 30ಡಿ ಎಂ ಸ್ಪೋರ್ಟ್ 50 ಜಹ್ರೇ ಎಂ ಎಡಿಷನ್ ರೂ. 74.90 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಆಡಿ ಕ್ಯೂ7 ಲಿಮಿಟೆಡ್ ಎಡಿಷನ್

ಆಡಿ ಇಂಡಿಯಾ ಕಂಪನಿಯು ಮುಂಬರುವ ದಸರಾ ಮತ್ತು ದೀಪಾವಳಿ ವಿಶೇಷತೆಗಾಗಿ ತನ್ನ ಫ್ಲ್ಯಾಗ್‌ಶಿಪ್ ಎಸ್‌ಯುವಿಯಾದ ಕ್ಯೂ7 ಲಿಮಿಟೆಡ್ ಎಡಿಷನ್ ಪರಿಚಯಿಸಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 88.08 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಭಾರತದಲ್ಲಿ ಮುಂಬರುವ ಹಬ್ಬದ ಋತುಗಳ ವಿಶೇಷತೆಗಾಗಿ ವಿವಿಧ ವಾಹನ ಕಂಪನಿಗಳು ತನ್ನ ಪ್ರಮುಖ ವಾಹನಗಳಲ್ಲಿ ವಿಶೇಷ ಆವೃತ್ತಿಗಳನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ ಆಡಿ ಕಂಪನಿಯು ಸಹ ಕ್ಯೂ7 ಎಸ್‌ಯುವಿ ವಿಶೇಷ ಆವೃತ್ತಿಯನ್ನು ಸೀಮಿತ ಸಂಖ್ಯೆಯಲ್ಲಿ ಬಿಡುಗಡೆ ಮಾಡಿದೆ. ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

2023ರ ವೊಲ್ವೊ ಎಕ್ಸ್‌ಸಿ40 ಮತ್ತು ಎಕ್ಸ್‌ಸಿ90 ಹೈಬ್ರಿಡ್ ಎಸ್‌ಯುವಿ

ವೊಲ್ವೊ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಬಹುನೀರಿಕ್ಷಿತ 2023ರ ಎಕ್ಸ್‌ಸಿ40 ಮತ್ತು ಎಕ್ಸ್‌ಸಿ90 ಸರಣಿ ಎಸ್‌ಯುವಿ ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಎಸ್‌ಯುವಿ ಮಾದರಿಗಳು ಹಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಫೀಚರ್ಸ್ ಹೊಂದಿರುವ ಎಕ್ಸ್‌ಸಿ40 ಎಸ್‌ಯುವಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 45.90 ಲಕ್ಷ ಬೆಲೆ ಹೊಂದಿದ್ದರೆ ಎಕ್ಸ್‌ಸಿ90 ಎಸ್‌ಯುವಿ ಮಾದರಿಯು ರೂ. 94.90 ಲಕ್ಷ ಬೆಲೆ ಹೊಂದಿದೆ. ವೊಲ್ವೊ ಕಂಪನಿಯು ಎಕ್ಸ್‌ಸಿ40 ಹೊಸ ಮಾದರಿಯ ಖರೀದಿಗಾಗಿ ಗ್ರಾಹಕರಿಗೆ ಆಫರ್ ಸಹ ನೀಡಿದ್ದು, ಮುಂಬರುವ ದಸರಾ ಮತ್ತು ದೀಪಾವಳಿಯ ತನಕ ಹೊಸ ಕಾರು ಖರೀದಿದಾರರಿಗೆ ರೂ. 43.20 ಲಕ್ಷ ಬೆಲೆಯಲ್ಲಿ ಮಾರಾಟ ಮಾಡುವುದಾಗಿ ಘೋಷಣೆ ಮಾಡಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಭಾತರತದಲ್ಲಿ ಬಿಡುಗಡೆ ಪ್ರಮುಖ ಕಾರುಗಳಿವು!

ಹೊಸ ಎಕ್ಸ್‌ಸಿ40 ಮಾದರಿಯು 2.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 48 ವೊಲ್ಟ್ ಮೈಲ್ಡ್ ಹೈಬ್ರಿಡ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 8 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 197 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಎಕ್ಸ್‌ಸಿ90 ಎಸ್‌ಯುವಿ ಮಾದರಿಯು ಸಹ 2.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 48 ವೊಲ್ಟ್ ಮೈಲ್ಡ್ ಹೈಬ್ರಿಡ್ ಎಂಜಿನ್ ಆಯ್ಕೆ ಹೊಂದಿದ್ದು, ಇದು 8 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 300 ಬಿಎಚ್‌ಪಿ ಮತ್ತು 420 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

Most Read Articles

Kannada
English summary
New launched cars in september 2022 toyota hyryder hybrid tata tiago ev and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X