ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಲಿವೆ. ಇದರಲ್ಲಿ ಫೇಸ್‌ಲಿಫ್ಟ್‌ಗಳು, ಹೊಸ ತಲೆಮಾರಿನ ಆವೃತ್ತಿಗಳು ಮತ್ತು ಹೊಸ ಕಾರುಗಳನ್ನು ಒಳಗೊಂಡಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಇದರಲ್ಲಿ ಎಸ್-ಕ್ರಾಸ್ ಮಾದರಿಯು ಕೂಡ ಒಳಗೊಂಡಿದೆ. ಇನ್ನು ಸುಜುಕಿ ಕಂಪನಿಯು ತನ್ನ ನ್ಯೂ ಜನರೇಷನ್ ಎಸ್-ಕ್ರಾಸ್ ಕಾರನ್ನು ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅನಾವರಣಗೊಳಿಸಲಾಗಿದೆ. ಈ ಹೊಸ ಸುಜುಕಿ ಎಸ್-ಕ್ರಾಸ್(Suzuki S-Cross) ಸಮಗ್ರ ವಿನ್ಯಾಸ ಬದಲಾವಣೆಗಳು ಮತ್ತು ವೈಶಿಷ್ಟ್ಯಗಳ ನವೀಕರಣಗಳನ್ನು ಪಡೆದುಕೊಂಡಿದೆ. ಭಾರತದಲ್ಲಿ ಹೊಸ ಎಸ್-ಕ್ರಾಸ್ ಕಾರನ್ನು ಈ ತಿಂಗಳ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಬಹುದು ಎಂದು ವರದಿಗಳಾಗಿದೆ,

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಮಾರುತಿ ಸುಜುಕಿಯು ಭಾರತದಲ್ಲಿ ಅತ್ಯಂತ ಸ್ಪರ್ಧಾತ್ಮಕ ವಿಭಾಗದಲ್ಲಿ ಸ್ಪರ್ಧಿಸಲು ಹೊಸ ಎಸ್-ಕ್ರಾಸ್ ಕಾರು ಪ್ರಯೋಜನಕಾರಿಯಾಗಿದೆ. ಈ ನ್ಯೂ ಜನರೇಷನ್ ಎಸ್-ಕ್ರಾಸ್ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸುಜುಕಿ ಕಂಪನಿಯು ಸಜ್ಜಾಗುತ್ತಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಹಂಗೇರಿಯಲ್ಲಿರುವ ಸುಜುಕಿಯ ಎಸ್‌ಟರ್‌ಗಾಮ್ ಆಧಾರಿತ ಘಟಕದಲ್ಲಿ ಹೊಸ ಸ್-ಕ್ರಾಸ್‌ ಕಾರನ್ನು ಉತ್ಪಾದಿಸಲಾಗುತ್ತಿದೆ ಈ ನ್ಯೂ ಜನರೇಷನ್ ಎಸ್-ಕ್ರಾಸ್ ಹೊಸ ವಿನ್ಯಾಸ ಬದಲಾವಣೆಗಳು ಮತ್ತು ಫೀಚರ್ಸ್ ಗಳ ನವೀಕರಣಗಳನ್ನು ಪಡೆದುಕೊಂಡಿವೆ ಆದರೆ ಎಂಜಿನ್ ಬದಲಾಗದೆ ಉಳಿದುಕೊಂಡಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಹೊಸ ಎಸ್-ಕ್ರಾಸ್ ಜಾರು ಸಂಪೂರ್ಣವಾಗಿ ಪರಿಷ್ಕೃತ ಮುಂಭಾಗದ ಫಾಸಿಕದೊಂದಿಗೆ ಬರುತ್ತದೆ. ಇದು ಪಿಯಾನೋ-ಬ್ಲ್ಯಾಕ್ ಗ್ರಿಲ್ ಜೊತೆಗೆ ಹೊಸ ಬಂಪರ್, ಟ್ವೀಕ್ ಮಾಡಲಾದ ಟ್ರಿಪಲ್-ಬೀಮ್ ಹೆಡ್‌ಲ್ಯಾಂಪ್‌ಗಳು ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಫಾಗ್ ಲ್ಯಾಂಪ್ ಅಸೆಂಬ್ಲಿಯನ್ನು ಕೂಡ ಒಳಗೊಂಡಿದೆ. ಇದರ ಬಾನೆಟ್ ಮೊದಲಿಗಿಂತ ಹೆಚ್ಚು ಸ್ಪಷ್ಟವಾಗಿ ಕಾಣುತ್ತದೆ. ಇದು ವಿಶಾಲವಾದ ಸೆಂಟ್ರಲ್ ಏರ್ ಇನ್ ಟೆಕ್ ಮತ್ತು ಫಾಕ್ಸ್ ಸ್ಕಿಡ್ ಪ್ಲೇಟ್ ಅನ್ನು ಕೂಡ ಹೊಂದಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಇದರ ಸೈಡ್ ಪ್ರೊಫೈಲ್ ಅನ್ನು ಬ್ಲ್ಯಾಕ್ ಬಾಡಿ ಕ್ಲಾಡಿಂಗ್, 17-ಇಂಚಿನ ಅಲಾಯ್ ವ್ಹೀಲ್ ಗಳು, ಕ್ರೋಮ್ಡ್ ವಿಂಡೋ ಲೈನ್ ಮತ್ತು ಬಾಡಿ-ಕಲರ್ ಡೋರ್ ಹ್ಯಾಂಡಲ್‌ಗಳೊಂದಿಗೆ ಸ್ಕ್ವಾರಿಶ್ ವೀಲ್ ಆರ್ಚ್‌ಗಳಿಂದ ಅಲಂಕರಿಸಲಾಗಿದೆ. ಇನ್ನು ಹಿಂದಿನ ವಿಭಾಗವು ಈಗ ಸ್ವಲ್ಪ ಟ್ವೀಕ್ ಮಾಡಲಾದ ಬಂಪರ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ,

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಇವುಗಳನ್ನು ದಪ್ಪ ಕ್ರೋಮ್ ಬಾರ್ ಮೂಲಕ ಸಂಪರ್ಕಿಸಲಾಗಿದೆ. ಇದು ಹೆಚ್ಚಿನ ಮೌಂಟೆಡ್ ಸ್ಟಾಪ್ ಲ್ಯಾಂಪ್, ಇಂಟಿಗ್ರೇಟೆಡ್ ರಿಯರ್ ಸ್ಪಾಯ್ಲರ್ ಮತ್ತು ನೇರವಾದ ಬೂಟ್ ಲಿಡ್ ಅನ್ನು ಹೊಂದಿಕೊಂಡಿದೆ. ಈ ಹೊಸ ಸುಜುಕಿ ಎಸ್-ಕ್ರಾಸ್ ಕಾರಿನ ಒಳಭಾಗದಲ್ಲಿ ಮೋಷನ್ ಟ್ರಿಮ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನೊಂದಿಗೆ ಬಂದರೆ, ಅಲ್ಟ್ರಾ ಮಾದರಿಯು ಸೆಟ್ ಲೈಟ್ ನ್ಯಾವಿಗೇಷನ್‌ನೊಂದಿಗೆ 9.0-ಇಂಚಿನ ಯುನಿಟ್ ಅನ್ನು ಪಡೆಯುತ್ತದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ಹೀಟೆಡ್ ಫ್ರಂಟ್ ಸೀಟ್‌ಗಳು, ಕೀಲೆಸ್ ಎಂಟ್ರಿ ಮತ್ತು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳಂತಹ ಫೀಚರ್ಸ್ ಗಳನ್ನು ಶ್ರೇಣಿಯಾದ್ಯಂತ ಸ್ಟ್ಯಾಂಡರ್ಡ್ ಆಗಿ ಪಡೆದಿದೆ. ಇನ್ನು ಅಲ್ಟ್ರಾ ಟ್ರಿಮ್ ಅನ್ನು ಪ್ರತ್ಯೇಕವಾಗಿ ಪನೋರಮಿಕ್ ಸನ್‌ರೂಫ್, ಲೆದರ್ ಸೀಟ್ ಅಪ್ಹೋಲ್ಸ್ಟರಿ ಮತ್ತು 360 ಡಿಗ್ರಿ ಪಾರ್ಕಿಂಗ್ ಕ್ಯಾಮೆರಾದೊಂದಿಗೆ ನೀಡಲಾಗುತ್ತದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಇದರೊಂದಿಗೆ ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸರ್ ಗಳು, ಟ್ರಾಫಿಕ್-ಸೈನ್ ರೆಕಗ್ನಿಷನ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಬ್ಲೈಂಡ್‌ಸ್ಪಾಟ್ ಮಾನಿಟರಿಂಗ್‌ನಂತಹ ಹಲವಾರು ಡ್ರೈವಿಂಗ್ ಅಸಿಸ್ಟ್ ಸಿಸ್ಟಂಗಳನ್ನು ನೀಡಿದೆ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಈ ಹೊಸ ಸುಜುಕಿ ಎಸ್-ಕ್ರಾಸ್ ಮಾದರಿಯು ಸಿಲ್ಕಿ ಸಿಲ್ವರ್, ಮೆಟಾಲಿಕ್ ಟೈಟಾನ್ ಡಾರ್ಕ್ ಗ್ರೇ, ಸ್ಪಿಯರ್ ಬ್ಲೂ, ಸಾಲಿಡ್ ವೈಟ್, ಎನರ್ಜಿಟಿಕ್ ರೆಡ್ ಮತ್ತು ಕಾಸ್ಮಿಕ್ ಬ್ಲ್ಯಾಕ್ ಎಂಬ 6 ಬಣ್ಣದ ಆಯ್ಕೆಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಗಳಲಿ ಲಭ್ಯವಿರುತ್ತದೆ. ಗ್ರಾಹಕರು ಇದರಲ್ಲಿ ತಮ್ಮ ಮೆಚ್ಚಿನ ಬಣ್ಣವನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತದಲ್ಲಿಯು ಇದೇ ರೀತಿಯ ಬಣ್ಣಗಳ ಆಯ್ಕೆಗಳನ್ನು ನೀಡಬಹುದು.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಈ ನ್ಯೂ ಜನರೇಷನ್ ಸುಜುಕಿ ಎಸ್-ಕ್ರಾಸ್ ಕಾರು 4,300 ಎಂಎಂ ಉದ್ದ, 1,785 ಎಂಎಂ ಅಗಲ, 1,585 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಇದರ ಹಿಂದಿನ ಮಾದರಿಗೆ ಹೋಲಿಸಿದರೆ ಎತ್ತರವು 10 ಎಂಎಂ ಚಿಕ್ಕದಾಗಿದೆ. ಇನ್ನು ಈ ಕಾರು 9.5 ಸೆಕೆಂಡುಗಳಲ್ಲಿ 0 ದಿಂದ 62 ಮೈಲ್ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಕಾರು 121 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ. ಇನ್ನು ನ್ಯೂ ಜನರೇಷನ್ ಎಸ್-ಕ್ರಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದರ ಬಗ್ಗೆ ಅಧಿಕೃತವಾಗಿ ಮಾಹಿತಿಗಳು ಬಹಿರಂಗವಾಗಿಲ್ಲ.

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್

ಈ ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಬಿಎಸ್-6 ಮಾರುತಿ ಎಸ್-ಕ್ರಾಸ್ ಕಾರಿನಲ್ಲಿ ಹೊಸ ಎಂಜಿನ್ ಆಯ್ಕೆಯ ಜೊತೆ ವಿನ್ಯಾಸದಲ್ಲಿ ಮತ್ತು ಫೀಚರ್ ಗಳನ್ನು ಕೂಡ ಅಪ್ದೇಟ್ ಮಾಡಿ ಬಿಡುಗಡೆಗೊಳಿಸಿತ್ತು. ನ್ಯೂ ಜನರೇಷನ್ ಎಸ್-ಕ್ರಾಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Wednesday, March 9, 2022, 12:43 [IST]
English summary
New maruti s cross india launch soon design features engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+