ಬಹುನಿರೀಕ್ಷಿತ ಸ್ಕಾರ್ಪಿಯೋ ಎನ್ Z4 ವೆರಿಯೆಂಟ್ ವಿತರಣೆ ಪ್ರಾರಂಭಿಸಿದ ಮಹೀಂದ್ರಾ

ಜನಪ್ರಿಯ ಮತ್ತು ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಸ್ಕಾರ್ಪಿಯೋ ಎನ್ ಎಸ್‍ಯುವಿಯು 'Z4' ರೂಪಾಂತರದ ವಿತರಣೆಯನ್ನು ಪ್ರಾರಂಭಿಸಿದೆ. ಮಹೀಂದ್ರಾ ಸ್ಕಾರ್ಪಿಯೊ ಎನ್ ಖಂಡಿತವಾಗಿಯೂ ಈ ವರ್ಷದ ಅತಿದೊಡ್ಡ ಹೊಸ ಕಾರು ಬಿಡುಗಡೆಗಳಲ್ಲಿ ಒಂದಾಗಿದೆ. ಈ ಎಸ್‍ಯುವಿಯ ಬೆಲೆಗಳನ್ನು ಜೂನ್‌ನಲ್ಲಿ ಘೋಷಿಸಲಾಯಿತು

ಮಹೀಂದ್ರ ಸ್ಕಾರ್ಪಿಯೋ ಎನ್ ಎಸ್‍ಯುವಿಯ ವಿತರಣೆಯು 2022ರ ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಪ್ರಾರಂಭಿಸಲಾಯಿತು. ನವರಾತ್ರಿ ವೇಳೆ 7,000 ಯುನಿಟ್‌ಗಳನ್ನು ವಿತರಿಸಿದರು. ಕಾರು ತಯಾರಕರು ಟಾಪ್-ಸ್ಪೆಕ್ Z8 L ರೂಪಾಂತರದ ವಿತರಣೆಯನ್ನು ಆದ್ಯತೆ ನೀಡುತ್ತಾರೆ. ಈಗ, ಕಂಪನಿಯು ತನ್ನ ಲೋವರ್ ರೂಪಾಂತರಗಳ ವಿತರಣೆಯನ್ನು ಪ್ರಾರಂಭಿಸಿದೆ. ಈ ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‍ಯುವಿಯು ಹ್ಯಾಲೊಜೆನ್ ಲ್ಯಾಂಪ್‌ಗಳು, ಸ್ಟೀಲ್ ವೀಲ್‌ಗಳು ಮತ್ತು ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರುವ Z4 ಪೆಟ್ರೋಲ್ ಮ್ಯಾನುವಲ್ ರೂಪಾಂತರವಾಗಿದೆ.

ಈ ಎಸ್‍ಯುವಿಯ Z4 ರೂಪಾಂತರವು 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಬೆಂಬಲಿಸುವ Apple CarPlay, Android Auto, ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ (ಪೆಟ್ರೋಲ್) / ಹೈಡ್ರಾಲಿಕ್ ಪವರ್ ಸ್ಟೀರಿಂಗ್ (ಡೀಸೆಲ್), ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು, ಹಿಂಭಾಗದ AC ವೆಂಟ್‌ಗಳೊಂದಿಗೆ ಮ್ಯಾನುಯಲ್ AC ಯುನಿಟ್, ಫ್ಯಾಬ್ರಿಕ್ ಮುಂತಾದ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಇನ್ನು ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟ್ರ್ಯಾಕ್ಷನ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್ ಕಂಟ್ರೋಲ್ ಮತ್ತು ಹಿಲ್ ಡೆಸೆಟ್ ಕಂಟ್ರೋಲ್ ಅನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೊ ಎನ್ ಎಸ್‍ಯುವಿಯಲ್ಲಿ ಎಂಜಿನ್ ಸೆಟಪ್ 2.0-ಲೀಟರ್, ಟರ್ಬೊ-ಪೆಟ್ರೋಲ್ ಮತ್ತು 2.2L mHawk ಡೀಸೆಲ್ ಅನ್ನು ಒಳಗೊಂಡಿದೆ. ಪೆಟ್ರೋಲ್ ಮೋಟರ್ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 203 ಬಿಹೆಚ್‍ಪಿ ಪವರ್ ಮತು 370 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ 10 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಪೆಟ್ರೋಲ್ ಆಟೋಮ್ಯಾಟಿಕ್ ಸಂಯೋಜನೆಯು Z4, Z8 ಮತ್ತು Z8L ರೂಪಾಂತರಗಳಲ್ಲಿ ಲಭ್ಯವಿದೆ.

