ಟಾಟಾ ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಹೊಸ ನವೀಕರಣಗಳೊಂದಿಗೆ ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಜನಪ್ರಿಯ ಮತ್ತು ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ 2022ರ ಎಕ್ಸ್‌ಯುವಿ300 ಎಸ್‍ಯುವಿಯ ಮೊದಲ ಅಧಿಕೃತ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ.

Recommended Video

Alto K10 vs Renault Kwid | Detailed Comparison | Specs Features And Design

ಈ ಹೊಸ ಟೀಸರ್ ನಲ್ಲಿ ನವೀಕರಿಸಿದ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿ ಮಾದರಿಯನ್ನು ಪ್ರದರ್ಶಿಸಿದ್ದಾರೆ. ಆದರೆ ಈ ಹೊಸ ಎಸ್‍ಯುವಿಯ ಅಧಿಕೃತ ಬಿಡುಗಡೆ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿ ಈ ವರ್ಷದ ಹಬ್ಬದ ಸೀಸನ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಫೇಸ್‌ಲಿಫ್ಟೆಡ್ ಮಾಡೆಲ್ ವಿನ್ಯಾಸ ಮತ್ತು ಎಂಜಿನ್ ಯಾಂತ್ರಿಕತೆಯ ವಿಷಯದಲ್ಲಿ ಗಮನಾರ್ಹ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯು ಮೊದಲಿಗಿಂತ ಹೆಚ್ಚು ಟರ್ಬೊ ಪವರ್ ಅನ್ನು ಹೊಂದಿರುತ್ತದೆ. ಇದು ಹೊಸ 1.2 ಲೀಟರ್ ಪೆಟ್ರೋಲ್ T-GDI mStallion ಎಂಜಿನ್ ನೊಂದಿಗೆ ಬರಲಿದೆ. ಈ ಎಂಜಿನ್ 130 ಬಿಹೆಚ್‍ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಇದು ಪ್ರಸ್ತುತ ಮಾದರಿಯಲ್ಲಿರುವ 1.2 ಲೀಟರ್ ಎಂಜಿನ್ ಗಿಂತ 20 ಬಿಹೆಚ್‍ಪಿ ಪವರ್ ಮತ್ತು 30 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಪ್ರಸ್ತುತ ಎಕ್ಸ್‌ಯುವಿ300 ಪೆಟ್ರೋಲ್ 110 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5 ಲೀಟರ್ ಡೀಸೆಲ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಈ ಎಂಜಿನ್ ಗಳೊಂದಿಗೆ ಟ್ರಾನ್ಸ್ಮಿಷನ್ ಆಯ್ಕೆಗಳು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಎಎಂಟಿ ಅನ್ನು ಒಳಗೊಂಡಿರುತ್ತದೆ. ಈ ಎಸ್‍ಯುವಿಯ ಎಎಂಟಿ ಯುನಿಟ್ ಕ್ರೀಪ್ ಫಂಕ್ಷನ್‌ನೊಂದಿಗೆ ಬರುತ್ತದೆ. ಇದು ಚಲಾಕನಿಗೆ ಉಪಯುಕ್ತ ತಂತ್ರಜ್ಙಾನವಾಗಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಹೊಸ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯ ಹೆಚ್ಚಿನ ವಿನ್ಯಾಸ ನವೀಕರಣಗಳನ್ನು ಮುಂಭಾಗದಲ್ಲಿ ಮಾಡಲಾಗಿದೆ. ಇತ್ತೀಚಿನ ಟೀಸರ್ ಚಿತ್ರವು ಹೊಸ ಮಹೀಂದ್ರಾ ಎಕ್ಸ್‌ಯುವಿ300 ಎಸ್‍ಯುವಿಯ ಕ್ರೋಮ್ ಅಸ್ಸೆಂಟ್ ಗಳೊಂದಿಗೆ ಆಯತಾಕಾರದ ಗ್ರಿಲ್ ಅನ್ನು ಹೊಂದಿರುತ್ತದೆ ಮತ್ತು ಮಹೀಂದ್ರಾದ ಹೊಸ ಟ್ವಿನ್ ಪೀಕ್ಸ್ ಲೋಗೋವನ್ನು ಅದರ ಮಧ್ಯದಲ್ಲಿ ಇರಿಸಲಾಗಿದೆ ಎಂದು ಖಚಿತಪಡಿಸುತ್ತದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಈ ಹೊಸ ಎಸ್‍ಯುವಿಯಲ್ಲಿ ಎಲ್-ಆಕಾರದ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಟ್ರಿಪಲ್-ಪಾಡ್ ಹೆಡ್‌ಲ್ಯಾಂಪ್‌ಗಳನ್ನು ಅಸ್ತಿತ್ವದಲ್ಲಿರುವ ಮಾದರಿಯಿಂದ ಮುಂದಕ್ಕೆ ಕೊಂಡೊಯ್ಯುವಂತೆ ತೋರುತ್ತಿದೆ. ಈ ಎಸ್‍ಯುವಿಯಲ್ಲಿ ಹೊಸ ಜೋಡಿ 17-ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಬರುತ್ತದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಈ ಎಸ್‍ಯುವಿಯ ಇಂಟಿರಿಯರ್ ಬಗ್ಗೆ ಹೇಳುವುದಾದರೆ, ಕೆಲವು ಹೊಸ ನವೀಕರಣಗಳನ್ನು ಹೊಂದಿರಲಿದೆ. ಈ ಎಸ್‍ಯುವಿಯಲ್ಲಿ ಭಾಗ-ಮೊದಲ ಮುಂಭಾಗದ ಪಾರ್ಕಿಂಗ್ ಸೆನ್ಸರ್ ಗಳು, ಬ್ಲೂಸೆನ್ಸ್ ಪ್ಲಸ್, ಇತ್ತೀಚಿನ ಸ್ಮಾರ್ಟ್‌ಫೋನ್ ಸಂಪರ್ಕದೊಂದಿಗೆ 7.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಹೊಂದಿರಲಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಇದರೊಂದಿಗೆ ಕೀಲೆಸ್ ಎಂಟ್ರಿ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ಎಲೆಕ್ಟ್ರಿಕ್ ಸನ್‌ರೂಫ್, ಹಿಲ್ ಸ್ಟಾರ್ಟ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಹೆಚ್ಚಿನದನ್ನು ನೀಡುವುದನ್ನು ಮುಂದುವರಿಸುತ್ತದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದೆ. ಈ ಮಹೀಂದ್ರಾ ಎಕ್ಸ್‌ಯುವಿ300 ಪಡೆದುಕೊಳ್ಳುತ್ತಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ. ಈ ಕಾಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಈ ಮೊದಲು ಟಾಟಾ ನೆಕ್ಸಾನ್ ನಂತರ ಎಕ್ಸ್‌ಯುವಿ300 ಕೂಡಾ ಗರಿಷ್ಠ ರೇಟಿಂಗ್ ಪಡೆದುಕೊಳ್ಳುವ ಮೂಲಕ ಗರಿಷ್ಠ ಸುರಕ್ಷತಾ ಕಾರು ಮಾದರಿಯಾಗಿ ಗ್ರಾಹಕರ ಗಮನಸೆಳೆಯುತ್ತಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

