ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಮಹೀಂದ್ರಾ ಕಂಪನಿಯು ಬಹುನೀರಿಕ್ಷಿತ ಹೊಸತಲೆಮಾರಿನ ಸ್ಕಾರ್ಪಿಯೋ-ಎನ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಬರೋಬ್ಬರಿ 20 ವರ್ಷಗಳ ಯಶಸ್ವಿ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿರುವ ಸ್ಕಾರ್ಪಿಯೋ ಮಾದರಿಯು ಇದೀಗ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ದೇಶಿಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2002ರಲ್ಲಿ ಬಿಡುಗಡೆಯಾಗಿದ್ದ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸತನ ಪಡೆದುಕೊಳ್ಳುತ್ತಲೇ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದೀಗ ಹೊಸ ತಲೆಮಾರಿನ ಆವೃತ್ತಿಯು ಮತ್ತಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಕಾರಿನೊಂದಿಗೆ ಮಹೀಂದ್ರಾ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಯ ಮಾರಾಟವನ್ನು ಸಹ ಮುಂದುವರಿಸಲು ನಿರ್ಧರಿಸಿದ್ದು, ಹೊಸ ಕಾರು ಸ್ಕಾರ್ಪಿಯೋ-ಎನ್ ಹೆಸರಿನಲ್ಲಿ ಮಾರಾಟಗೊಳ್ಳಲಿದ್ದರೆ ಹಳೆಯ ಮಾದರಿಯು ಸ್ಕಾರ್ಪಿಯೋ-ಕ್ಲಾಸಿಕ್ ಹೆಸರಿನಲ್ಲಿ ಮಾರಾಟಗೊಳ್ಳಲಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಸ್ಕಾರ್ಪಿಯೋ-ಎನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 19.49 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳಿಗೆ ಅನುಗುಣವಾಗಿ ಜೆಡ್2, ಜೆಡ್4, ಜೆಡ್6, ಜೆಡ್8 ಮತ್ತು ಜೆಡ್ಎಲ್ ವೆರಿಯೆಂಟ್‌ಗಳನ್ನು ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಕಾರು ಮಾದರಿಯಾಗಿ ಕಂಪನಿಯು ಜುಲೈ 30ರಿಂದ ರೂ.25 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕಿಂಗ್ ಆರಂಭಿಸಲಿದ್ದು, ಹೊಸ ಕಾರಿನ ವಿತರಣೆಯನ್ನು ಮುಂಬರುವ ದಸರಾ ವೇಳೆಗೆ ಆರಂಭಿಸುವುದಾಗಿ ಕಂಪನಿಯು ಭರವಸೆ ನೀಡಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ-ಎನ್ ಮಾದರಿಯನ್ನು ಎಕ್ಸ್‌ಯುವಿ700 ಮಾದರಿಯಲ್ಲಿರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರನ್ನು ಗ್ರಾಹಕರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿ ಮಾಡಬಹುದಾಗಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಕಾರಿನಲ್ಲಿ ಕಂಪನಿಯು 2.2 ಲೀಟರ್ ಡೀಸೆಲ್ ಮತ್ತು 2.0 ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಆಯ್ದ ಮಾದರಿಗಳಲ್ಲಿ 4x4 ಡ್ರೈವ್ ಸಿಸ್ಟಂ ನೀಡಲಿದೆ. ಹೊಸ ಕಾರು ಆನ್‌ರೋಡ್‌ನಲ್ಲಿ ಜಿಪ್, ಜ್ಯಾಪ್ ಮತ್ತು ಜೂಮ್ ಎನ್ನುವ ಮೂರು ಡ್ರೈವ್ ಮೋಡ್‌ಗಳನ್ನು ಮತ್ತು ಆಫ್ ರೋಡ್‌ನಲ್ಲಿ ನಾರ್ಮಲ್, ಗ್ರಾಸ್, ಸ್ನೋ, ಮಡ್ ಮತ್ತು ಸ್ಯಾಂಡ್ ಮೋಡ್‌ಗಳನ್ನು ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಸ್ಕಾರ್ಪಿಯೋ-ಎನ್ 2.0-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಮ್ಯಾನುವಲ್ ಮಾದರಿಯು 203-ಬಿಎಚ್‌ಪಿ ಮತ್ತು 370-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ ಆಟೋಮ್ಯಾಟಿಕ್ ಮಾದರಿಯು 203-ಬಿಎಚ್‌ಪಿ ಮತ್ತು 380-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹಾಗೆಯೇ 2.2 ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಎರಡು ರೀತಿಯ ಪರ್ಫಾಮೆನ್ಸ್ ಹೊಂದಿದ್ದು, ಆರಂಭಿಕ ಮಾದರಿಯು 132 ಬಿಎಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಹೈ ಎಂಡ್ ಮಾದರಿಯು 175 ಬಿಎಚ್‌ಪಿ ಮತ್ತು 370 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಇನ್ನು ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ. ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಮಿಶ್ರಲೋಹದ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಕಾರಿನ ಒಳಪ್ರವೇಶಸುತ್ತಿದ್ದಂತೆ ಡ್ಯುಯಲ್-ಟೋನ್ ಡ್ಯಾಶ್‌ಬೋರ್ಡ್ ಮತ್ತು ಮೆಟಲ್-ಫಿನಿಶ್ಡ್ ಡ್ಯುಯಲ್ ರೈಲ್‌ಗಳೊಂದಿಗೆ ಆಕರ್ಷಕವಾದ ಸೆಂಟರ್ ಕನ್ಸೋಲ್‌ ಗಮನಸೆಳೆಯಲಿದ್ದು, ರಿಚ್ ಕಾಫಿ ಬ್ಲ್ಯಾಕ್ ಲೆದರ್ ಆಸನಗಳು, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಆಸನಗಳನ್ನು ಸಹ ಒಳಗೊಂಡಿವೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 70ಕ್ಕೂ ಹೆಚ್ಚು ಕಾರ್ ಕನೆಕ್ಟ್ ಫೀಚರ್ಸ್, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ ವಾಯ್ಸ್ ಸರ್ಪೊಟ್, 3ಡಿ ಸೊನಿ ಸರೌಂಡ್ ಸೌಂಡ್ ಸಿಸ್ಟಂ ಮತ್ತು ವಾಯ್ಸ್ ಕಮಾಂಡ್ ಫೀಚರ್ಸ್ ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಇದಲ್ಲದೆ ಹೊಸ ಕಾರಿನಲ್ಲಿ ಡ್ಯುಯಲ್-ಜೋನ್ ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳು ಮತ್ತು ಸ್ಮಾರ್ಟ್‌ಫೋನ್‌ಗಾಗಿ ವೈರ್‌ಲೆಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಬಿಡಿ ಜೊತೆಗೆ ಎಬಿಎಸ್, ಇಎಸ್ಇ, ಟ್ರಾಕ್ಷನ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಐಸೋಫಿಕ್ಸ್ ಆಂಕರ್ ಪಾಯಿಂಟ್‌ಗಳು ಮತ್ತು ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಸೇರಿದಂತೆ ಹಲವಾರು ಫೀಚರ್ಸ್‌ಗಳಿವೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಹೊಸ ಸ್ಕಾರ್ಪಿಯೋ-ಎನ್ ಮಾದರಿಯು ಡೀಪ್ ಫಾರೆಸ್ಟ್, ನಪೋಲಿ ಬ್ಲಾಕ್, ಎವರೆಸ್ಟ್ ವೈಟ್, ರೆಡ್ ರೇಜ್, ಡ್ಯಾಜ್ಲಿಂಗ್ ಸಿಲ್ವರ್, ರಾಯಲ್ ಗೋಲ್ಡ್ ಮತ್ತು ಗ್ರ್ಯಾಂಡ್ ಕ್ಯಾನ್ಯನ್ ಬಣ್ಣಗಳ ಆಯ್ಕೆ ಹೊಂದಿದ್ದು, ಮೂರನೇ ಸಾಲಿನ ಆಸನಕ್ಕಾಗಿ ಹೊಸ ಕಾರಿನಲ್ಲಿ 206 ಎಂಎಂ ಹೆಚ್ಚುವರಿ ಉದ್ದಳತೆ ನೀಡಲಾಗಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ಈ ಮೂಲಕ ಹೊಸ ಕಾರು ಬಲಿಷ್ಠ ವಿನ್ಯಾಸ ಮತ್ತು ಪ್ರೀಮಿಯಂ ಫೀಚರ್ಸ್‌ನೊಂದಿಗೆ 4,662 ಎಂಎಂ ಉದ್ದಳತೆ ಮತ್ತು 2,750 ಎಂಎಂ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಹೆಚ್ಚುವರಿಯಾಗಿ 206 ಎಂಎಂ ಉದ್ದ ಮತ್ತು 97 ಎಂಎಂ ಅಗಲ ಹೊಂದಿದ್ದರೆ 125 ಎಂಎಂ ನಷ್ಟು ಪ್ರಸ್ತುತ ಮಾದರಿಗಿಂತಲೂ ಕಡಿಮೆ ಎತ್ತರ ಹೊಂದಿದೆ.

ಬಹುನೀರಿಕ್ಷಿತ ಮಹೀಂದ್ರಾ ಸ್ಕಾರ್ಪಿಯೋ-ಎನ್ ಎಸ್‌ಯುವಿ ಬಿಡುಗಡೆ

ವ್ಹೀಲ್‌ಬೇಸ್ ಸೌಲಭ್ಯವು ಪ್ರಸ್ತುತ ಮಾದರಿಗಿಂತಲೂ 70 ಎಂಎಂ ಹೆಚ್ಚು ಉದ್ದವಾಗಿರುವುದರಿಂದ ಇದು ಖಂಡಿತವಾಗಿಯೂ ಹೆಚ್ಚಿನ ವೇಗದ ಸ್ಥಿರತೆಯನ್ನು ಸುಧಾರಿಸಲು ಸಹಾಯ ಮಾಡವುದಲ್ಲದೆ 2ನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಮೊಣಕಾಲುಗಳಿಗೆ ಹೆಚ್ಚಿನ ಸ್ಥಳಾವಕಾಶ ಒದಗಿಸುತ್ತದೆ.

Most Read Articles

Kannada
English summary
New mahindra scorpio n launched at rs 11 99 lakh details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X