ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯನ್ನು ಮಹೀಂದ್ರಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಕಾರು ಮಾದರಿಯು ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಎಸ್‌ಯುವಿ ಮಾದರಿಗಳಿಗೆ ಪೈಪೋಟಿ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಮಹೀಂದ್ರಾ ಕಂಪನಿಯು ಕಳೆದ ಎರಡು ವರ್ಷಗಳಲ್ಲಿ ಪ್ರಮುಖ ಕಾರುಗಳ ನ್ಯೂ ಜನರೇಷನ್ ಮಾದರಿಗಳನ್ನು ಬಿಡುಗಡೆ ಮಾಡುವ ಮೂಲಕ ಭಾರೀ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ಇದೀಗ ಹೊಸ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹೊಸ ತಲೆಮಾರಿನ ಸ್ಕಾರ್ಪಿಯೋ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಿದ್ದವಾಗುತ್ತಿದ್ದು, ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ಪ್ರಮುಖ ತಾಂತ್ರಿಕ ಅಂಶಗಳ ಮಾಹಿತಿ ಸೋರಿಕೆಯಾಗಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾರಾಜೋ ಎಂಪಿವಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹಾಗೆಯೇ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹೊಸ ಕಾರಿನಲ್ಲಿ ಈ ಬಾರಿ ಮತ್ತೊಂದು ವಿಶೇಷವೆಂದರೆ ಬ್ರಾಂಡ್ ನ್ಯೂ ಲೋಗೊ ಹೊಂದಿದ್ದು, ಸ್ಟೀರಿಂಗ್ ಮೌಂಟೆಡ್ ಮೇಲೆ ಇರಿಸಲಾಗಿರುವ ಲೋಗೊ ಸಾಕಷ್ಟು ಆಕರ್ಷಕವಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯಗಳಿವೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಟಾಪ್ ಎಂಡ್ ಮಾದರಿಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಇದರೊಂದಿಗೆ ಹೊಸ ಕಾರಿನಲ್ಲಿ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹೊಸ ಕಾರಿನ ವಿನ್ಯಾಸದ ಕುರಿತು ಹೇಳುವುದಾದರೆ ನವೀಕರಿಸಲಾದ ಗ್ರಿಲ್‌ನೊಂದಿಗೆ ಅಡ್ಡಲಾಗಿ ಮತ್ತು ನಡುವೆ ಐದು ಲಂಬ ಸ್ಲೇಟ್ಗಳನ್ನು ನೀಡಲಾಗಿದೆ. ಇದರೊಂದಿಗೆ ಎರಡು ಭಾಗಗಳಲ್ಲಿ ಹೆಡ್‌ಲೈಟ್ ಘಟಕಗಳನ್ನು ನೀಡಲಾಗಿದ್ದು, ಅದನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಮುಂಭಾಗದಿಂದ ಬಲವಾದ ನೋಟವನ್ನು ನೀಡುವ ಅದರ ಬಾನೆಟ್ ಮೇಲೆ ಗೆರೆಗಳನ್ನು ಕಾಣಬಹುದು. ಅದರ ಬದಿಯಲ್ಲಿ ದೊಡ್ಡ ಮಿಶ್ರಲೋಹದ ಚಕ್ರಗಳು ಕಂಡುಬರುತ್ತವೆ. ಇದು ಈ ಎಸ್‌ಯುವಿಯ ಗಾತ್ರಕ್ಕೆ ಸಾಕಾಗಲಿದ್ದು, ಇದರ ಪಕ್ಕದಲ್ಲಿರುವ ಪುಟ್ ಸ್ಟೆಪ್‌ಗಳನ್ನು ಮೊದಲಿಗಿಂತಲೂ ದೊಡ್ಡದಾಗಿ ಇರಿಸಬಹುದಾಗಿದ್ದು, ಪ್ರಯಾಣಿಕರಿಗೆ ಇದು ಹತ್ತಲು ಮತ್ತು ಇಳಿಯಲು ಸಾಕಷ್ಟು ಸಹಕಾರಿಯಾಗುತ್ತದೆ. ಹಿಂಭಾಗದಲ್ಲಿ ಟೈಲ್ ಗೇಟ್ ಮತ್ತು ಅದನ್ನು ತೆರೆಯಲು ಬದಿಯಲ್ಲಿ ಡೋರ್ ಹ್ಯಾಂಡಲ್ ಇದ್ದು, ಎಲ್ಇಡಿ ಟೈಲ್ ಲೈಟ್ ಇದರಲ್ಲಿ ಕಾಣಬಹುದಾಗಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಹಿಂಭಾಗದಲ್ಲಿ ಸ್ಟಾಪ್ ಲೈಟ್, ದೊಡ್ಡ ವೈಪರ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಮೇಲಿನ ಭಾಗದಲ್ಲಿ ಕಾಣಬಹುದಾಗಿದ್ದು, ಇದು ಹಿಂಭಾಗದಿಂದ ವಿನ್ಯಾಸವನ್ನು ಮತ್ತಷ್ಟು ಬಲಿಷ್ಠತೆ ನೀಡುತ್ತದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಇದರೊಂದಿಗೆ 2022ರ ಮಹೀಂದ್ರಾ ಸ್ಕಾರ್ಪಿಯೋ ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಬಹುದು. ಎಕ್ಸ್‌ಯುವಿ700 ಮತ್ತು ಥಾರ್ ಮಾದರಿಯಲ್ಲಿರುವಂತೆ 2.0 ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಬಹುದಾಗಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.61 ಲಕ್ಷ ಬೆಲೆ ಹೊಂದಿದೆ.

ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಹೀಂದ್ರಾ ಸ್ಕಾರ್ಪಿಯೋ ಇಂಟಿರಿಯರ್ ಮಾಹಿತಿ ಸೋರಿಕೆ

ಭಾರತದಲ್ಲಿ ಸ್ಕಾರ್ಪಿಯೋ ಮೊದಲ ತಲೆಮಾರಿನ ಆವೃತ್ತಿಯು ಬಿಡುಗಡೆಯಾಗಿ ಯಶಸ್ವಿ 20 ವರ್ಷ ಪೂರೈಸುತ್ತಿದ್ದು, ಮುಂದಿನ ತಿಂಗಳು ಜೂನ್‌ನಲ್ಲಿ ಪೂರ್ಣಗೊಳ್ಳಲಿರುವ 20ನೇ ವರ್ಷದ ಸಂಭ್ರಮಾಚರಣೆ ವೇಳೆಗೆ ಕಂಪನಿಯು ನ್ಯೂ ಜನರೇಷನ್ ಸ್ಕಾರ್ಪಿಯೋ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

Source: UCL

Article Published On: Friday, May 6, 2022, 11:38 [IST]
English summary
New mahindra scorpio interior spied ahead of launch
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+