ಎಲ್ಲಾ ಪೆಟ್ರೋಲ್ ರೂಪಾಂತರಗಳು 2WD ಅನ್ನು ಸ್ಟ್ಯಾಂಡರ್ಡ್ ಆಗಿ ಪಡೆಯುತ್ತವೆ. ಇನ್ನು 2-ಲೀಟರ್, mHawk ಡೀಸೆಲ್ ಯುನಿಟ್ ಅನ್ನು ಹೊಂದಿದೆ. ಇದು Z2 ಮತ್ತು Z4 ರೂಪಾಂತರಗಳು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ನೊಂದಿಗೆ 130 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಸ್‌ಯುವಿಯ Z4, Z6, Z8, ಮತ್ತು Z8L ರೂಪಾಂತರಗಳು ಮೂರು ಡ್ರೈವ್ ಮೋಡ್‌ಗಳೊಂದಿಗೆ ಬರುತ್ತವೆ.

Zip, Zap ಮತ್ತು Zoom. ಸೆಟಪ್ (ಮ್ಯಾನ್ಯುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಎರಡರಲ್ಲೂ) ಜಿಪ್ ಮೋಡ್‌ನಲ್ಲಿ 138 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು Zap ಮತ್ತು ಜೂಮ್ ಮೋಡ್‌ಗಳಲ್ಲಿ 175 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಟಾರ್ಕ್ ಫಿಗರ್ ಕ್ರಮವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 370 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು 4WD ಸಿಸ್ಟಂ ಅನ್ನು ಎಲ್ಲಾ ಡೀಸೆಲ್-ಮ್ಯಾನ್ಯುವಲ್ ರೂಪಾಂತರಗಳಲ್ಲಿ ಲಭ್ಯವಿದೆ.

ಮಹೀಂದ್ರಾ ಕಂಪನಿಯು ಹೊಸ ಕಾರು ಮಾದರಿಯನ್ನು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಕಾರಿನ ಮುಂಭಾಗದಲ್ಲಿ ಮಹೀಂದ್ರಾ ಸಾಂಪ್ರದಾಯಿಕ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಜೊತೆಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಸ್ಕಾರ್ಪಿಯನ್ ಟೈಲ್ ಶೇಪ್ ಹೊಂದಿರುವ ಡಿಆರ್‌ಎಲ್ಎಸ್ ಮತ್ತು ಫಾಗ್ ಲ್ಯಾಂಪ್ ನೀಡಲಾಗಿದೆ. ಹೊಸ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಸಿ ಮತ್ತು ಡಿ-ಪಿಲ್ಲರ್ ಪ್ರದೇಶಗಳಲ್ಲಿ ವಿಂಡೋ ಕ್ರೋಮ್ ಫ್ರೇಮ್‌ನಲ್ಲಿ ಸ್ಕಾರ್ಪಿಯನ್ ಸ್ಟಿಂಗ್ ಅಂಶವನ್ನು ಸಹ ಹೊಂದಿದೆ.

ಜೊತೆಗೆ ಹೊಸ ಸ್ಕಾರ್ಪಿಯೋ-ಎನ್‌ನಲ್ಲಿ ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ನೊಂದಿಗೆ 18 ಇಂಚಿನ ಚಕ್ರಗಳನ್ನು ನೀಡಲಾಗಿದ್ದು, ಲಂಬವಾಗಿ ಜೋಡಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಸ್ಪಾಯ್ಲರ್ ಅನ್ನು ಹೊಂದಿದೆ. ಸ್ಕಾರ್ಪಿಯೋ-ಎನ್ ಮಧ್ಯಂತರ ವೆರಿಯೆಂಟ್‌ ನಂತರದಲ್ಲಿ ಲಭ್ಯವಾಗುವಂತೆ ಸನ್‌ರೂಫ್, ಎಲೆಕ್ಟ್ರಿಕಲ್ ಫೋಲ್ಡಿಂಗ್ ರಿಯರ್ ವ್ಯೂ ಮಿರರ್‌ಗಳು ಮತ್ತು ಶಾರ್ಕ್-ಫಿನ್ ಆಂಟೆನಾವನ್ನು ಸಹ ಒಳಗೊಂಡಿದ್ದು, ಹೊಸ ಕಾರಿನಲ್ಲಿ ಹೊರಭಾಗದಂತೆ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದೆ.

Most Read Articles

Kannada
English summary
New mahindra scorpio n z4 variant deliveries commence details
Story first published: Friday, December 9, 2022, 18:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X