#SAFERCARSFORINDIA ಅಭಿಯಾನದಡಿ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗೆ ಗರಿಷ್ಠ ರೇಟಿಂಗ್ ಅನ್ನು ನೀಡಿದೆ. ಈ ಎಕ್ಸ್‌ಯುವಿ300 ಮಾದರಿಯು ಗುಣಮಟ್ಟದ ಬಿಡಿಭಾಗಗಳೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟಾಪ್ ಎಂಡ್ ಮಾದರಿಯಲ್ಲಿ 7 ಏರ್‌ಬ್ಯಾಗ್ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಹೊಂದಿದ್ದು, ಹಲವಾರು ಸೆಗ್ಮೆಂಟ್ ಫಸ್ಟ್ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಕಂಪನಿಯ ಮೊದಲ 5-ಸ್ಟಾರ್ ಸುರಕ್ಷತಾ ರೇಟಿಂಗ್ ಮಾದರಿಯಾಗಿದೆ. ಅಂದಿನಿಂದ ಕಂಪನಿಯ ಎಲ್ಲಾ ಹೊಸ ಮಾದರಿಗಳು ಉನ್ನರ ಮಟ್ಟದ ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆಯುತ್ತಿವೆ. ಇದರ ನಂತರ, ಕಂಪನಿಯು ಥಾರ್ ಮತ್ತು ಎಕ್ಸ್‌ಯುವಿ700 ಕೂಡ ಟಾಪ್ ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಕಂಪನಿಯು ಈಗ ಹೊಸ ಸ್ಕಾರ್ಪಿಯೋ-ಎನ್ ಅನ್ನು ತಂದಿದೆ. ಮಹೀಂದ್ರಾ ಎಕ್ಸ್‌ಯುವಿ300 ಆಫ್ರಿಕನ್ ಮಾದರಿಯು ವಯಸ್ಕರ ಸುರಕ್ಷತೆಯಲ್ಲಿ 5-ಸ್ಟಾರ್‌ಗಳನ್ನು ಮತ್ತು ಭಾರತೀಯ ಮಾದರಿಯಂತೆ ಮಕ್ಕಳ ಸುರಕ್ಷತೆಯಲ್ಲಿ 4-ಸ್ಟಾರ್‌ಗಳನ್ನು ಪಡೆದುಕೊಂಡಿದೆ.

ನೆಕ್ಸಾನ್‌ಗೆ ಸೆಡ್ಡು ಹೊಡೆಯಲು ಬರುತ್ತಿದೆ ಮಹೀಂದ್ರಾ ಎಕ್ಸ್‌ಯುವಿ300

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಈ ಮಹೀಂದ್ರಾ ಎಕ್ಸ್‌ಯುವಿ300 ಜನಪ್ರಿಯ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಎಕ್ಸ್‌ಯುವಿ300 ಹೊಸ ನವೀಕರಣಗಳೊಂದಿಗೆ ಭಾರತದಲ್ಲಿ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಹೆಚ್ಚಿನ ಪೈಪೋಟಿ ನೀಡುತ್ತದೆ.

Most Read Articles

Kannada
English summary
New mahindra xuv300 officially teased launch soon details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X