30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೋ ಮಾದರಿಯನ್ನು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಬಿಡುಗಡೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿತು.

Recommended Video

Mahindra Scorpio Classic Launched | Price At Rs 11.99 Lakh | Scorpio Classic Vs Scorpio N In Kannada

ಈ ಹೊಸ 2022ರ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.11.99 ಲಕ್ಷದಿಂದ ರೂ.23.9 ಲಕ್ಷವಾಗಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಹೊಸ ಸ್ಕಾರ್ಪಿಯೋ-ಎನ್‌ನ ವಿತರಣೆಯು ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿದೆ ಎಂದು ಕಂಪನಿಯು ಘೋಷಿಸಿದೆ. ಮಹೀಂದ್ರಾ ಟಾಪ್-ಸ್ಪೆಕ್ ಸ್ಕಾರ್ಪಿಯೊ-ಎನ್ Z8L ರೂಪಾಂತರದ ವಿತರಣೆಗಳಿಗೆ ಆದ್ಯತೆ ನೀಡುತ್ತದೆ. ಕಂಪನಿಯು 25,000 ಬುಕಿಂಗ್‌ಗಳನ್ನು ಒಳಗೊಂಡಿರುವ 2022ರ ಮೊದಲ ಬ್ಯಾಚ್‌ನ ಮಹೀಂದ್ರಾ ಸ್ಕಾರ್ಪಿಯೋ ಎನ್‌ನ ಗ್ರಾಹಕರ ವಿತರಣೆಯನ್ನು ಪ್ರಾರಂಭಿಸುತ್ತದೆ. ಮೊದಲ ಆರ್ಡರ್‌ಗಳು ಸುಮಾರು 4 ತಿಂಗಳ ಸರಾಸರಿ ಕಾಯುವ ಅವಧಿಯೊಂದಿಗೆ ಬರುತ್ತವೆ. ಮೊದಲ 10 ದಿನಗಳಲ್ಲಿ 7,000 ಯುನಿಟ್‌ಗಳನ್ನು ವಿತರಿಸುವುದಾಗಿ ಕಂಪನಿಯು ಅಧಿಕೃತವಾಗಿ ಘೋಷಿಸಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಮೊದಲ 25,000 ಬುಕಿಂಗ್‌ಗಳಲ್ಲಿ Z8L ರೂಪಾಂತರದ ವಿತರಣೆಗಳು ನವೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮಹೀಂದ್ರಾ ಘೋಷಿಸಿದೆ. ಮಹೀಂದ್ರಾ ಹೊಸ ಸ್ಕಾರ್ಪಿಯೋ-ಎನ್‌ಗಾಗಿ ಕೇವಲ 30 ನಿಮಿಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುಂಗಡ-ಬುಕ್ಕಿಂಗ್ ಗಳನ್ನು ಸ್ವೀಕರಿಸಿತು.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಪುಣೆಯಲ್ಲಿರುವ ಚಕನ್ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಕಾರ್ಪಿಯೋ-ಎನ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯು ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಈ ಹೊಸ ಸ್ಕಾರ್ಪಿಯೋ-ಎನ್ ಮಾದರಿಯು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ 2.2 ಲೀಟರ್ ಡೀಸೆಲ್ ಮತ್ತು 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಎರಡು ಮಾದರಿಗಳಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿವೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಸ್ಕಾರ್ಪಿಯೋ-ಎನ್ ಮಾದರಿಯ 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಮತ್ತು 2.2 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಆಯ್ಕೆಗಳನ್ನು ಹೊಂದಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಈ ಪೆಟ್ರೋಲ್ ಮ್ಯಾನುವಲ್ ಮಾದರಿಯು 203-ಬಿಎಚ್‌ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್‌ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ. ಹಾಗೆಯೇ ಡೀಸೆಲ್ ಆರಂಭಿಕ ಮಾದರಿಯು ಮ್ಯಾನುವಲ್ ಆಯ್ಕೆಯೊಂದಿಗೆ 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದರೆ ಹೈ ಎಂಡ್ ಮಾದರಿಯು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಯೊಂದಿಗೆ 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದೆ. ಈ ಹೊಸ ಎಸ್‍ಯುವಿ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ವ್ಹೀಲ್ ಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಮಹೀಂದ್ರಾ ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್‌ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟುಗಳನ್ನು ಸಹ ಒಳಗೊಂಡಿವೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಇದರೊಂದಿಗೆ ಹೊಸ ಎಸ್‍ಯುವಿಯಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ. ಜೊತೆಗೆ ಹೊಸ ಎಸ್‍ಯುವಿಯಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದೆ.

30 ನಿಮಿಷಗಳಲ್ಲಿ 1 ಲಕ್ಷ ಬುಕ್ಕಿಂಗ್ ಪಡೆದ ಬಹುಬೇಡಿಕೆಯ ಮಹೀಂದ್ರಾ ಸ್ಕಾರ್ಪಿಯೋ ಎನ್ ವಿತರಣೆ ದಿನಾಂಕ ಬಹಿರಂಗ

ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

Article Published On: Tuesday, August 30, 2022, 10:58 [IST]
English summary
New mahindra scorpio n deliveries will start by 26th september 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+